Wednesday, August 5

Author: jpprajamani

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ’ ಕೈಗಾರಿಕಾ ಉದ್ಯಾನವನ ಉದ್ಘಾಟನೆ; ಗ್ರಾಮೀಣ ಸಬಲೀಕರಣಕ್ಕೆ ಉಪರಾಷ್ಟ್ರಪತಿ ಕರೆ

ಧರ್ಮಸ್ಥಳದಲ್ಲಿ ‘ಸಿರಿ ಮಾತೃಶ್ರೀ’ ಕೈಗಾರಿಕಾ ಉದ್ಯಾನವನ ಉದ್ಘಾಟನೆ; ಗ್ರಾಮೀಣ ಸಬಲೀಕರಣಕ್ಕೆ ಉಪರಾಷ್ಟ್ರಪತಿ ಕರೆ

ಪ್ರಮುಖ ಸುದ್ದಿ, ರಾಜ್ಯ
ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಿರ್ಮಿಸಲಾದ ‘ಸಿರಿ ಮಾತೃಶ್ರೀ ಕೈಗಾರಿಕಾ ಉದ್ಯಾನವನ’ವನ್ನು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಶನಿವಾರ ಉದ್ಘಾಟಿಸಿದರು. ಮಹಿಳಾ ನೇತೃತ್ವದ ಸಾಮಾಜಿಕ ಪರಿವರ್ತನೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ಈ ಯೋಜನೆ ಮಾದರಿಯಾಗಿದೆ ಎಂದು ಅವರು ಹೇಳಿದರು.ಧರ್ಮಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತ ನಿರ್ಮಾಣಕ್ಕೆ ಸ್ವಾವಲಂಬನೆ ಮತ್ತು ಗ್ರಾಮೀಣ ಸಬಲೀಕರಣ ಅತ್ಯಗತ್ಯ ಎಂದರು. ಸಿರಿಯಂತಹ ಸಂಸ್ಥೆಗಳು ಮಹಿಳೆಯರು ಹಾಗೂ ಗ್ರಾಮೀಣ ಕುಟುಂಬಗಳ ಜೀವನದಲ್ಲಿ ಮಹತ್ವದ ಬದಲಾವಣೆ ತರಲು ಸಾಧ್ಯವೆಂಬುದನ್ನು ತೋರಿಸಿವೆ ಎಂದು ಹೇಳಿದರು.ಪ್ರಸ್ತುತ ಸಿರಿ ಸಂಸ್ಥೆ 3,000ಕ್ಕೂ ಹೆಚ್ಚು ಜನರಿಗೆ ನೇರ ಉದ್ಯೋಗ ಹಾಗೂ 10,000ಕ್ಕೂ ಹೆಚ್ಚು ಮಂದಿಗೆ ಪರೋಕ್ಷವಾಗಿ ಜೀವನೋಪಾಯ ಒದಗಿಸುತ್ತಿದೆ. ಇದರ ಬಹುಪಾಲು ಫಲಾನುಭವಿಗಳು ಆರ್ಥಿಕವಾಗಿ ಹಿಂದುಳಿದ ಮಹಿಳೆಯರಾಗಿದ್ದಾರೆ ಎಂದು ಅವರು ತಿಳಿಸಿದರು.ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಸಮಾಜಮುಖಿ ...
ಚಿಕ್ಕಬಳ್ಳಾಪುರ ಬಳಿ ಸರಣಿ ಅಪಘಾತ: ನಾಲ್ವರು ಮಹಿಳೆಯರು ಸೇರಿ ಐವರು ಸಾವು

