Thursday, January 29

ಬೆಂಗಳೂರು

ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ವನಿತೆಯರ ಪರ ಧ್ವನಿಯಾದ ಸೌಮ್ಯ ರೆಡ್ಡಿ; ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಸೈನ್ಯ ಕಟ್ಟುವುದಾಗಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪಣ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ವನಿತೆಯರ ಪರ ಧ್ವನಿಯಾದ ಮಾಜಿ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ, ಇದೀಗ ರಾಜ್ಯದ ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿ ಮಟ್ಟದಲ್ಲಿ ಮಹಿಳೆಯರ ಸೈನ್ಯ ಕಟ್ಟುವುದಾಗಿ ಘೋಷಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೌಮ್ಯ ರೆಡ್ಡಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿ ಸೆಪ್ಟೆಂಬರ್ 15ಕ್ಕೆ 40 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಾವು ಮಹಿಳಾ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಜಿಲ್ಲೆ, ಬ್ಲಾಕ್ ಹಾಗೂ ಹಳ್ಳಿಗಳ ಮಟ್ಟದಲ್ಲಿ ಈ ಅಭಿಯಾನ ಮಾಡಲು ತೀರ್ಮಾನಿಸಿದ್ದೇವೆ. ರಾಜ್ಯಾದ್ಯಂತ ಮಹಿಳೆಯರು ಮಹಿಳಾ ಕಾಂಗ್ರೆಸ್ ಸೇರಿ ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತೇನೆ ಎಂದ ಅವರು, ಕರ್ನಾಟಕ ರಾಜ್ಯದಲ್ಲಿ ಮಹಿಳೆಯರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮೀ ಯೋಜನೆ 1.21 ಕೋಟಿ ಮಹಿಳೆಯರಿಗೆ ತಲುಪಿದೆ. ಗೃಹಜ್ಯೋತಿ 1.60 ಕೋಟಿ ಮನೆಗಳನ್ನು ತಲುಪಿದೆ. ಶಕ್ತಿ ಯೋಜನೆಯಲ್ಲಿ ಮಹಿಳೆಯರು 283 ಕೋ...
ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್’ಕೌಂಟರ್; ಮೂವರು ಉಗ್ರರ ಹತ್ಯೆ

ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್’ಕೌಂಟರ್; ಮೂವರು ಉಗ್ರರ ಹತ್ಯೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರಿದಿದೆ. ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ನಡೆದ ಭದ್ರತಾ ಪಡೆಗಳೊಂದಿಗಿನ ಎನ್'ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಶನಿವಾರ ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ಲಂಡನ್​​ನ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕಕ್ಕೆ ದಶಮಾನೋತ್ಸವ ಸಡಗರ; ಮೋದಿ ಆಹ್ವಾನಕ್ಕೆ ತೀರ್ಮಾನ

