ರಾಜ್ಯದಲ್ಲಿ ಡಿಜಿಟಲ್ ಡೆಂಟಿಸ್ಟ್ರಿ ಪ್ರಾರಂಭ
ಬೆಂಗಳೂರು: ಸರ್ಕಾರಿ ದಂತ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (GDC&RI) ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗುವುದು, ಅತ್ಯಾಧುನಿಕ ಉಪಕರಣಗಳು ಮತ್ತು ವಿಶೇಷ ಸೌಲಭ್ಯ ಒದಗಿಸುವ ಮೂಲಕ ಪರಿವರ್ತನೆಗೆ ಒತ್ತು ನೀಡಲಾಗುತ್ತದೆ.
ಗುರುವಾರ ನಡೆದ ಪದವಿ ಪ್ರದಾನ ಸಮಾರಂಭ ಮತ್ತು ಹೊಸ ಡಿಜಿಟಲ್ ಡೆಂಟಿಸ್ಟ್ರಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ಘೋಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಸರ್ಕಾರಿ ದಂತ ವೈದ್ಯಕೀಯ ಕಾಲೇಜಿನ ಪರಂಪರೆಯ ಬಗ್ಗೆಯೂ ಬೆಳಕು ಚೆಲ್ಲಿದರು.
ದೇಶದ ಅತ್ಯಂತ ಹಳೆಯ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಇದು ಒಂದಾಗಿದೆ ಹಾಗು ಒಟ್ಟಾರೆಯಾಗಿ ನಾಲ್ಕನೇ ಅತ್ಯುತ್ತಮ ಸಂಸ್ಥೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. "1958ರಲ್ಲಿ ಸ್ಥಾಪನೆಯಾದ ಈ ಕಾಲೇಜು, ದಂತ ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿ ಆರು ದಶಕಗಳ ಕಾಲ ಸೇವೆ ಒದಗಿಸಿದೆ. ಈ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆ ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಈಗ ಎಲ್ಲಾ ರಂಗಗಳಲ್ಲಿ ಆಧುನೀಕರಣದ ಅಗತ್ಯವಿದೆ. ಶೀಘ್ರದಲ್ಲ...