ಚಿಕ್ಕಬಳ್ಳಾಪುರ ಬಳಿ ಸರಣಿ ಅಪಘಾತ: ನಾಲ್ವರು ಮಹಿಳೆಯರು ಸೇರಿ ಐವರು ಸಾವು

ಪ್ರಮುಖ ಸುದ್ದಿ, ರಾಜ್ಯ
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಸಮೀಪ ಭಾನುವಾರ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಮಹಿಳೆಯರು ಹಾಗೂ ಆಟೋ ಚಾಲಕ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಥಾರ್ ಕಾರು, ಆಟೋ ಹಾಗೂ ಕ್ಯಾಂಟರ್ ನಡುವೆ ಈ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಥಾರ್ ಕಾರು ಮುಂಭಾಗದಲ್ಲಿ ಸಂಚರಿಸುತ್ತಿದ್ದ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ, ನಿಯಂತ್ರಣ ತಪ್ಪಿದ ಆಟೋ ಮುಂದೆ ಸಾಗುತ್ತಿದ್ದ ಕ್ಯಾಂಟರ್‌ಗೆ ಅಪ್ಪಳಿಸಿದೆ.ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಉಮಾದೇವಿ (55), ಲಕ್ಷ್ಮಮ್ಮ (50), ವಿಜಯಾ (40) ಸರೋಜಮ್ಮ ಹಾಗೂ ಚಾಲಕ ಆಂಜಿನಪ್ಪ (35) ಎಂಬವರು ಸಾವನ್ನಪ್ಪಿದ್ದಾರೆ. ಮೃತರು ಬಾಗೇಪಲ್ಲಿ ಪಟ್ಟಣದ ನಿವಾಸಿಗಳೆಂದು ಗುರುತಿಸಲಾಗಿದೆ.ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ...
‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: 'ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು. ರಾಜ್ಯವನ್ನು ಮುನ್ನಡೆಸಲು ಬೇಕಿರುವ ಬದ್ದತೆ, ಸಾಮರ್ಥ್ಯ ಮತ್ತು ಮುನ್ನೋಟ ನಿಮ್ಮಲ್ಲಿದೆ ಎನ್ನುವ ನಂಬಿಕೆ ನನ್ನದು ಎಂದು ನೂತನ ಆಗಲಿರುವ ಡಿ.ಕೆ.ಶಿವಕುಮಾರ್ ಅವರಿಗೆ ಸಿದ್ದರಾಮಯ್ಯ ಅಭಯದ ಮಾತುಗಳನ್ನು ಹೇಳಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿ ಮಾಧ್ಯಮದಲ್ಲಿ ಪೋಸ್ಟ್ ಹಾಕಿರುವ ಸಿದ್ದರಾಮಯ್ಯ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.'ನಿಮ್ಮಲ್ಲಿರುವ ಅದಮ್ಯವಾದ ಕ್ರಿಯಾಶೀಲತೆ, ಸಂಘಟನಾ ಚಾತುರ್ಯ ಮತ್ತು ಕಾಂಗ್ರೆಸ್ ಪಕ್ಷದ ಮೇಲಿನ ಸಂಶಾಯತೀತ ನಿಷ್ಠೆಯನ್ನು ಒಬ್ಬ ಸಹದ್ಯೋಗಿಯಾಗಿ ನಾನು ಸಮೀಪದಿಂದ ಗಮನಿಸಿದ್ದೇನೆ. ಇವೆಲ್ಲದರ ಸದುಪಯೋಗ ರಾಜ್ಯದ ಜನತೆಗೆ ಆಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುವೆ' ಎಂದಿರುವ ಸಿದ್ದರಾಮಯ್ಯ, 'ಇಂದು ಕರ್ನಾಟಕ ತಲಾವಾರು ಆದಾಯದಲ್ಲಿ ದೇಶದಲ್ಲಿ ಮೊದಲನೇ ಸ್ಥಾನದಲ್ಲಿರುವುದು ಮಾತ್ರವಲ್ಲ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಲ್ಲಿಯೂ ದೇಶಕ್ಕೆ ಮಾದರಿಯಾಗಿದೆ. ನಾವು ಪ್ರಾರಂಭಿಸಿರುವ ಪ್ರತಿ...
ಧಾರವಾಡ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಪ್ರಮುಖ ಸುದ್ದಿ, ರಾಜ್ಯ
ಧಾರವಾಡ: ಬೇಸಿಗೆಯ ತೀವ್ರ ಬಿಸಿಲಿನಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಸಮೀಪದ ಕೆರೆಯಲ್ಲಿ ನಡೆದಿದೆ.ಮೃತರನ್ನು ಸಿಂಗನಹಳ್ಳಿ ಗ್ರಾಮದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಅಬ್ಬಾಸ್ ಮತ್ತು ಅಸ್ಲಂ ಸಹೋದರರಾಗಿದ್ದಾರೆ.ಕಡು ಬಿಸಿಲಿನ ಹಿನ್ನೆಲೆಯಲ್ಲಿ ಮೂವರು ಬಾಲಕರು ಕೆರೆಗೆ ಈಜಲು ತೆರಳಿದ್ದು, ಈ ವೇಳೆ ಆಳವಾದ ನೀರಿನಲ್ಲಿ ಸಿಲುಕಿ ಮುಳುಗಿದ್ದಾರೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಮೂವರ ಮೃತದೇಹಗಳನ್ನು ಹೊರತೆಗೆದರು.ಘಟನೆಯ ಸುದ್ದಿ ತಿಳಿದು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ....
ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

