Saturday, May 9

ಬೆಂಗಳೂರು

‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು

‘ಸೋಶಿಯಲ್ ಮೀಡಿಯಾ’ ಬಗ್ಗೆ ಜಾಗೃತಿ ಶಿಕ್ಷಣ ಅನಿವಾರ್ಯ ; ಶಾಲಾ ಮಟ್ಟದಲ್ಲಿ ಪಠ್ಯಕ್ರಮಕ್ಕೆ ಹಿರಿಯ ವಕೀಲ ಮನೋರಾಜ್ ಶಿಫಾರಸು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮಕ್ಕಳ ವಿಚಾರದಲ್ಲಿ ಸಾಮಾಜಿಕ ಮಾಧ್ಯಗಳಿಗೆ ಅಂಕುಶ ಹಾಕುವ ಕುರಿತು ಚರ್ಚೆಗಳು ನಡೆದಿರುವಾಗಲೇ, ರಾಜ್ಯದಲ್ಲೀಗ ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಶಿಕ್ಷಣ ಅಗತ್ಯದ ಬಗ್ಗೆ ಅಭಿಪ್ರಾಯಾಗಲು ಕೇಳಿಬಂದಿವೆ. ಇನ್ನೊಂದೆಡೆ, ಸಾಮಾಜಿಕ ಮಾಧ್ಯಮ ಕುರಿತ ಜಾಗೃತಿಗೆ ಪೂರಕವಾಗಿ ಶೈಕ್ಷಣಿಕ ಪಠ್ಯಕ್ರಮ ರೂಪಿಸಬೇಕೆಂದು ಆಡಳಿತ ಪಕ್ಷ ಕಾಂಗ್ರೆಸ್ ಒತ್ತಾಯಿಸಿದೆ. ಈ ಸಂಬಂಧ ಸರ್ಕಾರಕ್ಕೆ ಕಾಂಗ್ರೆಸ್ ಕಾನೂನು ಘಟಕದಿಂದ ಪ್ರಸ್ತಾವನೆಯೊಂದು ಸಲ್ಲಿಕೆಯಾಗುವ ಮೂಲಕ ಸೋಶಿಯಲ್ ಮೀಡಿಯಾ ಕುರಿತ ಬೆಳವಣಿಗೆಗಳಿಗೆ ನಿರ್ಣಾಯಕ ತಿರುವು ಸಿಕ್ಕಿದೆ.ಮಾಜಿ ಸರ್ಕಾರಿ ವಕೀಲರೂ ಆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಮನೋರಾಜ್ ರಾಜೀವ್ ಅವರು ಸೋಮವಾರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಸಿ.ಕೆ.ಶಿವಕುಮಾರ್, ಗೃಹಸಚಿವ ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ, ಕಾನೂನು ರೂಪಿಸುವುದಷ್ಟೇ ಅಲ್ಲ, ವಿದ್ಯಾರ್ಥಿ ಬದುಕಿನಲ್ಲೇ ಸಾಮಾಜಿಕ ಮಾಧ್ಯಮ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡುವ ಅಗತ್ಯದತ್ತ ಗಮನಸೆಳೆದ...
ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

