Saturday, December 6

ಬೆಂಗಳೂರು

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು‌ ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪನವರೂ ಒಬ್ಬರು. ಜನನಾಯಕರು ಸಂದರ್ಭಕ್ಕೆ ಪೂರಕವಾಗಿ ತಮ್ಮ ನಿಲುವು ಮತ್ತು ಹೇಳಿಕೆಗಳನ್ನು ಬದಲಾಯಿಸಿದರೆ ಅವರು ...
ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ: ಪರಮೇಶ್ವರ್ ಭರವಸೆ

ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಸರ್ಕಾರಿ ಉದ್ಯೋಗ: ಪರಮೇಶ್ವರ್ ಭರವಸೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಪೊಲೀಸ್ ಅಧಿಕಾರಿ ಬಲಿಯಾಗಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಇದೇ ವೇಳೆ ಮೃತ ಪಿಎಸ್‌ಐ ಪತ್ನಿಗೆ ಸರ್ಕಾರಿ ಕೆಲಸ ಕೊಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಪಿಎಸ್‌ಐ ಪರಶುರಾಮ್ ಪತ್ನಿಗೆ ಕೆಲಸ ಹಾಗೂ ಪರಿಹಾರ ಕೊಡುವುದಕ್ಕೆ ಸರ್ಕಾರ ತೀರ್ಮಾನ ಮಾಡಿದೆ ಎಂದು ತಿಳಿಸಿದರು. ಶಾಸಕ ಮೇಲೆ ಆರೋಪ ಕೇಳಿ ಬಂದಿದ್ದು ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದೂ ಅವರು ತಿಳಸಿದರು.‌ ಪರಶುರಾಮ್ ಸಾವಿನ ಪ್ರಕರಣವು ಆತ್ಮಹತ್ಯೆ ಅಲ್ಲ ಎಂದು ಇಲಾಖೆ ಹೇಳಿದೆ. ಅವರು ಯಾವುದೇ ಸೂಸೈಡ್ ನೋಟ್ ಕೂಡಾ ಬರೆದಿಲ್ಲ ಎಂದಿರುವ ಪರಮೇಶ್ವರ್, ಆದರೂ ಆರೋಪ ಕೇಳಿಬಂದಿರಿವ ಹಿನ್ನೆಲೆಯಲ್ಲಿ ಶಾಸಕರ ವಿರುದ್ದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು....
ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

ಮುಡಾ ಹಗರಣ: ಸಿಎಂ ರಾಜೀನಾಮೆ ಅಗತ್ಯವಿಲ್ಲ ರಂದ ಕಾಂಗ್ರೆಸ್ ನಾಯಕರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷರಾದ ವಿ.ಆರ್ ಸುದರ್ಶನ್ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ .ಎಲ್ ಶಂಕರ್, ಎಲ್.ಹನುಮಂತಯ್ಯ, ಬಿ.ಆರ್.ಪಾಟೀಲ್ ಉಪಸ್ಥಿತಿಯಲ್ಲಿ  ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿ.ಆರ್ ಸುದರ್ಶನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ಮಾಡುತ್ತಿರುವಾಗ ಅವರ ತೇಜೋವಧೆ ಮಾಡಿ, ಅವರ ವ್ಯಕ್ತಿತ್ವಕ್ಕೆ ಮಸಿ ಬಳಿದು, ಸರ್ಕಾರ ಅಸ್ಥಿರಗೊಳಿಸುವ ದುರುದ್ದೇಶದಿಂದ ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಇದರ ಜತೆಗೆ ರಾಜ್ಯಪಾಲರು ನೋಟೀಸ್ ನೀಡುವ ಮೂಲಕ ಆತುರದ ನಿರ್ಧಾರಕ್ಕೆ ಬಂದಿದ್ದು, ಅವರು ಆತುರ ನಿರ್ಧಾರ ಮಾಡಬಾರದು ಎಂದು ಮನವಿ ಮಾಡುತ್ತೇವೆ ಎಂದರು. ಸಿದ್ದರಾಮಯ್ಯ ವಿರುದ್ಧದ ತನಿಖೆ ಬಗ್ಗೆ ಯಾರು ಮಾನವಿ ಮಾಡುತ್ತಿದ್ದಾರೆ. ಅವರ ಹಿನ್ನೆಲೆಯನ್ನು ರಾಜ್ಯಪಾಲರು ಪರಿಶೀಲ...
ಸಿದ್ದರಾಮಯ್ಯರ ಭ್ರಷ್ಟ ಆಡಳಿತಕ್ಕೆ ಪಿಎಸ್‌ಐ ಬಲಿ, ಈ ಸರ್ಕಾರ ತೊಲಗಲೇಬೇಕು ಎಂದ ಅಶೋಕ್