ಪ್ರಮುಖ ಸುದ್ದಿ, ವೈವಿಧ್ಯ
ಅಧಿಕ ರಕ್ತದೊತ್ತಡ (High Blood Pressure) ಇಂದು ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿ ಪರಿಣಮಿಸಿದೆ. ಮಾನಸಿಕ ಒತ್ತಡ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ದೈಹಿಕ ಚಟುವಟಿಕೆಯ ಕೊರತೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಔಷಧಿಗಳ ಜೊತೆಗೆ ಆರೋಗ್ಯಕರ ಜೀವನಶೈಲಿ ಮತ್ತು ಸಮತೋಲಿತ ಆಹಾರವೂ ರಕ್ತದೊತ್ತಡ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.ಈ ಹಿನ್ನೆಲೆಯಲ್ಲಿ ಬೀಟ್ರೂಟ್ ರಸ ಮತ್ತು ದಾಳಿಂಬೆ ಜ್ಯೂಸ್ ಎರಡೂ ಹೃದಯದ ಆರೋಗ್ಯಕ್ಕೆ ಸಹಕಾರಿ ಪಾನೀಯಗಳಾಗಿವೆ. ಆದರೆ ಇವೆರಡರಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ ಎಂಬುದು ಹಲವರ ಪ್ರಶ್ನೆಯಾಗಿದೆ.ಬೀಟ್ರೂಟ್ ರಸದಲ್ಲಿ ನೈಸರ್ಗಿಕ ನೈಟ್ರೇಟ್‌ಗಳು ಸಮೃದ್ಧವಾಗಿದ್ದು, ಅವು ದೇಹದಲ್ಲಿ ನೈಟ್ರಿಕ್ ಆಕ್ಸೈಡ್ ಆಗಿ ಪರಿವರ್ತನೆಯಾಗಿ ರಕ್ತನಾಳಗಳನ್ನು ವಿಸ್ತರಿಸಲು ಸಹಾಯ ಮಾಡುತ್ತವೆ. ಇದರಿಂದ ರಕ್ತದ ಹರಿವು ಸುಧಾರಿಸಿ ರಕ್ತದೊತ್ತಡ ತಾತ್ಕಾಲಿಕವಾಗಿ ಕಡಿಮೆಯಾಗಬಹುದು. ನಿಯಮಿತ ಪ್ರಮಾಣದಲ್ಲಿ ಸೇವಿಸುವುದರಿಂದ ಹೃದಯರಕ್ತನಾಳಗಳ ಆರೋಗ್ಯಕ್ಕೂ ನೆರವಾಗುತ್ತದೆ.ದಾಳಿಂಬೆ ಜ್ಯೂಸ್ ಉತ್ಕರ್ಷಣ ನಿರೋಧಕಗಳು (Antioxidants) ಮತ್ತು ಪೊಟ್ಯಾಸಿಯಮ್‌ನ ಉ...
ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಜೂನ್ 3 ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆಶಿ ಜೊತೆಗೆ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ವಿಧಾನಸೌಧದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಏಕಮತದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.ಇದಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಹಿರಿಯ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚನೆಗೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿದರು. ಬಹುಮತದ ಬೆಂಬಲದ ಆಧಾರದ ಮೇಲೆ ರಾಜ್ಯಪಾಲರು ಸರ್ಕಾರ ರಚಿಸಲು ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ.ಈ ಸಂಬಂಧ ರಾಜ್ಯಪಾಲರ ಕಚೇರಿಯಿಂದ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಪತ್ರ ಕಳುಹಿಸಲಾಗಿದ್ದು, ಜೂನ್ 3ರಂದು ಸಂಜೆ 4.05 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಂತೆ ಆಹ್ವಾನಿಸಲಾಗಿದೆ.ಶಾಸಕಾಂಗ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಕಾಂಗ್ರೆಸ್ ...
ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ರಾಜ್ಯ ಸರ್ಕಾರದ ಸಂಪುಟ ಪುನರಚನೆ ವೇಳೆ ವೀರಶೈವ-ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಯುವ ಘಟಕ ಒತ್ತಾಯಿಸಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ವೆಂಕಟರೆಡ್ಡಿ ಡಿ. ಪಾಟೀಲ್, ಹಿಂದಿನ ಸಚಿವ ಸಂಪುಟದಲ್ಲಿ ಸಮುದಾಯದ ಏಳು ಸಚಿವರು ರಾಜ್ಯದ ಅಭಿವೃದ್ಧಿ, ಪರಿಸರ ಸಂರಕ್ಷಣೆ, ದುರ್ಬಲ ವರ್ಗಗಳ ಸಬಲೀಕರಣ ಹಾಗೂ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.ರಾಜ್ಯದ ಅತಿದೊಡ್ಡ ಸಮುದಾಯಗಳಲ್ಲಿ ಒಂದಾದ ವೀರಶೈವ-ಲಿಂಗಾಯತ ಸಮುದಾಯವು ಕಾಂಗ್ರೆಸ್ ಸರ್ಕಾರ ರಚನೆಗೆ ಮಹತ್ವದ ಬೆಂಬಲ ನೀಡಿದ್ದು, ಹೊಸ ಸಚಿವ ಸಂಪುಟದಲ್ಲಿ ಕನಿಷ್ಠ ಎಂಟು ಸಚಿವ ಸ್ಥಾನಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.ಉಪಮುಖ್ಯಮಂತ್ರಿ ಹುದ್ದೆಯನ್ನು ಸಮುದಾಯದ ಯಾರಿಗಾದರೂ ನೀಡಿದರೆ ಸ್ವಾಗತಿಸುವುದಾಗಿ ತಿಳಿಸಿದ ಅವರು, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ಈಶ್ವರ್ ಖಂಡ್ರೆ ಅವರಿಗೆ ಡಿಸಿಎಂ ಸ್ಥಾನ ನೀಡಿದರೆ ಸಮುದಾಯಕ್ಕೆ ಹೆಚ್ಚಿನ ಸಂತೋಷವಾಗಲಿದೆ ಎಂದು ಅಭಿಪ್ರಾ...
ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಲೇಔಟ್‌ನ ಜ್ಞಾನಭಾರತಿ ಸಮೀಪದ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಶಾಲೆಯ ಐದನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ವ್ಯಾಪಕವಾಗಿ ಹರಡಿದ್ದು, ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಯಿತು.ಬೇಸಿಗೆ ರಜೆ ಹಿನ್ನೆಲೆಯಲ್ಲಿ ಶಾಲೆ ಮುಚ್ಚಿದ್ದರಿಂದ ಯಾವುದೇ ವಿದ್ಯಾರ್ಥಿಗಳು ಅಥವಾ ಸಿಬ್ಬಂದಿ ಒಳಗಿಲ್ಲದೆ ದೊಡ್ಡ ದುರಂತ ತಪ್ಪಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಮಾಹಿತಿ ತಿಳಿಯುತ್ತಿದ್ದಂತೆ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದವು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ಸಂಭವಿಸಿಲ್ಲ.ಬೆಂಕಿಯಿಂದ ಶಾಲೆಯ ಐದನೇ ಮಹಡಿಗೆ ಹಾನಿಯಾಗಿದ್ದು, ನಷ್ಟದ ಪ್ರಮಾಣ ಹಾಗೂ ಅಗ್ನಿ ಅವಘಡದ ನಿಖರ ಕಾರಣವನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.A fire has broken out at Chitrakala School Ring Road #Bengal...
1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

