Thursday, January 29

ಬೆಂಗಳೂರು

ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ದಸರಾ ಅದ್ಧೂರಿ ಆಗಲಿ; ಹಗರಣ ಆಗದಿರಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉತ್ಸವವನ್ನ ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿರುವ ಅವರು, ಅದ್ಧೂರಿ ದಸರಾವು ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದು ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ ವರ್ಷ ಅಂತರರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದವರು ಪ್ರತಿಪಾದಿಸಿದ್ದಾರೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚ...
ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ದೀಪಾವಳಿ ವೇಳೆ ನಟ ರಾಕ್ಷಸನ ”ಜೀಬ್ರಾ’ ಅವತಾರ!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ನಟ ಡಾಲಿ ಧನಂಜಯ್ ಮತ್ತು ತೆಲುಗು ನಟ ಸತ್ಯದೇವ್ ಕಾಂಬಿನೇಶನ್‌ನ 'ಜೀಬ್ರಾ' ಚಿತ್ರ ಸಿನಿಲೋಕದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ. ಇದೊಂದು ಮಲ್ಟಿಸ್ಟಾರರ್ ಸಿನಿಮಾ ಜೊತೆಗೆ ಪ್ಯಾನ್ ಇಂಡಿಯಾ ಸಿನಿಮಾ ಎಂದು ಧನಂಜಯ್ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ 'ಜೀಬ್ರಾ' ಬಿಡುಗಡೆಯಾಗಲಿದೆ. ಅಕ್ಟೋಬರ್ 31ರಂದು ಕನ್ನಡ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ 'ಜೀಬ್ರಾ' ತೆರೆ ಕಾಣಲಿದೆಯಂತೆ. ಈ ನಡುವೆ, 'ಜೀಬ್ರಾ' ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಮೋಷನ್ ಪೋಸ್ಟರ್ ಗಮನಸಳೆದಿದೆ....
ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ನಾಗಮಂಗಲ ಘಟನೆ; ವಿಚಾರಣೆ ನಡೆಸುವ ಮೊದಲೇ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌? ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್‌ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್‌ ಚಿಟ್‌ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧದಲ್ಲಿ ಪಾಕ್‌ ಜಿಂದಾಬಾದ್‌ ಕೂಗಿದಾಗ ಹಾಗೆ ಆಗಿಯೇ ಇಲ್ಲ ಎಂದು ಕಾಂಗ್ರೆಸ್‌ ನಾಯಕರು ಹೇಳಿದ್ದರು. ಬಾಂಬ್‌ ಸ್ಫೋಟವಾದಾಗಲೂ ಅದು ವ್ಯಾಪಾರದ ಜಗಳ ಎಂದು ಹೇಳಿದ್ದರು. ಕುಕ್ಕರ್‌ ಬಾಂಬ್‌ ಸ್ಫೋಟದ ಬಗ್ಗೆಯೂ ಹೀಗೆಯೇ ಹೇಳಿದ್ದರು. ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದು ಬಗ್ಗೆ ಮೊದಲು ಪರಿಶೀಲಿಸಲಿ. ಆದರೆ ಸಚಿವ ಪ್ರಿಯಾಂಕ್‌ ಖರ್ಗೆಯಂಥವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಭಾರತವನ್ನು ಎರಡು ಭಾಗ ಮಾಡಿದ ಕಾಂಗ್ರೆಸ್‌ ಮತ್ತೆ ತಲೆಯತ್ತಿ ಮಂಡ್ಯದಲ್ಲಿ ಕೋಮುಗಲಭೆಗೆ ಕಾರಣವಾಗಿದೆ. ವಿದೇಶಕ್ಕೆ ಹೋದ ರಾಹುಲ್‌ ಗಾಂಧಿ, ಭಾರತದ ವಿರುದ್ಧ ಮಾತಾಡುವುದರ ಜೊತೆಗೆ ಮೀಸಲಾತಿ ತೆಗೆದುಹಾ...
ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರಿಗೆ ಶ್ರೇಷ್ಠತಾ ಪದಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ಫ್ರಾನ್ಸ್‌ನ ಲಿಯೋನ್‌ನಲ್ಲಿ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ ನಾಲ್ವರು ಶ್ರೇಷ್ಠತಾ ಪದಕಗಳನ್ನು ಪಡೆದ್ದಿದ್ದರೆ. ಫ್ರಾನ್ಸ್‌ನ ಲಿಯೋನ್‌ನಲ್ಲಿ ಇದೇ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆದ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕದ 9 ಸ್ಪರ್ಧಿಗಳು ಭಾಗವಹಿಸಿದ್ದು, ಈ ಪೈಕಿ ಪ್ರೇಮ್, ಹರ್ಷವರ್ಧನ್, ಭಾನುಪ್ರಸಾದ್, ದರ್ಶನ್ ಗೌಡ 3 ಕೌಶಲ್ಯ ಸ್ಪರ್ಧೆಯಲ್ಲಿ ಶ್ರೇಷ್ಠತಾ ಪದಕ ಪಡೆದಿದ್ದಾರೆ. ಇದಕ್ಕೂ ಮುನ್ನ ಕಳೆದ ಮೇ ತಿಂಗಳಿನಲ್ಲಿ ನವದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕರ್ನಾಟಕದಿಂದ 62 ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಯುವ ಕೌಶಲ್ಯ ಸ್ಪರ್ಧೆಯಲ್ಲಿ 13 ಚಿನ್ನದ ಪದಕ, 12 ಬೆಳ್ಳಿ ಪದಕ, 4 ಕಂಚಿನ ಪದಕ ಹಾಗೂ 19 ಶ್ರೇಷ್ಠತಾ ಪದಕ ಗೆಲ್ಲುವುದರೊಂದಿಗೆ ರಾಜ್ಯದ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕ 2ನೇ ಸ್ಥಾನ ಪಡೆದಿದೆ. ಅಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕರ್ನಾಟಕದ ಪ್ರೇಮ್ (ಆಡಿಟಿವ್ ಮ್ಯಾನುಫ್ಯಾಕ್ಚರಿಂಗ್), ಹರ್ಷವರ್ಧನ್ (ಕುಕ್ಕಿಂಗ್), ಭಾನುಪ್ರಸಾದ್, ದರ್ಶನ್ ಗೌಡ (ಮೆಕಾಟ್ರಾನಿಕ್ಸ್) ಫ್ರ...
‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

‘ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?’: ಸಿಎಂ ವಿರುದ್ದ ಹೆಚ್ಡಿಕೆ ಟ್ವೀಟಾಸ್ತ್ರ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಾಮಾಜಿಕ ಜಾಲತಾಣ 'X'ನಲ್ಲಿ ಪೋಸ್ಟ್ ಹಾಕಿರುವ ಕುಮಾರಸ್ವಾಮಿ, ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ ಎಂದವರು ಟೀಕಿಸಿದ್ದಾರೆ...
ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಶ್ರೀ ಚಿತ್ರಾಪುರ ಮಠದ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿಯ ಸೀಮೋಲ್ಲಂಘನ ಮತ್ತು ದಿಗ್ವಿಜಯ ಮಹೋತ್ಸವ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಚಿತ್ರಾಪುರ ಸಾರಸ್ವತ ಸಮಾಜದ ಗುರುಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮಿಜಿ, ಮಠಾಧಿಪತಿ, ಶ್ರೀ ಚಿತ್ರಾಪುರ ಮಠ, ಶಿರಾಲಿ, ಉ.ಕ.ಜಿಲ್ಲೆ ಇವರ ಸೀಮೋಲ್ಲಂಘನ ಹಾಗೂ ದಿಗ್ವಿಜಯ18.09.2024ರಂದು ನಡೆಯಲಿದೆ. ಈ ಬಾರಿ ಸ್ವಾಮೀಜಿಯವರ ಚಾತುರ್ಮಾಸ ವೃತವು ಎರಡು ತಿಂಗಳ ಕಾಲ ಮಂಗಳೂರಿನ ಶರವು ದೇವಸ್ಥಾನ ರಸ್ತೆಯಲ್ಲಿರುವ ಶ್ರೀ ವಾಮನಾಶ್ರಮ ಮಠ (ಚಿತ್ರಾಪುರ ಮಠ) ದಲ್ಲಿ ಜರಗುತ್ತಿದ್ದು, ಈ ಚಾತುರ್ಮಾಸ ವೃತವು ಸೆಪ್ಟೆಂಬರ್ ತಿಂಗಳ 18ರಂದು ಮುಕ್ತಾಯಗೊಳ್ಳಲಿದೆ. ಆ ಪ್ರಯುಕ್ತ ಸೆಪ್ಟೆಂಬರ್ 18ರಂದು (ಬುಧವಾರ) ಸಂಜೆ 4.00 ಗಂಟೆಗೆ ಸೀಮೋಲ್ಲಂಘನ ಕಾರ್ಯಕ್ರಮವು ನಗರದ ಸುಲ್ತಾನ್ ಬತ್ತೇರಿ ಬಳಿಯಿರುವ ನದಿ ತಟದಲ್ಲಿ ನಡೆಯಲಿದೆ. ರಾತ್ರಿ ಗಂಟೆ 7.00ರಿಂದ ಮಂಗಳೂರು ನಗರದ ಗಣಪತಿ ಪ್ರೌಢ ಶಾಲೆಯ ಆವರಣದಿಂದ ದಿಗ್ವಿಜಯೋತ್ಸವವು (ಶೋಭಾಯಾತ್ರೆ) ಪ್ರಾರಂಭವಾಗಿ ಜಿ.ಎಚ್.ಎಸ್. ಅಡ್ಡ ರಸ್ತೆ, ಭವಂತಿಸ್ಟ್ರೀಟ್, ವೆಂಕಟರಮಣ ದೇವಸ್ಥಾನ ರಸ್ತೆ, ಮಹಮ್ಮಾಯ ದೇವಸ್ಥಾನ ರಸ್ತೆ, ಕೆನರಾ ಹೈಸ್ಕೂಲ್ ಹಿಂಬದಿಯ ರಸ್ತೆ, ನವಭಾರತ ವೃತ್ತ, ಡೊಂಗರಕೇರಿ, ನ್ಯೂಚಿತ್ರಾ ಜಂಕ್ಷನ್, ಬಿ.ಇ.ಎಂ ಹೈಸ್ಕೂಲ್ ರಸ್ತ...
ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಗುತ್ತಿಗೆದಾರರಿಗೆ ಬೆದರಿಕೆ ಆರೋಪ; ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗುತ್ತಿಗೆದಾರರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ಜಾತಿ ನಿಂದನೆ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋರ್ಟ್ 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಕೋಲಾರದಲ್ಲಿ ಮುನಿರತ್ನ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಕಳೆದ ರಾತ್ರಿ ಬೆಂಗಳೂರಿಗೆ ಕರೆತಂದು 82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ನಂಗಲಿ ಗ್ರಾಮದ ಬಳಿ ಬಂಧಿಸಿದ್ದರು. ರಾತ್ರಿ ಬೆಂಗಳೂರು ತಲುಪುತ್ತಿದ್ದಂತೆಯೇ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಯಿತು. ಪ್ರಕರಣದ ಬಗ್ಗೆ ವಿಚಾರಣೆ ಅಗತ್ಯವಿರುವುದರಿಂದ ಒಂದು ವಾರ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ನ್ಯಾಯಾಧೀಶರನ್ನು ಕೋರಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಆದೇಶಿಸಿದರು....
ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ : ಡಿ.ಕೆ. ಸುರೇಶ್ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಜಾತಿ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ಹಾಗೂ ಗುತ್ತಿಗೆದಾರನ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಶಾಸಕ ಮುನಿರತ್ನ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸ ಬೇಕು ಹಾಗೂ ವಿಧಾನಸಭಾ ಸ್ಪೀಕರ್ ಅವರು ಶಾಸಕ ಸ್ಥಾನದಿಂದ ವಜಾ ಮಾಡಬೇಕು" ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಮುನಿರತ್ನ ಅವರಂತ ನಾಯಕರು ರಾಜ್ಯದಲ್ಲಿ ಇದ್ದರೆ ಜಾತಿ ಸಂಘರ್ಷಗಳು ಹೆಚ್ಚಾಗುತ್ತವೆ. ಆದ ಕಾರಣಕ್ಕೆ ಇವರ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರಲ್ಲಿ ಮನವಿ ಮಾಡುತ್ತೇನೆ. ಬಿಜೆಪಿ ಕೇಂದ್ರ ನಾಯಕರಿಗೆ ಕಿವಿ ಕೇಳಿಸುತ್ತಿದ್ದರೆ, ಕೀಳು ಮಟ್ಟದ ಪದ ಬಳಕೆ ಮಾಡಿರುವ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ" ಎಂದರು. "ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ಅವರೇ ಸಮುದಾಯದ ತಾಯಂದಿರನ್ನು ಅವಮಾನಿಸಿದ್ದಾರೆ. ಇದಕ್ಕೆ ನೀವೇ ಉತ್ತರಿಸಬೇಕು. ವಿಜಯೇಂದ್ರ, ಛಲವಾದಿ ನಾರಾಯಣ ಸ್ವಾಮಿ ಅವರು ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಇದರ ಬಗ್ಗೆ ಉತ್ತರಿಸಬೇಕು" ಎಂದರು. "ಒಂದು ಕಡೆ ರಾಮನ, ಸ...
ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಕಾಂಗ್ರೆಸ್ ಸರ್ಕಾರದಿಂದ ಧ್ವೇಷದ ರಾಜಕಾರಣ; ಶಾಸಕ ಮುನಿರತ್ನ ಬಂಧನಕ್ಕೆ ಬಿಜೆಪಿ ಆಕ್ರೋಶ 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧ್ವನಿ ಮುದ್ರಣ ಶಾಸಕರದ್ದೇ ಎಂದು ಸಾಬೀತಾದ ಬಳಿಕ ಬಂಧಿಸಬೇಕಿತ್ತು. ಕಾನೂನಿಗೆ ಯಾರೂ ಅತೀತರಲ್ಲ ಎಂದರು. ಟಿ.ಜೆ.ಅಬ್ರಹಾಂ ದೂರಿನ ಆಧಾರದ ಮೇಲೆ ರಾಜ್ಯಪಾಲರು ತಕ್ಷಣ ಕ್ರಮ ಕೈಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದರು.‌ ಆದರೂ ಅದು ಈಗ ನ್ಯಾಯಾಲಯದಲ್ಲಿದ್ದು, ಅದಕ್ಕೆ ನಾವ್ಯಾರೂ ಆಕ್ಷೇಪ ಮಾಡಿಲ್ಲ. ಆದರೆ ಇಲ್ಲಿ ದೂರು ನೀಡಿದ ಕೂಡಲೇ ವಿಚಾರಣೆ ಮಾಡದೆ‌ ನೋಟಿಸ್‌ ನೀಡದೆ ಬಂಧಿಸಲಾಗಿದೆ. ಇಲ್ಲಿ ಆತುರದ‌ ಕ್ರಮವಾಗಿದ್ದು, ಏಕಾಏಕಿ ಬಂಧನವಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಲೀಡ್ ಬಂದಿರುವುದು ಕೂಡ ಇದಕ್ಕೆ ಕಾರಣ. ಧ್ವನಿ ಮುದ್ರಣವನ್ನು ಎಫ್ಎಸ್ಎಲ್ ಗೆ ಕಳುಹಿಸಿ,‌ ತನಿಖೆ ಮಾಡಿ ಬಳಿಕ ಕ್ರಮ ಕೈಗೊಂಡಿದ್ದರೆ ನಾವ್ಯಾರೂ ಮಾತಾಡುತ್ತಿರಲಿಲ್ಲ. ಯಾವುದೇ ಪ್...
ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಗುತ್ತಿಗೆದಾರನಿಗೆ ಬೆದರಿಕೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಬಂಧನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಾಸಕ ಮುನಿರತ್ನ ಅವರನ್ನು ಶನಿವಾರ ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ಅವರು ತಮಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಚಲುವರಾಜು ಅವರು ದೂರು ನೀಡಿದ್ದರು. ಅದರಂತೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆಯೇ ಮುನಿರತ್ನ ತಲೆಮರೆಸಿಕೊಂಡಿದ್ದಾರೆ ಎಂದೂ ಹೇಳಲಾಗುತ್ತಿತ್ತು. ಈ ನಡುವೆಯೇ ಕೋಲಾರ ಜಿಲ್ಲೆಯ ಮುಳಬಾಗಿಲು ಸಮೀಪ ಪೊಲೀಸರು ಮುನಿರತ್ನ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ....