Tuesday, March 17

Author: jpprajamani

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.'ಬಿಜೆಪಿಯವರ ದ್ವೇಷದ ಹೇಳಿಕೆಗಳು ನನಗೆ ಹೊಸದಲ್ಲ, ನಾನು ಇವರ ಹಗರಣಗಳನ್ನು ಬಯಲಿಗಿಟ್ಟಿದ್ದೇ ಈ ವೈಯಕ್ತಿಕ ನಿಂದನೆಗಳಿಗೆ ಕಾರಣ ಎನ್ನುವುದೂ ನನಗೆ ತಿಳಿದಿದೆ ಎಂದವರು ಬಿಜೆಪಿ ನಾಯಕರ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಗಂಗಾ ಕಲ್ಯಾಣ ಹಗರಣ, ಬಿಟ್ ಕಾಯಿನ್ ಹಗರಣ, KKRDB ಹಗರಣ, ಕೋವಿಡ್ ಹಗರಣ, PSI ಹಗರಣಗಳನ್ನು ಜನರ ಮುಂದಿಟ್ಟಿದ್ದನ್ನು ಬಿಜೆಪಿಗರಿಗೆ ಸಹಿಸಲಾಗುತ್ತಿಲ್ಲ. RSS ನವರನ್ನು ಸೈದ್ದಂತಿಕ ನೆಲೆಗಟ್ಟಿನಲ್ಲಿ ಬೆತ್ತಲುಗೊಳಿಸುತ್ತಿರುವುದೂ ಸಹ ಬಿಜೆಪಿಗರ ಈ ಅಸಹನೆಗೆ ಪ್ರಮುಖ ಕಾರಣ ಎಂದು ಪ್ರಿಯಾಂಕ್ ಖರ್ಗೆ ದೂರಿದ್ದಾರೆ.ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, 'ಈ ಹಿಂದೆ ಕಾನ್ವೆಂಟ್ ದಲಿತ ಎಂದಿದ್ದಾರೆ. ಪ್ರಿಯಾಂಕ್ ಎನ್ನುವ ಹೆಸರು ಹೆಣ್ಣೋ ಗಂಡೋ ಗೊತ್ತಿಲ್ಲ ಎಂದಿದ್ದಾರೆ. ದೇಹ ಬೆಳದಿ...
ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು.ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಹರಿಯಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬಿ ಕೆ ಹರಿಪ್ರಸಾದ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು....
ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಿರುಸುಗೊಂಡಿದೆ. ಸೇನೆ ಹಾಗೂ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ 26 ನಕ್ಸಲರು ಮೃತಪಟ್ಟಿದ್ದಾರೆ.ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಇಂದು ಪೊಲೀಸ್ ಮೂಲಗಳು ತಿಳಿಸಿವೆ.ಗುಂಡಿನ ಚಕಮಕಿಯಲ್ಲಿ ಪೊಲೀಸ್ ಮಾಹಿತಿದಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ವಿಜಯಪುರ: ವಿಜಯಪುರ ಜಿಲ್ಲೆ ಮನಗೂಳಿ ಬಳಿ ಬಸ್ಸು-ಕಾರು- ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಅಪಘಾತ ಸಂಭವಿಸಿದೆ.ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿಗೂ ಅಪ್ಪಳಿಸಿದೆ. ಈ ಅಪಘಾತದಲ್ಲಿ ಮಹಿಂದ್ರಾ ಸ್ಕಾರ್ಪಿಯೋ ವಾಹನ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ತೆಲಂಗಾಣ ಮೂಲದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಣಿಕಂಠನ್, ಪತ್ನಿ ಪವಿತ್ರ, ಪುತ್ರ ಅಭಿರಾಮ್, ಪುತ್ರಿ ಜ್ಯೋತ್ಸ್ನಾ, ವಿಜಯಪುರ ಮೂಲದ ಚಾಲಕ ವಿಕಾಸ್ ಮಕಾನಿ ಮತ್ತು ಬಸ್ ಚಾಲಕ ಬಸವರಾಜ ರಾಠೋರ್ ಸಾವನ್ನಪ್ಪಿದ್ದಾರೆ.ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ.  ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು.ಶ್ರೀ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಉಪಸ್ಥಿತಿಯಲ್ಲಿ ಈ ಕೈಂಕರ್ಯ ನೆರವೇರಿದೆ. ಶಿಲಾನ್ಯಾಸ ಕೈಂಕರ್ಯದಲ್ಲಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಪೂಜಾರಿ, ಮೀನುಗಾರಿಕಾ ಸಚಿವರಾದ ಮಾಂಕಾಳ ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ ಹಾಗೂ ಅನೇಕ ಧಾರ್ಮಿಕ ಪ್ರಮುಖರು ಪಾಲ್ಗೊಂಡರು.ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪದ್ಮರಾಜ್ ಆರ್.ಪೂಜಾರಿ, ಧರ್ಮದ ನಡೆಯ ಮೂಲಕವಷ್ಟೇ ಧರ್ಮ ಉಳಿಯಬಹುದು. ಧರ್ಮ ಉಳಿದಲ್ಲಿ ಮಾತ್ರ ನಾವು ಉಳಿಯುವೆವು ಎಂದರು. ಜಾತಿಯ ವೈಷಮ್ಯ ಬಿಟ್ಟು ಎಲ್ಲರೂ ಒಂದೇ ಎಂಬುದೇ ನಿಜವಾದ ಧರ್ಮದ ಸಾರವಾಗಿದೆ ಎಂದು ಪ್ರತಿಪಾದಿಸಿದ ಅವರು, ಸಮಸ್ತ ಹಿಂದೂ ಧರ್ಮದ ...
ಚುನಾವಣೆ ವೇಳೆ ಎಲ್ಲಾ ಭರವಸೆಗಳನ್ನು ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿಎಂ ಭರವಸೆ

