Friday, January 30

ಬೆಂಗಳೂರು

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ; ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣ ಬಹಿರಂಗಪಡಿಸಲು ಎಎಪಿ ಒತ್ತಾಯ

ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ; ಕೆಂಪಣ್ಣ ಆಯೋಗದ ವರದಿಯನ್ನು ತಕ್ಷಣ ಬಹಿರಂಗಪಡಿಸಲು ಎಎಪಿ ಒತ್ತಾಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಕುರಿತಂತೆ ತನಿಖೆ ನಡೆಸಿದ್ದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು. ತಕ್ಷಣ ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಆಮ್‌ ಆದ್ಮಿ ಪಕ್ಷದ ಅಧ್ಯಕ್ಷ ಜಜಗದೀಶ್ ವಿ.ಸದಂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.. ನಗರದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಪ್ ನಾಯಕ ಜಜಗದೀಶ್ ವಿ.ಸದಂ,  ಆರ್ಕಾವತಿಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಒಟ್ಟು 880 ಎಕರೆ ರಿಡೂ ಮಾಡಲಾಗಿದೆ. ಇದರ ಮೌಲ್ಯ ಅಂದಾಜು 8,000 ಕೋಟಿ ರೂ. ಆಗಿದೆ. 2014ರಲ್ಲಿ ಸಿದ್ದರಾಮಯ್ಯ ಅವರು 1952ರ ವಿಚಾರಣಾ ಆಯೋಗದ ಕಾಯ್ದೆಯ ಪ್ರಕಾರ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದ್ದರು. ನ್ಯಾ. ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಹಲವು ವರ್ಷಗಳೇ ಕಳೆದರೂ ಇದುವರೆಗೆ ಮುಖ್ಯಮಂತ್ರಿಗಳ ಕಾರ್ಯಾಲಯವು ಈ ವರದಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯವಾಗುವಂತೆ...
ಹೆಚ್ಡಿಕೆ ವಿರುದ್ದ ಎಫ್‌ಐ‌ಆರ್; ನಿಷ್ಪಕ್ಷಪಾತ ತನಿಖೆ ಬಗ್ಗೆ ಕಮೀಷನರ್ ಭರವಸೆ

ಹೆಚ್ಡಿಕೆ ವಿರುದ್ದ ಎಫ್‌ಐ‌ಆರ್; ನಿಷ್ಪಕ್ಷಪಾತ ತನಿಖೆ ಬಗ್ಗೆ ಕಮೀಷನರ್ ಭರವಸೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ದಾಖಲಾಗಿರುವ ಪ್ರಕರಣ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಉದ್ಯಮಿ ವಿಜಯ್ ಟಾಟಾ ಎಂಬವರು ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಈ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ನಡೆಸಲಾಗುವುದು ಎಂದಿದ್ದಾರೆ.​...
2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

2025ರ ಫೆಬ್ರವರಿ 10ರಿಂದ 14ರವರೆಗೆ ಬೆಂಗಳೂರಿನಲ್ಲಿ ‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಜನಪ್ರಿಯ 'ಏರೋ ಇಂಡಿಯಾ' ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಪೆಬ್ರವರಿ 10ರಿಂದ ನಡೆಯಲಿದೆ ಕೇಂದ್ರ ರಕ್ಷಣಾ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ. 2025ರ ಫೆಬ್ರವರಿ 10ರಿಂದ 14ರವರೆಗೆ ಯಲಹಂಕದ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಏರೋ ಇಂಡಿಯಾ ಆಯೋಜಿತವಾಗಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಇದಾಗಿದೆ. ರಕ್ಷಣಾ ಇಲಾಖೆ, ಭಾರತೀಯ ವಾಯು ಸೇನೆ, ಹೆಚ್.ಎ.ಎಲ್, ಡಿ.ಆರ್.ಡಿ.ಒ., ನಾಗರಿಕ ವಿಮಾನಯಾನ ಸಚಿವಾಲಯದ ಪ್ರಾಯೋಜಕತ್ವದಲ್ಲಿ ಈ ವೈಮಾನಿಕ ಪ್ರದರ್ಶನ ಏರ್ಪಾಡಾಗಿದ್ದು ಸಿದ್ದತೆಗಳು ಸಾಗಿವೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ....
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರಿನಲ್ಲಿ ವಾಸ; ಮತ್ತೆ ಮೂವರು ಪಾಕಿಸ್ತಾನಿಯರ ಬಂಧನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪಾಕಿಸ್ತಾನಿ ಪ್ರಜೆಗಳು ಅಕ್ರಮವಾಗಿ ನೆಲೆಸಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಜಿಗಣಿ ಬಳಿ ನಾಲ್ವರನ್ನು ಪೊಲೀಸರು ಬಂಧಿಸಿದ್ದರು. ಗುರುವಾರ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪೀಣ್ಯದಲ್ಲಿ ನಕಲಿ ಗುರುತಿನ ಚೀಟಿ ಹೊಂದಿ, ಬೆಂಗಳೂರಿನಲ್ಲಿ ನೆಲೆಸಿದ್ದ ಪತಿ, ಪತ್ನಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ....
ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ದಿನೇಶ್ ಗುಂಡೂರಾವ್ ವಿರುದ್ದ ಮಾನನಷ್ಟ ಕೇಸ್; ಸಾವರ್ಕರ್ ಮೊಮ್ಮಗ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಖಂಡಿಸಿರುವ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್, ವೀರ್ ಸಾವರ್ಕರ್ ಅವರು ಗೋಮಾಂಸ ಸೇವಿಸುತ್ತಿದ್ದರು" ಎಂಬುದು ಸುಳ್ಳು ಹೇಳಿಕೆ ಎಂದರು. ಗುಂಡೂರಾವ್ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಹೂಡುವುದಾಗಿ ಅವರು ತಿಳಿಸಿದ್ದಾರೆ....
ಹಣಕ್ಕಾಗಿ ಉದ್ಯಮಿಗೆ ಬೆದರಿಕೆ ಆರೋಪ; ಕೇಂದ್ರ ಸಚಿವ ಹೆಚ್ಡಿಕೆ ವಿರುದ್ದ ಎಫ್‌ಐ.ಆರ್

