Friday, January 30

ಬೆಂಗಳೂರು

‘ಮೋದಿ ರಾಜೀನಾಮೆ ನೀಡಿದ್ದರೇ? ಹೆಚ್ಡಿಕೆ ರಾಜೀನಾಮೆ ನೀಡಿದ್ದಾರ? ನಾನೇಕೆ ರಾಜೀನಾಮೆ ನೀಡಲಿ?’ ಸಿದ್ದರಾಮಯ್ಯ ಪ್ರಶ್ನೆ

‘ಮೋದಿ ರಾಜೀನಾಮೆ ನೀಡಿದ್ದರೇ? ಹೆಚ್ಡಿಕೆ ರಾಜೀನಾಮೆ ನೀಡಿದ್ದಾರ? ನಾನೇಕೆ ರಾಜೀನಾಮೆ ನೀಡಲಿ?’ ಸಿದ್ದರಾಮಯ್ಯ ಪ್ರಶ್ನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ನಿವೇಶನ ಪ್ರಕರಣದ ತನಿಖೆಗೆ ನ್ಯಾಯಾಲಯ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಆದರೆ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ, ನಾನ್ಯಾಕೆ ರಾಜೀನಾಮೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ನಾಯಕರ ಆಗ್ರಹ ಕುರಿತಂತೆ ಪ್ರತಿಕ್ರಿಸಿದರು. ರಾಜೀನಾಮೆ ನೀಡಲ್ಲ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇನೆ ಎಂದರು. 'ನಾನು ಯಾವುದೇ ತಪ್ಪು ಮಾಡಿಲ್ಲ. ಸಿಎಂ ಸ್ಥಾನದಲ್ಲಿ ಮುಂದುವರಿಯಲು ಮುಜುಗರವಾಗುವುದಿಲ್ಲವೇ ಎಂದು ಕೇಳಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಗೋಧ್ರಾ ಹತ್ಯಾಕಾಂಡ ಆರೋಪದಲ್ಲಿ ಸಿಲುಕಿದ್ದ ಮೋದಿ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರೇ ಎಂದು ಪ್ರಶ್ನಿಸಿದರು. ಇಂದು ಮೋದಿ ಸರ್ಕಾರದ ಸಂಪುಟದಲ್ಲಿ ಸಚಿವರಾಗಿರುವ ಕುಮಾರಸ್ವಾಮಿ ಮೇಲೆ ಆರೋಪಗಳಿವೆಯಲ್ಲವೇ, ಅವರು ಜಾಮೀನು ಮೇಲೆ ಇದ್ದಾರೆ. ಅವರು ರಾಜೀನಾಮೆ ನೀಡಿದ...
ಆರೋಗ್ಯ ರಕ್ಷಣೆಯಲ್ಲಿ ರೊಬೊಟಿಕ್ ಸರ್ಜರಿ ಪರಿಣಾಮಕಾರಿ!

ಆರೋಗ್ಯ ರಕ್ಷಣೆಯಲ್ಲಿ ರೊಬೊಟಿಕ್ ಸರ್ಜರಿ ಪರಿಣಾಮಕಾರಿ!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಆರೈಕೆ ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯು (ಆರ್ಎಎಸ್) ಭವಿಷ್ಯದಲ್ಲಿ ಆರೋಗ್ಯ ರಕ್ಷಣೆಯಲ್ಲಿ ಕ್ರಾಂತಿ ಮಾಡುವ ನಿರೀಕ್ಷೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಎಂಬೆಸ್ಸಿ ಗಾಲ್ಫ್ ಲಿಂಕ್ಸ್‌ನಲ್ಲಿ ಇಂಟ್ಯೂಟಿವ್ಸ್ ಗ್ಲೋಬಲ್ ಕೆಪಾಬಿಲಿಟಿ ಸೆಂಟರ್ (ಜಾಗತಿಕ ಸಾಮರ್ಥ್ಯ ಕೇಂದ್ರ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಜಾಗತಿಕ ಮಟ್ಟದಲ್ಲಿ ಈಗ ವೈದ್ಯಕೀಯ ಕೇಂದ್ರಗಳಲ್ಲಿ ಸೂಕ್ತ ಆರೈಕೆ ಮತ್ತು ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಇಂಟ್ಯೂಟಿವ್, ಈ ಕ್ಷೇತ್ರದಲ್ಲಿ ಜಾಗತಿಕ ತಂತ್ರಜ್ಞಾನ ಹೊಂದಿದ್ದು ಮತ್ತು ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿದೆ. ಆರೋಗ್ಯ ಆವಿಷ್ಕಾರದ ಪ್ರಗತಿಗೆ ಇನ್ನಷ್ಟು ಉತ್ತೇಜನ ನೀಡಲು ಈ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಇದರಿಂದ ಸಾಕಷ್ಟು ಪ್ರಯೋಜನಗಳಾಗಲಿವೆ ಎಂದರು. “ನಾವು ಇಂಟ್ಯೂಟಿವ್‌ನ ಜಾಗತಿಕ ಸಾಮರ್ಥ್ಯ ಕೇಂದ್ರವನ್ನು ಉದ್ಘಾಟಿಸುತ್ತಿರುವುದು ಮಹತ್ವದ ...
ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದರೆ ಕೋರ್ಟ್‌ಗಳು ಏಕೆ ತೀರ್ಪು ನೀಡುತ್ತಿದ್ದವೇ?

