ವಿವಾದದ ಹೇಳಿಕೆ ಮೂಲಕ ಮೋದಿ ಸರ್ಕಾರ, ಸಚಿವ ಸ್ಥಾನಕ್ಕೆ HDK ಮಸಿ; ರಮೇಶ್ ಬಾಬು ಟೀಕಾಸ್ತ್ರ
ಬೆಂಗಳೂರು: ಮುಡಾ ವಿವಾದದಲ್ಲಿ ಹತಾಶ ಮನೋಭಾವದಿಂದ ಕೇಂದ್ರ ಸಚಿವ ಕುಮಾರಸ್ವಾಮಿರವರು ತಮ್ಮ ಸಚಿವ ಸ್ಥಾನಕ್ಕೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ತಾವೇ ಮಸಿ ಬಳಿಯುತ್ತಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ.
ಮಾಧ್ಯಮ ಹೇಳಿಕೆ ಮೂಲಕ ಪ್ರತಿಕ್ರಿಯಿಸಿರುವ ರಮೇಶ್ ಬಾಬು, ಕುಮಾರಸ್ವಾಮಿರವರು ಮೂಡ ಪ್ರಕರಣದಲ್ಲಿ ಮುಖ್ಯಮಂತ್ರಿಯ ಪತ್ನಿ ನಿವೇಶನಗಳನ್ನು ವಾಪಸ್ಸು ನೀಡಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳನ್ನು ಮತ್ತು ಮೂಡ ಆಯುಕ್ತರನ್ನು ರಾಜಕೀಯವಾಗಿ ಟೀಕಿಸಿರುವುದು ಅವರ ಹತಾಶವದದ ಸಂಕೇತವಾಗಿರುತ್ತದೆ ಎಂದಿದ್ದಾರೆ.
ತನಿಖಾ ಸಂಸ್ಥೆಗಳು ಮತ್ತು ಸರ್ಕಾರಿ ಅಧಿಕಾರಿಗಳನ್ನು ತಮ್ಮ ಮೂಗಿನ ನೇರಕ್ಕೆ ವರ್ತಿಸುವ ರೀತಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರು ಬೇದರಿಸುತ್ತಿರುವುದು, ತನಿಖೆಯ ಹಾದಿಯನ್ನು ತಪ್ಪಿಸುವ ಉದ್ದೇಶವಾಗಿರುತ್ತದೆ. ಕರ್ನಾಟಕ ಹೈ ಕೋರ್ಟಿನ ತೀರ್ಪಿನಲ್ಲಿ ಮುಖ್ಯಮಂತ್ರಿ ಪತ್ನಿಯು ಪಕ್ಷಗಾರರು ಆಗಿರುವುದಿಲ್ಲ. ಮೂಡ ಹಗರಣದಲ್ಲಿ ನಿವೇಶನಗಳನ್ನು ವಾಪಸ್ಸು ನೀಡುವ ನಿರ್ಧಾರ ಅವರ ವೈಯಕ್ತಿಕ ನಿರ್...



