
ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!
ನವದೆಹಲಿ: 'ಒಂದು ದೇಶ, ಒಂದು ಚುನಾವಣೆ' ತೀರ್ಮಾನ ಮೂಲಕ ದೇಶದ ಗಮನ ಸೆಳೆದಿರುವ ಕೇಂದ್ರ ಸರ್ಕಾರ ಇದೀಗ 'ಒಂದು ದೇಶ ಏಕರೂಪದ ಶಿಕ್ಷಣ ವ್ಯವಸ್ಥೆ' ಜಾರಿ ಬಗ್ಗೆ ಚಿಂತನೆ ನಡೆಸಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ (Department of Higher Education) ಇಂದು (13.062025 ಶುಕ್ರವಾರ) ಯುಜಿಸಿ ಗೆ ಮಹತ್ವದ ನಿರ್ದೇಶನ ನೀಡಿದೆ.ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಹದೆಗೆಟ್ಟಿದ್ದು ಕಾರ್ಪೊರೇಟ್ ಲಾಭಿಯಿಂದಾಗಿ ಶಾಲೆಗಳಲ್ಲಿ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಏಕರೂಪ ಶಿಕ್ಷಣ ಹಾಗೂ ಅಗತ್ಯ ಶಿಕ್ಷಣದ ಸಾಂವಿಧಾನಿಕ ಆಶಯಗಳಿಗೆ ಶಿಕ್ಷಣ ಸಂಸ್ಥೆಗಳು ಅಡ್ಡಿಯಾಗುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ನಿಯಂತ್ರಣ ಪ್ರಾಧಿಕಾರ ಸ್ಥಾಪಿಸಬೇಕೆಂದು ಕೋರಿ 'ಸಿಟಿಜನ್ ರೈಟ್ಸ್ ಫೌಂಡೇಷನ್ (CRF)' ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಕೇಂದ್ರ ಶಿಕ್ಷಣ ಶುಲ್ಕ ನಿಯಂತ್ರಣ ಪ್ರಾಧಿಕಾರ (CEFRA) ರಚನೆಯ ಪ್ರಕ್ರಿಯೆಗೆ ಚಾಲನೆ ನೀಡಿದೆ. ಕೇಂದ್ರ...









