Wednesday, January 28

Author: jpprajamani

ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

ಸುಹಾಸ್ ಕೊಲೆ ಘಟನೆಯ ವೀಡಿಯೋ ಹಂಚಿಕೊಂಡ ಬಿಜೆಪಿ ಶಾಸಕ; ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದು ಆಕ್ರೋಶ

Focus, Update Videos, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆಯನ್ನು ಬಿಜೆಪಿ ನಾಯಕರು ಖಂಡಿಸಿದ್ದಾರೆ. ಸುಹಾಸ್ ಕೊಲೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕಾರ್ಕಳ ಶಾಸಕ ಸುನಿಲ್ ಕುಮಾರ್, ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ ಎಂದಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ ಎಂದವರು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ.ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ.@siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. 1/2 pic.twitter.com/vRJpiElUid — Sunil Kumar Karkala (@karkalasunil) May 1, 2025...
ಅಂದು ಪ್ರವೀಣ್.. ಇದೀಗ ಸುಹಾಸ್.. ಹಿಂದೂ ಕಾರ್ಯಕರ್ತನ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಬಂದ್

ಅಂದು ಪ್ರವೀಣ್.. ಇದೀಗ ಸುಹಾಸ್.. ಹಿಂದೂ ಕಾರ್ಯಕರ್ತನ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಬಂದ್

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮುಖಂಡರು ದಕ್ಷಿಣ ಕನ್ನಡ ಬಂದ್'ಗೆ ಕರೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿರುವ ಹಿಂದೂ ಸಂಘಟಮನೆಗಳ ಮುಖಂಡರು, ಇದು ಮತಾಂಧರ, ಭಯೋತ್ಪಾದಕರ ಕೃತ್ಯ ಎಂದು ಆರೋಪಿಸಿದ್ದಾರೆ. ಈ ನಡುವೆ ಸುಹಾಸ್ ಕೊಲೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸ್ವಯಂ ಪ್ರೇರಿತ ಬಂದ್ ಆಚರಿಸುವಂತೆ ವಿಶ್ವ ಹಿಂದೂ ಪರಿಷತ್ ಮುಖಂಡರು ಕರೆ ನೀಡಿದ್ದಾರೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 6:00 ಗಂಟೆಯ ತನಕ ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆಯನ್ನು ನೀಡಲಾಗಿದೆ. ಮತ್ತು ಬೆಳಿಗ್ಗೆ 10:30ಗೆ ಎಜೆ ಆಸ್ಪತ್ರೆಯಿಂದ ಕಾರಿಂಜ ದ ತನಕ ಮ...
ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕಗ್ಗೊಲೆ: ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ

ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕಗ್ಗೊಲೆ: ಮಂಗಳೂರಿನಲ್ಲಿ ಪರಿಸ್ಥಿತಿ ಪ್ರಕ್ಷುಬ್ಧ

Focus, ಪ್ರಮುಖ ಸುದ್ದಿ, ರಾಜ್ಯ
ಮಂಗಳೂರು: ಬಂದರು ನಗರಿ ಮಂಗಳೂರಿನಲ್ಲಿ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆ ನಡೆದಿದ್ದು, ಕರಾವಳಿ ಜಿಲ್ಲೆ ಬೆಚ್ಚಿ ಬಿದ್ದಿದೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಸುಹಾಸ್ ಶೆಟ್ಟಿಯನ್ನು ಹಂತಕರು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಇದೀಗ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಕೊಲೆ ನಡೆದಿದೆ. ಸುರತ್ಕಲ್‌ನಲ್ಲಿ 2022 ರಲ್ಲಿ ನಡೆಡಿದ್ದ ಫಾಜಿಲ್ ಕೊಲೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದರು. ಬಜರಂಗದಳದ ಕಾರ್ಯಕರ್ತರಾಗಿದ್ದ ಸುಹಾಸ್ ಶೆಟ್ಟಿ, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಎಂದು ವಿಶ್ವಹಿಂದೂ ಪರಿಷತ್ ಮುಖಂಡರು ತಿಳಿಸಿದ್ದಾರೆ. ಮತ್ತು ಅವರ ವಿರುದ್ಧ ಹಲವು ಕೊಲೆ ಪ್ರಯತ್ನದ ಪ್ರಕರಣಗಳು ದಾಖಲಾಗಿದ್ದವು. ಸುಹಾಸ್ ಶೆಟ್ಟಿ ಹತ್ಯೆ ನಂತರ ಮಂಗಳೂರು ಸುತ್ತಮುತ್ತ ...
ಐಪಿಎಲ್ 2025: ರಾಜಸ್ಥಾನ್ ರಾಯಲ್ಸ್ ಕೂಡಾ ಎಲಿಮಿನೇಟ್; ಅಗ್ರಸ್ಥಾನಕ್ಕೇರಿದ MI

