
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ; ಅಶೋಕ್ ವ್ಯಂಗ್ಯ
ಬೆಂಗಳೂರು: ಈ ಬಾರಿಯ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್‌ನ ನುಂಗಣ್ಣಗಳ ಭ್ರಷ್ಟಾಚಾರವನ್ನು ಬಯಲು ಮಾಡಿದ್ದೇವೆ. ಇದರ ವಿರುದ್ಧ ಇನ್ನಷ್ಟು ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ನಡೆದ 6,000 ಕೋಟಿ ರೂ. ಹಗರಣ ಸಂಬಂಧ ಐದು ದಾಖಲೆಗಳನ್ನು ಹಾಗೂ ಆಡಿಯೋ ದಾಖಲೆಗಳನ್ನು ನೀಡಿದ್ದೇನೆ. ಇಷ್ಟಾದರೂ ಸರ್ಕಾರ ಇನ್ನೂ ಸಾಕ್ಷಿ ಕೇಳುತ್ತಿದೆ. ಈ ಹಿಂದೆ 40 ಪರ್ಸೆಂಟ್ ಭ್ರಷ್ಟಾಚಾರವೆಂದು ಗುತ್ತಿಗೆದಾರರು ಹೇಳಿದ್ದಕ್ಕೆ ಕಾಂಗ್ರೆಸ್ ನಾಯಕರು ಅಂದಿನ ಬಿಜೆಪಿ ಸರ್ಕಾರದ ಮೇಲೆ ಆರೋಪ ಮಾಡಿತ್ತು. ಈಗ ಮದ್ಯ ಮಾರಾಟಗಾರರ ಸಂಘದವರು 80 ಪರ್ಸೆಂಟ್ ಭ್ರಷ್ಟಾಚಾರವೆಂದು ಹೇಳಿದ್ದು, ಆ ಬಗ್ಗೆ ರಾಹುಲ್ ಗಾಂಧಿಗೂ ದೂರು ನೀಡುವುದಾಗಿ ಹೇಳಿದ್ದಾರೆ. ಆದರೂ ಸಿಎಂ ಸಿದ್ದರಾಮಯ್ಯ, ಸಚಿವ ತಿಮ್ಮಾಪುರ ಅವರ ರಾಜೀನಾಮೆ ಪಡೆಯದೆ ಜನರಿಗೆ ದ್ರೋಹ ಮಾಡಿದ್ದಾರೆ ಎಂದರು.ಸಿಎಂ ಸಿದ್ದರಾಮಯ್ಯ ಕೂಡ ಇದರಲ್ಲಿ ಭಾಗಿಯಾಗಿರುವುದರಿಂದ ಅವರು ಸಚಿವರ ರಾಜೀನಾಮೆ ಪಡೆದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಇದರ ವಿರುದ್ಧ ಇನ್ನಷ್...








