Sunday, June 21

Author: jpprajamani

ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ

ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ

ದೇಶ, ಪ್ರಮುಖ ಸುದ್ದಿ
ಹೈದರಾಬಾದ್: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರ ಹೇಳಿಕೆಗಳು ತೆಲಂಗಾಣದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿವೆ. ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು ತೆಲಂಗಾಣ ಹೋರಾಟಗಾರರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ತೆಲಂಗಾಣ ರಾಜ್ಯ ರಚನಾ ದಿನದ ಅಂಗವಾಗಿ ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆ ನಡೆಸಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪವನ್ ಕಲ್ಯಾಣ್, “ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ” ಎಂಬ ಹೇಳಿಕೆ ನೀಡಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಈ ಹೇಳಿಕೆ ತೆಲಂಗಾಣದ ಜನರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ವಿರೋಧಿಗಳು ಆರೋಪಿಸಿದ್ದಾರೆ.ವಿವಾದಕ್ಕೆ ಮೂಲ ಕಾರಣ ರಾಜಕೀಯ ವಿಶ್ಲೇಷಕ ಹಾಗೂ ಮಾಜಿ ಎಂಎಲ್‌ಸಿ ಪ್ರೊ. ಕೆ. ನಾಗೇಶ್ವರ್ ನೀಡಿದ್ದ ಕೆಲವು ಹೇಳಿಕೆಗಳು. ಪವನ್ ಕಲ್ಯಾಣ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಭೇಟಿಗೆ ಸಂಬಂಧಿಸಿದಂತೆ ಅವರು ನೀಡಿದ್ದ ಹೇಳಿಕೆಗಳನ್ನು ನಂತರ ಹಿಂತೆಗೆದುಕೊಂಡರೂ, ಅವರ ವಿರುದ್ಧ ಆಂಧ್ರಪ್ರದೇಶದಲ್ಲಿ ಹಲವು ಪ್ರಕರಣಗಳು ದಾಖಲಾಗಿದ್...
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಸ್ಥಾನಗಳಿಗೆ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಿಗೆ ಅವಕಾಶ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಕಟಿಸಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಅವಕಾಶ ಕಲ್ಪಿಸಲಾಗಿದೆ.ಈ ಪೈಕಿ ಬಿ.ಕೆ. ಹರಿಪ್ರಸಾದ್ ಮತ್ತು ತಿಪ್ಪಣ್ಣಪ್ಪ ಕಮಕನೂರು ಅವರನ್ನು ಮತ್ತೊಂದು ಅವಧಿಗೆ ಮುಂದುವರಿಸಲಾಗಿದ್ದು, ಪಿ.ವಿ. ಮೋಹನ್ ಹಾಗೂ ಶಿವಣ್ಣ ಮಳವಳ್ಳಿ ಅವರಿಗೆ ಮೊದಲ ಬಾರಿಗೆ ಅವಕಾಶ ನೀಡಲಾಗಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಸಮೀಕರಣಕ್ಕೆ ಹೆಚ್ಚಿನ ಒತ್ತು ನೀಡಿರುವುದು ಕಂಡುಬಂದಿದ್ದು, ನಾಲ್ಕು ಸ್ಥಾನಗಳಿಗೂ ಒಬಿಸಿ ಸಮುದಾಯದ ನಾಯಕರನ್ನು ಕಣಕ್ಕಿಳಿಸಿರುವುದು ವಿಶೇಷವಾಗಿದೆ.ಹೊಸ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದಿರುವ ಈ ಮೊದಲ ಮಹತ್ವ...
ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್‌ಗೆ ಅಧ್ಯಕ್ಷ ಪಟ್ಟ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಡಿ.ಕೆ. ಶಿವಕುಮಾರ್ ಅವರ ಉತ್ತರಾಧಿಕಾರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರ ಪರವಾಗಿ ಆದೇಶ ಹೊರಡಿಸಲಾಗಿದ್ದು, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆರು ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಹಿಂದುಳಿದ ವರ್ಗದ ...
ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು

ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು

ದೇಶ, ಪ್ರಮುಖ ಸುದ್ದಿ
ಮುಜಫರ್‌ಪುರ: ಬಿಹಾರದ ಮುಜಫರ್‌ಪುರದಲ್ಲಿರುವ ಪ್ರಸಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಗುರುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ರೋಗಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಆಸ್ಪತ್ರೆಯೊಳಗೆ ವ್ಯಾಪಿಸಿತು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.\ಅಗ್ನಿಶಾಮಕ ಅಧಿಕಾರಿ ಆರ್.ಎನ್. ಪಾಂಡೆ ನೇತೃತ್ವದಲ್ಲಿ 12 ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಆಸ್ಪತ್ರೆಯೊಳಗೆ ಸಿಲುಕಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರತೆಗೆದವು. ಬಳಿಕ ಹಲವು ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗಿದೆ.ಅವಘಡದ ತೀವ್ರತೆಯನ್ನು ಗಮನಿಸಿದ ಜಿಲ್ಲಾಧಿಕಾರಿ ಸುಬ್ರತ್ ಕುಮಾರ್ ಸೇನ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ...
ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಕಚೇರಿಯ ಪ್ರಮುಖ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಎಸಿಎಸ್)ಯಾಗಿ ನೇಮಕ ಮಾಡಲಾಗಿದೆ. ಅವರು ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನೂ ಮುಂದುವರಿಸಲಿದ್ದಾರೆ.ಇದೇ ವೇಳೆ, ರಾಜೇಂದ್ರ ಚೋಳನ್ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಹೊಂದಿರುವ ಹೆಚ್ಚುವರಿ ಜವಾಬ್ದಾರಿಯನ್ನೂ ನಿರ್ವಹಿಸಲಿದ್ದಾರೆ.ಮತ್ತೊಂದೆಡೆ, ನಿವೃತ್ತ ಐಎಎಸ್ ಅಧಿಕಾರಿ ಅತೀಕ್ ಎಲ್.ಕೆ. ಅವರನ್ನು ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.ಸರ್ಕಾರದ ಆದೇಶದ ಪ್ರಕಾರ, ಮುಖ್ಯಮಂತ್ರಿಯವರ ಹಣಕಾಸು ಸಲಹೆಗಾರರ ವೇತನ ಮತ್ತು ಇತರೆ ಸೌಲಭ್ಯಗಳು ರಾಜ್ಯದ ಮುಖ್ಯ ಕಾರ್ಯದರ್ಶಿ ಹುದ್ದೆಗೆ...
ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಕಳೆದ ಮೂರು ವರ್ಷಗಳ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸಂದೇಶದಲ್ಲಿ, ಮುಖ್ಯಮಂತ್ರಿ ಬದಲಾವಣೆಯಿಂದ ಮಾತ್ರ ರಾಜ್ಯದ ಸ್ಥಿತಿ ಬದಲಾಗುವುದಿಲ್ಲ ಎಂದು ಹೇಳಿರುವ ಅವರು, ಕಳೆದ ಮೂರು ವರ್ಷಗಳ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಮುರಿದ ಭರವಸೆಗಳ ಪರಿಣಾಮವನ್ನು ಹೊಸ ಮುಖ್ಯಮಂತ್ರಿಯೂ ಎದುರಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.“ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಅವರು ಕೆಲಸ ಮಾಡಲಿ ಎಂದು ಹಾರೈಸುತ್ತೇನೆ. ಆದರೆ ಈ ಬದಲಾವಣೆಯಿಂದ ರಾಜ್ಯದ ಜನರಲ್ಲಿ ಯಾವುದೇ ಹೊಸ ನಿರೀಕ್ಷೆ ಮೂಡಿಲ್ಲ ಎಂಬುದು ವಾಸ್ತವ,” ಎಂದು ಅಶೋಕ್ ಹೇಳಿದ್ದಾರೆ.ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ, ವರ್ಗಾವಣೆ ದಂಧೆ, ಕಮಿಷನ್ ಸಂಸ್ಕೃತಿ ಹಾಗೂ ಆಡಳಿತ ವೈಫಲ್ಯಗಳು ರಾಜ್...
BJP-RSS ಆದಿವಾಸಿ ವಿರೋಧಿ ಮನಸ್ಥಿತಿ ಹೊಂದಿವೆ: ರಾಹುಲ್ ಗಾಂಧಿ ಆರೋಪ

