Saturday, March 21

Author: jpprajamani

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; RCB, KSCA ವಿರುದ್ಧ FIR

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; RCB, KSCA ವಿರುದ್ಧ FIR

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ IPL ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು ಇದಕ್ಕೆ ಸರ್ಕಾರವೇ ಹೊಣೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಅಷ್ಟೇ ಅಲ್ಲ, ದುರಂತ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಲ್ಲ ಎಂಬ ಆಕ್ರೋಶ ಸಾರ್ವಜನಿಕ ವಲಯದಲ್ಲೂ ವ್ಯಕ್ತವಾಗಿದೆ.ಈ ನಡುವೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಗುರುವಾರ FIR ದಾಖಲಾಗಿದೆ. ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್‌, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ ಸಿಎ) ​​ಮತ್ತು ಇತರರ ವಿರುದ್ಧ FIR ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇನ್ನೊಂದೆಡೆ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ....
KSRTC ಚಾಲಕ-ಕಂ-ನಿರ್ವಾಹಕ ಹುದ್ದೆಯ ನೇಮಕಾತಿ; ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

KSRTC ಚಾಲಕ-ಕಂ-ನಿರ್ವಾಹಕ ಹುದ್ದೆಯ ನೇಮಕಾತಿ; ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು,: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.ಜಾಹೀರಾತು ಸಂಖ್ಯೆ 1/2020 ದಿನಾಂಕ 14.02.2020ರನ್ವಯ KSRTCಗೆ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಶಾಂತಿನಗರದಲ್ಲಿರುವ KSRTC ಕೇಂದ್ರ ಕಚೇರಿಯಲ್ಲಿ ಹಾಗೂ ನಿಗಮದ ವೆಬ್ ಸೈಟ್ ನಲ್ಲಿ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.ಈ ಸಂಭವನೀಯ ಆಯ್ಕೆಪಟ್ಟಿ ಬಗ್ಗೆ ಆಕ್ಷೇಪಣೆ ಇದ್ದಲ್ಲಿ 11.06.2025ರ ಸಂಜೆ 5.30ರೊಳಗಾಗಿ ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿರುವ ನೇಮಕಾತಿ ಶಾಖೆಗೆ ಖುದ್ದಾಗಿ ಅಥವಾ ನಿಗಮದ ಅಧಿಕೃತ ಇ-ಮೇಲ್ dycpmrct@ksrtc.org ಮುಖಾಂತರ ಸಲ್ಲಿಸಬಹುದು.ಜೂನ್ 11ರ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ನಿಗಮದ ನಿರ್ದೇಶಕರು (ಸಿ&ಜಾ) ತಿಳಿಸಿದ್ದಾರೆ. ಈ ನೇಮಕಾತಿಯು ಪಾರದರ್ಶಕವಾಗಿದ್ದು ಯಾವುದೇ ಆಮಿಷ/ ಅವ್ಯ...
ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಕಾರಣ. ಈ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದ ಎಸ್‌ಐಟಿಯಿಂದ ತನಿಖೆ ನಡೆಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿ ತನಿಖೆಗೆ ನಾವು ಒಪ್ಪುವುದಿಲ್ಲ. ಹೈಕೋರ್ಟ್‌ ಮುಖ್ಯ ನ್ಯಾಯಾಧೀಶರ ಬಳಿಗೆ ಪಿಐಎಲ್‌ ಹೋಗುತ್ತಿದೆ. ಹೈಕೋರ್ಟ್‌ ನ್ಯಾಯಾಧೀಶರ ಸುಪರ್ದಿಯಲ್ಲೇ ಇದರ ತನಿಖೆ ನಡೆಯಬೇಕಿದೆ. ಇದಕ್ಕಾಗಿ ಎಸ್‌ಐಟಿ ರಚಿಸಬೇಕು. ಇದರ ವರದಿ ನೇರವಾಗಿ ಹೈಕೋರ್ಟ್‌ಗೆ ಸಲ್ಲಿಕೆಯಾಗಬೇಕು. ಈ ಎಲ್ಲ ಸಾವುಗಳಿಗೆ ನ್ಯಾಯ ನೀಡಬೇಕು. ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು.ಇದು ಕ್ರಿಕೆಟ್‌ ಅಸೋಸಿಯೇಶನ್‌ ಕಾರ್ಯಕ್ರಮ ಎಂದು ಹೇಳಿ ಸಿಎಂ ಸಿದ್ದರಾಮಯ್ಯ ಜವಾಬ್ದಾರಿ ಮರೆತಿದ್ದಾರೆ. ತಮ್ಮ ತಪ್ಪನ್ನು ಮುಚ್ಚಿಹಾಕಿ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ನೋಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿ...
ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: RCB ಸಂಭ್ರಮಾಚರಣೆ ವೇಳೆ ಸಂಭವಿಸಿರುವ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಭೀಕರ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ.ಕಾಲ್ತುಳಿತ ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೀಡುತ್ತಿರುವ ಹೇಳಿಕೆ ಬಗ್ಗೆ ಸಿ.ಟಿ.ರವಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಐಪಿಎಲ್ ಟೂರ್ನಿಯಲ್ಲಿನ ಗೆಲುವಿನ 'ಕ್ರೆಡಿಟ್' ತೆಗೆದುಕೊಳ್ಳುವ ಹಪಾಹಪಿಯಿಂದಾಗಿ ಈ ದುರ್ಘಟನೆ ನಡೆದಿದೆ ಎಂದು ರವಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಇದೇ ವೇಳೆ, ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದ ಘಟನೆಯ ಕುರಿತು 18 ಪ್ರಶ್ನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಂದಿಟ್ಟಿರುವ ಸಿ.ಟಿ.ರವಿ, ಕೇವಲ ಒಂದು ಫ್ರಾಂಚೈಸಿ ಗೆಲುವುವನ್ನು ರಾಜ್ಯ ಸರ್ಕಾರವೇ ಸಂಭ್ರಮಿಸುವ ಅಗತ್ಯ ಏನಿತ್ತು? ಇದು ಸರ್ಕಾರದ ಆದ್ಯತೆಯಾಗಬೇಕಿತ್ತೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.ಸಿ.ಟಿ.ರವಿ ಅವರು ಸಿಎಂ ಅವರಲ್ಲಿ ಕೇಳಿರುವ 18 ಪ್ರಶ್ನೆಗಳು ಹೀಗಿವೆ: ಸಾವಿರಾರು ಜನ ಸೇರುವ ನಿರೀಕ್ಷೆ ಇದ್...
ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