ರಾಜ್ಯದಲ್ಲಿರುವುದು 80% ಸರ್ಕಾರ: ಪ್ರತಿಪಕ್ಷ ನಾಯಕ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿರುವುದು 80% ಸರ್ಕಾರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದಲ್ಲಿ ಮಾತನಾಡಿದ ಅವರು, ಗುತ್ತಿಗೆದಾರರು ಮೂರು ಬಾರಿ ಸುದ್ದಿಗೋಷ್ಠಿ ನಡೆಸಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಬಿಜೆಪಿ ಸರ್ಕಾರವಿದ್ದರೂ 40 ಪರ್ಸೆಂಟ್‌ ಎಂದು ಆರೋಪ ಮಾಡಲಾಗಿತ್ತು. ಮಧ್ಯವರ್ತಿಗಳ ಹಾವಳಿ, ಹಿಂದಿನ ಸರ್ಕಾರಕ್ಕಿಂತ ದುಪ್ಪಟ್ಟು ಕಮಿಶನ್‌, 80 ಪರ್ಸೆಂಟ್‌ ಕಮಿಶನ್ ಹೀಗೆ ಮೊದಲಾದ ಆರೋಪಗಳನ್ನು ಮಾಡಿದ್ದಾರೆ. ಅವರು ಮಾಡಿರುವ ಆರೋಪ ರಾಹುಲ್‌ ಗಾಂಧಿಯ ತನಕ ಹೋಗಿದೆ. ಆಂಧ್ರದವರಿಗೆ ಟೆಂಡರ್‌ ನೀಡಲಾಗಿದೆ, ಹಳೆ ಬಿಲ್‌ಗಳಿಗೆ ಹೆಚ್ಚಿನ ಕಮಿಶನ್‌ ಪಡೆಯಲಾಗುತ್ತಿದೆ, 37,370 ಕೋಟಿ ರೂ. ಬಾಕಿ ಇದೆ ಎಂದಿದ್ದರೂ ಸರ್ಕಾರ ಕ್ರಮ ವಹಿಸಿಲ್ಲ, ಮುಷ್ಕರ ಮಾಡದೇ ಬೇರೆ ದಾರಿಯಿಲ್ಲ ಎಂದು ಗುತ್ತಿಗೆದಾರರ ಸಂಘ ತಿಳಿಸಿದೆ. ನಗರಾಭಿವೃದ್ಧಿ ಇಲಾಖೆ ಸಚಿವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಂಘ ಪತ್ರ ಬರೆದಿದೆ. ಇಷ್ಟೆಲ್ಲ ಆಪಾದನೆಗಳು ಬಂದರೂ ಗುತ್ತಿಗೆದಾರರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದರೆ, ಸರ್ಕಾರ ತಪ...
‘ದೀರ್ಘ ಸಿನಿ ಪ್ರಯಾಣಕ್ಕೆ ಎಲ್ಲರ ಸಹಕಾರ ಕಾರಣ’; ಕಿಚ್ಚ ಸುದೀಪ್

‘ದೀರ್ಘ ಸಿನಿ ಪ್ರಯಾಣಕ್ಕೆ ಎಲ್ಲರ ಸಹಕಾರ ಕಾರಣ’; ಕಿಚ್ಚ ಸುದೀಪ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಮೂರು ದಶಕಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್, ಮುಂದಿನ ದಿನಗಳಲ್ಲಿ ಇನ್ನಷ್ಟು ಶ್ರಮಪಟ್ಟು ಕೆಲಸ ಮಾಡುವುದಾಗಿ ಹೇಳಿದ್ದಾರೆ.ಈ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳು, ನಿರ್ದೇಶಕರು, ಬರಹಗಾರರು, ನಿರ್ಮಾಪಕರು ಹಾಗೂ ಕನ್ನಡ ಚಲನಚಿತ್ರೋದ್ಯಮದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿರುವ ಅವರು, ತಮ್ಮ ದೀರ್ಘ ಸಿನಿ ಪ್ರಯಾಣಕ್ಕೆ ಎಲ್ಲರ ಸಹಕಾರ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.“ಮೂರು ದಶಕಗಳ ನಂತರವೂ ಈ ಚಿತ್ರಜಗತ್ತಿನಲ್ಲಿ ನಿಂತಿರುವುದು ಅನಂತ ಕೃತಜ್ಞತೆಯ ವಿಷಯ. ಕನಸುಗಳು, ಅನುಮಾನಗಳು ಮತ್ತು ನಿರೀಕ್ಷೆಗಳೊಂದಿಗೆ ಬಂದ ಒಬ್ಬ ಹುಡುಗನಿಗೆ ಇದು ನಾನು ಊಹಿಸಿದ್ದಕ್ಕಿಂತಲೂ ದೊಡ್ಡ ಅನುಭವವಾಗಿದೆ. ಇದಕ್ಕೆ ಕಾರಣರಾದವರು ಎಲ್ಲರೂ ನೀವು” ಎಂದು ಸುದೀಪ್ ಹೇಳಿದ್ದಾರೆ.ಅಭಿಮಾನಿಗಳನ್ನು ತಮ್ಮ ಶಕ್ತಿ ಮತ್ತು ಪ್ರೇರಣೆಯಾಗಿ ಉಲ್ಲೇಖಿಸಿರುವ ಅವರು, ನಿರ್ದೇಶಕರು ಮತ್ತು ಬರಹಗಾರರು ತಮ್ಮ ಮೇಲೆ ನಂಬಿಕೆ ಇಟ್ಟು ಹೊಸ ಸವಾಲುಗಳಿಗೆ ಪ್ರೇರೇಪಿಸಿದುದಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ನಿರ್ಮಾಪಕರ ಧೈರ್ಯ ಮತ...
ಉದ್ಯಮಿ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ SIT ತನಿಖೆಗೆ ಕ್ರಿಶ್ಚಿಯನ್ ಸಮುದಾಯ ಆಗ್ರಹ

