ರಾಯಚೂರು: ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಮಂಗಳವಾರ ಸಂಜೆ ಸಂಭವಿಸಿದ ಈ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.
ಕುರಿ ಸಾಗಿಸುತ್ತಿದ್ದ ಬೊಲೆರೊ ಪಿಕಪ್ ವಾಹನ ಹಾಗೂ ಟಾಟಾ ಏಸ್ ಗೆ ನಡುವೆ ಡಿಕ್ಕಿ ಸಂಭವಿಸಿದೆ.
ಈ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ....
ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆಯ್ಕೆಯಾಗಿದ್ದಾರೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ವೀರಶೈವ ಲಿಂಗಾಯತ ಮಹಾಸಭಾದ ಮಹಾ ಪ್ರಧಾನ ಕಾರ್ಯದರ್ಶಿಯಾಗಿರುವ ಈಶ್ವರ ಬಿ ಖಂಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ.
ಮಂಗಳವಾರ ಬೆಂಗಳೂರಿನಲ್ಲಿ ನಡೆದ ಸಭಾದ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಎಂ ಬಿದರಿ ಅವರು ತಿಳಿಸಿದ್ದಾರೆ....
ಬೆಂಗಳೂರು: ಕೋರಮಂಗಲ RTO ಕಚೇರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಗುಜರಾತ್‌ನಲ್ಲಿ ಇದ್ದ ಸುಮಾರು 50 ಶಾಲಾ ಬಸ್‌ಗಳಿಗೆ ಕೋರಮಂಗಲ ಆರ್‌ಟಿಒ ಕಚೇರಿಯಿಂದ ಫಿಟ್ನೆಸ್ ಸರ್ಟಿಫಿಕೇಟ್ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬಸ್ಸುಗಳಲ್ಲಿ ಇರಬೇಕಾದ ಸುರಕ್ಷತಾ ಮಾನದಂಡಗಳು [ಸೀಟ್ ಬೆಲ್ಟ್, ತುರ್ತು ನಿರ್ಗಮನ, ಪ್ರಥಮ ಚಿಕಿತ್ಸಾ ಕಿಟ್, ವೇಗ ನಿಯಂತ್ರಕ ಇತ್ಯಾದಿ] ಸೇರಿದಂತೆ ಸಂಚರಿಸಲು ಯೋಗ್ಯವಾಗಿದೆಯೇ ಎಂಬುದನ್ನು ಪರಿಶೀಲಿಸದೆ ಅಧಿಕಾರಿಗಳು ಎಫ್.ಸಿ ನೀಡಿದ್ದಾರೆ ಎನ್ನಲಾಗಿದೆ.
ಈ ಅಕ್ರಮವನ್ನು ಗುಜರಾತ್ ರಾಜ್ಯದ ಸಾರಿಗೆ ಅಧಿಕಾರಿಗಳೇ ಬಯಲಿಗೆಳೆದಿದ್ದಾರೆ ಎಂದು ಆರೋಪಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಲಂಚದಾಸೆಗೆ ಪ್ರಯಾಣಿಕರ ಸುರಕ್ಷತೆಯನ್ನು ರಾಜಿಮಾಡಿಕೊಳ್ಳುವ ಅಧಿಕಾರಿಗಳನ್ನು ಕೂಡಲೇ ಸೇವೆಯಿಂದ ಅಮಾನತ್ತು ಮಾಡಬೇಕು. ಹಾಗೂ ಅವರ ಮೇಲೆ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಹಾಕಿರುವ ಯತ್ನಾಳ್, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಕೈಗೊಂಡು, ಬಸ್ಸುಗಳಿಗೆ ಎಫ್.ಸಿ. ನೀಡುವ...
ಬೆಳಗಾವಿ: ಬ್ರಿಟಿಷರ ಎದೆಯಲ್ಲಿ ನಡುಕ ಹುಟ್ಟಿಸಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಅಮರ ಇತಿಹಾಸವನ್ನು ಸಾರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ (ವೀರಭೂಮಿ) ಮತ್ತು ಸಮಾಧಿ ಬಳಿಯ ಕೆರೆಯಲ್ಲಿ ಅವರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ಸಚಿವ ಸತೀಶ್ ಜಾರಕಿಹೊಳಿ, ರಾಯಣ್ಣನವರ ಹೋರಾಟದ ಹಾದಿ ಮತ್ತು ತ್ಯಾಗದ ಕಥೆಗಳನ್ನು ಈ ಸ್ಮಾರಕವು ಮುಂದಿನ ಪೀಳಿಗೆಗೆ ಉಣಬಡಿಸಲಿದೆ. ನಮ್ಮ ನೆಲದ ವೀರನಿಗೆ ಸಲ್ಲಿಸಿದ ಈ ಗೌರವವು ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆ...
