Sunday, December 7

ಉಪ ಚುನಾವಣೆ: ಶಿಗ್ಗಾವಿಗೆ ಬೊಮ್ಮಾಯಿ ಪುತ್ರ ಭರತ್, ಸಂಡೂರುಗೆ ಹನುಮಂತ್ ಅಭ್ಯರ್ಥಿ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಹೈಕಮಾಂಡ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಶಿಗ್ಗಾವಿ ಹಾಗೂ ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿದ್ದರಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಬೊಮ್ಮಾಯಿ ಪುತ್ರ ಭರತ್ ಅವರನ್ನು ಅಭ್ಯರ್ಥಿಯನ್ನಾಗಿ ಬಿಜೆಪಿ ಕಣಕ್ಕಿಳಿಸಿದೆ. ಘೋಷಿಸಿದೆ.

ಸಂಡೂರು ಎಸ್‌ಟಿ ಮೀಸಲು ಕ್ಷೇತ್ರಕ್ಕೆ ಬಿಜೆಪಿ ಎಸ್ ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಅವರಿಗೆ ಬಿಜೆಪಿ ಟಿಕೆಟ್ ಪ್ರಕಟಿಸಿದೆ.