ಪ್ರಮುಖ ಸುದ್ದಿ, ರಾಜ್ಯ, ವಿದೇಶ
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಹೊಸ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ತಲುಪಬೇಕಿದ್ದ ₹5,000 ಕೋಟಿ ಹಣದ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟನೆ ನೀಡುವಂತೆ ಅವರು ಆಗ್ರಹಿಸಿದ್ದಾರೆ.ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಸುರೇಶ್ ಕುಮಾರ್, 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ 1.14 ಕೋಟಿ ಮಹಿಳೆಯರ ಖಾತೆಗೆ ಜಮೆಯಾಗಿಲ್ಲ ಎಂಬ ಆರೋಪವನ್ನು ಪುನರುಚ್ಚರಿಸಿದ್ದಾರೆ.ಕಳೆದ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಈ ವಿಚಾರವನ್ನು ಸದನದ ಗಮನಕ್ಕೆ ತಂದಿದ್ದರು. ಆ ವೇಳೆ ಸರ್ಕಾರದ ಪರವಾಗಿ ಹಣ ಪಾವತಿಯಾಗಿರುವುದಾಗಿ ಹೇಳಲಾಗಿತ್ತಾದರೂ, ಫಲಾನುಭವಿಗಳಿಗೆ ಹಣ ತಲುಪಿಲ್ಲ ಎಂಬ ದಾಖಲೆಗಳನ್ನು ಮಂಡಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.ಸುಮಾರು ₹5,000 ಕೋಟಿ ಮೊತ್ತದ ಹಣದ ಕುರಿತು ಸರ್ಕಾರ ಸಮರ್ಪಕ ಉತ್ತರ ...
ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

ಪ್ರಮುಖ ಸುದ್ದಿ, ವೈವಿಧ್ಯ
ಇತ್ತೀಚಿನ ದಿನಗಳಲ್ಲಿ ಪ್ರಿಡಿಯಾಬಿಟಿಸ್ ಮತ್ತು ಟೈಪ್-2 ಮಧುಮೇಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಹಾರ ಪದ್ಧತಿಯತ್ತ ಜನರು ಹೆಚ್ಚು ಗಮನ ಹರಿಸುತ್ತಿದ್ದಾರೆ. ವಿಶೇಷವಾಗಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬ ಪ್ರಶ್ನೆ ಸಾಮಾನ್ಯವಾಗಿದೆ.ತಜ್ಞರ ಪ್ರಕಾರ, ಮಧುಮೇಹ ಇರುವವರು ಎಲ್ಲಾ ಸಿಹಿ ಪದಾರ್ಥಗಳನ್ನು ಸಂಪೂರ್ಣವಾಗಿ ತ್ಯಜಿಸುವ ಅಗತ್ಯವಿಲ್ಲ. ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ಹಣ್ಣುಗಳನ್ನು ಸೇವಿಸಿದರೆ ಆರೋಗ್ಯ ಕಾಪಾಡಿಕೊಳ್ಳಬಹುದು.ಈ ಪೈಕಿ ಸೇಬು ಉತ್ತಮ ಆಯ್ಕೆಯಾಗಿದೆ ಎಂದು ವೈದ್ಯರು ಹೇಳುತ್ತಾರೆ. ಸೇಬಿನಲ್ಲಿ ಕರಗುವ ಫೈಬರ್, ವಿಟಮಿನ್ ಸಿ ಹಾಗೂ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಜೊತೆಗೆ ಇದು ಕಡಿಮೆ ಅಥವಾ ಮಧ್ಯಮ ಗ್ಲೈಸೆಮಿಕ್ ಇಂಡೆಕ್ಸ್‌ (GI) ಹೊಂದಿರುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ತಕ್ಷಣ ಏರಿಕೆಯಾಗುವುದನ್ನು ನಿಯಂತ್ರಿಸಲು ಸಹಕಾರಿಯಾಗಿದೆ.ಸೇಬಿನಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸಿ ಸಕ್ಕರೆ ಶೋಷಣೆಯನ್ನು ಸಮತೋಲನದಲ್ಲಿಡಲು ನೆರವಾಗುತ್ತದೆ. ಇದರಿಂದ ಹೊಟ್ಟೆ ತುಂಬಿದ ಅನುಭ...