Wednesday, April 1

Author: jpprajamani

ದಿಯೋಘರ್‌ನಲ್ಲಿ ಬಸ್-ಟ್ರಕ್ ಡಿಕ್ಕಿ: 18 ಕನ್ವಾರಿಯರು ಸಾವು

ದಿಯೋಘರ್‌ನಲ್ಲಿ ಬಸ್-ಟ್ರಕ್ ಡಿಕ್ಕಿ: 18 ಕನ್ವಾರಿಯರು ಸಾವು

Focus, ದೇಶ-ವಿದೇಶ, ಪ್ರಮುಖ ಸುದ್ದಿ
ರಾಂಚಿ: ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಜಮುನಿಯಾ ಗ್ರಾಮದ ಬಳಿ ಮಂಗಳವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿನೆಂಟು ಕನ್ವಾರಿಯರು ಸಾವನ್ನಪ್ಪಿದ್ದಾರೆ ಮತ್ತು ಹತ್ತು ಮಂದಿ ಗಾಯಗೊಂಡಿದ್ದಾರೆ.ಬಾಬಾ ಬೈದ್ಯನಾಥ ಧಾಮ ದೇವಾಲಯದಲ್ಲಿ ಪವಿತ್ರ ನೀರನ್ನು ಅರ್ಪಿಸಲು ಸಾವಿರಾರು ಭಕ್ತರು ಪ್ರಯಾಣಿಸುವ ಶ್ರಾವಣಿ ಮೇಳದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ದಿಯೋಘರ್ ಸಂಸದ ನಿಶಿಕಾಂತ್ ದುಬೆ ಈ ಕುರಿತು X ನಲ್ಲಿ ಪೋಸ್ಟ್‌ ಹಾಕಿದ್ದಾರೆ. “ನನ್ನ ಲೋಕಸಭಾ ಕ್ಷೇತ್ರವಾದ ದಿಯೋಘರ್‌ನಲ್ಲಿ, ಶ್ರಾವಣ ಮಾಸದ ಕನ್ವಾರಿಯ ಯಾತ್ರೆಯ ಸಮಯದಲ್ಲಿ, ಬಸ್ ಮತ್ತು ಟ್ರಕ್ ಅಪಘಾತದಿಂದಾಗಿ 18 ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ. ಬಾಬಾ ಬೈದ್ಯನಾಥ ಜಿ ಅವರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಹೇಳಿದ್ದಾರೆ.ದಿಯೋಘರ್‌ನ ಮೋಹನಪುರ ಬ್ಲಾಕ್‌ನಲ್ಲಿರುವ ಅಪಘಾತ ಸ್ಥಳವು ಉತ್ತರಕ್ಕೆ ಹರಿಯುವ ಜಮುನಿಯಾ ನದಿಯ ದಡದಲ್ಲಿ, ಪ್ರಸಿದ್ಧ ಶಿವ-ಪಾರ್ವತಿ ದೇವಾಲಯದ ಬಳಿ ಇದೆ. ಬಾಬಾ ಬೈದ್ಯನಾಥ ಧಾಮದಲ್ಲಿ 'ಜಲ' (ಪವಿತ್ರ ನೀರು) ಅರ್ಪಿಸಲು ದೇವಘರ್‌ಗೆ ತೆರಳುತ್ತಿದ್ದ ಸುಮಾರು 35 ಭಕ್ತರನ್ನು ಕರೆದ...
ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