ಚುನಾವಣೆ ವೇಳೆ ಎಲ್ಲಾ ಭರವಸೆಗಳನ್ನು ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿಎಂ ಭರವಸೆ

Focus, ಪ್ರಮುಖ ಸುದ್ದಿ, ರಾಜ್ಯ
ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ "ಸಮರ್ಪಣೆ ಸಂಕಲ್ಪ" ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯ...
ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಕೆಶಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಕೆಶಿ

Focus, ಪ್ರಮುಖ ಸುದ್ದಿ, ರಾಜ್ಯ
ವಿಜಯನಗರ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದಿರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂ...
ಮತ್ತೆ ಕೋವಿಡ್-19 ಗುಮ್ಮಾ..! ಭಯಪಡಬೇಡಿ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಿ ಎಂದ ಬಿಎಂಸಿ

ಮತ್ತೆ ಕೋವಿಡ್-19 ಗುಮ್ಮಾ..! ಭಯಪಡಬೇಡಿ, ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಿ ಎಂದ ಬಿಎಂಸಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಸೋಮವಾರ ನಾಗರಿಕರು ಭಯಭೀತರಾಗಬೇಡಿ ಎಂದು ಮನವಿ ಮಾಡಿದೆ, ವಿಶೇಷವಾಗಿ ಗಂಭೀರ ಕಾಯಿಲೆಗಳ ಹಿನ್ನೆಲೆಯಲ್ಲಿ.ಸಿಂಧುದುರ್ಗ ಮತ್ತು ಡೊಂಬಿವ್ಲಿಯ ಇಬ್ಬರು ಮಹಿಳೆಯರು ಭಾನುವಾರ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಬಹು ಗಂಭೀರ ಕಾಯಿಲೆಗಳಿಂದ (ಹೈಪೋಕಾಲ್ಸೆಮಿಕ್ ರೋಗಗ್ರಸ್ತವಾಗುವಿಕೆಗಳೊಂದಿಗೆ ನೆಫ್ರೋಟಿಕ್ ಸಿಂಡ್ರೋಮ್, ಕ್ಯಾನ್ಸರ್) ಸಾವನ್ನಪ್ಪಿದ ನಂತರ ಈ ಸಲಹೆಯನ್ನು ನೀಡಲಾಗಿದೆ. ಅವರು ಕೋವಿಡ್-19 ಕಾರಣದಿಂದಾಗಿ ಸಾವನ್ನಪ್ಪಿಲ್ಲ ಎಂದು ಬಿಎಂಸಿ ಸ್ಪಷ್ಟಪಡಿಸಿದೆ."ಕೋವಿಡ್-19 ಅನ್ನು ಈಗ ಸ್ಥಳೀಯ ಮತ್ತು ನಡೆಯುತ್ತಿರುವ ಆರೋಗ್ಯ ಸಮಸ್ಯೆ ಎಂದು ಪರಿಗಣಿಸಲಾಗಿದೆ. ಸಮುದಾಯ ಮಟ್ಟದಲ್ಲಿ ವೈರಸ್ ಸ್ಥಾಪಿತವಾಗಿರುವುದರಿಂದ, ಕೋವಿಡ್-19 ಪ್ರಕರಣಗಳು ಈಗ ವಿರಳವಾಗಿವೆ ಮತ್ತು ಬಹಳ ಅಪರೂಪ" ಎಂದು ಬಿಎಂಸಿ ಹೇಳಿದೆ.ಇತ್ತೀಚಿನ ದಿನಗಳಲ್ಲಿ, ಸಿಂಗಾಪುರ, ಹಾಂಗ್ ಕಾಂಗ್, ಪೂರ್ವ ಏಷ್ಯಾ ಮತ್ತು ಇತರ ದೇಶಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಅದು ಹೇಳಿದೆ.ಕೋವಿಡ್-19 ಹರಡುವಿಕೆಯನ್ನು ನಿಯ...
ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