ಮುಡಾ ಕೇಸ್ ರಾಜಕೀಯ ಪ್ರೇರಿತವಾಗಿದ್ದರೆ ಕೋರ್ಟ್‌ಗಳು ಏಕೆ ತೀರ್ಪು ನೀಡುತ್ತಿದ್ದವೇ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್‌ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈಕೋರ್ಟ್‌ನಿಂದ ತೀರ್ಪು ಬಂದ ನಂತರವೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿಲ್ಲ. ಬಿ.ಎಸ್‌.ಯಡಿಯೂರಪ್ಪ ಮೇಲೆ ಆರೋಪ ಬಂದಾಗ ಇವರೇ ರಾಜೀನಾಮೆಗೆ ಒತ್ತಾಯಿಸಿದ್ದರು. ತನಿಖೆಗೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದೂ ಹೇಳಿದ್ದರು. ಹಾಗೆಯೇ ಈಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿದೆ ಎಂದರು. ಕೆ.ಎಸ್‌.ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗಲೂ ಇದೇ ರೀತಿ ವಿಧಾನಸಭೆಯಲ್ಲಿ ಪ್ರತಿಭಟಿಸಿದ್ದರು. ಸಚಿವರಾಗಿದ್ದ ಬಿ.ನಾಗೇಂದ್ರ ಮೇಲೆ ಆರೋಪ ಬಂದು ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಮಾತ್ರ ರಾಜೀನಾಮೆ ನೀಡುತ್ತಿಲ್ಲ ಎಂದರು. ವಾಲ್ಮೀಕಿ ನಿಗಮದ ಪರಿಶಿಷ್ಟ ಪಂಗಡದವರ ಹಣ ದುರ್ಬಳಕೆಯಾಗ...
ದೊಡ್ಡಬಳ್ಳಾಪುರ: ಹುಲುಕುಡಿ ಬೆಟ್ಟದ ತಪ್ಪಲಲ್ಲಿ ಸೆರೆಸಿಕ್ಕ ಚಿರತೆ

ದೊಡ್ಡಬಳ್ಳಾಪುರ: ಹುಲುಕುಡಿ ಬೆಟ್ಟದ ತಪ್ಪಲಲ್ಲಿ ಸೆರೆಸಿಕ್ಕ ಚಿರತೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ : ಕಳೆದ ಕೆಲ ದಿನಗಳಿಂದ ಹುಲುಕುಡಿ ಬೆಟ್ಟದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಚಿರತೆಯನ್ನ ಸೆರೆ ಹಿಡಿಯಲು ಇಡಲಾಗಿದ್ದ ಅರಣ್ಯ ಇಲಾಖೆಗೆ ಬೋನಿಗೆ ಚಿರತೆ ಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕು ಹುಲಿಕುಡಿ ಬೆಟ್ಟದ ತಪ್ಪಲಲ್ಲಿರುವ ಮಾಡೇಶ್ವರ ಗ್ರಾಮದಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಬೆಟ್ಟದಲ್ಲಿ ನಾಲ್ಕೈದು ಚಿರತೆಗಳು ವಾಸವಾಗಿದ್ದು, ಬೆಟ್ಟದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದವು, ತೋಟದಲ್ಲಿ ಮನೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮಾರಗಳಲ್ಲಿ ಚಿರತೆಗಳ ಚಲನವನ ಸೆರೆಯಾಗಿತ್ತು. ಚಿರತೆಗಳ ಚಲನವನದಿಂದ ಆತಂಕಗೊಂಡಿದ್ದ ಗ್ರಾಮಸ್ಥರು ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು, ಗ್ರಾಮಸ್ಥರ ಮನವಿ ಮೇರೆಗೆ ನಿನ್ನೆ ಸಂಜೆ 6 : 30 ರ ಸಮಯದಲ್ಲಿ ಗ್ರಾಮದ ಹೊರಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇಟ್ಟಿದ್ದ, ಕೇವಲ ಎರಡೇ ತಾಸಿನಲ್ಲಿ 18 ತಿಂಗಳ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಚಿರತೆಯನ್ನ ದೊಡ್ಡಬಳ್ಳಾಪುರ ಅರಣ್ಯ ಇಲಾಖೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿರುವುದ್ದಾಗಿ ಹೇಳಿದ್ದಾರೆ...
ಮುದ್ದೇಬಿಹಾಳ ಬಳಿ ನಿಂತಿದ್ದ ಕ್ಯಾಂಟರಿಗೆ ಡಿಕ್ಕಿ; ನಾಲ್ವರು ದುರ್ಮರಣ

ಮುದ್ದೇಬಿಹಾಳ ಬಳಿ ನಿಂತಿದ್ದ ಕ್ಯಾಂಟರಿಗೆ ಡಿಕ್ಕಿ; ನಾಲ್ವರು ದುರ್ಮರಣ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ವಿಜಯಪುರ: ಮುದ್ದೇಬಿಹಾಳ ತಾಲೂಕು ಬಿದರಕುಂದಿ ಬಳಿ ನಿಂತಿದ್ದ ಕ್ಯಾಂಟರಿಗೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮುದ್ದೇಬಿಹಾಳ ತಾಲೂಕು ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ ಟೋಲ್ ಬಳಿ ಗುರುವಾರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬಿದರಕುಂದಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಸೇರಿ ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ....
ವೈದ್ಯಕೀಯ ಸಲಕರಣೆ ಖರೀದಿ ಪ್ರಕ್ರಿಯೆ; ಬಿಜೆಪಿ ಆರೋಪಗಳು ಶುದ್ದ ಸುಳ್ಳು ಎಂದ ಸಚಿವರು

ವೈದ್ಯಕೀಯ ಸಲಕರಣೆ ಖರೀದಿ ಪ್ರಕ್ರಿಯೆ; ಬಿಜೆಪಿ ಆರೋಪಗಳು ಶುದ್ದ ಸುಳ್ಳು ಎಂದ ಸಚಿವರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ವೈದ್ಯಕೀಯ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಪ್ರಕ್ರಿಯೆಯು ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆದಿದೆ ಎಂದು ಬುಧವಾರ ಹೇಳಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹಲವಾರು ವಿಷಯಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಇಡೀ ಖರೀದಿ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮಗಳು ಆಗಿಲ್ಲ. ಸಾರ್ವಜನಿಕ ಸಂಗ್ರಹಣೆಗಳಲ್ಲಿ ಕರ್ನಾಟಕ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯ ಪ್ರಕಾರ ಎಲ್ಲಾ ಕಾರ್ಯವಿಧಾನಗಳು ಮತ್ತು ಇ-ಪ್ರೊಕ್ಯೂರ್ಮೆಂಟ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗಿದೆ ಎಂದು ಸಚಿವರು ಪುನರುಚ್ಚರಿಸಿದರು. ಬಿಜೆಪಿ ವಕ್ತಾರ ರವಿಕುಮಾರ್ ಮಾಡಿರುವ ಆರೋಪ ಆಧಾರ ರಹಿತ ಮತ್ತು ದುರುದ್ದೇಶಪೂರಿತವಾಗಿದೆ. "ಸರ್ಕಾರಿ ಕಾಲೇಜುಗಳಿಗೆ ವೈದ್ಯಕೀಯ ಉಪಕರಣಗಳನ್ನು ಖರೀದಿಸುವ ಸಂಪೂರ್ಣ ಪ್ರಕ್ರಿಯೆಯಲ್ಲಿ ನಾವು ಕೆಟಿಪಿಪಿ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದೇವೆ. ಟೆಂಡರ್ಗಳನ್ನು ಆಹ್ವಾನಿಸಲಾಯಿತು. ಮತ್ತು ...
ಮುಡಾ ಹಗರಣ: ರಾಜೀನಾಮೆ ಬಿಟ್ಟರೆ ಸಿದ್ದರಾಮಯ್ಯ ಅವರಿಗೆ ಬೇರೆ ದಾರಿ ಇಲ್ಲ?

