‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ
ಬೆಂಗಳೂರು: RCB ವಿಜಯೋತ್ಸವದ ಹೆಸರಿನಲ್ಲಿ ಸಂದರ್ಭದ ಲಾಭ ಪಡೆಯುವ ಕೆಟ್ಟ ಸ್ವಾರ್ಥದ ಫಲವಾಗಿ 11 ಅಮಾಯಕ ಜೀವಗಳ ಬಲಿಯಾಗಿದೆ. ಸಾವಿರಾರು ಜನರು ಸಂಕಟ ಅನುಭವಿಸಿದ್ದಾರೆ. ಇಂದು ಉಚ್ಚ ನ್ಯಾಯಾಲಯ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಪರಿಗಣಿಸಿ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಈ ಸಂದರ್ಭದಲ್ಲಿ ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕಾದ ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರುʼ ಎಂಬಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಇತರ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದು ಸರ್ಕಾರದ ನಿರ್ಲಜ್ಜ ಹಾಗೂ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಬಹುದು ಎಂಬ ದುರಾಲೋಚನೆಯ ಕ್ರಮವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಕರ್ನಾಟಕದ ಜನತೆ ಮಮ್ಮಲ ಮರುಗುತ್ತಿದ್ದಾರೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ಮನೆ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮಾನವೀಯತೆ ಇರುವವರ ಕರುಳು ಹಿಂಡುತ್ತಿದೆ ಎಂದಿರುವ ವಿಜಯೇಂದ್ರ, ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಕಾಲ್ತುಳಿತ ಘಟನೆ ಬಹುದೊಡ್ಡ ದುರಂತವಾಗಿ ದಾಖ...