ಐಪಿಎಲ್ ಅಂಗಳದಲ್ಲಿ ಆಟಗಾರರ ಜಗಳ; ವೀಡಿಯೊ ವೈರಲ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಇಂಡಿಯನ್ ಪ್ರೀಮಿಯರ್ ಲೀಗ್​ನ ಸೋಮವಾರದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ಆಟಗಾರರು ರಣಾಂಗಣದಲ್ಲೇ ಜಗಳಕ್ಕಿಳಿದ ಪ್ರಸಂಗ ಗೊಂದಲ ಸೃಷ್ಟಿಸಿತು. Lit Abhishek Sharma 🗿🥵🔥 pic.twitter.com/zyBhiQxByJ— Antara (@AntaraonX) May 19, 2025 ಲಕ್ನೋದಲ್ಲಿನ ಏಕಾನ ಸ್ಡೇಡಿಯಂನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮಹತ್ವದ ಪಂದ್ಯ ನಡೆಯಿತು. ಸನ್​ರೈಸರ್ಸ್ ತಂಡದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಔಟಾದ ಸಂದರ್ಭದಲ್ಲಿ ಲಕ್ನೋ ಸ್ಪಿನ್ನರ್ ದಿಗ್ವೇಶ್ ರಾಥಿ, ತಮಾಷೆಯ ಮಾತುಗಳಿಂದ ಕೆಣಕಿದರು. 'ಹೋಯ್ತಾ ಇರು' ಎಂಬ ದಿಗ್ವೇಶ್ ರಾಥಿ ಅವರ ಕೈ ಸನ್ನೆ ಅಭಿಷೇಕ್ ಶರ್ಮಾ ಅವರನ್ನು ಕೆರಳಿಸಿತು. ಈ ಆಸಂದರ್ಭದಲ್ಲಿ ಇಬ್ಬರ ನಡುವೆ ಜಗಳ ಏರ್ಪಟ್ಟಿತು.ಇಬ್ಬರ ಜಗಳವು ತಾರಕ್ಕೇರುತ್ತಿದ್ದಂತೆ ಅಂಪೈರ್ ಹಾಗೂ ಇತರ ಆಟಗಾರರು ಮಧ್ಯ ಪ್ರವೇಶಿಸಿ ಕುಪಿತ ಇಬ್ಬರು ಆಟಗಾರರನ್ನೂ ದೂರ ಸರಿಯುವಂತೆ ಮಾಡಿದರು. ಆದರೂ ಕೋಪದಿಂದಲೇ ಕ್ರೀಡಾಂಗಣದಿಂದ ನಿರ್ಗಮಿಸಿದ ಅಭಿಷೇಕ್ ಶರ್ಮಾ, 'ಜುಟ್ಟು ಹಿಡಿದು ಹೊಡಿತೀನಿ...
ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು; ಜಾಗತಿಕ ಮಟ್ಟದಲ್ಲಿ ಅಪಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿರುವ ಮಳೆ ಅನಾಹುತ ಪರಿಹಾರ ಕಾರ್ಯಕ್ಕೆ ತಕ್ಷಣ ಒಂದು ಸಾವಿರ ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಸರ್ಕಾರವನ್ನು ಆಗ್ರಹಿಸಿದ್ದಾರೆ.They can’t clear waterlogged roads or fallen trees after a single downpour, but they want to dig tunnels costing ₹48,000 crore to “solve” Bengaluru’s traffic? Maybe the tunnel’s real purpose is to serve as a water reservoir. pic.twitter.com/yNQRHgWeF6 — P C Mohan (@PCMohanMP) May 19, 2025ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಂಗಾರು ಪೂರ್ವದ ಒಂದೇ ಒಂದು ಮಳೆ ಕಾಂಗ್ರೆಸ್ ಸರ್ಕಾರದ "ಬ್ರಾಂಡ್ ಬೆಂಗಳೂರು"ನ ನಿಜ ಬಣ್ಣ ಬಯಲು ಮಾಡಿದೆ. ಇಂತಹ ಸನ್ನಿವೇಶದಲ್ಲಿ ಸಂತ್ರಸ್ತರ ನೆರವಿಗೆ ಧಾವಿಸಬೇಕಿದ್ದ ಸಿಎಂ, ಡಿಸಿಎಂ ಮತ್ತು ಸಚಿವರು ಸಾಧನಾ ಸಮಾವೇಶದಲ್ಲಿ ಮೆರೆದಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಅಪಮಾನ ಹಿಂದಿನ ವರ್ಷದ ಲೋಪಗಳಿಂ...