ಮಂಗಳೂರು: ಪ್ರದೇಶ ಕಾಂಗ್ರೆಸ್ ಪಕ್ಷ ಇದೀಗ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆದಿದೆ. ಕೇಂದ್ರದ ವಿರುದ್ಧ 'ಓಟ್ ಚೋರಿ' ಅಭಿಯಾನವನ್ನು ಬಿರುಸುಗೊಳಿಸಿರುವ ಕಾಂಗ್ರೆಸ್ ಪಕ್ಷ ಇದೀಗ ತನ್ನ ಈ ಹೋರಾಟವನ್ನು ಚುರುಕುಗೊಳಿಸಲು 'ಲೀಗಲ್ ಬ್ಯಾಂಕ್' ಅಸ್ತಿತ್ವಕ್ಕೆ ತಂದಿದೆ.
ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪರಿಕಲ್ಪನೆಯಂತೆ ಕರ್ನಾಟಕದಲ್ಲಿ 'ಲೀಗಲ್ ಬ್ಯಾಂಕ್' ಅಸ್ತಿತ್ವಕ್ಕೆ ಬಂದಿದೆ. ಪಕ್ಷ ಸಂಘಟನೆಗೆ ಕಾನೂನು ಶಕ್ತಿ ತುಂಬುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಆರಂಭಿಸಲಾಗಿದ್ದು, ದಕ್ಷಿಣ ಭಾರತದಲ್ಲೇ ಮೊದಲೆಂಬಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕ ಈ 'ಲೀಗಲ್ ಬ್ಯಾಂಕ್' ಸ್ಥಾಪಿಸಿ ಗಮನಸೆಳೆದಿದೆ. ಸುಮಾರು 250 ವಕೀಲರ ತಂಡ ಈ 'ಲೀಗಲ್ ಬ್ಯಾಂಕ್' ನಲ್ಲಿ ಕೈಜೋಡಿಸಿರುವುದು ವಿಶೇಷ.
ಕೇಂದ್ರದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲು ಅನುಕೂಲವಾಗುವಂತೆ ಎಲ್ಲಾ ಪ್ರಾದೇಶಿಕ ಸಮಿತಿಗಳು (PCC) ಹಾಗೂ ಜಿಲ್ಲಾ ಸಮಿತಿ (PCC), ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿ 'ಲೀಗಲ್ ಬ್ಯಾಂಕ್' ಸ್ಥಾಪಿಸಬೇಕೆಂಬುದು ರಾಹುಲ್ ಗಾಂಧಿಯವರ ಪರಿಕಲ್ಪನೆ. ಅವರ ಈ ಸೂತ್ರವನ್ನು ಅನುಷ್ಠಾನಗೊಳ...
ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು (#PMFBY) ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ, ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ದ್ವೀತಿಯ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿಯಾಗಿದೆ.
ಬೆಳೆ ವಿಮೆ ಅನುಷ್ಠಾನ ಮಾಡುವಲ್ಲಿ ವಿವಿಧ ಆಯಾಮಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ನೂತನ ತಂತ್ರಜ್ಞಾನಗಳ ಅಳವಡಿಕೆಯ ಮೂಲಕ ದ್ವಿತೀಯ ಸ್ಥಾನದ ಪಡೆಯುವ ಮೂಲಕ ರಾಜ್ಯ ಕೃಷಿ ಇಲಾಖೆಯ ಹಿರಿಮೆ ಹೆಚ್ಚಿಸಿದೆ..
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ರಾಜ್ಯದಾದ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತಂದು ರೈತರನ್ನು ಅನಿಶ್ಚಿತ ನಷ್ಟದಿಂದ ಪಾರು ಮಾಡುವ ದಿಶೆಯಲ್ಲಿ ನಮ್ಮ ಕೃಷಿ ಇಲಾಖೆ ಹಾಗೂ ಸ್ಥಳೀಯ ಕೃಷಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದಾರೆ.
ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ನೇತೃತ್ವ ಹಾಗೂ ವಿಶೇಷ ಕಾಳಜಿಯಿಂದ ರಾಜ್ಯ ಕೃಷಿ ಇಲಾಖೆ ಮಹತ್ವದ ಸಾಧನೆ ಮಾಡಿದ್ದು, ಕೇಂದ್ರ ಸರ್ಕಾರ, ರಾಜ್ಯ ಕೃಷಿ ಇಲಾಖೆಗೆ ದೇಶದಲ್ಲೆ ಬಹು ದೊಡ್ಡ ರಾಜ್ಯಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ನೀಡ...
ಮೈಸೂರು: ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೆಫ್ಟ್ ಮಾತನಾಡಿದ ಸಿದ್ದರಾಮಯ್ಯ, ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು.
ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು ಎಂದು ನೆನಪಿಸಿದರು.
ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ...
ಮುಂಬೈ: ಹಿಂದಿ ಚಿತ್ರರಂಗದಲ್ಲಿ ‘ಕೋಮುವಾದಿ’ ಪಕ್ಷಪಾತವಿದೆ ಎಂಬ ತಮ್ಮ ಹೇಳಿಕೆಗೆ ಸಂಬಂಧಿಸಿ ಉದ್ಭವಿಸಿದ ವಿವಾದದ ಬಗ್ಗೆ ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್ ಸ್ಪಷ್ಟನೆ ನೀಡಿದ್ದಾರೆ. ಯಾರ ಭಾವನೆಗಳನ್ನೂ ನೋಯಿಸುವ ಉದ್ದೇಶ ನನಗಿರಲಿಲ್ಲ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮವಾದ ಇನ್‌ಸ್ಟಾಗ್ರಾಂನಲ್ಲಿ ವೀಡಿಯೊ ಹಂಚಿಕೊಂಡಿರುವ ರೆಹಮಾನ್, ಭಾರತ ತಮ್ಮ ಮನೆ ಮಾತ್ರವಲ್ಲ, ತಮ್ಮ ಸ್ಫೂರ್ತಿ ಮತ್ತು ಗುರು ಕೂಡ ಆಗಿದೆ ಎಂದು ಹೇಳಿದ್ದಾರೆ. “ಸಂಗೀತವು ಯಾವಾಗಲೂ ಸಂಸ್ಕೃತಿಗಳನ್ನು ಸಂಪರ್ಕಿಸುವ, ಆಚರಿಸುವ ಮತ್ತು ಗೌರವಿಸುವ ನನ್ನ ಮಾರ್ಗ. ನನ್ನ ಉದ್ದೇಶಗಳನ್ನು ಕೆಲವೊಮ್ಮೆ ತಪ್ಪಾಗಿ ಅರ್ಥೈಸಿಕೊಳ್ಳಬಹುದು. ಆದರೆ ಸಂಗೀತದ ಮೂಲಕ ಗೌರವ ಸಲ್ಲಿಸುವುದೇ ನನ್ನ ಆಶಯ. ನಾನು ಎಂದಿಗೂ ನೋವುಂಟು ಮಾಡಲು ಬಯಸಿಲ್ಲ,” ಎಂದು ತಿಳಿಸಿದ್ದಾರೆ.
ಭಾರತೀಯನಾಗಿರುವುದಕ್ಕೆ ತಾವು ಹೆಮ್ಮೆಪಡುತ್ತೇನೆ ಎಂದಿರುವ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಬಹುಸಾಂಸ್ಕೃತಿಕ ಧ್ವನಿಗಳಿಗೆ ಅವಕಾಶ ನೀಡುವ ವಾತಾವರಣವೇ ತಮ್ಮ ಸೃಜನಶೀಲತೆಯ ಬಲವಾಗಿದೆ ಎಂದು ಹೇಳಿದರು. ವೇವ್ ಶೃಂಗಸಭೆ,...