BJP-RSS ಆದಿವಾಸಿ ವಿರೋಧಿ ಮನಸ್ಥಿತಿ ಹೊಂದಿವೆ: ರಾಹುಲ್ ಗಾಂಧಿ ಆರೋಪ

ದೇಶ, ಪ್ರಮುಖ ಸುದ್ದಿ
ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆದಿವಾಸಿ ಸಮುದಾಯದ ಹಕ್ಕುಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.ದೆಹಲಿಯ ಇಂದಿರಾ ಭವನದಲ್ಲಿ ಆಯೋಜಿಸಿದ್ದ ‘ಆದಿವಾಸಿ ವೃತ್ತಿಪರರ ಸಮಾವೇಶ–2026’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆದಿವಾಸಿಗಳು ದೇಶದ ಮೂಲ ನಿವಾಸಿಗಳು ಮತ್ತು ಭಾರತದ ಐತಿಹಾಸಿಕ ಪರಂಪರೆಯ ನಿಜವಾದ ವಾರಸುದಾರರು ಎಂದು ಹೇಳಿದರು.ಭಾಷಣದ ಆರಂಭದಲ್ಲೇ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದ ರಾಹುಲ್ ಗಾಂಧಿ, ನೀರು, ಅರಣ್ಯ ಮತ್ತು ಭೂಮಿಯ ಮೇಲಿನ ಆದಿವಾಸಿಗಳ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.‘ಆದಿವಾಸಿ’ ಮತ್ತು ‘ವನವಾಸಿ’ ಪದಗಳ ನಡುವಿನ ವ್ಯತ್ಯಾಸವನ್ನು ಪ್ರಸ್ತಾಪಿಸಿದ ಅವರು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಳಸುವ ‘ವನವಾಸಿ’ ಎಂಬ ಪದವು ಆದಿವಾಸಿಗಳ ಮೂಲ ಗುರುತನ್ನು ಮರೆಮಾಚುವ ಪ್ರಯತ್ನವಾಗಿದೆ ಎಂದು ಟೀಕಿಸಿದರು.“ಆದಿವ...
ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಲವು ಜನಪರ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ನಿಂದ ಹಿಡಿದು ರಸ್ತೆ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಘೋಷಿಸುವವರೆಗೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.ವಿಧಾನಸೌಧದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಹೊಸ ಆಡಳಿತದ ದಿಕ್ಕು ನಿರ್ಧರಿಸುವ ಉದ್ದೇಶದಿಂದ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.ರಾಜ್ಯದ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಅರ್ಜಿ ವಿತರಣೆ ಹಾಗೂ ಅನುಷ್ಠಾನದ ಕುರಿತು ಸಾರಿಗೆ ಇಲಾಖೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೇಳಿದರು.ನಗರ ಹಾಗೂ ಪಟ್ಟಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿರುವ ಸರ್ಕಾರ, ಈಗಾಗಲೇ ನ...
ಜೂನ್ 9ರವರೆಗೆ ರಾಜ್ಯದಲ್ಲಿ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬಗ್ಗೆ ಎಚ್ಚರಿಕೆ