ಉದ್ಯಮಿ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ SIT ತನಿಖೆಗೆ ಕ್ರಿಶ್ಚಿಯನ್ ಸಮುದಾಯ ಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷರಾದ ಡಾ.ಸಿ.ಜೆ.ರಾಯ್ ಅವರ ಸಾವಿನ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ ಒತ್ತಾಯಿಸಿದೆ.ಕ್ರಿಶ್ಚಿಯನ್ ಸೇವಾ ಸಂಘ (ಸಿಎಸ್‌ಎಸ್) ದಕ್ಷಿಣ ಭಾರತದಾದ್ಯಂತ ಕ್ರಿಶ್ಚಿಯನ್ನರ ಕಲ್ಯಾಣ ಮತ್ತು ಉನ್ನತಿಯನ್ನು ಪರಿಶೀಲಿಸುವ ಜಾತ್ಯತೀತ ವೇದಿಕೆಯಾಗಿದ್ದು, ಇದೀಗ ತಮ್ಮ ಸಮುದಾಯದ ಖ್ಯಾತ ಉದ್ಯಮಿ ಡಾ.ಸಿ.ಜೆ.ರಾಯ್ ಸಾವಿನ ಪ್ರಕರಣದಲ್ಲಿ ಕಾನೂನು ಹೋರಾಟದ ಅನಿವಾರ್ಯತೆಯನ್ನು ಪ್ರತಿಪಾದಿಸಿದೆ. ಈ ಪ್ರಕರಣ ಬಗ್ಗೆ ಕರ್ನಾಟಕ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್‌ಐಟಿ (ವಿಶೇಷ ತನಿಖಾ ತಂಡ) ರಚಿಸಬೇಕೆಂದು ಕೋರಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್, ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿಪಿಗೆ ಸಿಎಸ್‌ಎಸ್ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಶನಿವಾರ ಮನವಿ ಸಲ್ಲಿಸಿದ್ದಾರೆ.ಕಾನ್ಫಿಡೆಂಟ್ ಗ್ರೂಪ್‌ನ ಡಾ.ಸಿ.ಜೆ. ರಾಯ್, ಕ್ರಿಶ್ಚಿಯನ್ ಉದ್ಯಮಿ, ದಾರ್ಶನಿಕ ರಿಯಲ್ ಎಸ್ಟೇಟ್ ಡೆವಲಪರ್, ಲೋಕೋಪಕಾರಿ ಮತ್ತು ಸಮಾಜ ಮತ್ತು ವಿ...
ಕೇಂದ್ರ ಯೋಜನೆ ಕುರಿತು ಸುಳ್ಳು ಜಾಹೀರಾತು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