ರಮ್ಯಾ ಬಗ್ಗೆ ಅಷ್ಲೀಲಾ ಪೋಸ್ಟ್ ಆರೋಪ; 43 ಸೋಶಿಯಲ್ ಮೀಡಿಯಾ ಖಾತೆಗಳ ವಿರುದ್ಧ ಎಫ್.ಐ.ಆರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದು ಹೇಳಿದ್ದ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳ ಹೆಸರಲ್ಲಿ ಅಷ್ಲೀಲಾ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಈ ಬಗ್ಗೆ ನಟಿ ರಮ್ಯಾ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.ಸೋಶಿಯಲ್ ಮೀಡಿಯಾದಲ್ಲಿ ರಮ್ಯಾಗೆ ಅಶ್ಲೀಲವಾಗಿ ಕಮೆಂಟ್ ಮಾಡಿ, ಅಸಭ್ಯ ಸಂದೇಶಗಳನ್ನು ಕಳಿಸಲಾಗಿದೆ. ಅಂಥವರಿಗೆ ಕಾನೂನಿನ ಮೂಲಕ ಪಾಠ ಕಲಿಸಲು ಕೋರಿ ರಮ್ಯಾ ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಈ ಮೂಲಕ ಅವರು, ಹೆಣ್ಣುಮಕ್ಕಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲವಾಗಿ ನಿಂದಿಸುವವರ ವಿರುದ್ಧ ಅವರು ಸಮರಾ ಸಾರಿದ್ದಾರೆ.‘ಸೆಲೆಬ್ರಿಟಿಯಾದ ನಮಗೆ ಟ್ರೋಲ್ ಇದ್ದೇ ಇರುತ್ತದೆ. ಆದರೆ ಈ ಮಟ್ಟಕ್ಕೆ ನನಗೆ ಯಾವಾಗಲೂ ಅನುಭವ ಆಗಿರಲಿಲ್ಲ' ಎಂದಿರುವ ನಟಿ ರಮ್ಯಾ, ರೇಣುಕಾಸ್ವಾಮಿ ಸಂದೇಶ ಕಳಿಸಿದ್ದಕ್ಕೂ ದರ್ಶನ್ ಫ್ಯಾನ್ಸ್ ಸಂದೇಶ ಕಳಿಸಿದ್ದಕ್ಕೂ ಯಾವುದೇ ವ್ಯತ್ಯಾಸ ಇಲ್ಲ ಎಂದಿದ್ದ...
ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಭ್ರಷ್ಟಾಚಾರ ವಿರುದ್ಧ ಸಮಾರಾ; ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಲೋಕಾಯುಕ್ತ ಸಂಸ್ಥೆ, ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧೆಡೆ ಏಕಕಾಲಿಕ ದಾಳಿ ನಡೆಸಿದೆ. ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಮತ್ತು ಚಿತ್ರದುರ್ಗ ಸೇರಿದಂತೆ ಐದು ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಮತ್ತು ಆಸ್ತಿಗಳ ಮೇಲೆ ತನಿಖಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಎಂ. ಆಂಜನೇಯಮೂರ್ತಿ ಅವರ ನಿವಾಸ ಹಾಗೂ ಸಂಬಂಧಿಕರ ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕದ ಮನೆ, ಜಕ್ಕೂರು ಕಾಂಪ್ಲೆಕ್ಸ್‌, ತುಮಕೂರು, ಮಧುಗಿರಿ ಹಾಗೂ ಗೌರಿಬಿದನೂರಿನ ಕಚೇರಿಗಳಲ್ಲೂ ದಾಳಿ ನಡೆದಿದೆ.ಚಿತ್ರದುರ್ಗ ಜಿಲ್ಲೆ ಹಿರಿಯೂರು ಟಿಹೆಚ್‌ಒ ಡಾ. ವೆಂಕಟೇಶ್ ಅವರ ಯರಗುಂಟೇಶ್ವರ ಬಡಾವಣೆಯ ಮನೆ, ಆದಿವಾಲ ಗ್ರಾಮದ ನಿವಾಸ ಮತ್ತು ಕ್ಲಿನಿಕ್‌ಗಳಲ್ಲಿ ದಾಳಿ ನಡೆದಿದೆ.ಹಾಸನ ಜಿಲ್ಲೆ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಯಾಗಿರುವ ಎನ್. ವೆಂಕಟೇಶ್...
ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್; ಗಲ್ಲು ಶಿಕ್ಷೆ ರದ್ದುಪಡಿಸಿದ ಯಮನ್

ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್; ಗಲ್ಲು ಶಿಕ್ಷೆ ರದ್ದುಪಡಿಸಿದ ಯಮನ್

