ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಬಹುತೇಕ ನಿವಾಸಿಗಳಿಗೆ ನಿದ್ದೆಯಿಲ್ಲದ ರಾತ್ರಿ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಅನೇಕ ಕಡೆ ಕೃತಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ರಾತ್ರಿಯ ಮಳೆಯಿಂದಾಗಿ ಉದ್ಯಾನ ನಗರಿಯಲ್ಲಿ ಅಧ್ವಾನ ಸೃಷ್ಟಿಯಾಗಿದ್ದು, ಬೆಂಗಳೂರು ನಗರದಲ್ಲಿ ಸಂಚಾರ ವ್ಯವಸ್ಥೆ ಏರುಪೇರಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶಗಳನ್ನು ಪ್ರಕಟಿಸಿ ವಿವರಗಳನ್ನು ನೀಡಿದ್ದಾರೆ.
ಸೋಮವಾರ ಮುಂಜಾನೆ ವರೆಗೂ ಸುರಿದಿದ್ದರಿಂದಾಗಿ ಮಾಗಡಿ ರಸ್ತೆ, ಜಯನಗರ, ಬಿಟಿಎಂ ಲೇಔಟ್, ಯಶವಂತಪುರ ಪ್ರದೇಶಗಳಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು ಸಹಿತ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಬೆಳಗಿನ ಹೊತ್ತಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಅನೇಕ ಬಡಾವಣೆಗಳಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಿವಾಸಿಗಳು ನಿದ್ದೆಯಿಲ್ಲದ ರಾತ್ರಿಗಳನ್ನು ಕಳೆಯುವಂತಾಯಿತು.
ಬಹುತೇಕ ಕಡೆ ಸರ್ಕಾರದ ಅವೈಜ್ಞಾನಿಕ ಕಾಮಗಾರಿಗಳಿಂದಾಗಿ ಮಳೆ ನೀರು ಸುಗಮವಾಗಿ ಹರಿದು ಹೋಗದೆ ಅವಾಂತರ ಸೃಷ್ಟಿಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಕೇವಲ ಒಂದೆರಡು ದಿನಗಳ...