ಹಣಕ್ಕಾಗಿ ಉದ್ಯಮಿಗೆ ಬೆದರಿಕೆ ಆರೋಪ; ಕೇಂದ್ರ ಸಚಿವ ಹೆಚ್ಡಿಕೆ ವಿರುದ್ದ ಎಫ್‌ಐ.ಆರ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ದ ಎಫ್​ಐಆರ್ ದಾಖಲಾಗಿದೆ. 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಉದ್ಯಮಿ ವಿಜಯ್ ಟಾಟಾ ದೂರು ನೀಡಿದ್ದರು.‌ ಈ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸರು ಎಫ್‌ಐ‌ಆರ್ ದಾಖಲಿಸಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ರಮೇಶ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದೆ.‌...
‘ನಾನು ತಪ್ಪಿತಸ್ಥನಲ್ಲ’: ನ್ಯಾಯಾಲಯಕ್ಕಿಂತ ಕಾಂಗ್ರೆಸ್‌ ಪಕ್ಷ ದೊಡ್ಡದೇ? ಎಂದು ಅಶೋಕ್ ಪ್ರಶ್ನೆ

‘ನಾನು ತಪ್ಪಿತಸ್ಥನಲ್ಲ’: ನ್ಯಾಯಾಲಯಕ್ಕಿಂತ ಕಾಂಗ್ರೆಸ್‌ ಪಕ್ಷ ದೊಡ್ಡದೇ? ಎಂದು ಅಶೋಕ್ ಪ್ರಶ್ನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 'ನನ್ನನ್ನು ಭೂ ಕಬಳಿಕೆದಾರ ಎಂದು ಕರೆದಿರುವ ಕಾಂಗ್ರೆಸ್‌ನ ನಾಲ್ಕು ಸಚಿವರು ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಆದರೆ ಇದೇ ಕಾಂಗ್ರೆಸ್‌ನ ಕೇಂದ್ರ ಸರ್ಕಾರ ಅಂದು ನೇಮಿಸಿದ್ದ ರಾಜ್ಯಪಾಲರು ಮತ್ತು ಘನ ನ್ಯಾಯಾಲಯ ನಾನು ತಪ್ಪಿತಸ್ಥ ಅಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದರೂ ಕಾಂಗ್ರೆಸ್‌ ಪಕ್ಷ ನ್ಯಾಯಾಲಯಕ್ಕಿಂತ ದೊಡ್ಡದಾಗಲು ಯತ್ನಿಸಿ ತೀರ್ಪು ನೀಡಲು ಮುಂದಾಗಿದೆ' ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ತಮ್ಮ ಮೇಲಿನ ಆರೋಪ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅಶೋಕ್, ಕಾಂಗ್ರೆಸ್‌ ಸರ್ಕಾರದ ನಾಲ್ವರು ಸಚಿವರು ನನ್ನ ಬಗ್ಗೆ ಕಳಂಕ ಸೃಷ್ಟಿಸಲು ಹಳೆಯ ಪ್ರಕರಣದ ಬಗ್ಗೆ ಮಾತನಾಡಿದ್ದಾರೆ. ಇದರಲ್ಲಿ ನೈತಿಕತೆಯ ಪ್ರಶ್ನೆ ಎತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣದಲ್ಲಿ ಅರಿಶಿನ-ಕುಂಕುಮದ ಮೂಲಕ ಭೂಮಿ ಬಂದಿದೆ. ಆದರೆ ನಾನು ಹಣ ಕೊಟ್ಟು ಭೂಮಿ ಖರೀದಿ ಮಾಡಿದ್ದೇನೆ. ಈ ಪ್ರಕರಣದ ಬಗ್ಗೆ ಆರೋಪ ಬಂದಾಗ ರಾಜ್ಯದಲ್ಲಿ ಕಾಂಗ್ರೆಸ್‌ನ ಕೇಂದ್ರ ಸರ್ಕಾರವೇ ನೇಮಿಸಿದ ರಾಜ್ಯಪಾಲ ಹಂಸರಾಜ್‌ ಭಾರಧ್ವಾಜ್‌ ಇದ್ದರು. ಅವರು ಕೂಡ ಈ ಪ್ರಕರಣವನ್ನು ತನಿಖೆಗೆ ವಹ...
ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: ವೀರ ಸಾವರ್ಕರ್ ಗೋಮಾಂಸ ತಿನ್ನುತ್ತಿದ್ದರು ಎಂಬ ಹೇಳಿಕೆಯಿಂದಾಗಿ ಸಚಿವ ದಿನೇಶ್ ಗುಂಡೂರಾವ್ ಇದೀಗ ವಿವಾದದ ಸುಳಿಯಲ್ಲಿ ಸಿಲುಕಿದ್ದಾರೆ. ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದ ಸಚಿವ ದಿನೇಶ್ ಗುಂಡೂರಾವ್, ವೀರ್ ಸಾವರ್ಕರ್ ಅವರ ಸಿದ್ಧಾಂತದ ಕುರಿತು ಹೇಳಿಕೆ ನೀಡಿದ್ದರು. ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಮಾಂಸ ಸೇವಿಸುತ್ತಿದ್ದರು ಎಂದು ಸಚಿವರು ಹೇಳಿಕೆ ನೀಡಿದ್ದರು. ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆಯನ್ನು ಬಿಜೆಪಿ ಖಂಡಿಸಿದೆ. ‘Savarkar was a beef eater’?! 😡 Shocking to see Congress leaders like @dineshgrao spreading lies about Veer Savarkar ! His sacrifices for India’s freedom cannot be tarnished by cheap political narratives. Congress’s hatred for Marathas and Maharashtra is clearly visible!… pic.twitter.com/8Q2yNYY5Pb — BJP Karnataka (@BJP4Karnataka) October 3, 2024 ಇದೇ ವೇಳೆ, ದಿನೇಶ್ ಗುಂಡೂರಾವ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ವಿ...
ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ನಟಿ ರಾಧಿಕಾ ಕುಮಾರಸ್ವಾಮಿಯಾ ‘ಭೈರಾದೇವಿ’ ಅವತಾರಕ್ಕೆ ವೀಕ್ಷಕರು ಫಿದಾ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯದ 'ಭೈರಾದೇವಿ' ಚಿತ್ರ ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಈ ಸಿನಿಮಾ ಬಿಡುಗಡೆಯಾಗಿದ್ದು ಸಿನಿಲೋಕದಲ್ಲಿ ವಿಶೇಷ ಪ್ರಯೋಗ ಎಂದೇ ವೀಕ್ಷಕರು ಪ್ರತಿಪಾದಿಸಿದ್ದಾರೆ. 'ಭೈರಾದೇವಿ' ಟ್ರೈಲರ್ ಕೂಡಾ ನೆಟ್ಟಿಗರ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀಜೈ ನಿರ್ದೇಶಿಸಿರುವ ಈ ಸಿನಿಮಾದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಜೊತೆ ರಮೇಶ್ ಅರವಿಂದ್ ಕೂಡಾ ಅಭಿನಯಿಸಿದ್ದಾರೆ. https://www.youtube.com/watch?v=Jr3up-ZFm4A&t=4s...
ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ಅರ್ಷದ್ ವಾರ್ಸಿ, ಮೆಹರ್ ವಿಜ್ ನಟನೆಯ ‘ಬಂದಾ ಸಿಂಗ್ ಚೌಧರಿ’ ಬಗ್ಗೆ ವೀಕ್ಷಕರ ಲೈಕ್ಸ್ ಹೀಗಿದೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ಅರ್ಷದ್ ವಾರ್ಸಿ ಮತ್ತು ಮೆಹರ್ ವಿಜ್ ನಟನೆಯ ಬಂದಾ ಸಿಂಗ್ 'ಚೌಧರಿ' ಚಿತ್ರ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ವೀಕ್ಷಕರು ಕೂಡಾ ಸಿನಿಮಾ ಬಗ್ಗೆ ಫಿದಾ ಆಗಿದ್ದಾರಂತೆ. ಈ ಸಿನಿಮಾದ ಟ್ರೈಲರ್ ಕೂಡಾ ಭಾರೀ ಪ್ರತಿಕ್ರಿಯೆ ಗಿಟ್ಟಿಸಿಕೊಂಡಿದೆ. ಲೈಕ್ಸ್ ಕೂಡಾ ಹೆಚ್ಚಿನ ಪ್ರಮಾಣದಲ್ಲಿ ಸಿಕ್ಕಿದೆ. ಅದರಂತೆ ಸಿನಿಮಾ ಬಗ್ಗೆಯೂ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಈ ಚಿತ್ರವನ್ನು ಅಭಿಷೇಕ್ ಸಕ್ಸೆನಾ ನಿರ್ದೇಶಿಸಿದ್ದಾರೆ. https://www.youtube.com/watch?v=4noS-o_9q0o&t=2s...