Friday, May 15

Author: info@rajasdigital.com

ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ; ಪ್ರಧಾನಿ ಮೋದಿ

ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ; ಪ್ರಧಾನಿ ಮೋದಿ

ದೇಶ-ವಿದೇಶ, ಪ್ರಮುಖ ಸುದ್ದಿ
ನ್ಯೂಯಾರ್ಕ್‌: ಅಮೆರಿಕದಲ್ಲಿ ಇನ್ನೂ ಎರಡು ಭಾರತೀಯ ರಾಯಭಾರ ಕಚೇರಿ ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾವು ಬೋಸ್ಟನ್ ಮತ್ತು ಲಾಸ್ ಏಂಜಲೀಸ್‌ನಲ್ಲಿ ಎರಡು ಹೊಸ ರಾಯಭಾರ ಕಚೇರಿಗಳನ್ನು ತೆರೆಯುವ ಬಗ್ಗೆ ಸಲಹೆಗಳನ್ನು ಕೋರಿದ್ದೇವೆ. ಸಲಹೆಯ ನಂತರ ಭಾರತವು ಹೊಸ ಕಾನ್ಸುಲೇಟ್‌ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿಸಿದರು.ಜಗತ್ತಿನಲ್ಲಿ AI ಕ್ರಾಂತಿ ಬಗ್ಗೆ ತಮ್ಮದೇ ದಾಟಿಯಲ್ಲಿ ವಿಶ್ಲೇಷಣೆ ಮಾಡಿದ ಮೋದಿ AI ಅಂದ್ರೆ ಕೃತಕ ಬುದ್ಧಿಮತ್ತೆ. ಆದರೆ, ನನಗೆ AI ಎಂದರೆ ಅಮೆರಿಕನ್-ಇಂಡಿಯನ್ ಸ್ಪಿರಿಟ್ ಎಂದರು....
ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ನೇಮಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಉದಯ್ ಭಾನು ಚಿಬ್ ಅವರನ್ನು ನೇಮಕ ಮಾಡಲಾಗಿದೆ.ಬಿ.ವಿ. ಶ್ರೀನಿವಾಸ್ ಇದುವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಅಧ್ಯಕ್ಷರಾಗಿದ್ದರು. ನೂತನವಾಗಿ ನೇಮಕಗೊಂಡಿರುವ ಉದಯ್ ಭಾನು ಚಿಬ್ ಅವರು ಈವರೆಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ರಾಯಣ್ಣ ಜೊತೆಗೆ ‘ಚೆನ್ನಮ್ಮ ಬ್ರಿಗೇಡ್’; ಈಶ್ವರಪ್ಪ ಕಾರ್ಯತಂತ್ರ

ರಾಯಣ್ಣ ಜೊತೆಗೆ ‘ಚೆನ್ನಮ್ಮ ಬ್ರಿಗೇಡ್’; ಈಶ್ವರಪ್ಪ ಕಾರ್ಯತಂತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ಬಿಎಸ್ ಯಡಿಯೂರಪ್ಪ ಕುಟುಂಬ ರಾಜಕಾರಣ ವಿರುದ್ಧ ಸಮರ ಸಾರಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೊಂದು ರಾಯಣ್ಣ ಬ್ರಿಗೇಡ್ ಜೊತೆಗೆ ಮತ್ತೊಂದು ಸಂಘಟನೆಗೆ ತಯಾರಿ ನಡೆಸಿದ್ದಾರೆ.ವಿಜಯಪುರದಲ್ಲಿ ಬೆಂಬಲಿಗರ ಸಭೆ ನಡೆಸಿರುವ ಈಶ್ವರಪ್ಪ, ಸದ್ಯದಲ್ಲೇ ಹಿಂದುತ್ವದ ಹೆಸರಿನಲ್ಲಿ ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಸಂಘಟನೆ ಮಾಡುವುದಾಗಿ ಘೋಷಿದ್ದಾರೆ.ವಿಜಯಪುರ ಸಮೀಪದ ಮಹಲ್ ಐನಾಪುರ ಗ್ರಾಮದಲ್ಲಿರುವ ಹುಲಜಂತಿ ಮಠದ ಆವರಣದಲ್ಲಿ ಈಶ್ವರಪ್ಪ ಅವರು ವಿವಿಧ ಮಠಾಧೀಶರು ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿದರು. ಸದ್ಯವೇ ಮತ್ತೊಂದು ಸಭೆ ನಡೆಸಿ ಶಕ್ತಿ ಪ್ರದರ್ಶನ ಮಾಡುವ ಸುಳಿವನ್ನು ಈಶ್ವರಪ್ಪ ನೀಡಿದರು....
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’: ಮತ್ತೊಂದು ವೀಡಿಯೋ ರಿವೀಲ್

ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ: ಪಾರ್ಟ್​ 1’ ಸಿನಿಮಾದ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟೆಂಬರ್​ 27ರಂದು ‘ದೇವರ’ ಸಿನಿಮಾ ಬಿಡುಗಡೆ​ ಆಗಲಿದೆ.ಇದೇ ಸಂದರ್ಭದಲ್ಲಿ 'ದೇವರ' ಚಿತ್ರದ ಮತ್ತೊಂದು ಟ್ರೇಲರ್ ಬಿಡುಗಡೆಯಾಗಿದೆ. 'ಆರ್​ಆರ್​ಆರ್​’ ಸಿನಿಮಾ ಬಳಿಕ ಜೂನಿಯರ್​ ಎನ್‌ಟಿಆರ್​ ಅವರು ಈ ಚಿತ್ರದಲ್ಲಿ ಕಮಾಲ್ ಪ್ರದರ್ಶಿಸಲಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ.https://youtu.be/HNYA6bqL6bU?si=nIRtqhPMISPhVIbJ...
ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಿ; ಸಿಎಂಗೆ ಮೇಲ್ಮನೆ ವಿಪಕ್ಷ ನಾಯಕರ ಆಗ್ರಹ

ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಿ; ಸಿಎಂಗೆ ಮೇಲ್ಮನೆ ವಿಪಕ್ಷ ನಾಯಕರ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಪಾದಿಸಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಈ ಪ್ರಕರಣದ ಸಂಬಂಧ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಮಗ ಪಂಪನಗೌಡ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಛಲವಾದಿ ನಾರಾಯಣಸ್ವಾಮಿ, ಸರ್ಕಾರ ಈ ಹಿಂದೆ ಕೊಟ್ಟಿದ್ದ ಆಶ್ವಾಸನೆಯಂತೆ 50 ಲಕ್ಷ ರೂ. ಪರಿಹಾರ ಒದಗಿಸಬೇಕೆಂದು ಆಹ್ರಹಿಸಿದ್ದಾರೆ.ಪರಶುರಾಮ್ ಅವರ ಸ್ವಗ್ರಾಮಕ್ಕೆ ಆ.8ರಂದು ಗೃಹ ಸಚಿವರು ಭೇಟಿ ನೀಡಿ ಸಾಂತ್ವನ ಹೇಳುವ ಸಂದರ್ಭದಲ್ಲಿ ಪಿಎಸ್‌ಐ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹಾಗೂ ಪರಶುರಾಮ್ ಪತ್ನಿಗೆ ಸರ್ಕಾರಿ ಕೆಲಸ ನೀಡುವುದಾಗಿ ಆಶ್ವಾಸನೆ ನೀಡಿದ್ದರು. ಈ ಆಶ್ವಾಸನೆ ಈಡೇರಬೇಕಿದೆ ಎಂದು ಸರ್ಕಾರಕ್ಕೆ ನೆನಪಿಸಿದ್ದಾರೆ....
ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಪ್ರಮುಖ ಸುದ್ದಿ, ರಾಜ್ಯ
ಹೊಸಪೇಟೆ (ವಿಜಯನಗರ): ತುಂಗಭದ್ರಾ ಆಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದರು. ಜೊತೆಯಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲರು ಭಾಗಿಯಾಗಿದ್ದರು.ನಂತರ ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಸರಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ವೇದಿಕೆ ಸಮಾರಂಭದಲ್ಲಿ ತುಂಗಭದ್ರಾ ಕ್ಲಸ್ಟರ್-19 ಗೇಟ್ ದುರಸ್ತಿ ಕಾರ್ಯದಲ್ಲಿ ಭಾಗಿಯಾದ ಅಧಿಕಾರಿಗಳಿಗೆ, ತಂತ್ರಜ್ಞರಿಗೆ ಹಾಗು ಕಾರ್ಮಿಕರಿಗೆ ಅಭಿನಂದನೆ ಸಲ್ಲಿಸಲಾಯಿತು.ಸಮಾರಂಭದಲ್ಲಿ ಜಲ ಸಂಪನ್ಮೂಲ ಸಚಿವರಾದ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು....
ಶಾಸಕ ಮುನಿರತ್ನ ವಿರುದ್ದ ಪ್ರಕರಣ; ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಶಾಸಕ ಮುನಿರತ್ನ ವಿರುದ್ದ ಪ್ರಕರಣ; ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರ್​.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ‌ ತನಿಖೆಗೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ.ಹಿರಿಯ ಪೊಲೀಸ್ ಅಧಿಕಾರಿ ಬಿ.ಕೆ.‌ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬಂಧನವಾಗಿ 100 ದಿನಗಳ ನಂತರ ಜಾಮೀನಿಗಾಗಿ ದರ್ಶನ್ ಅರ್ಜಿ

ಬಂಧನವಾಗಿ 100 ದಿನಗಳ ನಂತರ ಜಾಮೀನಿಗಾಗಿ ದರ್ಶನ್ ಅರ್ಜಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರು ಕೊನೆಗೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.57ನೇ ಸಿಟಿ ಸಿವಿಲ್ ನ್ಯಾಯಾಲಯವು ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗ್ಯಾಂಗ್ ಬಂಧನವಾಗಿ 100 ದಿನಗಳ ಬಳಿಕ ನಟ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ....
ದೆಹಲಿಯ 3ನೇ ಮಹಿಳಾ ಸಿಎಂ ಆಗಿ ಅತಿಶಿ ಪದಗ್ರಹಣ

ದೆಹಲಿಯ 3ನೇ ಮಹಿಳಾ ಸಿಎಂ ಆಗಿ ಅತಿಶಿ ಪದಗ್ರಹಣ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಹಿರಿಯ ಎಎಪಿ ಶಾಸಕಿ ಅತಿಶಿ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಜಧಾನಿಯ ರಾಜ್ ನಿವಾಸದಲ್ಲಿ ಶನಿವಾರ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಪದಗ್ರಹಣ ಮಾಡಿದರು. ಅವರ ಜೊತೆ ಐವರು ಸಂಪುಟ ಸಚಿವರಾಗಿ ಕೂಡಾ ಪ್ರಮಾಣ ವಚನ ಸ್ವೀಕರಿಸಿದರು.ದೆಹಲಿಯ 3ನೇ ಸಿಎಂ ಆಗಿ ಆತಿಶಿ ಅವರು ಅಧಿಕಾರ ವಹಿಸಿಕೊಂಡು ಗಮನಸೆಳೆದಿದ್ದಾರೆ. ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಹಿನ್ನಲೆಯಲ್ಲಿ ಸಿಎಂ ಪದಗ್ರಹಣ ಸಮಾರಂಭ ಸರಳವಾಗಿ ನಡೆಯಿತು. ಆತಿಶಿ ಸರ್ಕಾರ ಈ ತಿಂಗಳ 26-27 ರಂದು ನಡೆಯಲಿರುವ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಬಹುಮಾನ ಸಾಬೀತುಪಡಿಸಲಿದೆ ಎಂದು ಆಪ್ ನಾಯಕರು ತಿಳಿಸಿದ್ದಾರೆ....
KSRTCಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’

KSRTCಗೆ ಪ್ರತಿಷ್ಠಿತ ‘ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024’

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ರಾಜ್ಯ ಸರ್ಕಾರಿ ಸ್ವಮ್ಯದ ಸಾರಿಗೆ ನಿಗಮ KSRTCಗೆ ಮತ್ತೊಂದು ಪುರಸ್ಕಾರ ಸಿಕ್ಕಿದೆ. ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ-2024' ಈ ಬಾರಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಗೆ ಲಭಿಸಿಸೆ.ನಿಗಮದ ನೌಕರರಿಗೆ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಮತ್ತು ಮುಂಜಾಗ್ರತೆ ವಹಿಸುವ ಉಪಕ್ರಮಗಳಿಗಾಗಿ “ಸಾರಿಗೆ ಸಂಜೀವಿನಿ” ಎಂಬ ಯೋಜನೆ ಜಾರಿಗೆ ತರಲಾಗಿದ್ದು, ಸದರಿ ಉಪಕ್ರಮಕ್ಕಾಗಿ ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.ದೆಹಲಿ ಮೂಲದ ಸ್ಕಾಚ್ ಸಂಸ್ಥೆಯು ಸ್ವತಂತ್ರ ವಿಚಾರ ತಜ್ಞ ವೇದಿಕಾ ಸಂಸ್ಥೆಯಾಗಿದ್ದು 1997ರಲ್ಲಿ ಸ್ಥಾಪಿತವಾಗಿರುತ್ತದೆ. ಈ ಸಂಸ್ಥೆಯು 2003 ರಿಂದ ಸ್ಕಾಚ್ ಪ್ರಶಸ್ತಿಯನ್ನು ವಿವಿಧ ಸಂಸ್ಥೆಗಳು ಸಾಧಿಸಿರುವ ಉತ್ತಮ ಆಡಳಿತ ನಿರ್ವಹಣೆ, ಹಣಕಾಸು, ತಾಂತ್ರಿಕತೆ ಅಳವಡಿಕೆ ಹಾಗೂ ಆಂತರಿಕ ಬೆಳವಣಿಗೆಗಾಗಿ ನೀಡುತ್ತಾ ಬಂದಿದೆ. ಸ್ಕಾಚ್ ಸಂಸ್ಥೆಯು ತನ್ನ ಅತ್ಯುನ್ನತ ಪ್ರಶಸ್ತಿಗಳನ್ನು ಸಂಸ್ಥೆಗಳು ಮಾಡಿರುವ ಅತಿ ಉತ್ತಮ ಸಾಧನೆ ಹಾಗೂ ಅವುಗಳಿಂದ ಉಂಟಾಗಿರುವ ಪರಿಣಾಮಗಳನ್ನು ಆಧರಿಸಿ ಆಯ್ಕೆ ಮಾಡಿ ನೀಡುತ್ತದೆ.ಸ್ಕಾಚ್ ಸಂಸ್ಥೆಯು ದೆಹಲಿಯ ಸಿಲ್ವರ್ ...