
ಆಧುನಿಕ ಭಾರತ ನಿರ್ಮಾಣದಲ್ಲಿ ನೆಹರೂ ಪಾತ್ರ ಅಳಿಸಲಾಗದಷ್ಟು ಆಳವಾಗಿ ಅಚ್ಚೊತ್ತಿದೆ: ಸಿದ್ದರಾಮಯ್ಯ
ಬೆಂಗಳೂರು: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ ದೇಶ ನಿರ್ಮಾಣದಲ್ಲಿ ತೊಡಗಿಸಿಕೊಂಡರು ಎಂದು ಸಿಎಂ ವಿವರಿಸಿದರು.ಬ್ರಿಟೀಷರು ಲೂಟಿ ಮಾಡಿದ್ದ ದೇಶದಲ್ಲಿ ಯಾವ ಸವಲತ್ತುಗಳೂ ಇರಲಿಲ್ಲ. ಅಂಥಾ ಹೊತ್ತಲ್ಲಿ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದ ನೆಹರೂ ದೇಶವನ್ನು ದಶ ದಿಕ್ಕುಗಳಿಂದ ಕಟ್ಟಿ ನಿಲ್ಲಿಸಿದ್ದನ್ನು ವಿವರಿಸಿದರು.ಅಪಾರ ಶ್ರೀಮಂತ ಕುಟುಂಬದ ನೆಹರೂ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿ ದೇಶದ ಪ್ರತಿಯೊಂದು ಕ್ಷೇತ್ರಗಳೂ ಪ್ರಗತಿ ಪಥದಲ್ಲಿ ಸಾಗುವಂತೆ ನೋಡಿಕೊಂಡಿದ್ದನ್ನು ಅಂಕಿ ಅಂಶಗಳ ಸಮೇತ ವಿವರಿ...