ಐಪಿಎಲ್ 2025: ರಾಜಸ್ಥಾನ್ ರಾಯಲ್ಸ್ ಕೂಡಾ ಎಲಿಮಿನೇಟ್; ಅಗ್ರಸ್ಥಾನಕ್ಕೇರಿದ MI

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಜೈಪುರ: ಚೆನ್ನೈ ಬಳಿಕ ರಾಜಸ್ಥಾನ್ ರಾಯಲ್ಸ್ (RR) ತಂಡ ಕೂಡಾ ಈ ಬಾರಿಯ ಐಪಿಎಲ್ ಸರಣಿಯಿಂದ ಎಲಿಮಿನೇಟ್ ಆಗಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಸೋಲುಂಡು ಸರಣಿಯಿಂದ ಹೊರಬಿದ್ದಿದೆ. ಮುಂಬೈ ಇಂಡಿಯನ್ಸ್ (MI)ತಂಡ ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 100 ರನ್ ಗಳ ಅಂತರದಿಂದ ಸೋಲಿಸಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ಗೆ ಇದು ಸತತ ಆರನೇ ಗೆಲುವಾಗಿದ್ದು, ಈ ಜಯಭೇರಿಯೊಂದಿಗೆ ಅಂಕ ಪಟ್ಟಿಯಲ್ಲಿ ಆಗ್ರ ಸ್ಥಾನಕ್ಕೆ ಏರಿದೆ....
ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಎದಿರೇಟು

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಎದಿರೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ ನಡೆಸುವ ಕೇಂದ್ರದ ತೀರ್ಮಾನ ಬಗ್ಗೆ ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಗುರುವಾರ ಕಾಂಗ್ರೆಸ್ ನೇತೃತ್ವದ ಸರ್ಕಾರವು ನಡೆಸಿದ ಗಣತಿಯ ಲೋಪವನ್ನು ಕೇಂದ್ರ ಸರ್ಕಾರ ಸರಿಪಡಿಸಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. 'ತಮ್ಮ ಸರ್ಕಾರವು ಜಾತಿ ಜನಗಣತಿ ಕುರಿತು ಕೇಂದ್ರ ಸರ್ಕಾರಕ್ಕೆ ಯಾವುದೇ ಮಾರ್ಗದರ್ಶನ ನೀಡಲು ಸಂಪೂರ್ಣವಾಗಿ ಸಿದ್ಧವಾಗಿದೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಆರ್. ಅಶೋಕ, 'ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾತಿ ಜನಗಣತಿಗೆ ಕರ್ನಾಟಕದ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸೂಚಿಸುವ ನಿಮ್ಮ ಹೇಳಿಕೆ ನಿಜಕ್ಕೂ ನಗೆಪಾಟಲಿಗೆ ಈಡಾಗಿದೆ. ಕಾರ್ಯದರ್ಶಿಗಳ ಸಹಿಯೂ ಇಲ್ಲದ, ಶಾಲಾ ಮಕ್ಕಳು ಅರ್ಜಿಗಳನ್ನು ಭರ್ತಿ ಮಾಡಿದ, ಎಣಿಕೆಯ ಸಮಯದಲ್ಲಿ ನಾಯಿಗಳಿರುವ ಮನೆಗಳನ್ನು ಬಿಟ್ಟುಬಿಟ್ಟ ಮತ್ತು ಹತ್ತು ವರ್ಷಗಳ ನಂತರವೂ ಅಂಗೀಕರಿಸದೆ ಉಳಿದಿರುವ ವರದಿಯ ಮೂಲ ಪ್ರತಿಯು ಜಾತಿ ಜನಗಣತಿಯನ್ನು ಹೇಗೆ ನಡೆಸಬಾ...
ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೆಪಿಸಿಸಿ ನಾಯಕರು

ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೆಪಿಸಿಸಿ ನಾಯಕರು

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಬಿಜೆಪಿ, ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ @BJP4India ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡ...
ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