ಕೇಂದ್ರ ಯೋಜನೆ ಕುರಿತು ಸುಳ್ಳು ಜಾಹೀರಾತು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಕೇಂದ್ರ ಸರ್ಕಾರದ ಯೋಜನೆ ಕುರಿತು ಸುಳ್ಳು ಮಾಹಿತಿ ಒಳಗೊಂಡ ಜಾಹೀರಾತು ಪ್ರಕಟಿಸಲಾಗಿದೆ ಎಂದು ಆರೋಪಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆಯ ಮುಖ್ಯ ಕಾರ್ಯದರ್ಶಿ ವಿರುದ್ಧ ಮಂಡ್ಯ ಜಿಲ್ಲಾ ಬಿಜೆಪಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದೆ.ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು. ಆದರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ವಿಬಿ ಜಿ ರಾಮ್ ಜಿ ಯೋಜನೆ ಕುರಿತು ಪತ್ರಿಕೆಗಳಿಗೆ ನೀಡಿರುವ ಜಾಹೀರಾತು ರಾಜಕೀಯ ಪಕ್ಷಪಾತದಿಂದ ಕೂಡಿದೆ ಎಂದು ಬಿಜೆಪಿ ಆರೋಪಿಸಿದೆ. ತೆರಿಗೆದಾರರ ಹಣವನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಅಪಪ್ರಚಾರ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಜಾಹೀರಾತಿನಲ್ಲಿ ಮಹಾತ್ಮ ಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಯೋಜನೆಯನ್ನು ಟೀಕಿಸಲಾಗಿದೆ. ಇದು ಗಾಂಧೀಜಿಯವರಿಗೆ ಮಾಡಿದ ಅವಮಾನವಾಗಿದ್ದು, ಸಾರ್ವಜನಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಬಿಜ...
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಪತ್ತೆಹಚ್ಚಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ಆದೇಶಿಸಲಾಗಿದೆ.ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ನಿರ್ದೇಶನದ ಮೇರೆಗೆ, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ ಎಸ್‌ಐಟಿ ಕಾರ್ಯನಿರ್ವಹಿಸಲಿದೆ.ತನಿಖಾ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಉಪ ಪೊಲೀಸ್ ಆಯುಕ್ತ ಸುಧೀರ್, ಸಿಸಿಆರ್‌ಬಿ ಉಪ ಪೊಲೀಸ್ ಆಯುಕ್ತ ರಾಮಚಂದ್ರ ಹಾಗೂ ಅಶೋಕನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಸೇರಿದ್ದಾರೆ.ಐಟಿ ದಾಳಿ ಹಿನ್ನೆಲೆಯಲ್ಲಿ ಉಂಟಾದ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಆ ಅಂಶವನ್ನೂ ಒಳಗೊಂಡಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಮೊಬೈಲ್ ಫೋನ್ ಪರಿಶೀಲನೆ, ಹಣಕಾಸು ವ್ಯವಹಾರಗಳ ಪರಿಶೋಧನೆ ಸೇರಿದಂತೆ ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ನಡೆಯಲಿದೆ ಎಂದು ತಿಳಿಸಲಾಗಿದೆ....
ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ: ಸಚಿವರ ಭರವಸೆ

ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ: ಸಚಿವರ ಭರವಸೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಾನ್ವಿತ ವೇತನ ನೀಡಬೇಕಾದ ಅಗತ್ಯವಿದೆ. ಇಂಥವರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.ಭಾರತೀಯ ಕೈಗಾರಿಕಾ ಒಕ್ಕೂಟ (ಸಿಐಐ) ಶುಕ್ರವಾರ ಆಯೋಜಿಸಿದ ಎಂಎಸ್‌ಎಂಇ ಮತ್ತು ಉದ್ಯೋಗಾವಕಾಶಗಳ ಸಮಾವೇಶವನ್ನು ಉದ್ಘಾಟಿಸಿ ಸಚಿವ ಡಾ. ಪಾಟೀಲ್ ಭಾಷಣ ಮಾಡಿದರು. ಎಂಎಸ್‌ಎಂಇ ವಲಯದಲ್ಲಿ ಕಡಿಮೆ ವೇತನ ಇರುವ ಬಗ್ಗೆ ಮಾಹಿತಿ ಬಂದಿದೆ. ಬೆಂಗಳೂರಿನಂತಹ ನಗರದಲ್ಲಿ ಉದ್ಯೋಗಿಗಳು ಯೋಗ್ಯ ಜೀವನವನ್ನು ನಡೆಸಲು ಅನುವು ಮಾಡಿಕೊಡುವ ಗೌರವಾನ್ವಿತ ವೇತನವನ್ನು ಎಂಎಸ್‌ಎಂಇಗಳು ನೀಡಬೇಕು ಎಂದು ಕರೆ ನೀಡಿದರು."ಕರ್ನಾಟಕದ ಎರಡನೇ ಮತ್ತು ಮೂರನೇ ಹಂತದ ಪ್ರದೇಶಗಳಲ್ಲಿ ಕೌಶಲ್ಯಪೂರ್ಣ ಮತ್ತು ಅರ್ಹ ಉದ್ಯೋಗಿಗಳು ಬೆಂಗಳೂರಿನಲ್ಲಿ ಉದ್ಯೋಗಗಳನ್ನು ತ್ಯಜಿಸಿ ತವರು ಸ್ಥಳಗಳಿಗೆ ಹೋಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಕಲಬುರಗಿಯ ವ್ಯಕ್ತಿಯು ಕೇವಲ ₹20,000 ಮಾಸಿಕ ಸಂಬಳದೊಂದಿಗೆ ಬೆಂಗಳೂರಿನಲ್ಲಿ ಹೇಗೆ ಬದುಕಬಹುದು?"...
ವಿಕಲಚೇತನರ ಸ್ವಾವಲಂಬನೆಗೆ ಸರ್ಕಾರದ ವಿನೂತನ ಹೆಜ್ಜೆ; ವಿಶೇಷ ಉದ್ಯೋಗ ಮೇಳ

ವಿಕಲಚೇತನರ ಸ್ವಾವಲಂಬನೆಗೆ ಸರ್ಕಾರದ ವಿನೂತನ ಹೆಜ್ಜೆ; ವಿಶೇಷ ಉದ್ಯೋಗ ಮೇಳ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಹಭಾಗಿತ್ವದಲ್ಲಿ ವಿಕಲಚೇತನರಿಗಾಗಿ ವಿಶೇಷವಾಗಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಇದು ರಾಜ್ಯ ಸರ್ಕಾರದ ವಿನೂತನ ಮತ್ತು ಮಹತ್ವದ ಕಾರ್ಯಕ್ರಮವಾಗಿದೆ ಎಂದು ಹೇಳಿದರು.ವಿಕಲಚೇತನರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ಹಾಗೂ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವುದೇ ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ಮೂಲಕ, ...
ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಹಾರ ವಿತರಣೆ: ಎನ್.ಚಲುವರಾಯಸ್ವಾಮಿ

ಮೂರು ವರ್ಷಗಳಲ್ಲಿ 5542 ಕೋಟಿ ರೂಪಾಯಿ ವಿಮೆ ಪರಹಾರ ವಿತರಣೆ: ಎನ್.ಚಲುವರಾಯಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗು ಜನಪ್ರತಿನಿಧಿಗಳೊಂದಿಗೆ ವಿಮೆ ಪರಿಹಾರ ಸುಧಾರಣೆ ತರಲು ಚರ್ಚಿಸಿ ಆಯಾ ಹಂಗಾಮಿನ ವಿಮೆ ಪರಿಹಾರವನ್ನು ಅದೇ ವಾರ್ಷಿಕ ವರ್ಷದ ಅವಧಿಯಲ್ಲಿ ಒದಗಿಸುವಂತೆ ಕ್ರಮ ಜರುಗಿಸಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ವಿಧಾನಸಭೆಯಲ್ಲಿ ಉತ್ತರ ನೀಡಿದರು.ಕಲ್ಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಕೃಷಿ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಬಿತ್ತನೆ ಮಾಡಿದ ಕೆಲವೇ ದಿನಗಳಲ್ಲಿ ಅಧಿಕ ಮಳೆಯಿಂದ ಶೇ 5೦ ಕ್ಕೂ ಹೆಚ್ಚು ಬೆಳೆ ಹಾನಿ ಆದ ಸಂದರ್ಭದಲ್ಲಿ ತಕ್ಷಣವೇ ರೈತರಿಗೆ ಮಿಡ್ ಸೀಸನ್ ಅಡ್ವೈಸರಿ ನಿಯಾಮಾವಳಿ ಪ್ರಕಾರ ವಿಮೆ ಪರಿಹಾರವನ್ನು ನೀಡಿ ರೈತರ ನೇರವಿಗೆ ನಮ್ಮ ಸರ್ಕಾರ ಧಾವಿಸಿದೇ ಎಂದು ಸಚಿವರು ಉತ್ತರಿಸಿದರು.ವಿಶೇಷವಾಗಿ ಕಪ್ & ಕ್ಯಾಪ್ ಮಾದರಿಯಲ್ಲಿ ವಿಮೆ ಪರಿಹಾರವನ್ನು ನಿರ್ಧರಿಸಲು ಕ್ತಮ ಕೈಕೊಂಡಿರುವುದರಿಂದ ವಿಮೆ ಪರಿಹಾರ ವಿತರಣೆಯಲ್ಲಿ ಸುಧಾರಣೆಯನ್ನು ತರಲಾಗಿದೆ. ಈ ...
ಪಂಚಾಯತ್‌ಗಳ ಅಭಿವೃದ್ಧಿ ಸ್ಥಗಿತದ ಭೀತಿ: ಕೇಂದ್ರ ಅನುದಾನ ತಕ್ಷಣ ಬಿಡುಗಡೆ ಅಗತ್ಯ

ಪಂಚಾಯತ್‌ಗಳ ಅಭಿವೃದ್ಧಿ ಸ್ಥಗಿತದ ಭೀತಿ: ಕೇಂದ್ರ ಅನುದಾನ ತಕ್ಷಣ ಬಿಡುಗಡೆ ಅಗತ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನಗಳನ್ನು ಬಿಡುಗಡೆ ಮಾಡುವುದು ಅತ್ಯಗತ್ಯವಾಗಿದೆ. ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ಗ್ರಾಮ ಪಂಚಾಯತಿಗಳ ಪ್ರಸ್ತುತ ಅವಧಿ 2026ರ ಜನವರಿ-ಫೆಬ್ರವರಿ ತಿಂಗಳಿನಲ್ಲಿ ಮುಕ್ತಾಯಗೊಳ್ಳಲಿದ್ದು, ಅನುದಾನದ ಕೊರತೆಯಿಂದಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಕರ್ನಾಟಕವು ಗ್ರಾಮೀಣ ವಿಕೇಂದ್ರೀಕರಣದಲ್ಲಿ ನಿರಂತರವಾಗಿ ಮುಂಚೂಣಿಯಲ್ಲಿದೆ ಮತ್ತು ಪಂಚಾಯತಿ ಮಟ್ಟದ ಆಡಳಿತವನ್ನು ಉಳಿಸಿಕೊಳ್ಳಲು ಹಾಗೂ ಅವುಗಳ ಅವಧಿ ಮುಗಿಯುವ ಮೊದಲೇ ನಿರ್ಣಾಯಕ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರವು ಸಕಾಲಕ್ಕೆ ಅನುದಾನಗಳನ್ನು ಬಿಡುಗಡೆ ಮಾಡುವುದು ಅತ್ಯಗತ್ಯವಾಗಿದೆ ಎಂದಿದ್ದಾರೆ.ಈ ಕುರಿತು ಕರ್ನಾಟಕದ ಗ್ರಾಮ ಪಂಚಾಯತಿಗಳಿಗೆ ಕೇಂದ್ರ ಸರ್ಕಾರದಿಂದ ಬಾಕಿ ಇರುವ 15ನೇ ಹಣಕಾಸು ಆಯೋಗದ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಲು ಗಮನಹರಿಸಬೇಕೆಂದು ಕೇಂದ್ರ ಪಂಚಾಯತ್ ರಾಜ್ ...