Focus, ದೇಶ-ವಿದೇಶ, ಪ್ರಮುಖ ಸುದ್ದಿ
ಸನಾ: ಯಮನ್ ದೇಶದಲ್ಲಿ ಗಲ್ಲು ಶಿಕ್ಷೆಗೆ ಎದುರಿಸಬೇಕಿದ್ದ ಕೇರಳ ಮೂಲದ ನಿಮಿಷ ಪ್ರಿಯಾಗೆ ಬಿಗ್ ರಿಲೀಫ್ ಸಿಕ್ಕಿದೆ. ಗಲ್ಲು ಶಿಕ್ಷೆಯನ್ನು ಅಧಿಕೃತವಾಗಿರದ್ದುಪಡಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿಯ ಹೇಳಿಕೆ ಯಿಂದ ತಿಳುದುಬಂದಿದೆ.ಈ ಹಿಂದೆ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದ್ದ ಮರಣದಂಡನೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ. ರಾಜತಾಂತ್ರಿಕ ಮಧ್ಯಸ್ಥಿಕೆ ಮತ್ತು ಯೆಮೆನ್‌ನ ರಾಜಧಾನಿ ಸನಾದಲ್ಲಿ ನಡೆದ ಅಂತಿಮ ಸಭೆಯ ನಂತರ ಈ ಸುದ್ದಿ ಹೊರಬಿದ್ದಿದೆ.ಜು.16ಕ್ಕೆ ಗಲ್ಲುಶಿಕ್ಷೆ ಎದುರಿಸಬೇಕಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಈಗ ರದ್ದುಗೊಳಿಸಲಾಗಿದೆ. ಈ ಹಿಂದೆ ತಾತ್ಕಾಲಿಕವಾಗಿ ಮುಂದೂಡಿದ್ದ ಮರಣದಂಡನೆಯನ್ನು ಇದೀಗ ಸಂಪೂರ್ಣವಾಗಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಕಚೇರಿ ತಿಳಿಸಿದೆ....
ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

ದಯಾನಂದ್ ಸಹಿತ ಐವರು ಪೊಲೀಸ್ ಅಧಿಕಾರಿಗಳ ಅಮಾನತು ರದ್ದು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಅಮನಾತಾಗಿದ್ದ ಐವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿತ್ತು. ಇದೀಗ ಅದೇ ಸರ್ಕಾರ ಈ ಪೊಲೀಸ್ ಅಧಿಕಾರಿಗಳ ಅಮಾನತನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದ ಸರ್ಕಾರ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್‌, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಈ.ಎಸ್.ಐ. ಬಾಲಕೃಷ್ಣ ಹಾಗೂ ಇನ್ಸ್​ಪೆಕ್ಟರ್​ ಗಿರೀಶ್​ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು.ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ನಂತರ ಆರ್​ಸಿಬಿ, ಡಿಎನ್​ಎ ಹಾಗೂ ಕೆಎಸ್​​​ಸಿಎ ವಿರುದ್ಧ ಕ್ರಮಕ್ಕೆ ತೀರ್ಮಾನಿಸಲಾಯಿತು. ಅದರ ಬೆನ್ನಲ್ಲೇ. ಸೋಮವಾರ ​ಐಪಿಎಸ್​ ಅಧಿಕಾರಿಗಳಾದ ಬಿ.ದಯಾನಂದ್​ ಸಹಿತ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದುಕೊಂಡಿದೆ...
ಬಿಹಾರದಲ್ಲಿ SIR ಹೆಸರಿನಲ್ಲಿ ಮತ ಕಳ್ಳತನ; INDIA ಒಕ್ಕೂಟ ಆಕ್ರೋಶ

ಬಿಹಾರದಲ್ಲಿ SIR ಹೆಸರಿನಲ್ಲಿ ಮತ ಕಳ್ಳತನ; INDIA ಒಕ್ಕೂಟ ಆಕ್ರೋಶ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ನವದೆಹಲಿ: ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧೀ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರತಿಪಕ್ಷಗಳ ಸಂಸದರು ಈ ಪ್ರತಿಭಟನೆಯಲ್ಲಿ ಭಾಗಿಯಾದರು. pic.twitter.com/soXnDLryVM ಬಿಹಾರದಲ್ಲಿ SIR ( ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ಹೆಸರಿನಲ್ಲಿ ನಡೆಯುತ್ತಿರುವ ಮತ ಕಳ್ಳತನದ ವಿರುದ್ಧ ದೆಹಲಿಯ ಸಂಸತ್ ಆವರಣದಲ್ಲಿ INDIA ಒಕ್ಕೂಟದಿಂದ ಪ್ರತಿಭಟನೆ.— Karnataka Congress (@INCKarnataka) July 28, 2025...
ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ

ಕೇಂದ್ರದ ಜೊತೆ ಮಾತನಾಡಿ ರಾಜ್ಯಕ್ಕೆ ಗೊಬ್ಬರ ಕೊಡಿಸಿ; ಸಂಸದರಿಗೆ ಸಿಎಂ ಆಗ್ರಹ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದ್ದಾರೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದವರು ಹೇಳಿದ್ದಾರೆ.ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ,. ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ರೂ. ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದುಹೇಳಿದ್ದಾರೆ.ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ. ಸಹಾಯಧನ‌ ಒದಗಿಸಿದ್ದು ನಾವು. ಈ...
ಆಪರೇಷನ್ ಸಿಂಧೂರ್ ಯಶಸ್ವಿ: 9 ಉಗ್ರ ನೆಲೆಗಳ ನಾಶ, 100 ಭಯೋತ್ಪಾದಕರ ಹತ್ಯೆಯಾಗಿದೆ ಎಂದ ಕೇಂದ್ರ

ಆಪರೇಷನ್ ಸಿಂಧೂರ್ ಯಶಸ್ವಿ: 9 ಉಗ್ರ ನೆಲೆಗಳ ನಾಶ, 100 ಭಯೋತ್ಪಾದಕರ ಹತ್ಯೆಯಾಗಿದೆ ಎಂದ ಕೇಂದ್ರ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ 9 ಉಗ್ರ ನೆಲೆಗಳನ್ನು ನಾಶಪಡಿಸಿ, 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹೊಡೆದುರುಳಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.ಲೋಕಸಭೆಯಲ್ಲಿ ಸೋಮವಾರ ಚರ್ಚೆಯಲ್ಲಿ ಭಾಗವಹಿಸಿದ ಸಚಿವರು, ಈ ಕಾರ್ಯಾಚರಣೆ ದೇಶದ ಭದ್ರತಾ ವ್ಯವಸ್ಥೆಯ ಶಕ್ತಿ ಹಾಗೂ ತಾಕತ್ತನ್ನು ಮತ್ತೊಮ್ಮೆ ಪ್ರತಿಪಾದಿಸಿದೆ ಎಂದು ಹೇಳಿದರು. “ಪಾಕಿಸ್ತಾನವು ಯಾವುದೇ ಗುರಿಯನ್ನು ಹೊಡೆಯಲು ವಿಫಲವಾಯಿತು. ನಮ್ಮ ಯಾವುದೇ ನಿರ್ಣಾಯಕ ಆಸ್ತಿಗೆ ಹಾನಿಯಾಗಿಲ್ಲ. ನಮ್ಮ ಭದ್ರತಾ ವ್ಯವಸ್ಥೆ ಅಜೇಯವಾಗಿತ್ತು,” ಎಂದು ತಿಳಿಸಿದರು.ಭಾರತವು ತನ್ನ ರಾಜಕೀಯ ಹಾಗೂ ಸೈನಿಕ ಗುರಿಗಳನ್ನು ಸಂಪೂರ್ಣ ಸಾಧಿಸಿದ ಬಳಿಕವೇ ಕಾರ್ಯಾಚರಣೆ ವಿರಾಮಗೊಂಡಿತು. ಯಾವುದೇ ಬಾಹ್ಯ ಒತ್ತಡದ ಅಡಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ,” ಎಂದು ಸ್ಪಷ್ಟಪಡಿಸಿದರು.ಮೇ 10ರಂದು ಭಾರೀ ಹೊಡೆತ ಅನುಭವಿಸಿದ ನಂತರ ಪಾಕಿಸ್ತಾನ ಭಾರತದ ಡಿಜಿಎಂಒ ಅವರನ್ನು ಸಂಪರ್ಕಿಸಿ ಕಾರ್ಯಾಚರಣೆಗೆ ವಿರಾಮ ಕೇಳಿದ ಕಾರಣದಪ್ಪಟ್ಟೇ ಕಾರ್ಯಾಚರಣೆ ಸ್ಥಗಿತಗೊಂಡಿತು ಎಂದು ಅವರು ವಿವರಿ...
ಕರ್ನಲ್ ಸೋಫಿಯಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದವರ ಬಗ್ಗೆ ಸುಪ್ರೀಂ ಕೋರ್ಟ್ ಗರಂ

ಕರ್ನಲ್ ಸೋಫಿಯಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದವರ ಬಗ್ಗೆ ಸುಪ್ರೀಂ ಕೋರ್ಟ್ ಗರಂ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಸಮಯದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳಿಗಾಗಿ "ಆನ್‌ಲೈನ್" ಸಾರ್ವಜನಿಕ ಕ್ಷಮೆಯಾಚನೆಯನ್ನು ನೀಡಿದ ಮಧ್ಯಪ್ರದೇಶದ ಬುಡಕಟ್ಟು ವ್ಯವಹಾರಗಳ ಸಚಿವ ವಿಜಯ್ ಶಾ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ."ನೀವು ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ! ಅವರ ಸಾರ್ವಜನಿಕ ಕ್ಷಮೆಯಾಚನೆ ಎಲ್ಲಿದೆ? ಅದು ಅವರ ಉದ್ದೇಶಗಳನ್ನು ತೋರಿಸುತ್ತದೆ. ಅದು ಅವರ ಪ್ರಾಮಾಣಿಕತೆಯ ಬಗ್ಗೆ ನಮಗೆ ಹೆಚ್ಚು ಅನುಮಾನ ಮೂಡಿಸುತ್ತದೆ" ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠ ಅಸಮಾಧಾನ ಹೊರಹಾಕಿದೆ.ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಹರ್ಸೂದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಸಿಎಂ ಮೋಹನ್ ಯಾದವ್ ಅವರ ಸಂಪುಟದ ಸಚಿವ ಶಾ ಅವರು ಸಲ್ಲಿಸಿದ ವಿಶೇಷ ರಜೆ ಅರ್ಜಿ (ಎಸ್‌ಎಲ್‌ಪಿ)ಯನ್ನು ವಿಚಾರಣೆ ನಡೆಸುತ್ತಿದ್ದರು, ಮಧ್ಯಪ್ರದೇಶ ಹೈಕೋರ್ಟ್ ಅವರ ಅಸಹ್ಯಕರ ಹೇಳಿಕೆಗಳಿಗಾಗಿ ಅವರ ವಿರು...
ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ! ಅಶೋಕ್ ಭವಿಷ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರದೇಶ ಕಾಂಗ್ರೆಸ್ ನಾಯಕರ ಮುಸುಕಿನ ಗುದ್ದಾಟ ಬಗ್ಗೆ ಅಶೋಕ್ ತಮ್ಮದೇ ದಾಟಿಯಲ್ಲಿ ವಿಶ್ಲೇಷಿಸಿದರು. ಜೆಡಿಎಸ್‌ನಿಂದ ಬಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಆದರೆ ಕಾಂಗ್ರೆಸ್‌ನಲ್ಲೇ ಇದ್ದ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿಲ್ಲ. ಆದ್ದರಿಂದಲೇ ಖರ್ಗೆ ಸಿಎಂ ಆಗದಿರುವ ಬಗ್ಗೆ ಹೇಳಿದ್ದಾರೆ. ಈಗಲಾದರೂ ನನ್ನನ್ನು ಸಿಎಂ ಮಾಡಿ ಋಣ ತೀರಿಸಿ ಎಂದು ಅವರು ಹೇಳಿದ್ದಾರೆ. ಸಚಿವ ರಾಜಣ್ಣ ಈಗಾಗಲೇ ಕ್ರಾಂತಿಯ ಬಗ್ಗೆ ಹೇಳಿದ್ದಾರೆ. ಖರ್ಗೆಯವರಯು ಸರಿಯಾದ ಸಮಯಕ್ಕೆ ಮಾವಿನ ಹಣ್ಣಿಗೆ ಕಲ್ಲು ಹೊಡೆದಿದ್ದಾರೆ. ಅಕ್ಟೋಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ ಎಂದರು.ಎಸ್‌.ಎಂ.ಕೃಷ್ಣ ನಿಧನಾನಂತರ ಅವರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಾಡುತ್ತಿದ್ದಾರೆ. ಎಸ್‌.ಎಂ.ಕೃಷ್ಣ ಐಟಿ ಬಿಟಿಗೆ ನೀಡಿದ ಕೊಡುಗೆಯಿಂದಲೇ ಇಷ್ಟು ಆದಾಯ ರಾಜ್ಯಕ್ಕೆ ಬರುತ್ತಿದೆ. ನಾನು ಜ್ಯೋತಿಷ್ಯ ಹೇಳಲ್ಲ. ಆದರೆ ಖಚಿತವಾಗಿ ಒಪ್ಪಂದ ಆಗಿದೆ ಎಂದು ಶಾಸಕ...