ಮುಡಾ ಹಗರಣ: ರಾಜೀನಾಮೆ ಬಿಟ್ಟರೆ ಸಿದ್ದರಾಮಯ್ಯ ಅವರಿಗೆ ಬೇರೆ ದಾರಿ ಇಲ್ಲ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಅವರು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನನಾಗುವ ಅವಕಾಶ ಎಂದರೆ ಅದು ರಾಜೀನಾಮೆ ನೀಡುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕೋರ್ಟ್‌ ಆದೇಶ ಬಂದಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿತ್ತು. ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು. ಎಫ್‌ಐಆರ್‌ ಆದ ಬಳಿಕ ಪೊಲೀಸರ ಮುಂದೆ ನಿಲ್ಲಲು ಸಿದ್ದರಾಮಯ್ಯಗೆ ಸಾಧ್ಯವೇ ಇಲ್ಲ. ಕಪ್ಪು ಚುಕ್ಕೆ ಇಲ್ಲ, ನಾನು ಸಜ್ಜನ, ಮಾದರಿ ಎಂದು ಅವರು ಹೇಳಿಕೊಳ್ಳುತ್ತಾರೆ. ಈ ಅವಕಾಶ ಅವರಿಗೆ ಬಂದಿದೆ. ಕೂಡಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿ ರಾಜ್ಯಕ್ಕೆ ಮಾದರಿಯಾಗಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಆದೇಶಿಸಿದ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವುದರ ಜೊತೆಗೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ತನಿಖೆಗೆ ಲೋಕಾಯುಕ್ತಕ್ಕೆ ಆದೇಶಿಸಲಾಗಿದೆ. ಬಿ...
ಮುಡಾ ಕೇಸ್; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಪ್ರತಿಭಟನೆ

ಮುಡಾ ಕೇಸ್; ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ಬಿಜೆಪಿ ಪ್ರತಿಭಟನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣದ ಸಂಬಂಧ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಆಗ್ರಹಿಸಿದೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ್ದ ಅನುಮೋದನೆಯನ್ನು ಹೈಕೋರ್ಟ್‌ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೂಡಾ, ಸಿದ್ದರಾಮಯ್ಯ ಪ್ರಕರಣ ಬಗ್ಗೆ ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ. ಈ ಬೆಳವಣಿಗೆಯ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಶುಕ್ರವಾರ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬಿಜೆಪಿ ಧರಣಿ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ....
ಡ್ರೋನ್ ಮುಖಾಂತರ ಜಾಗದ ಅಳತೆ ನಡೆಸಿ ಪಿ.ಆರ್.ಕಾರ್ಡ್ ವಿತರಣೆ; ಶಾಸಕ ಎಂಆರ್ ಮಂಜುನಾಥ್

