ದ್ವೇಷ ರಾಜಕಾರಣ ಮಾಡುತ್ತಿರುವ ರಾಜ್ಯ ಸರ್ಕಾರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಯಲಿದೆ: ಆರ್.ಅಶೋಕ
ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಸಿದ್ದಸಿರಿ ಸಕ್ಕರೆ ಕಾರ್ಖಾನೆಯ ಮರು ಆರಂಭಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ನ್ಯಾಯಕ್ಕಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿಯಲ್ಲಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಲ್ಲಿನ ಅಧಿಕಾರಿಗಳು ಸ್ಥಳಕ್ಕೆ ಬಾರದೆ ವಿಧಾನಸೌಧದ ಕಡೆಗೆ ಮುಖ ಮಾಡಿಕೊಂಡು ಕೂತಿದ್ದಾರೆ. ಒಂದು ಕಡೆ ಮುಡಾ ಹಗರಣ, ಮತ್ತೊಂದು ಕಡೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಇನ್ನೊಂದು ಖರ್ಗೆ ಹಗರಣ ನಡೆದಿದೆ. ಇಂತಹ ಸ್ಥಿತಿಯಲ್ಲಿ ಸ್ವಾಯತ್ತ ಸಂಸ್ಥೆಯ ಮೇಲೆ ಈ ಕೆಟ್ಟ ಸರ್ಕಾರ ಒತ್ತಡ ಹೇರಿದೆ. ಹಿಂದುಳಿದ ಪ್ರದೇಶವಾದ ಕಲಬುರ್ಗಿಯಲ್ಲಿ ಮುಳುಗಿಹೋಗಿದ್ದ ಸಕ್ಕರೆ ಕಾರ್ಖಾನೆಯನ್ನು ಶಾಸಕ ಯತ್ನಾಳ್ ಅಭಿವೃದ್ಧಿಪಡಿಸಿದ್ದಾರೆ. ಈ ಕಾರ್ಖಾನೆಯಿಂದ ಎರಡು ಸಾವಿರ ಜನರಿಗೆ ಉದ್ಯೋಗ ದೊರೆತಿದೆ, ಸಾವಿರಾರು ರೈತರಿಗೆ ಲಾಭವಾಗುತ್ತಿದೆ. ಆದರೆ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ. *ಹೈಕೋರ್ಟ್...