ಸಂತೋಷಕ್ಕಾಗಿ ಮಾತ್ರವಲ್ಲ, ದೈಹಿಕ-ಮಾನಸಿಕ ಆರೋಗ್ಯಕ್ಕಾಗಿ ಹದಿಹರೆಯದವರ ಹೋರಾಟ: ಸಂಶೋಧಕರು ಹೇಳೋದು ಹೀಗೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೈವಿಧ್ಯ
ನವದೆಹಲಿ: ಪ್ರಪಂಚದಾದ್ಯಂತ 18 ರಿಂದ 29 ವರ್ಷ ವಯಸ್ಸಿನ ಯುವ ವಯಸ್ಕರು ಸಂತೋಷಕ್ಕಾಗಿ ಮಾತ್ರವಲ್ಲದೆ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದೊಂದಿಗೂ ಹೋರಾಡುತ್ತಿದ್ದಾರೆ ಎಂದು ಹೊಸ ಅಧ್ಯಯನವೊಂದು ಬೆಳಕುಚೆಲ್ಲಿದೆ. ಯುವ ವಯಸ್ಕರು ತಮ್ಮದೇ ಆದ ಪಾತ್ರದ ಗ್ರಹಿಕೆಗಳೊಂದಿಗೆ, ಜೀವನದಲ್ಲಿ ಅರ್ಥವನ್ನು ಕಂಡುಕೊಳ್ಳುವಲ್ಲಿ, ಅವರ ಸಂಬಂಧಗಳ ಗುಣಮಟ್ಟ ಮತ್ತು ಅವರ ಆರ್ಥಿಕ ಭದ್ರತೆಯೊಂದಿಗೆ ಹೋರಾಡುತ್ತಿದ್ದಾರೆ ಎಂದು ಅಧ್ಯಯನವು ತೋರಿಸಿದೆ ಎಂದು ಸಂಸ್ಥೆ ವರದಿ ಮಾಡಿದೆ. ಪ್ರಾಥಮಿಕವಾಗಿ 2023 ರಲ್ಲಿ ಗ್ಯಾಲಪ್ ಸಂಗ್ರಹಿಸಿದ ಡೇಟಾವನ್ನು 20 ಕ್ಕೂ ಹೆಚ್ಚು ದೇಶಗಳಲ್ಲಿ 200,000 ಕ್ಕೂ ಹೆಚ್ಚು ಜನರ ಸ್ವಯಂ-ವರದಿ ಮಾಡಿದ ಸಮೀಕ್ಷೆಗಳಿಂದ ಪಡೆಯಲಾಗಿದೆ ಮತ್ತು ನೇಚರ್ ಮೆಂಟಲ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ. ಹಾರ್ವರ್ಡ್ ಮತ್ತು ಬೇಲರ್ ವಿಶ್ವವಿದ್ಯಾಲಯದ ಸಂಶೋಧಕರ ಸಹಯೋಗವಾದ ಗ್ಲೋಬಲ್ ಫ್ಲೋರಿಶಿಂಗ್ ಸ್ಟಡಿಯಿಂದ ಉದ್ಘಾಟನಾ ತರಂಗ ದತ್ತಾಂಶವನ್ನು ಆಧರಿಸಿದ ಪ್ರಬಂಧಗಳ ಸಂಗ್ರಹದಲ್ಲಿ ಈ ಅಧ್ಯಯನವು ಒಂದಾಗಿದೆ. ಭಾಗವಹಿಸಿದವರಲ್ಲಿ 50 ವರ್ಷ ವಯಸ್ಸಿನವರೆಗೆ ಸರಾಸರಿ ಕಡಿಮೆ ಏಳಿಗೆಯನ್ನು ...
KSRTCಗೆ ಫೈನಾನ್ಸಿಯಲ್ ಎಕ್ಸ್’ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿ

KSRTCಗೆ ಫೈನಾನ್ಸಿಯಲ್ ಎಕ್ಸ್’ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ 2025 ರ ರಾಷ್ಟ್ರೀಯ ಪ್ರಶಸ್ತಿಯನ್ನು ಅತ್ಯುತ್ತಮ ಸಾರ್ವಜನಿಕ ಸಾರಿಗೆ ಉಪಕ್ರಮದಡಿ ಪಡೆದಿದೆ. ನವದೆಹಲಿಯಲ್ಲಿ ಬುಧವಾರ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ನಿಗಮದ ಮುಖ್ಯ ತಾಂತ್ರಿಕ ಶಿಲ್ಪಿ ಕೆ.ಎಚ್.ಶ್ರೀನಿವಾಸ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ. ಅತ್ಯುತ್ತಮ ಸಂಪರ್ಕ, ಸಾರ್ವಜನಿಕ ಲಭ್ಯತೆ ಹಾಗೂ ಉತ್ತಮ ಸಾರ್ವಜನಿಕ ಸಾರಿಗೆ ಸೇವೆಗಾಗಿ KSRTCಗೆ ಫೈನಾನ್ಸಿಯಲ್ ಎಕ್ಸ್ಪ್ರೆಸ್ ಮೊಬಿಲಿಟಿ ಪ್ರಶಸ್ತಿ ನೀಡಲಾಗಿದೆ...
ಚಿತ್ರದುರ್ಗ ಸಮೀಪ ಕಾರು ಅಪಘಾತದಲ್ಲಿ ಮೂವರು ದುರ್ಮರಣ

ಚಿತ್ರದುರ್ಗ ಸಮೀಪ ಕಾರು ಅಪಘಾತದಲ್ಲಿ ಮೂವರು ದುರ್ಮರಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಸಮೀಪ ಕಾತ್ರಾಳ ಗ್ರಾಮದ ಬಳಿ ಗುರುವಾರ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನೋವಾ ಕಾರು ಕಾತ್ರಾಳ ಗ್ರಾಮದ ಕೆರೆ ಬಳಿ ಡಿವೈಡರ್​ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕಾರಿನಲ್ಲಿದ್ದ ತಮಿಳುನಾಡು ಮೂಲದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು 31 ವರ್ಷದ ಶರವಣ, 29 ವರ್ಷದ ಸೇಂದಿಲ್ ಮತ್ತು 28 ವರ್ಷದ ಅರ್ಜುನ್ ಎಂದು ಗುರುತಿಸಲಾಗಿದೆ. ಅಪಘಾತದ ಸುದ್ದಿ ತಿಳಿದು ಸ್ಥಲಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಉಗ್ರರ ಜಪ ಮಾಡಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಗೆ ಭಾರತ ಶಾಕ್

ಉಗ್ರರ ಜಪ ಮಾಡಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಗೆ ಭಾರತ ಶಾಕ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಪಾಕಿಸ್ತಾನಕ್ಕೆ ಹಲವು ನಿರ್ಬಂಧ ಹೇರಿರುವ ಭಾರತ ಇದೀಗ ಶಾಹಿದ್ ಅಫ್ರಿದಿ ಅವರಿಗೂ ಶಾಕ್ ನೀಡಿದೆ. ಶಾಹಿದ್ ಅಫ್ರಿದಿ ಯೂಟ್ಯೂಬ್ ಚಾನೆಲನ್ನು ಭಾರತ ನಿಷೇಧಿಸಿದೆ. ಪಹಲ್ಗಾಮ್ ಭಯೋತ್ಪಾದಕ ಘಟನೆಯ ಹಿನ್ನೆಲೆಯಲ್ಲಿ ಭಾರತ, ತನ್ನ ಭದ್ರತಾ ಸಂಸ್ಥೆಗಳ ವಿರುದ್ಧದ ಪ್ರಚೋದನಕಾರಿ, ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿದ್ದಕ್ಕಾಗಿ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ. ಇದೇ ವೇಳೆ, ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಅವರ ಚಾನೆಲನ್ನುಕೂಡಾ ನಿಷೇಧಿಸಲಾಗಿದೆ. ಭಾರತದ ಅತಿದೊಡ್ಡ ಶತ್ರು ಮತ್ತು ವಿಶ್ವದ ಅತಿದೊಡ್ಡ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ವಿಷಯವನ್ನು ನಿರಂತರವಾಗಿ ಪ್ರಚಾರ ಮಾಡುತ್ತಿದ್ದರು ಎಂದು ಅಫ್ರಿದಿ ಅವರು ತನ್ನ ಚಾನೆಲ್'ನಲ್ಲಿ ಬಿಂಬಿಸಿದ್ದರು. ಉಗ್ರರ ಜಪ ಮಾಡಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿಗೆ ಭಾರತ ಶಾಕ್ ತನ್ನದೇ ರೀತಿಯಲ್ಲಿ ಶಾಕ್ ನೀಡಿದೆ....