ಕಾಲ್ತುಳಿತ ದುರಂತ; ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದ ಸುಧಾಕರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: RCB ಸಂಭ್ರಮಾಚರಣೆ ವೇಳೆ ಸಂಭವಿಸಿರುವ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಭೀಕರ ದುರಂತ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ಒಪ್ಪಲಾಗದು, ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿದೆ.ದುರಂತದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಡಾ.ಸುಧಾಕರ್, ಬೆಂಗಳೂರಿನಲ್ಲಿ ಬುಧವಾರ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಆದೇಶಿಸಿರುವುದು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದಿದ್ದಾರೆ.ಈ ಅನಾಹುತದಲ್ಲಿ ಬಲಿಯಾದ ಅಮಾಯಕ ಯುವಕರಿಗೆ ನ್ಯಾಯ ಸಿಗಬೇಕಾದರೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಲೇಬೇಕು. ಇದು ನಮ್ಮ ಆಗ್ರಹ ಎಂದು ಡಾ.ಸುಧಾಕರ್ ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಆದೇಶಿಸಿರುವುದು ಯಾ...
ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

ಮರಣ ಹೋಮ ನಡೆದರೂ ದಾಖಲಾಗದ FIR..! ಕಾಲ್ತುಳಿತ ಘಟನೆ ಮುಚ್ಚಿಹಾಕಲು ಸರ್ಕಾರದ ಯತ್ನ?