ಗುವಾಹಟಿ: ದೇಶದ ಜನರು ಕಾಂಗ್ರೆಸ್ ಪಕ್ಷ ಹಾಗೂ ಅದರ ರಾಜಕೀಯವನ್ನು ತಿರಸ್ಕರಿಸಿದ್ದು, ವಿರೋಧ ಪಕ್ಷವು ಹಲವು ರಾಜ್ಯಗಳಲ್ಲಿ ಆಘಾತಕಾರಿ ಸೋಲುಗಳನ್ನು ಅನುಭವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಸ್ಸಾಂನ ಕಾಜಿರಂಗದಲ್ಲಿ ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಇತ್ತೀಚಿನ ಪುರಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ಸೋತಿರುವುದನ್ನು ಉಲ್ಲೇಖಿಸಿದರು. ಬಿಜೆಪಿಯ ಆಡಳಿತ ಮಾದರಿಯ ಮೇಲೆ ಕಳೆದ ಒಂದೂವರೆ ವರ್ಷಗಳಲ್ಲಿ ಜನರ ನಂಬಿಕೆ ಹೆಚ್ಚಾಗಿದೆ ಎಂದು ಮೋದಿ ಹೇಳಿದರು. ಬಿಹಾರ, ಕೇರಳ ಸೇರಿದಂತೆ ಹಲವು ರಾಜ್ಯಗಳ ಚುನಾವಣಾ ಫಲಿತಾಂಶಗಳು ಇದಕ್ಕೆ ಸಾಕ್ಷಿಯಾಗಿದೆ ಎಂದ ಅವರು, ಉತ್ತಮ ಆಡಳಿತ ಮತ್ತು ಅಭಿವೃದ್ಧಿಯೇ ಬಿಜೆಪಿಯ ಶಕ್ತಿ ಎಂದು ಹೇಳಿದರು.
ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಅಸ್ಸಾಂನಲ್ಲಿ ಒಂದು ಕೊಂಬಿನ ಖಡ್ಗಮೃಗ ಬೇಟೆ ಹೆಚ್ಚಾಗಿತ್ತು ಎಂದು ಆರೋಪಿಸಿದ ಪ್ರಧಾನಿ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬೇಟೆ ಪ್ರಕರಣಗಳನ್ನು ನಿಯಂತ್ರಿಸಲಾಗಿದ್ದು, 2025ರಲ್ಲಿ ಶೂನ್ಯ ಖಡ್ಗಮೃಗ ಬೇಟೆ ದಾಖಲಾಗಿದೆ ಎಂದು ...
ತಿರುವನಂತಪುರಂ: ಕೇರಳ ರಾಜಕೀಯದಲ್ಲಿ ವಾರಗಳ ಕಾಲ ನಡೆದ ಊಹಾಪೋಹಗಳಿಗೆ ತೆರೆ ಎಳೆದಂತೆ, ಮಾಜಿ ಸಿಪಿಎಂ ಶಾಸಕ ಎಸ್. ರಾಜೇಂದ್ರನ್ ಭಾನುವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ತಿರುವನಂತಪುರಂನಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ರಾಜೇಂದ್ರನ್ ಅವರಿಗೆ ಪಕ್ಷದ ಸದಸ್ಯತ್ವ ನೀಡಿದರು.
ಈ ತಿಂಗಳ ಆರಂಭದಲ್ಲೇ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದ ರಾಜೇಂದ್ರನ್, ಜನವರಿ 10ರಂದು ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ತಮ್ಮ ರಾಜಕೀಯ ಭವಿಷ್ಯ ಕುರಿತು ಚರ್ಚೆ ನಡೆಸಿದ್ದರು. ಯಾವುದೇ ವೈಯಕ್ತಿಕ ಷರತ್ತುಗಳು ಅಥವಾ ಬೇಡಿಕೆಗಳಿಲ್ಲದೆ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.
ಮೂರು ಬಾರಿ ಶಾಸಕರಾಗಿದ್ದ ರಾಜೇಂದ್ರನ್, ಸುಮಾರು 15 ವರ್ಷಗಳ ರಾಜಕೀಯ ಅನುಭವ ಹೊಂದಿದ್ದಾರೆ. ಇಡುಕ್ಕಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುವ ಅವರು, ಕಳೆದ ನಾಲ್ಕು ವರ್ಷಗಳಿಂದ ಸಿಪಿಎಂನೊಂದಿಗೆ ಅಂತರ ಹೆಚ್ಚಿಸಿಕೊಂಡಿದ್ದರು. ಹಿಂದಿನ ವಿಧಾನಸಭಾ ಚುನಾವಣೆಯ ಬಳಿಕ ಎಲ್...