ಸಿದ್ದರಾಮಯ್ಯರ ಭ್ರಷ್ಟ ಆಡಳಿತಕ್ಕೆ ಪಿಎಸ್‌ಐ ಬಲಿ, ಈ ಸರ್ಕಾರ ತೊಲಗಲೇಬೇಕು ಎಂದ ಅಶೋಕ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪಿಎಸ್‌ಐ ಪರಶುರಾಮ್‌ ವರ್ಗಾವಣೆಗಾಗಿ ಲಂಚ ಕೊಡಲಾಗದೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿ ಜನರನ್ನು ಲೂಟಿ ಮಾಡುತ್ತಿರುವ ಕಾಂಗ್ರೆಸ್‌ ಪಕ್ಷಕ್ಕೆ ಹೃದಯಾಘಾತವಾಗುವಂತೆ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಬಿಜೆಪಿ-ಜೆಡಿಎಸ್ ಕೈಗೊಂಡಿರುವ ಮೈಸೂರು ಪಾದಯಾತ್ರೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, 187 ಕೋಟಿ ರೂ. ಹಣ ಉಳಿಸಲು ಹೋಗಿ ಪ್ರಾಮಾಣಿಕ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರು. ಈಗ ಪಿಎಸ್‌ಐ ಸತ್ತಿದ್ದಾರೆ. ಈ ಸರ್ಕಾರ ಯಾವುದೇ ಅಧಿಕಾರಿಗಳನ್ನು ಬಿಡುವುದಿಲ್ಲ ಎಙದರು. ಸಿದ್ದರಾಮಯ್ಯ ಅವರಿಗೆ ಇನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ಉಳಿಯಲು ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗುವುದು ಸೂಕ್ತ. ಕಾಂಗ್ರೆಸ್‌ನ ಲಂಚಾವತಾರದ ವಿರುದ್ಧ ನಿಲ್ಲುವವರಿಗೆ ಬಿಜೆಪಿ ಸದಾ ಬೆಂಬಲ ನೀಡಲಿದೆ. ಅಂತಹವರ ಪರವಾಗಿ ನಾನು ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಅಶೋಕ್ ತಿಳಿಸಿದರು....
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು 

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್‌ನ ಭ್ರಷ್ಟಾಚಾರದಿಂದಾಗಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗ ಪಿಎಸ್‌ಐ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯ ಅವರಿಗೆ ಇನ್ನು ಸಿಎಂ ಸ್ಥಾನದಲ್ಲಿ ಉಳಿಯಲು ಯಾವುದೇ ನೈತಿಕತೆ ಇಲ್ಲ. ಅವರು ಕೂಡಲೇ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ  ಬಿಜೆಪಿ-ಜೆಡಿಎಸ್‌ ಕೈಗೊಂಡಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡು  ಮಾತನಾಡಿದ ಅಶೋಕ್, ಬಿಜೆಪಿಯನ್ನು ಜನರು ವಿಧಾನಸಭೆಗೆ ಕಳುಹಿಸಿರುವುದೇ ಭ್ರಷ್ಟಾಚಾರವನ್ನು ಮಟ್ಟ ಹಾಕಲು. ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟು ಕೊಳ್ಳೆ ಹೊಡೆದ ನಂತರ ಅವರ ಬೆಂಬಲಿಗರು 300 ಸೈಟು ದೋಚಿದ್ದಾರೆ. ಅವರ ಪಕ್ಷದವರೇ 3-4 ಸಾವಿರ ಕೋಟಿ ರೂ. ಲೂಟಿಯಾಗಿದೆ ಎಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ದಲಿತರ ಜಮೀನಿನ ನಿವೇಶನಗಳನ್ನು ಸಿಎಂ ಸಿದ್ದರಾಮಯ್ಯ ಪಡೆದಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ರಾಜ್ಯಪಾಲರಿಗೆ ನೋಟಿಸ್‌ ಕೊಡಲು ಅಧಿಕಾರವಿದೆಯಾ ಎಂದು ಇವರು ಪ್ರಶ್ನೆ ಮಾಡುತ್ತಾರೆ. ಬಿ.ಎಸ...
ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮೂಲಕ ಬೆಂಗಳೂರು ದೇಶದ ಗಮನಸೆಳೆದಿದೆ. ಬೆಂಗಳೂರಿನಲ್ಲಿ ಬಿಸಿಸಿಐ ನಿರ್ಮಾಣ ಮಾಡುತ್ತಿರುವ ನೂತನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಬಹುತೇಕ ಅಂತಿಮ ಹಂತದಲ್ಲಿದೆ. ಶೀಘ್ರದಲ್ಲೇ ಉದ್ಘಾಟನೆ ನೆರವೇರಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಶನಿವಾರ ತಿಳಿಸಿದ್ದಾರೆ. 45 ಅಭ್ಯಾಸದ ಪಿಚ್‌ಗಳು ಮತ್ತು ಒಲಿಂಪಿಕ್ಸ್ ಗಾತ್ರದ ಈಜುಕೊಳ ಸಹಿತ ವಿಶೇಷ ಸೌಲಭ್ಯವಿರುವ ಕ್ರಿಕೆಟ್ ಅಕಾಡೆಮಿ ಇದಾಗಿದೆ. ಈ ಅಕಾಡೆಮಿ ಬಗ್ಗೆ ಜಯ್ ಷಾ ಅವರು ಸಾಮಾಜಿಕ ಜಾಲತಾಣ 'X'ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅತ್ಯಾಧುನಿಕ ತರಬೇತಿ, ಕ್ರೀಡಾ ವಿಜ್ಞಾನ ಸೌಲಭ್ಯಗಳಿವೆ ಎಂದು ಅವರು ಪರಿಚಯಿಸಿದ್ದಾರೆ. Very excited to announce that the @BCCI’s new National Cricket Academy (NCA) is almost complete and will be opening shortly in Bengaluru. The new NCA will feature three world-class playing grounds, 45 practice pitches, indoor cricket pitches, Olympic-size swimming pool and… pic.twitter.com/...
’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ