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರ್​ಸಿಬಿ ಐಪಿಎಲ್ ವಿಜಯೋತ್ಸವ ಆಚರಣೆ ವೇಳೆ ಸಂಭವಿಸಿರುವ ಭೀಕರ ಕಾಲ್ತುಳಿತ ಘಟನೆ ಬಗ್ಗೆ FIR ದಾಖಲಿಸಿಕೊಳ್ಳಲಾಗಿದೆಯೇ ಎಂಬ ಬಗ್ಗೆ ಪೊಲೀಸರು ಸೂಕ್ತ ಮಾಹಿತಿ ಒದಗಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಬುಧವಾರ ಆರ್​ಸಿಬಿ ಐಪಿಎಲ್ ವಿಜಯೋತ್ಸವ ವೇಳೆ ನೂಕು ನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಯೋಸಿದೆ. ಈ ದುರ್ಘಟನೆಯಲ್ಲಿ 11 ಮಂದಿ ಮೃತಪತ್ತಿದ್ದು, ಹತ್ತಾರು ಮಂದಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.ಬೆಂಗಳೂರಿನಲ್ಲಿ ಸಂಭವಿಸಿರುವ ಈ ಭೀಕರ ದುರ್ಘಟನೆ ಬಗ್ಗೆ ದೇಶವ್ಯಾಪಿ ಶೋಕ ವ್ಯಕ್ತವಾದರೆ ಕರ್ನಾಟಕ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದಂತಿಲ್ಲ. ಈ ಘಟನೆಯನ್ನು ಮುಚ್ಚಿಹಾಕಲು ಸರ್ಕಾರ ಮುಂದಾಗುತ್ತಿದೆಯೇ? ಎಂಬ ಅನುಮಾನ ಮೂಡುವಂತಾಗಿದೆ. ಈ ದುರ್ಘಟನೆಯನ್ನು ಅಸಹಜ ಸಾವು (UDR) ಎಂದು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಭೀಕರ ದುರಂತ ಮರಣಹೋಮವನ್ನೇ ಸೃಷ್ಟಿಸಿದ್ದರೂ ಪೊಲೀಸರು ಎಫ್​ಐಆರ್ ದಾಖಲಿಸಿಲ್ಲ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ....

ಕಾಲ್ತುಳಿತ ದುರಂತ: ಶವಗಳ ಮೇಲೆ ಬಿಜೆಪಿ ರಾಜಕೀಯ ಎಂದ ಡಿಕೆಶಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರಿನ (RCB) ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತದಿಂದ ಸಾವನ್ನಪ್ಪಿದವರ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಘಟನೆಯಲ್ಲಿ ಮೃತಪಟ್ಟ ಜನರ ಮೇಲೆ ಭಾರತೀಯ ಜನತಾ ಪಕ್ಷ (BJP) ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.“RCB ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದಿಂದ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಅವರ ಕುಟುಂಬಗಳು ಶೋಕಿಸುತ್ತಿವೆ. ಆದರೆ ಸಂವೇದನಾಶೀಲವಲ್ಲದ ಬಿಜೆಪಿ ಮೃತ ದೇಹಗಳ ಮೇಲೆ ರಾಜಕೀಯ ಮಾಡುವುದರಲ್ಲಿ ನಿರತವಾಗಿದೆ. ದುರಂತ ಸಂಭವಿಸಬಾರದಿತ್ತು ಆದರೆ ಅದು ಸಂಭವಿಸಿದೆ” ಎಂದು ಅವರು ದೂರಿದ್ದಾರೆ.“ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಮತ್ತು ಸಾವುಗಳಿಗೆ ಸಂತಾಪ ಸೂಚಿಸಲು ಮತ್ತು ಮೃತ ದೇಹಗಳ ಮೇಲೆ ರಾಜಕೀಯ ಮಾಡುವ ಸಮಯ ಇದಲ್ಲ' ಎಂದು ಡಿಕೆಶಿ ಹೇಳಿದ್ದಾರೆ.ಆರ್‌ಸಿಬಿ ತಂಡವು ಎಚ್‌ಎಎಲ್ ವಿಮಾನ ನಿಲ್ದಾಣದಿಂದಲೇ ತೆರೆದ ವಾಹನ ಮೆರವಣಿಗೆಗೆ ಮನವಿ ಮಾಡಿತ್ತು. ಆದರೆ ನಮ್ಮ ಪೊಲೀಸ್ ಅಧಿಕಾರಿಗಳು ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲೇಖಿಸಿ ನಮಗೆ ಅ...
ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಂಜುಂ ಪರ್ವೇಜ್ ನಿಯುಕ್ತಿ

ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಂಜುಂ ಪರ್ವೇಜ್ ನಿಯುಕ್ತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ಸರ್ಕಾರ ನಿಯುಕ್ತಿಗೊಳಿಸಿದೆ.ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಅಂಜುಂ ಪರ್ವೇಜ್ ಅವರು ಇನ್ನು ಮುಂದೆಯೂ ಈ ಇಲಾಖೆಯ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಅಂಜುಮ್ ಪರ್ವೇಜ್ ಅವರು 1994ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ನಗರ ಮತ್ತು ಗ್ರಾಮೀಣಾಭಿವೃದ್ಧಿ, ನೀರು ಸರಬರಾಜು ಮತ್ತು ಸಾರಿಗೆ ಕ್ಷೇತ್ರಗಳಲ್ಲಿ ಸುಧಾರಣೆಗೆ ಹೆಸರಾಗಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ....
ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

ಕಾಲ್ತುಳಿತ ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಸರ್ಕಾರ ಆದೇಶ; ಮೃತರ ಬಂಧುಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿರುವ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದೆ.ಕಾಲ್ತುಳಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲದವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಿಎಂ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ ಎಂದರು.ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಸಿಎಂ ಪ್ರಕಟಿಸಿದರು. ಈ ಘಟನೆಯನ್ನು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿರುವುದಾಗಿ ತಿಳಿಸಿದರು....
ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

ಐಪಿಎಲ್ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಘಟನೆ; ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಐಪಿಎಲ್ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ ಸಿಲುಕಿ ಅಸ್ವಸ್ಥರಾಗಿರುವ ಅನೇಕರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಆಸ್ಪತ್ರೆಗಳಿಗೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಗಾಯಾಳುಗಳ ಕ್ಷೇಮ ವಿಚಾರಿಸಿದರು. ಕಾಲ್ತುಳಿತ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ವಿಜಯೇಂದ್ರ, ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ನಿರೀಕ್ಷೆ ಮೀರಿ ಜನಪ್ರವಾಹ ಹರಿದು ಬಂದ ಹಿನ್ನೆಲೆಯಲ್ಲಿ ಉಂಟಾಗಿರುವ ದುರಂತದಲ್ಲಿ 11 ಮಂದಿಗೂ ಹೆಚ್ಚು ಅಭಿಮಾನಿಗಳು ಪ್ರಾಣ ಕಳೆದುಕೊಂಡಿರುವುದು ಹಾಗೂ ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದರು. ನೂರಾರು ಸಂಖ್ಯೆಯ ಜನ ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಹೃದಯವಿದ್ರಾವಕ ಘಟನೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸುವಂತಾಗಿದೆ ಎಂದು ದುಃಖ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರ ಈ ಕೂಡಲೇ ನೊಂದ ಕುಟುಂಬಗಳಿಗೆ ಆತ್ಮವಿಶ್ವಾಸ ತುಂಬಬೇಕು, ಸಾಂತ್ವನ ಹೇಳಬೇಕು...