BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಬಿಜೆಪಿ ಸಂಸದೀಯ ಸಮಿತಿ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ ‘ಮೈಸೂರು ಚಲೋ’ ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಈ ಪಾದಯಾತ್ರೆ ಮಧ್ಯದಲ್ಲೇ ರಾಜೀನಾಮೆ ಕೊಡಲಿದ್ದಾರೆ ಎಂದರು.

ಕುಂಟು ನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ ಅವರು ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.