’10 ವರ್ಷ ಬಿಡಿ, 10 ತಿಂಗಳು ಕೂಡ ಆಡಳಿತ ನಡೆಸಲು ಸಾಧ್ಯವಿಲ್ಲ’; ಸಿದ್ದು ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಇನ್ನು 10 ವರ್ಷ ಬಿಡಿ, 10 ತಿಂಗಳು ಕೂಡ ಅವರು ಆಡಳಿತ ನಡೆಸಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ ಸರಕಾರವು ಆಡಳಿತದಲ್ಲಿ ಹಿಂದೆಂದೂ ಕಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ. ಈ ಸರಕಾರ, ಸಿದ್ದರಾಮಯ್ಯನವರನ್ನು ಕಿತ್ತೊಗೆಯಲು ಈ ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು. ವಾಲ್ಮೀಕಿ ನಿಗಮ, ಮುಡಾ ಹಗರಣ ಸಿದ್ದರಾಮಯ್ಯನವರ ಗಮನಕ್ಕೆ ಬಾರದೆ ನಡೆದಿದೆಯೇ ಎಂದು ಪ್ರಶ್ನಿಸಿದ ಹೆಚ್ಡಿಕೆ, ಮುಖ್ಯಮಂತ್ರಿಗಳು ಕೆಂಪಣ್ಣ ಆಯೋಗದ ಮುಚ್ಚಿಟ್ಟ ಪುಸ್ತಕವನ್ನು ತೆರೆದಿಡಲು ಒತ್ತಾಯಿಸಿದರು. ಪಾದಯಾತ್ರೆ ತಡೆಯಲು ಕಾಂಗ್ರೆಸ್ಸಿನವರು ಬಿಡದಿಯಲ್ಲಿ ಕಾರ್ಯಕ್ರಮ ಮಾಡಿದ್ದಾರೆ. ನಮ್ಮ ಆಸ್ತಿ ಕುರಿತ ಕಾಂಗ್ರೆಸ್ಸಿನ ಅಧ್ಯಕ್ಷರ ಪ್ರಶ್ನೆಗಳಿಗೆ ಬಿಡದಿಯಲ್ಲಿ ಉತ್ತರ ಕೊಡುತ್ತೇನೆ. ಅವರ ಅಕ್ರಮಗಳನ್ನೂ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ...
BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ

BJP-JDS ಪಾದಯಾತ್ರೆ ಮೈಸೂರು ತಲುಪುವುದರೊಳಗೆ ಸಿದ್ದರಾಮಯ್ಯ ರಾಜೀನಾಮೆ; BSY ಭವಿಷ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭ್ರಷ್ಟಾಚಾರದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯನವರು ಗೌರವಯುತವಾಗಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಬಿಜೆಪಿ ಸಂಸದೀಯ ಸಮಿತಿ ನಾಯಕ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಯ ಉದ್ಘಾಟನಾ ಸಂದರ್ಭದಲ್ಲಿ ಪಾಲ್ಗೊಂಡು ಮಾತನಾಡಿದ ಯಡಿಯೂರಪ್ಪ, ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಈ ಪಾದಯಾತ್ರೆ ಮಧ್ಯದಲ್ಲೇ ರಾಜೀನಾಮೆ ಕೊಡಲಿದ್ದಾರೆ ಎಂದರು. ಕುಂಟು ನೆಪ ಬೇಡ. ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ ಅವರು ಬಿಜೆಪಿ- ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆವರೆಗೂ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು....
BJP-JDS ‘ಮೈಸೂರು ಚಲೋ’ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಎಂದ ವಿಜಯೇಂದ್ರ

BJP-JDS ‘ಮೈಸೂರು ಚಲೋ’ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಎಂದ ವಿಜಯೇಂದ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಬೆಂಗಳೂರು ಹೊರವಲಯದ ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಯನ್ನು ನಗಾರಿ ಬಾರಿಸುವ ಮೂಲಕ ವಿಜಯೇಂದ್ರ ಹಾಗೂ ನಾಯಕರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂದು ಘೋಷಣೆ ಮೊಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರಕಾರವು ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ ಎಂದು ಟೀಕಿಸಿದರು. ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ. ಭ್ರಷ್ಟ ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿಗಳೇ ...
‘ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ’; ಬಿಜೆಪಿ ಆಕ್ರೋಶ..

‘ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ’; ಬಿಜೆಪಿ ಆಕ್ರೋಶ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
'ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಮತ್ತೊಬ್ಬ ಅಧಿಕಾರಿ ಬಲಿ' ಎಂದು ಬಿಜೆಪಿ ಆಕ್ರೋಶ.. ಪಿಎಸ್​ಐ ಸಾವಿಗೆ ಕಾರಣವಾದ ಶಾಸಕನ ಬಂಧನಕ್ಕೆ ಸಿ.ಟಿ.ರವಿ ಆಗ್ರಹ..  ಯಾದಗಿರಿ: ಸೈಬರ್ ಕ್ರೈಮ್ ಠಾಣೆಯ ಪಿಎಸ್​ಐ ಪರಶುರಾಮ (34) ಎಂಬವರು ಶುಕ್ರವಾರ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ವರ್ಗಾವಣೆ ವಿಚಾರದಲ್ಲಿ ಪ್ರಭಾವಿಗಳಿಂದ ಹಣಕ್ಕಾಗಿ ಒತ್ತಡ ಹೇರಲಾಗಿದ್ದು ಇದರಿಂದ ನೊಂದಿದ್ದ ಪಿಎಸ್​ಐ ಪರಶುರಾಮ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪಿಎಸ್​ಐ ಸಾವಿನ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಬಿಜೆಪಿ ಶಾಸಕ ಸಿ.ಟಿ.ರವಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ರೇಟ್ ಕಾರ್ಡ್ ಮತ್ತು ಎಕ್ಸ್ಟ್ರಾ ಟಿಪ್ಸ್ ಹಾವಳಿಯಿಂದ ಯಾದಗಿರಿಯ ಪಿಎಸ್ಐ ಪರಶುರಾಮ ಅವರ ಜೀವ ಹೋಗಿದೆ ಎಂದು ಆರೋಪಿಸಿದ್ದಾರೆ. ಭ್ರಷ್ಟತನದ ಪರಮಾವಧಿ ಮುಟ್ಟಿದ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನೊಬ್ಬ ಪೊಲೀಸ್ ಅಧಿಕಾರಿಯನ್ನು ಬಲಿಪಡೆದಿದೆ. ಅತ್ಯಂತ ಬಡತನದ ಹಿನ್ನಲೆಯಿಂದ ಬಂದರೂ, ತನ್ನ ಛಲ ಮತ್ತು ಸಾಧನೆಯಿಂದ ಪಿಎಸ್ಐ ಆದ ಪರಶುರಾಮ್ ಛಲವಾದಿ ಯಾದಗಿರಿಯಲ್ಲಿ ನಿನ್ನೆ ಸಾವಿಗೀಡಾಗಿದ್ದಾರೆ. ಮೃತರ ಪತ್ನಿ ತನ್ನ ಪತಿಯ ಸಾವಿಗೆ, "ಯಾದಗಿರ...