ಲಂಡನ್​​ನ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕಕ್ಕೆ ದಶಮಾನೋತ್ಸವ ಸಡಗರ; ಮೋದಿ ಆಹ್ವಾನಕ್ಕೆ ತೀರ್ಮಾನ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಲಂಡನ್​​: ಲಂಡನ್​​ನಲ್ಲಿರುವ ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ದಶಮಾನೋತ್ಸವ ಸಂಭ್ರಮದಲ್ಲಿದೆ. ಈ ದಶಮಾನೋತ್ಸವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಲಂಡಲ್‌ನ ಥೇಮ್ಸ್ ನದಿ ತೀರದಲ್ಲಿ2015ರಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದರು. ಇದೀಗ ಹತ್ತನೇ ವರ್ಷದ ಸಮಾರಂಭದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನಿಸಲು ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ಸಂಸ್ಥೆ ಚಿಂತನೆ ನಡೆಸಿದೆ. ಈ ನಡುವೆ, ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರು ಲಂಡನ್ ಪ್ರವಾಸದ ಸಂದರ್ಭದಲ್ಲಿ ಲಂಡಲ್‌ನ ಥೇಮ್ಸ್ ನದಿ ತೀರದ ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ್ದಾರೆ. ಆ ವೇಳೆ ಬಸವರಾಜ್ ಬೊಮ್ಮಾಯಿ ಜೊತೆ ಚರ್ಚಿಸಿರುವ ಲಂಡನ್ ಮಾಜಿ ಮೇಯರ್ ನೀರಜ್ ಪಾಟೀಲ್ ಅವರು ದಶಮಾನೋತ್ಸವ ಸಮಾರಂಭಕ್ಕೆ ಮೋದಿಯವರನ್ನು ಆಹ್ವಾನಿಸುವ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ, ತಮ್ಮ ಲಂಡನ್ ಪ್ರವಾಸ ಬಗ್ಗೆ ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂ...
ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಗುತ್ತಿಗೆದಾರನಿಗೆ ಜೀವ ಬೆದರಿಕೆ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪ ಸಂಬಂಧದ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಈ ಪ್ರಕರಣ ಬಗ್ಗೆ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಎನ್ನಲಾಗಿದೆ. ಶಾಸಕ ಮುನಿರತ್ನ, ಆಪ್ತ ಸಹಾಯಕ ವಿಜಯ್ ಕುಮರ್, ಸೆಕ್ಯೂರಿಟಿ ಅಭಿಷೇಕ್ ಮತ್ತು ಆಪ್ತ ವಸಂತ್ ಕುಮಾರ್ ಅವರನ್ನು ಆರೋಪಿಗಳೆಂದು ಪೊಲೀಸರು ಗುರುತಿಸಿದ್ದಾರೆ....
ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಮಹಿಳಾ ಆರೋಗ್ಯ ಸಿಬ್ಬಂದಿಯ ಸುರಕ್ಷತೆ ಹೆಚ್ಚಿಸಲು ಬರಲಿದೆ ಕೃತಕ ಬುದ್ಧಿಮತ್ತೆ ಭದ್ರತಾ ವ್ಯವಸ್ಥೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕದಾದ್ಯಂತ ಮಹಿಳಾ ಆರೋಗ್ಯ ಸಿಬ್ಬಂದಿಗೆ ಹೆಚ್ಚಿನ ಭದ್ರತೆ ಹಾಗೂ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಉನ್ನತಮಟ್ಟದ ಸಭೆ ನಡೆಸಿದ ಸಚಿವರು, ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಹಾಸ್ಟೆಲ್‌ಗಳಲ್ಲಿ ಭದ್ರತೆಯನ್ನು ಬಲಪಡಿಸುವ ಕುರಿತು ಸಮಾಲೋಚನೆ ನಡೆಸಿದರು. ಪ್ರಸ್ತುತ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಮತ್ತು ಇತರೆ ಕ್ರಮಗಳನ್ನು ಪ್ರಸ್ತಾಪಿಸುವ ಕುರಿತು ಈ ಹಿಂದೆ ಸಚಿವರ ನೇತೃತ್ವದಲ್ಲಿ ಸಭೆ ನಡೆದಿತ್ತು. ಅದರ ಮುಂದಿನ ಭಾಗ ಇದಾಗಿದೆ. ಮಹಿಳಾ ಆರೋಗ್ಯ ವೃತ್ತಿಪರರು ಮತ್ತು ಇತರ ಮಧ್ಯಸ್ಥಗಾರರ ಪ್ರತಿಕ್ರಿಯೆಯನ್ನು ಪಡೆಯುವ ಬಗ್ಗೆ ಡಾ.ಪಾಟೀಲ್ ಸೂಚನೆ ನೀಡಿದರು. "ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಬರವಣಿಗೆಯಲ್ಲಿ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು ಮತ್ತು ಅಗತ್ಯ ಕ್ರಮಗಳನ್ನು ಜಾರಿಗೆ ತರಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುರಕ್ಷತಾ ಶಿಷ್ಟಾಚಾರ ಕ್ರಮಗಳನ್ನು ಪರಿ...
ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತದಳದ ಮುಖ್ಯಸ್ಥರ ಬದಲಾವಣೆ

ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತದಳದ ಮುಖ್ಯಸ್ಥರ ಬದಲಾವಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ಗಲಭೆ ಬೆನ್ನಲ್ಲೇ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ರಾಜ್ಯ ಸರ್ಕಾರ ಬದಲಾವಣೆ ಮಾಡಿದೆ. ನೋಟ ಎಡಿಜಿಪಿಯಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ಸರ್ಕಾರ ನೇಮಕ ಮಾಡಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಹೊಣೆಯನ್ನೂ ನಿಂಬಾಳ್ಕರ್ ಅವರಿಗೆ ವಹಿಸಲಾಗಿದೆ. ಈವರೆಗೂ ಗುಪ್ತದಳದ ಮುಖ್ಯಸ್ಥರಾಗಿದ್ದ ಕೆ.ವಿ.ಶರತ್ ಚಂದ್ರ ಅವರನ್ನು ನೇಮಕಾತಿ ವಿಭಾಗದ ಎಡಿಜಿಪಿಯಾಗಿ ವರ್ಗಾಯಿಸಲಾಗಿದ್ದು, ಸಂಚಾರ ಮತ್ತು ರಸ್ತೆ ಸುರಕ್ಷತಾ ಆಯುಕ್ತರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ....
ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ನಾಗಮಂಗಲ ಗಲಭೆ; ಕರ್ನಾಟಕಕ್ಕೂ ಬೇಕಿದೆ ಬುಲ್ಡೋಜರ್ ಕಾರ್ಯಾಚರಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಗಮಂಗಲ ಗಲಭೆಯನ್ನು ಖಂಡಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಕರ್ನಾಟಕಕ್ಕೂ ಬುಲ್ಡೋಜರ್ ಕಾರ್ಯಾಚರಣೆ ಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ನಾಗಮಂಗಲ ಗಲಭೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು ರಾಜ್ಯ ಸರ್ಕಾರದ ನಡೆ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಮುಸ್ಲಿಂ ಮತಾಂಧರು ನಡೆಸಿದ ಕೋಮುದಳ್ಳುರಿಯಲ್ಲಿ ಅಂಗಡಿ, ಮುಂಗಟ್ಟು, ಸರಕು-ಸರಂಜಾಮು ಸೇರಿದಂತೆ ಒಟ್ಟು ಸುಮಾರು 25 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಎಸೆತ, ವಾಹನಗಳಿಗೆ ಬೆಂಕಿ ಹಚ್ಚುವುದು, ಶೋರೂಂಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಮುಂತಾದ ದುಷ್ಕೃತ್ಯ ಎಸಗಿದ ಪುಂಡರನ್ನು ಪತ್ತೆ ಹಚ್ಚಿ, ಉತ್ತರ ಪ್ರದೇಶದ ಮಾದರಿಯಲ್ಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ಮಾಡಿದರೆ ಮಾತ್ರ ಇಂತಹವರಿಗೆ ತಕ್ಕ ಪಾಠ ಕಲಿಸಲು ಸಾಧ್ಯ. ಇಂತಹ ವಿಕೃತ ಮನಸ್ಥಿತಿಗೆ ಪೂರ್ಣವಿರಾಮ ಇಡಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ನಾಗರಿಕರನ್ನು ರಕ್ಷಿಸಬೇಕಾದ ಸರ್ಕಾರವೇ ಪೂರ್ವ ನಿಯೋಜ...
ನಟ ದರ್ಶನ್ ಗ್ಯಾಂಗ್ ಸೆರೆವಾಸ ಸೆಪ್ಟೆಂಬರ್ 17ರವರೆಗೆ ವಿಸ್ತರಣೆ

