
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಲಿ; ರಮೇಶ್ ಬಾಬು ಸವಾಲ್
ಬೆಂಗಳೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರಿಂದ ರಾಜೀನಾಮೆ ಕೊಡಿಸಿ ದಲಿತ ನಾಯಕರನ್ನು ಕೂರಿಸಲಿ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಸವಾಲು ಹಾಕಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ರಮೇಶ್ ಬಾಬು, ರಾಜ್ಯದಲ್ಲಿ ವಿಜಯೇಂದ್ರ ಅವರು ರಾಜ್ಯಮಟ್ಟದಲ್ಲಿ ಹಾಗೂ ರಾಷ್ಟ್ರಮಟ್ಟದಲ್ಲಿ ಜೆ.ಪಿ.ನಡ್ಡಾ ಅವರು 14ನೇ ಅಧ್ಯಕ್ಷರು. ಈ ವಿಜಯೇಂದ್ರ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಿ ಎಂದು ತಮ್ಮ ರಾಜಕೀಯ ಎಳಸುತನವನ್ನ ಪ್ರದರ್ಶನ ಮಾಡಿದ್ದಾರೆ. ಎಂದು ಟೀಕಿಸಿದರು.ಅವರ ತಂದೆ ಯಡಿಯೂರಪ್ಪ ಅವರಿಂದ ರಾಜಕೀಯ ಕಲಿತಿದ್ದಾರೆ. ಒಳ್ಳೆ ಭವಿಷ್ಯವಿದೆ ಎಂದು ನನಗೆ ಅನಿಸಿತ್ತು. ಆದರೆ ಅವರ ಇತ್ತೀಚಿನ ಹೇಳಿಕೆಗಳನ್ನು ನೋಡುತ್ತಿದ್ದರೆ ಭೌದ್ದಿಕ ದಿವಾಳಿತನವನ್ನ ಪ್ರದರ್ಶಿಸುತ್ತಿವೆ. ಅವರ ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ದೆಹಲಿ ದಂಡಯಾತ್ರೆಯನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅನಿವಾರ್ಯವಾಗಿ ರಾಜಕೀಯ ನಿವೃತ್ತಿ...









