Friday, January 30

ಬೆಂಗಳೂರು

‘ಸರ್ಕಾರ ಪತನಗೊಳಿಸಿ ಸಿಎಂವಾಗಲು ಕೋಟಿ ರೂ’; ಬಿಜೆಪಿ ನಾಯಕನ ವಿರುದ್ದ ಕಾಂಗ್ರೆಸ್ ದೂರು

‘ಸರ್ಕಾರ ಪತನಗೊಳಿಸಿ ಸಿಎಂವಾಗಲು ಕೋಟಿ ರೂ’; ಬಿಜೆಪಿ ನಾಯಕನ ವಿರುದ್ದ ಕಾಂಗ್ರೆಸ್ ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಲು ಯತ್ನ ನಡೆದಿದೆ ಎಂದೂ, ಕೆಲವರು ಮುಖ್ಯಮಂತ್ರಿಯಾಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ. ಬೆಂಗಳೂರಿನ ಹೈಗ್ರೌಂಡ್ ಪೊಲೀಸರಿಗೆ ಕಾಂಗ್ರೆಸ್ ಹಿರಿಯವನಾಯಕ ಉತ್ತಪ್ಪ ನೇತೃತ್ವದ ನಿಯೋಗ ಸೋಮವಾರ ದೂರು ನೀಡಿದೆ. ಸೆಪ್ಟೆಂಬರ್ 29ರಂದು ದಾವಣಗೆರೆಯಲ್ಲಿ ಯತ್ನಾಳ್‌ ಅವರು ಈ ಹೇಳಿಕೆ ನೀಡಿದ್ದರು. ಅವರ ವಿರುದ್ದ ಎಫ್‌ಐಆರ್ ದಾಖಲಿಸಬೇಕು ಹಾಗೂ 1,000 ಕೋಟಿ ಹಣದ ಮೂಲ ಯಾವುದು ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ....
ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ಗಾಂಧೀಜಿ ನೇತೃತ್ವಕ್ಕೆ ನೂರು ವರ್ಷ; ಕಾಂಗ್ರೆಸ್ ಪಕ್ಷದಿಂದ ʼಗಾಂಧಿ ನಡಿಗೆʼ ಕಾರ್ಯಕ್ರಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: “ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನದ ಅಧ್ಯಕ್ಷತೆ ಜತೆಗೆ ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿಕೊಂಡು 100 ವರ್ಷಗಳಾಗಿವೆ. ಈ ನೆನಪಿಗೆ ರಾಜ್ಯಾದ್ಯಂತ ʼಗಾಂಧಿ ನಡಿಗೆʼ, ʼಸ್ವಚ್ಚತಾ ಪ್ರತಿಜ್ಞಾವಿಧಿʼ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜತೆಗೆ ಇಡೀ ವರ್ಷ ನಾನಾ ಕಾರ್ಯಕ್ರಮಗಳನ್ನು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಸೋಮವಾರ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದಿಂದ ರಾಜ್ಯದ ಉದ್ದಗಲಕ್ಕೂ ಅಕ್ಟೋಬರ್ 2 ರ ಬೆಳಿಗ್ಗೆ 11 ಗಂಟೆಗೆ ಎಂ.ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ, ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ತನಕ ʼಗಾಂಧಿ ಜ್ಯೋತಿ ಪಾದಯಾತ್ರೆʼ ನಡೆಸಲಾಗುವುದು” ಎಂದರು. “ಪಾದಯಾತ್ರೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿವಿಧ ಸಂಸ್ಥೆಗಳ ಸದಸ್ಯರು ಭಾಗವಹಿಸಲಿದ್ದಾರೆ. ಅಲ್ಲದೇ ರಾಜ್ಯದ ಎಲ್ಲಾ ಜಿಲ್ಲಾ, ತಾಲ್ಲೂಕು ಮತ್ತು ಬ್ಲಾಕ್ ಮಟ್ಟದಲ್ಲಿ ''ಗಾಂಧಿ ನಡಿಗೆ'' ಕಾರ್ಯಕ್ರಮ ನಡೆಯುತ್ತದೆ. ...
ಭೂಸ್ವಾಧೀನ ಅಕ್ರಮ ಆರೋಪದ ಪ್ರತಿಧ್ವನಿ; ದೂರು ಪರಿಶೀಲನೆಯಲ್ಲಿರುವಾಗಲೇ ಅಧಿಕಾರಿಯ ಪರ ನಿಂತ ಸಚಿವ; ಭೂಸ್ವಾಧೀನಾಧಿಕಾರಿ ವರ್ಗಾವಣೆ ಬೇಡ ಎಂದು ಸಿಎಂ ಮೇಲೆ ಒತ್ತಡ!

ಭೂಸ್ವಾಧೀನ ಅಕ್ರಮ ಆರೋಪದ ಪ್ರತಿಧ್ವನಿ; ದೂರು ಪರಿಶೀಲನೆಯಲ್ಲಿರುವಾಗಲೇ ಅಧಿಕಾರಿಯ ಪರ ನಿಂತ ಸಚಿವ; ಭೂಸ್ವಾಧೀನಾಧಿಕಾರಿ ವರ್ಗಾವಣೆ ಬೇಡ ಎಂದು ಸಿಎಂ ಮೇಲೆ ಒತ್ತಡ!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಭೂಸ್ವಾದೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವಾಗಲೇ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ ವರ್ಗಾವಣೆ ಮಾಡದಂತೆ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸರ್ಕಾರಕ್ಕೆ ಮಾಡಿರುವ ಶಿಫಾರಸು ಭಾರೀ ಚರ್ಚೆಗೆ ಕಾರಣವಾಗಿದೆ. ಕೆ.ಎ.ಎಸ್.(ಕಿರಿಯ ಶ್ರೇಣಿ) ಅಧಿಕಾರಿಯಾಗಿರುವ ಬಿಎಂಐಸಿಪಿ ಭೂಸ್ವಾಧೀನಾಧಿಕಾರಿ-2, ಬಾಳಪ್ಪ ಹಂದಿಗುಂದ ಅವರನ್ನು ವರ್ಗಾವಣೆ ಮಾಡಬಾರದೆಂದು ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಗೆ ಹಾಗೂ ಡಿಪಿಎಆರ್ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.. ಬಾಳಪ್ಪ ಹಂದಿಗುಂದ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಬೆಂಗಳೂರು ಇಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯಲ್ಲಿ ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಳಿಸಿ, Foxconn Company ಹಾಗೂ Knowledge Health Innovation and Research (KHIR) ಭೂಮಿಯನ್ನು ಹಸ್ತಾಂತರಿಸಬೇಕಾಗಿರುವುದರಿಂದ, ಸದರಿಯವರ ಸೇವೆಯು ಮಂಡಳಿ...
ಸಿಎಂ ವಿರುದ್ಧದ ಮುಡಾ, ಬಿಜೆಪಿ ಅವಧಿಯ ಎಲ್ಲಾ ಹಗರಣಗಳ ತನಿಖೆಗಳನ್ನು CBIಗೆ ಒಪ್ಪಿಸಲು ನಿರ್ದೇಶನ ನೀಡಿ; ರಾಜ್ಯಪಾಲರಿಗೆ CRF ದೂರು

ಸಿಎಂ ವಿರುದ್ಧದ ಮುಡಾ, ಬಿಜೆಪಿ ಅವಧಿಯ ಎಲ್ಲಾ ಹಗರಣಗಳ ತನಿಖೆಗಳನ್ನು CBIಗೆ ಒಪ್ಪಿಸಲು ನಿರ್ದೇಶನ ನೀಡಿ; ರಾಜ್ಯಪಾಲರಿಗೆ CRF ದೂರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಹೀಗಿರುವಾಗ ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲು ನಿರ್ದೇಶನ ನೀಡಬೇಕೆಂದು 'ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ರಾಜ್ಯಪಾಲರಿಗೆ ದೂರು ನೀಡಿದೆ. ಮುಡಾ ಅಕ್ರಮ ಮಾತ್ರವಲ್ಲ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆಯೂ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ 'ಸಿಟಿಜನ್ ರೈಟ್ಸ್ ಫೌಂಡೇಷನ್’ ಒತ್ತಾಯಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ನಿವೇಶನ ಹಂಚಿಕೆ ಅಕ್ರಮ ಮೂಲಕ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಪ್ರಕರಣದ ಬಗ್ಗೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ಕೋರಿ 'ಸಿಟಿಜನ್ ರೈಟ್ಸ್ ಫೌಂಡೇಷನ್’ದ...
ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ನಿರ್ಮಲಾ ಸೀತಾರಾಮನ್‌ ಪ್ರಕರಣವೇ ಬೇರೆ ರೀತಿ, ಸಿದ್ದರಾಮಯ್ಯ ಹಗರಣವೂ ಬೇರೊಂದು ರೀತಿ..!