ಡ್ರೋನ್ ಮುಖಾಂತರ ಜಾಗದ ಅಳತೆ ನಡೆಸಿ ಪಿ.ಆರ್.ಕಾರ್ಡ್ ವಿತರಣೆ; ಶಾಸಕ ಎಂಆರ್ ಮಂಜುನಾಥ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹನೂರು: ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿಯಲ್ಲಿ ಸ್ವಾಮಿತ್ವ ಯೋಜನೆಯ ಗ್ರಾಮ ಸಭೆಯನ್ನು ಶಾಸಕ ಎಂಆರ್ ಮಂಜುನಾಥ್ ರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು. ಈ ವೇಳೆ ಶಾಸಕ ಎಂ ಆರ್ ಮಂಜುನಾಥ್ ರವರು ಮಾತನಾಡಿ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ಯ ಇಲಾಖೆ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಇ ಸ್ವತ್ತುಗಳ ಸಮಸ್ಯೆಗಳನ್ನು ಬಗೆಹರಿಸಲು ವಸತಿ ಪ್ರದೇಶಗಳಿಗೆ ಡ್ರೋನ್ ಅಥವಾ ಯುಎ ವಿ ತಂತ್ರಜ್ಞಾನದ ಮೂಲಕ ಸರ್ವೇ ನಡೆಸಿ ಡ್ರೋನ್ ಮುಖಾಂತರ ನಿಮ್ಮ ಜಾಗದ ಅಳತೆಯನ್ನು ನಡೆಸಿ ನಿಮಗೆ ಪಿ ಆರ್ ಕಾರ್ಡುಗಳನ್ನು ವಿತರಣೆ ಮಾಡಲಾಗುತ್ತದೆ. ಇದನ್ನು ಜನರು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಡಿ ಡಿ ಎಲ್ ಆರ್ ವಿದ್ಯಾರಾಣಿ ಮಾತನಾಡಿ ಕಳೆದ 50 ವರ್ಷಗಳ ಹಿಂದೆ ಕಂದಾಯ ಕಟ್ಟಿರುವ ಜಮೀನುಗಳಿಗೆ ಮಾತ್ರ ಸರ್ವೆ ಮಾಡಲಾಗಿತ್ತು, ಗ್ರಾಮ ಗ್ರಾಮ ಠಾಣ ವಿಭಾಗಗಳಲ್ಲಿ ನಿಖರವಾದ ಯಾವುದೇ ದಾಖಲಾತಿಗಳು ಸಹ ಲಭ್ಯವಿರುವುದಿಲ್ಲ ಆದ್ದರಿಂದ ಡ್ರೋನ್ ಮುಖಾಂತರ ನಿಮ್ಮ ಜಾಗ ಹಾಗೂ ಜಮೀನುಗಳನ್ನು ಸರ್ವೆ ಮಾಡಿ ಸರ್ವೆ ಇಲಾಖೆ ಗ್ರಾಮ ಪಂಚಾಯಿತಿ ಹಾಗೂ ಜಾಗದ ಮಾಲೀಕರೊಂದಿಗೆ ಚರ್ಚೆ ಮಾಡಿ ಪಿಆರ್...
ದೊಡ್ಡಬಳ್ಳಾಪುರ:1.67 ಲಕ್ಷ ರೂ ಮೌಲ್ಯದ  ಗಾಂಜಾ ವಶ : ಒಬ್ಬನ ಬಂಧನ

ದೊಡ್ಡಬಳ್ಳಾಪುರ:1.67 ಲಕ್ಷ ರೂ ಮೌಲ್ಯದ  ಗಾಂಜಾ ವಶ : ಒಬ್ಬನ ಬಂಧನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದೊಡ್ಡಬಳ್ಳಾಪುರ :ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯ ಪೊಲೀಸರು ₹1,67,500 ಮೌಲ್ಯದ ಅಕ್ರಮ ಗಾಂಜಾ ವಶಕ್ಕೆ ಪಡೆದು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ. ದೊಡ್ಡಬೆಳವಂಗಲ ಹೋಬಳಿಯ ಅಪ್ಪೇಗೌಡನ ಪಾಳ್ಯದ ಬಳಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿಯ ಮೇರೆಗೆ ಸೋಮವಾರ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ, ಅವರ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದು, ಹೊಲದ ಮಾಲಿಕ ಅರಸಪ್ಪ (65) ಎಂಬವರನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಸುಮಾರು 1,67,500 ರೂ ಮೌಲ್ಯದ 16 ಕೆಜಿ 800 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯಲ್ಲಿ ದೊಡ್ಡ ಹೆಜ್ಜಾಜಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಅಮಿತ್ ಕಾರ್ತಿಕ್, ಎಎಸ್‌ಐ ಕೃಷ್ಣಪ್ಪ, ಹೆಡ್ ಕಾನ್ ಸ್ಟೇಬಲ್ ಗಳಾದ ಮಂಜುನಾಥ್, ಸುರೇಶ್, ರಾಮಕೃಷ್ಣ, ಕಾನ್ಸ್ಟೇಬಲ್ ಗಳಾದ ಕುಮಾರ್, ಗೃಹರಕ್ಷಕ ದಳದ ಚಂದ್ರು ಮೊದಲಾದವರು ಭಾಗವಹಿಸಿದ್ದರು....