ನಟ ದರ್ಶನ್ ಗ್ಯಾಂಗ್ ಸೆರೆವಾಸ ಸೆಪ್ಟೆಂಬರ್ 17ರವರೆಗೆ ವಿಸ್ತರಣೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಸೆಪ್ಟೆಂಬರ್ 17ರ ವರೆಗೆ ವಿಸ್ತರಣೆಯಾಗಿದೆ. ನಟ ದರ್ಶನ್, ಪವಿತ್ರಾಗೌಡ ಸಹಿತ ಎಲ್ಲಾ 17 ಆರೋಪಿಗಳನ್ನುಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಗೆ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು. ಬಳ್ಳಾರಿ ಜೈಲಿನಿಂದ ದರ್ಶನ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್, ರವಿ ಅವರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಪೊಲೀಸರು ಹಾಜರುಪಡಿಸಿದರೆ, ಪವಿತ್ರಾಗೌಡ, ದೀಪಕ್ ನನ್ನ ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ಆರೋಪಿಗಳ ಪರ ಹಾಗೂ ಪ್ರಾಸಿಕ್ಯೂಷನ್ ವಕೀಲರ ವಾದವನ್ನು ಆಲಿಸಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್​​ 17ರವರೆಗೆ ವಿಸ್ತರಿಸಿ ಆದೇಶಿಸಿದರು....
ನಾಗಮಂಗಲ ಗಲಭೆ; ಬಿಜೆಪಿಯಿಂದ ಸತ್ಯ ಶೋಧನಾ ಸಮಿತಿ ರಚನೆ

ನಾಗಮಂಗಲ ಗಲಭೆ; ಬಿಜೆಪಿಯಿಂದ ಸತ್ಯ ಶೋಧನಾ ಸಮಿತಿ ರಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ನಡೆದ ಕಲ್ಲುತೂರಾಟ ಮತ್ತು ಗಲಭೆ ಬಗ್ಗೆ ರಾಜ್ಯ ಬಿಜೆಪಿ ಸತ್ಯ ಶೋಧನಾ ಸಮಿತಿಯನ್ನು ರಚಿಸಿದೆ. ಶಾಸಕರಾದ ಡಾ. ಸಿ. ಎನ್.ಅಶ್ವತ್ಥ ನಾರಾಯಣ, ಭೈರತಿ ಬಸವರಾಜ, ಮಾಜಿ ಸಚಿವ ಕೆ. ಸಿ. ನಾರಾಯಣಗೌಡ, ರಾಜ್ಯ ಬಿಜೆಪಿ ಕಾರ್ಯದರ್ಶಿ ಅಶ್ವಿನ್ ಗೌಡ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರರಾವ್ ಅವರನ್ನೊಳಗೊಂಡ ಸಮಿತಿಯನ್ನು ಪಕ್ಷ ರಚಿಸಿದೆ. ಈ ಸಮಿತಿಯು ಗಲಭೆ ನಡೆದಿರುವ ನಾಗಮಂಗಲಕ್ಕೆ ತೆರಳಿ ಅಧ್ಯಯನ ನಡೆಸಲಿದೆ. ಒಂದು ವಾರದಲ್ಲಿ ಈ ಸಮಿತಿ ವರದಿ ನೀಡಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ....
ನಾಗಮಂಗಲ ಗಲಭೆ; ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ, ಬಿಜೆಪಿ ಎಚ್ಚರಿಕೆ

ನಾಗಮಂಗಲ ಗಲಭೆ; ಹಿಂದೂಗಳ ವಿರುದ್ಧ ಎಫ್‌ಐಆರ್‌ ರದ್ದುಪಡಿಸದಿದ್ದರೆ ಉಗ್ರ ಹೋರಾಟ, ಬಿಜೆಪಿ ಎಚ್ಚರಿಕೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮೂಲಭೂತವಾದಿಗಳಿಗೆ ಬೆಂಬಲ ನೀಡುವ ತಾಲಿಬಾನ್‌ ಸರ್ಕಾರವಿದೆ. ಈ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಸಲು ಹಿಂದೂಗಳನ್ನು ಬಲಿಕೊಡಲೂ ಸಿದ್ಧವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದ ಕೋಮು ಗಲಭೆ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ನಿರ್ವಹಣೆ ಮಾಡುತ್ತಿರುವ ರೀತಿಯನ್ನು ಅವರು ಕಟು ಮಾತುಗಳಿಂದ ಟೀಕಿಸಿ ಸರಣಿ ಟ್ವೀಟ್‌ ಮಾಡಿದ್ದಾರೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮು ಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ, ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದುಷ್ಕೃತ್ಯ ನಡೆಸಲಾಗಿದೆ. ಇದು ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು...