
ತಂದೆಯ ಸಹಿಯನ್ನೇ ನಕಲು ಮಾಡಿದ್ದ ಆರೋಪ ಬಗ್ಗೆ ಮೊದಲು ಉತ್ತರಿಸಿ; ಪ್ರಿಯಾಂಕ್ ಬಗ್ಗೆ ಟೀಕಿಸಿದ ವಿಜಯೇಂದ್ರಗೆ ರಮೇಶ್ ಬಾಬು ಸವಾಲು
ಬೆಂಗಳೂರು: ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯ ಎಂದು ಶಾಸಕರೂ ಆದ ರಮೇಶ್ ಬಾಬು ಹೇಳಿದ್ದಾರೆ.ಪ್ರಿಯಾಂಕ ಖರ್ಗೆರವರನ್ನು ಟೀಕಿಸಲು ವಿಜಯೇಂದ್ರ ಮಾಡಿರುವ ಆಲಾಪ ನಗೆ ಪಾಟಲಿನ ಪರಮಾವಧಿ ಆಗಿರುತ್ತದೆ. ತಮ್ಮ ರಾಜಕೀಯ ಅಧಿಕಾರ ಸ್ಥಾನವನ್ನು, ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರರವರಿಗೆ, ಆರ್.ಎಸ್.ಎಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ. ಮೊದಲು ಆರ್.ಎಸ್.ಎಸ್ ನವರು ಇವರ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಸಮರ್ಥಿಸಲಿ! ನಂತರ ಅವರು ಆರೆಸ್ಸೆಸ್ ಪರವಾದ ಹೇಳಿಕೆಯನ್ನು ನೀಡಲಿ ಎಂದ...









