Thursday, January 29

ಬೆಂಗಳೂರು

ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಮುಖ್ಯಮಂತ್ರಿಗಳಿಗೆ ವಿಜಯೇಂದ್ರ ಆಗ್ರಹ

ಭಂಡತನ ಬಿಟ್ಟು ರಾಜೀನಾಮೆ ಕೊಡಿ: ಮುಖ್ಯಮಂತ್ರಿಗಳಿಗೆ ವಿಜಯೇಂದ್ರ ಆಗ್ರಹ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ಮುಡಾ ನಿವೇಶನ ಹಗರಣದ ದೂರಿನ ಸಂಬಂಧ ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನದತ್ತ ಅಧಿಕಾರ ಚಲಾಯಿಸಿ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಜಯೇಂದ್ರ ಅವರು ಪೋಸ್ಟ್ ಮಾಡಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ.” ಎಂದು ಗಮನ ಸೆಳೆದಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಂಡತನ ಪ್ರದರ್ಶಿಸುತ್ತಿದ್ದರು. ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆ...
ತನಿಖೆಗೆ ರಾಜ್ಯಪಾಲರ ಅನುಮತಿ ಹಿನ್ಬೆಲೆ; ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು

ತನಿಖೆಗೆ ರಾಜ್ಯಪಾಲರ ಅನುಮತಿ ಹಿನ್ಬೆಲೆ; ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ಬಗ್ಗೆ ಸ್ಪಷ್ಟನೆ ನೀಡಲು ಸಾಧ್ಯವಾಗಿಲ್ಲ. ಸದನದಲ್ಲಿ ನಿಲುವಳಿ ಸೂಚನೆಗೆ ಅವಕಾಶ ಕೊಟ್ಟು ಜನರಲ್ಲಿರುವ ಗೊಂದಲ ನಿವಾರಣೆ ಮಾಡಬೇಕಿತ್ತು. ಅದನ್ನು ಬಿಟ್ಟು ಪಲಾಯನ ಮಾಡಿದ್ದರಿಂದ ಇದರಲ್ಲಿ ಏನೋ ಇದೆ ಎಂಬ ಅನುಮಾನ ಎಲ್ಲರಿಗೂ ಸ್ಪಷ್ಟವಾಯಿತು. ಪ್ರತಿ ಹಂತದಲ್ಲೂ ಸಿದ್ದರಾಮಯ್ಯನವರ ಹಸ್ತಕ್ಷೇಪ ಕಂಡುಬಂದಿದೆ. ಡಿ ನೋಟಿಫಿಕೇಶನ್‌, ಭೂ ಪರಿವರ್ತನೆ ಈ ಎಲ್ಲ ಹಂತದಲ್ಲೂ ಅವರ ಹುದ್ದೆಯ ಪ್ರಭ...
ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶಾಧ್ಯಂತ ಆಸ್ಪತ್ರೆ ವೈದ್ಯರ ಮುಷ್ಕರ; ರೋಗಿಗಳ ಪರದಾಟ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಕೋಲ್ಕತ್ತಾದಲ್ಲಿ ತರಬೇತಿ ನಿರತ ವೈದ್ಯೆಯ ಮೇಲಿನ ಅಮಾನುಷ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದೇಶಾದ್ಯಂತ ವೈದ್ಯರು ಇಂದು ಮುಷ್ಕರ ಕೈಗೊಂಡಿದ್ದಾರೆ. ದೆಹಲಿ, ಮಹಾರಾಷ್ಟ್ರ, ಕರ್ನಾಟಕ ಸಹಿತ ಬಹುತೇಕ ರಾಜ್ಯಗಳಲ್ಲಿ ಆಸ್ಪತ್ರೆಯ ಸೇವೆಗಳನ್ನು ಸ್ಥಗಿತಗೊಳಿಸಿ ವೈದ್ಯರು ಮುಷ್ಕರ ಕೈಗೊಂಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ ನಡೆಯುತ್ತಿದ್ದು ಭಾನುವಾರ ಭಾನುವಾರ ಬೆಳಗ್ಗೆ 6 ಗಂಟೆಯವರೆಗೆ ಮುಂದುವರಿಯಲಿದೆ ಎಂದು ವೈದ್ಯರ ಸಂಘದ ಮುಖಂಡರು ತಿಳಿಸಿದ್ದಾರೆ. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​ಮುಂದಾಳುತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ರೋಗಿಗಳಿಗೆ ತೊಂದರೆಯಾಗದಂತೆ ಈ ಹೋರಾಟ ನಡೆಸಲಾಗುತ್ತಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ. ಈ ನಡುವೆ ವೈದ್ಯರ ಮುಷ್ಕರದಿಂದಾಗಿ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳು ಪರದಾಡುವಂತಾಗಿದೆ....
ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆಂಬ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ರಾಜಕೀಯ ವಿಶ್ಲೇಷಕರೂ, ಕಾನೂನು ತಜ್ಞರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು, ಪ್ರಾಸಿಕ್ಯೂಷನ್ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು 'ಹೈಕೋರ್ಟ್‌ ಹಿಂದೆ ನೀಡಿದ್ದ ಆದೇಶ'ವನ್ನು ಪರಿಗಣಿಸಿಲ್ಲ ಎಂಬ ಬಗ್ಗೆ ಬೊಟ್ಟುಮಾಡಿದ್ದಾರೆ. ಕೆಪಿಸಿಸಿ ಮಾಧ್ಯಮ-ಸಂವಹನ ವಿಭಾಗದ ಅಧ್ಯಕ್ಷರೂ ಆಗಿರುವ ರಮೇಶ್ ಬಾಬು, ರಾಜ್ಯಪಾಲರ ಆತುರದ ನಡೆಯು ರಾಜಕೀಯ ಪ್ರೇರಿತವಾಗಿದ್ದು, ಇದು ಅನಗತ್ಯ ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶ, ಸಲಹೆಗಳನ್ನು ರಾಜ್ಯಪಾಲರು ಗೌರವಿಸಿಲ್ಲ. ಇದು ಪಕ್ಷಪಾತೀಯ ನಡೆಯಾಗಿದ್ದು, ಇದರಿಂದ ಅನಗತ್ಯ ಕಾನೂನು ಸಂಘರ್...
ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ.

ಮುಡಾ ಹಗರಣ; ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ.

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ- MUDA ಸೈಟ್ ಹಂಚಿಕೆ ಅಕ್ರಮ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆಯೇ? ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಸುದ್ದಿಯೊಂದು ಹರಿದಾಡುತ್ತಿದೆ. ಮುಡಾ ನಿವೇಶನ ಹಂಚಿಕೆ ಕ್ರಮದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಾಮಾಜಿಕ ಹೋರಾಟಗಾರ ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸಿದ್ದಾರೆ ಎನ್ನಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿರುವ ಅಬ್ರಹಾಂ ಅವರಿಗೆ ರಾಜ್ಯಪಾಲರ ಕಚೇರಿಯಿಂದ ಕರೆ ಹೋಗಿದೆ ಎನ್ನಲಾಗಿದೆ. ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಶನಿವಾರ ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ಬರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ....
ಅಡ್ಡೂರು-ಪೊಳಲಿ ಸೇತುವೆ ದುರ್ಬಲ; ತ್ವರಿತ ಕ್ರಮಕ್ಕಾಗಿ ಡಿಸಿಗೆ ಜನಪ್ರತಿನಿಧಿಗಳ ