Sunday, December 7

Author: jpprajamani

ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

ಕೊರೋನಾ ತಲ್ಲಣ: ರಾಜ್ಯದಲ್ಲಿ ಮತ್ತೆ 33 ಸೋಂಕಿನ ಪ್ರಕರಣಗಳು ಪತ್ತೆ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್​​ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಎಬ್ಬಿಸಿರುವ ಕೊರೊನಾ ಹೊಸ ತಳಿ ಇದೀಗ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಕರ್ನಾಟಕದಲ್ಲಿ ಜನವರಿಯಲ್ಲಿ ಮೂರು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಈ ತಿಂಗಳಲ್ಲಿ 33 ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸದ್ಯ 16 ಸಕ್ರಿಯ ಪ್ರಕರಣಗಳಿವೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ, ಭಾರತದಲ್ಲಿ ಸದ್ಯ ಸಕ್ರಿಯ ಕೊವಿಡ್ ಕೇಸ್‌ಗಳ ಸಂಖ್ಯೆ 257 ಇದೆ ಎನ್ನಲಾಗಿದ್ದು, ಆಸ್ಪತ್ರೆಗಳಲ್ಲಿ ಇನ್‌ಫ್ಲುಯೆಂಜಾ ಮಾದರಿ ಅನಾರೋಗ್ಯ ಮತ್ತು ತೀವ್ರವಾದ ಉಸಿರಾಟದ ಸೋಂಕುಗಳ ಪ್ರಕರಣಗಳ ಮೇಲೆ ನಿಗಾ ಇಡಲು ಸೂಚಿಸಲಾಗಿದೆ....
ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

ಇದೇನು ರಸ್ತೆಯೂ? ಚಪಾತಿಯೋ? ಕಳಪೆ ಕಾಮಗಾರಿ ಅನಾವರಣ

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಕಳಪೆ ಕಾಮಗಾರಿ ಮೂಲಕ ರಾಜ್ಯದ ಜನತೆಗೆ ವಂಚಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದಾರೆ. ಇದೇ ಸಂದರ್ಭದಲ್ಲಿ, ವೀಡಿಯೋವೊಂದನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯದಲ್ಲಿನ ಕಳಪೆ ಕಾಮಗಾರಿಯನ್ನು ಅನಾವರಣ ಮಾಡಿದೆ. ಕರ್ನಾಟಕದ ಭ್ರಷ್ಟ @INCKarnataka ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ!! ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ, ಡಾಂಬರ್‌ ರಸ್ತೆಯನ್ನು ಸಾರ್ವಜನಿಕರು ಮಡಚುತ್ತಿದ್ದಾರೆ.ಸಿದ್ದರಾಮಯ್ಯ ಅವರೆ, ನಿಮ್ಮ ಸರ್ಕಾರ 80 ಪರ್ಸೆಂಟ್‌ ಕಮಿಷನ್… pic.twitter.com/wLj9TJFuWB— BJP Karnataka (@BJP4Karnataka) May 21, 2025 ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರ್ಕಾರ 80 ಪರ್ಸೆಂಟ್‌ ಕಮಿಷನ್‌ ಸರ್ಕಾರ ಅನ್ನೊದಕ್ಕೆ ಇಲ್ಲಿದೆ ಪುರಾವೆ ಎಂದು ಸಾಮಾಜಿಕ ಮಾಧ್ಯಮ 'X'ನಲ್ಲಿ ಬರೆದುಕೊಂಡಿರುವ ಬಿಜೆಪಿ, 'ಇದು ಮಡಿಕೇರಿಯಲ್ಲಿ ನಡೆದಿರುವ ರಸ್ತೆ ಕಾಮಗಾರಿ ಅಂತೆ, ಮಲಗಿ ಎದ್ದ ಮೇಲೆ ಹಾಸಿಗೆಯನ್ನು ಮಡಚಿಟ್ಟ ರೀತಿ,...
ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ದಿಗ್ಬಂಧನ: ಬಿಜೆಪಿ ಖಂಡನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ನಾರಾಯಣಸ್ವಾಮಿಯವರು ಕಾಂಗ್ರೆಸ್ ಗೂಂಡಾ ಬೆಂಬಲಿಗರ ದಿಗ್ಭಂದನ ಅನುಭವಿಸಿದ್ದು ಕರ್ನಾಟಕದಲ್ಲಿ ಪಾಳೆಗಾರಿಕೆ ಸಂಸ್ಕೃತಿಯ ಜೀವಂತಿಕೆಯನ್ನು ಪ್ರತಿಬಿಂಬಿಸಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ. ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಇದು ಪ್ರಜಾಪ್ರಭುತ್ವದ ಸುಂದರತೆ ಹಾಗೂ ರಾಜಕಾರಣ ಸಂಸ್ಕೃತಿಯ ಧ್ಯೋತಕವಾಗುತ್ತದೆ ಎಂದು ವಿಜಯೇಂದ್ರ ಅವರು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲೆ ಇಂದಿರಾ ಗಾಂಧಿಯವರ ತುರ್ತು ಪರಿಸ್ಥಿತಿಯ ಸರ್ವಾಧಿಕಾರಿ ನೆರಳಿನಲ್ಲಿ ಬಂದವರ ಕಪಿಮುಷ್ಠಿಯಲ್ಲಿದೆ. ಇಲ್ಲಿ ಪ್ರಜಾಪ್...
‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

‘ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ’; ಪ್ರಿಯಾಂಕ್ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. 'ಬಿಜೆಪಿಯವರ ದ್ವೇಷದ ಹೇಳಿಕೆಗಳು ನನಗೆ ಹೊಸದಲ್ಲ, ನಾನು ಇವರ ಹಗರಣಗಳನ್ನು ಬಯಲಿಗಿಟ್ಟಿದ್ದೇ ಈ ವೈಯಕ್ತಿಕ ನಿಂದನೆಗಳಿಗೆ ಕಾರಣ ಎನ್ನುವುದೂ ನನಗೆ ತಿಳಿದಿದೆ ಎಂದವರು ಬಿಜೆಪಿ ನಾಯಕರ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಗಂಗಾ ಕಲ್ಯಾಣ ಹಗರಣ, ಬಿಟ್ ಕಾಯಿನ್ ಹಗರಣ, KKRDB ಹಗರಣ, ಕೋವಿಡ್ ಹಗರಣ, PSI ಹಗರಣಗಳನ್ನು ಜನರ ಮುಂದಿಟ್ಟಿದ್ದನ್ನು ಬಿಜೆಪಿಗರಿಗೆ ಸಹಿಸಲಾಗುತ್ತಿಲ್ಲ. RSS ನವರನ್ನು ಸೈದ್ದಂತಿಕ ನೆಲೆಗಟ್ಟಿನಲ್ಲಿ ಬೆತ್ತಲುಗೊಳಿಸುತ್ತಿರುವುದೂ ಸಹ ಬಿಜೆಪಿಗರ ಈ ಅಸಹನೆಗೆ ಪ್ರಮುಖ ಕಾರಣ ಎಂದು ಪ್ರಿಯಾಂಕ್ ಖರ್ಗೆ ದೂರಿದ್ದಾರೆ. ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, 'ಈ ಹಿಂದೆ ಕಾನ್ವೆಂಟ್ ದಲಿತ ಎಂದಿದ್ದಾರೆ. ಪ್ರಿಯಾಂಕ್ ಎನ್ನುವ ಹೆಸರು ಹೆಣ್ಣೋ ಗಂಡೋ ಗೊತ್ತಿಲ್ಲ ಎಂದಿದ್ದಾರೆ. ದೇಹ ಬೆಳದಿ...
ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

ರಾಜೀವ್ ಗಾಂಧಿ ಪುಣ್ಯಸ್ಮರಣೆ; ದಿವಂಗತ ಮಾಜಿ ಪ್ರಧಾನಿಗೆ ನಾಯಕರಿಂದ ನಮನ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪುಷ್ಪ ನಮನ ಸಲ್ಲಿಸಿದರು. ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವ ಕೆ ಎಚ್ ಮುನಿಯಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಹರಿಯಾಣ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಬಿ ಕೆ ಹರಿಪ್ರಸಾದ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯ್ ಸಿಂಗ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು....
ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ; 26 ನಕ್ಸಲರು ಬಲಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಿರುಸುಗೊಂಡಿದೆ. ಸೇನೆ ಹಾಗೂ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ 26 ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 26 ನಕ್ಸಲರು ಮೃತಪಟ್ಟಿದ್ದಾರೆ ಇಂದು ಪೊಲೀಸ್ ಮೂಲಗಳು ತಿಳಿಸಿವೆ. ಗುಂಡಿನ ಚಕಮಕಿಯಲ್ಲಿ ಪೊಲೀಸ್ ಮಾಹಿತಿದಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

ವಿಜಯಪುರ ಬಳಿ ಸರಣಿ ಅಪಘಾತ; ಆರು ಮಂದಿ ದುರ್ಮರಣ

Focus, ಪ್ರಮುಖ ಸುದ್ದಿ, ರಾಜ್ಯ
ವಿಜಯಪುರ: ವಿಜಯಪುರ ಜಿಲ್ಲೆ ಮನಗೂಳಿ ಬಳಿ ಬಸ್ಸು-ಕಾರು- ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಈ ಅಪಘಾತ ಸಂಭವಿಸಿದೆ. ಸೋಲಾಪುರದತ್ತ ತೆರಳುತ್ತಿದ್ದ ಮಹೀಂದ್ರಾ ಸ್ಕಾರ್ಪಿಯೋ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿಗೂ ಅಪ್ಪಳಿಸಿದೆ. ಈ ಅಪಘಾತದಲ್ಲಿ ಮಹಿಂದ್ರಾ ಸ್ಕಾರ್ಪಿಯೋ ವಾಹನ ನುಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ತೆಲಂಗಾಣ ಮೂಲದ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಟಿ.ಭಾಸ್ಕರನ್ ಮಣಿಕಂಠನ್, ಪತ್ನಿ ಪವಿತ್ರ, ಪುತ್ರ ಅಭಿರಾಮ್, ಪುತ್ರಿ ಜ್ಯೋತ್ಸ್ನಾ, ವಿಜಯಪುರ ಮೂಲದ ಚಾಲಕ ವಿಕಾಸ್ ಮಕಾನಿ ಮತ್ತು ಬಸ್ ಚಾಲಕ ಬಸವರಾಜ ರಾಠೋರ್ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