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು. ಎಲ್ಲ ಪಕ್ಷಗಳು ದೇಣಿ...
‘ಹಂದಿಗಳೊಂದಿಗೆ ಎಂದೂ ಜಗಳಕ್ಕೆ ಇಳಿಯಬೇಡಿ..’ ಎಂದು ಪೊಲೀಸರಿಗೆ ಕರೆ ಕೊಟ್ಟ ಎಡಿಜಿಪಿ; ಕೇಂದ್ರ ಸಚಿವ ಹೆಚ್ಡಿಕೆಗೆ ಹೀಗೊಂದು ಟಾಂಗ್ ಕೊಟ್ಟ IPS ಅಧಿಕಾರಿ

‘ಹಂದಿಗಳೊಂದಿಗೆ ಎಂದೂ ಜಗಳಕ್ಕೆ ಇಳಿಯಬೇಡಿ..’ ಎಂದು ಪೊಲೀಸರಿಗೆ ಕರೆ ಕೊಟ್ಟ ಎಡಿಜಿಪಿ; ಕೇಂದ್ರ ಸಚಿವ ಹೆಚ್ಡಿಕೆಗೆ ಹೀಗೊಂದು ಟಾಂಗ್ ಕೊಟ್ಟ IPS ಅಧಿಕಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುವ ಅಬ್ಬರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಬಗ್ಗೆಯೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಎಸ್​ಐಟಿ ಎಡಿಜಿಪಿ ಚಂದ್ರಶೇಖರ್ ಅವರ ಭ್ರಷ್ಟಾಚಾರ ಆರೋಪ ಬಗ್ಗೆ ಪ್ರಕರಣ ದಾಖಲಾಗಿರುವ ಬಗ್ಗೆ ಪ್ರಸ್ತಾಪಿಸಿರುವ ಹೆಚ್ಡಿಕೆ, ಇಡಿ ತನಿಖೆ ಬಗ್ಗೆಯೂ ಪ್ರತಿಪಾದಿಸಿದ್ದಾರೆ. ಕುಮಾರಸ್ವಾಮಿ ಹೇಳಿಕೆಗಳಿಗೆ ಖಾರವಾಗಿ ಪ್ರತಿಕ್ರಿಯಿಸಿರುವ ಎಡಿಜಿಪಿ ಚಂದ್ರಶೇಖರ್, 'ಹಂದಿಗಳ ಜೊತೆಗೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೀವಿ' ಎಂದಿದ್ದಾರೆ. ತಮ್ಮ ಸಹೋದ್ಯೋಗಿ ಪೊಲೀಸರಿಗೆ ಬಹಿರಂಗ ಪತ್ರ ಬರೆದು ಧೈರ್ಯ ತುಂಬಿರುವ ಎಡಿಜಿಪಿ ಚಂದ್ರಶೇಖರ್, ಕುಮಾರಸ್ವಾಮಿ ನನ್ನ ಮೇಲೆ ಸಾಕಷ್ಟು ಆರೋಪ ಮಾಡಿದ್ದಾರೆ. ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂದಿದ್ದಾರೆ ಎಂದಿದ್ದಾರೆ. ಹೆಚ್‌.ಡಿ.ಕುಮಾರಸ್ವಾಮಿ ಜಾಮೀನಿನ ಮೇಲಿರುವ ಆರೋಪಿ. ಅವರಿಂದ ನಮ್ಮನ್ನು ಕುಗ್ಗಿಸುವ ಪ್ರಯತ್ನ ನಡೆದಿದೆ. ನಮ್ಮಲ್ಲಿ ಭಯ ಹುಟ್ಟಿಸುವ ಉದ್ದೇಶ ಅವರದ್ದು. ಎಷ್ಟೇ ಉನ್ನತ ಸ್ಥಾನದಲ್ಲಿದ್ದರೂ ಅವರೊಬ್ನ ಆರೋಪಿಯಾಗಿದ್ದಾರೆ. ...
ಬಿಜೆಪಿ ಶಾಸಕ ಮುನಿರತ್ನ ನಿವಾಸಕ್ಕೆ ಎಸ್‌‍ಐಟಿ ಲಗ್ಗೆ

ಬಿಜೆಪಿ ಶಾಸಕ ಮುನಿರತ್ನ ನಿವಾಸಕ್ಕೆ ಎಸ್‌‍ಐಟಿ ಲಗ್ಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅತ್ಯಾಚಾರ, ಜಾತಿ ನಿಂದನೆ ಆರೋಪದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಶನಿವಾರ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ. ಶನಿವಾರ ಬೆಳಿಗ್ಗೆ ಮುನಿರತ್ನ ಮನೆಗೆ ಲಗ್ಗೆ ಹಾಕಿರುವ ವಿಶೇಷ ತನಿಖಾ ತಂಡದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಸಮೀಪದ ವೈಯಾಲಿ ಕಾವಲ್‌ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸ ಹಾಗೂ ಕಚೇರಿಗೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ದಾಳಿ ನಡೆಸಿದೆ. ಎಫ್ಎಸ್ಎಲ್​ ತಂಡದ ಉಪಸ್ಥಿತಿಯಲ್ಲಿ ಎಸ್​ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ ಎನ್ನಲಾಗಿದೆ....
lಕಿದ್ವಾಯಿ ಆಸ್ಪತ್ರೆಯಲ್ಲಿ ಥಲಸ್ಸೇಮಿಯ ಬಾಲಕನಿಗೆ ಮೊದಲ ಬಾರಿ ಅಸ್ಥಿಮಜ್ಜೆ ಚಿಕಿತ್ಸೆ ಯಶಸ್ವಿ

lಕಿದ್ವಾಯಿ ಆಸ್ಪತ್ರೆಯಲ್ಲಿ ಥಲಸ್ಸೇಮಿಯ ಬಾಲಕನಿಗೆ ಮೊದಲ ಬಾರಿ ಅಸ್ಥಿಮಜ್ಜೆ ಚಿಕಿತ್ಸೆ ಯಶಸ್ವಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಮ್ಮ ರಾಜ್ಯದ ಹೆಮ್ಮೆಯ ಸರ್ಕಾರಿ ಆಸ್ಪತ್ರೆಯಾದ ಕಿದ್ವಾಯಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಆಂಕೊಲಾಜಿ ಸಂಸ್ಥೆ ಈಗ ದಾಖಲೆ ನಿರ್ಮಿಸಿದೆ. ಅನುವಂಶಿಕ ರಕ್ತ ಕಾಯಿಲೆಗಳಲ್ಲಿ ಒಂದಾಗಿರುವ ಥಲಸ್ಸೆಮಿಯಾಕ್ಕೆ ಮೊದಲ ಬಾರಿಗೆ ಮಕ್ಕಳ ಅಸ್ಥಿಮಜ್ಜೆಯ ಕಸಿಯನ್ನು (ಬೋನ್ ಮ್ಯಾರೋ ಟ್ರಾನ್ಸ್‌ ಪ್ಲಂಟ್‌ –BMT) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು ಶ್ಲಾಘನೀಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಕಿದ್ವಾಯಿ ಸಂಸ್ಥೆಯಲ್ಲಿ ಈ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ ವೈದ್ಯರಿಗೆ ಸಚಿವರು ಸಂಸ್ಥೆಗೆ ಶುಕ್ರವಾರ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು. ರಾಜ್ಯದ ದುರ್ಬಲ ವರ್ಗದ ಜನರಿಗೆ ಅಸ್ಥಿಮಜ್ಜೆ ಕಸಿ ಸೇವೆಗಳು ಸುಲಭವಾಗಿ ಲಭ್ಯವಾಗುವಂತೆ ಮತ್ತು ಕೈಗೆಟುಕುವಂತೆ ಮಾಡುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಿದೆ. ಮುಂದಿನ ದಿನಗಳಲ್ಲಿಯೂ ಈ ರೀತಿಯ ವಿಶೇಷ ಯೋಜನೆಗಳನ್ನು ಜಾರಿಗೆ ತರಲು ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರು ತಿಳಿಸಿದರು. ಸಾಮಾನ್ಯವಾಗಿ, ಖಾಸಗಿ ಆಸ್ಪತ್ರೆಗಳಲ್ಲಿ, ಅಸ್ಥಿ...
ದೊಡ್ಡಬಳ್ಳಾಪುರ; ಬೆಳೆಗಳ ಮಧ್ಯೆ ಗಾಂಜಾ ಗಿಡಗಳು..!

ದೊಡ್ಡಬಳ್ಳಾಪುರ; ಬೆಳೆಗಳ ಮಧ್ಯೆ ಗಾಂಜಾ ಗಿಡಗಳು..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ: ಬೆಳೆಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಸಿ, ಪೋಷಣೆ ಮಾಡಿ ಬೆಳೆಸಿರುವುದನ್ನು ಗ್ರಾಮಾಂತರ ಠಾಣಾ ಪೊಲೀಸರು ಪತ್ತೆ ಹಚ್ಚಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ, ತೂಬಗೆರೆ ಹೋಬಳಿ, ಗೆದ್ದಲಪಾಳ್ಯ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಎಂಬ ವ್ಯಕ್ತಿ ತನ್ನ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಅನೇತೃತ್ವದ ತಂಡ ದಾಳಿ ನಡೆಸಿ, ಸುಮಾರು 8 ಕೆಜಿ 700 ಗ್ರಾಂ ತೂಕದ, ಒಟ್ಟು 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ....
ಹಿಂದೆ ಬಿಎಸ್‌ವೈ ರಾಜೀನಾಮೆ ನೀಡಿದ್ದರೇ? ಬಿಜೆಪಿ ನಾಯಕರಿಗೆ ಮಂಜುನಾಥ ಭಂಡಾರಿ ಪ್ರಶ್ನೆ

ಹಿಂದೆ ಬಿಎಸ್‌ವೈ ರಾಜೀನಾಮೆ ನೀಡಿದ್ದರೇ? ಬಿಜೆಪಿ ನಾಯಕರಿಗೆ ಮಂಜುನಾಥ ಭಂಡಾರಿ ಪ್ರಶ್ನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮುಡಾ ಪ್ರಕರಣದ ಕಾರಣಕ್ಜಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿಲ್ಲ, ಅವರ ರಾಜೀನಾಮೆ ಕೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ನೀಡುವ ಅಗತ್ಯವೂ ಇಲ್ಲ. ರಾಜಕೀಯಕ್ಕೆ ಕಳಂಕ ತರಲು ಹೊರಟಿರುವ ಬಿಜೆಪಿ ವಿರುದ್ದ ಸಿಎಂ ಕಾನೂನು ಹೋರಾಟ ನಡೆಸಲಿದ್ದಾರೆ. ಈ ಹೋರಾಟದಲ್ಲಿ ಸಿದ್ದರಾಮಯ್ಯ ಗೆಲುವು ಸಾಧಿಸಲಿದ್ದಾರೆ ವಿಶ್ವಾಸ ವ್ಯಕ್ತಪಡಿಸಿದರು. ಬಿ.ಎಸ್‌.ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಚೆಕ್‌ ಮೂಲಕ ಲಂಚ ಸ್ವೀಕರಿಸಿದ ಹಾಗೂ ಡಿನೋಟಿಫಿಕೇಶನ್‌ ಪ್ರಕರಣಗಳಲ್ಲಿ ಕುರಿತಂತೆ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾಗ ಲೋಕಾಯುಕ್ತದಲ್ಲಿ ಎಫ್‌ಐಆರ್‌ ದಾಖಲಾದರೂ ರಾಜೀನಾಮೆ ನೀಡಿರಲಿಲ್ಲ. ಲೋಕಾಯುಕ್ತ ತನಿಖೆಯಲ್ಲಿ ತಪ್ಪಿತಸ್ಥ ಎಂದು ದೃಢಪಟ್ಟ ಬಳಿಕವಷ್ಟೇ ರಾಜೀನಾಮೆ ನೀಡಿದ್ದರು ಎಂದು ಮಂಜುನಾಥ ಭಂಡಾರಿ ನೆನಪಿಸಿದರು. ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿನ ಸರ್ಕಾರ ಪತನಗೊಳಿಸುವ ಷಡ್ಯಂ...