ಜೂನ್ 9ರವರೆಗೆ ರಾಜ್ಯದಲ್ಲಿ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬಗ್ಗೆ ಎಚ್ಚರಿಕೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಜೂನ್ 9ರವರೆಗೆ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಬಿರುಗಾಳಿ ಮತ್ತು ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಇಲಾಖೆ ಸೂಚಿಸಿದೆ.ಹವಾಮಾನ ಇಲಾಖೆ ಮಾಹಿತಿಯಂತೆ, ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳ ಶೇಕಡಾ 50ಕ್ಕಿಂತ ಕಡಿಮೆ ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯ ಆಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ, ಹಾವೇರಿ, ಬೆಳಗಾವಿ, ಮೈಸೂರು, ಮಂಡ್ಯ ಹಾಗೂ ರಾಯಚೂರು ಜಿಲ್ಲೆಗಳಲ್ಲ...
ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು

ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ‘ಭಾಬಿಜಿ ಘರ್ ಪರ್ ಹೈ!’ ಖ್ಯಾತಿಯ ನಟಿ ಶಿಲ್ಪಾ ಶಿಂಧೆ, 2016ರಲ್ಲಿ ನಿರ್ಮಾಪಕರ ವಿರುದ್ಧ ಮಾಡಿದ್ದ ಲೈಂಗಿಕ ಕಿರುಕುಳದ ಆರೋಪ ಸುಳ್ಳಾಗಿತ್ತು ಎಂದು ಇತ್ತೀಚೆಗೆ ಒಪ್ಪಿಕೊಂಡಿದ್ದಾರೆ ಎಂಬ ಬೆಳವಣಿಗೆ ಹೊಸ ವಿವಾದಕ್ಕೆ ಕಾರಣವಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಶಿಲ್ಪಾ, ಪಾಡ್‌ಕಾಸ್ಟ್‌ನ ಒಂದು ಭಾಗವನ್ನು ಮಾತ್ರ ನೋಡಿ ತಮ್ಮನ್ನು ಟೀಕಿಸಲಾಗುತ್ತಿದೆ ಎಂದು ಹೇಳಿದ್ದಾರೆ. “ಸಂಪೂರ್ಣ ಸಂದರ್ಶನವನ್ನು ನೋಡದೇ ತೀರ್ಪು ನೀಡುವುದು ಸರಿಯಲ್ಲ,” ಎಂದು ಅವರು ಹೇಳಿದ್ದಾರೆ.ಆ ಸಮಯದಲ್ಲಿ ತೀವ್ರ ಮಾನಸಿಕ ಒತ್ತಡದಲ್ಲಿದ್ದೆ ಎಂದು ಹೇಳಿದ ಶಿಲ್ಪಾ, “ಆ ಸುಳ್ಳಿನೊಂದಿಗೆ ಬದುಕಲು ಸಾಧ್ಯವಾಗಲಿಲ್ಲ. ಒಂದು ದಿನ ಸತ್ಯ ಹೇಳಲೇಬೇಕಿತ್ತು,” ಎಂದು ತಿಳಿಸಿದ್ದಾರೆ. ತಮ್ಮ ಆರೋಪದಿಂದ ನಿರ್ಮಾಪಕರಿಗೆ ಉಂಟಾದ ನೋವಿನ ಬಗ್ಗೆ ವಿಷಾದ ವ್ಯಕ್ತಪಡಿಸಿ, “ಕ್ಷಮಿಸಿ ಎಂಬ ಪದ ಸಾಕಾಗುವುದಿಲ್ಲ, ಆದರೆ ಆ ಸಂದರ್ಭದ ನನ್ನ ಪರಿಸ್ಥಿತಿ ಅವರಿಗೆ ತಿಳಿದಿದೆ,” ಎಂದಿದ್ದಾರೆ.ಇದರ ನಡುವೆ, ಸಾಮಾಜಿಕ ಜಾಲತಾಣ ಬಳಕೆದಾರರು ಮತ್ತು ಕೆಲವು ಪುರುಷರ ಹಕ್ಕುಗಳ ಪರ ಸಂಘಟನೆಗಳು ಶಿಲ್ಪಾ ವಿರುದ್ಧ ಕಾನೂ...