ಅಯೋಧ್ಯೆಯಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ

Focus, ಆಧ್ಯಾತ್ಮ, ದೇಗುಲ ದರ್ಶನ, ದೇಶ-ವಿದೇಶ, ಪ್ರಮುಖ ಸುದ್ದಿ
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ.  ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಶ್ರೀ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರವರ ದಿವ್ಯ ಉಪಸ್ಥಿತಿಯಲ್ಲಿ ಈ ಕೈಂಕರ್ಯ ನೆರವೇರಿದೆ. ಶಿಲಾನ್ಯಾಸ ಕೈಂಕರ್ಯದಲ್ಲಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್ ಪೂಜಾರಿ, ಮೀನುಗಾರಿಕಾ ಸಚಿವರಾದ ಮಾಂಕಾಳ ವೈದ್ಯ, ಶಿರಸಿ ಶಾಸಕ ಭೀಮಣ್ಣ ನಾಯ್ಕ ಹಾಗೂ ಅನೇಕ ಧಾರ್ಮಿಕ ಪ್ರಮುಖರು ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಪದ್ಮರಾಜ್ ಆರ್.ಪೂಜಾರಿ, ಧರ್ಮದ ನಡೆಯ ಮೂಲಕವಷ್ಟೇ ಧರ್ಮ ಉಳಿಯಬಹುದು. ಧರ್ಮ ಉಳಿದಲ್ಲಿ ಮಾತ್ರ ನಾವು ಉಳಿಯುವೆವು ಎಂದರು. ಜಾತಿಯ ವೈಷಮ್ಯ ಬಿಟ್ಟು ಎಲ್ಲರೂ ಒಂದೇ ಎಂಬುದೇ ನಿಜವಾದ ಧರ್ಮದ ಸಾರವಾಗಿದೆ ಎಂದು ಪ್ರತಿಪಾದಿಸಿದ ಅವರು, ಸಮಸ್ತ ಹಿಂದೂ ಧರ್ಮದ ...
ಚುನಾವಣೆ ವೇಳೆ ಎಲ್ಲಾ ಭರವಸೆಗಳನ್ನು ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿಎಂ ಭರವಸೆ

ಚುನಾವಣೆ ವೇಳೆ ಎಲ್ಲಾ ಭರವಸೆಗಳನ್ನು ಮೂರು ವರ್ಷದಲ್ಲಿ ಈಡೇರಿಸುತ್ತೇವೆ: ಸಿಎಂ ಭರವಸೆ

Focus, ಪ್ರಮುಖ ಸುದ್ದಿ, ರಾಜ್ಯ
ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ "ಸಮರ್ಪಣೆ ಸಂಕಲ್ಪ" ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯ...
ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಕೆಶಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಕೆಶಿ

Focus, ಪ್ರಮುಖ ಸುದ್ದಿ, ರಾಜ್ಯ
ವಿಜಯನಗರ: “ನಮಗೆ ಅಧಿಕಾರ ನೀಡಿ ರಾಜ್ಯದ ಸೇವೆ ಮಾಡಲು ಆಶೀರ್ವಾದ ಮಾಡಿದ ಜನರ ಋಣ ತೀರಿಸಲು ನಮ್ಮ ಸರ್ಕಾರ ಆರನೆಯದಾಗಿ ಭೂ ಗ್ಯಾರಂಟಿ ಯೋಜನೆ ನೀಡುತ್ತಿದೆ. ಎಐಸಿಸಿ ಅಧ್ಯಕ್ಷರ ನಿರ್ದೇಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲಿಸುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಂಗಳವಾರ ನಡೆದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆಯ ಸಂಕಲ್ಪ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಕರ್ನಾಟಕ ರಾಜ್ಯದ ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪ ಕಾರ್ಯಕ್ರಮ ಮಾಡುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ 136 ಕ್ಷೇತ್ರಗಳಲ್ಲಿ ಶಾಸಕರನ್ನು ಆಯ್ಕೆ ಮಾಡಿ ನಮಗೆ ಆಶೀರ್ವಾದ ಮಾಡಿದಿರಿ. ನಿಮ್ಮ ಋಣ ತೀರಿಸಲು ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಆರನೇ ಗ್ಯಾರಂಟಿಯಾಗಿ ಭೂ ಗ್ಯಾರಂ...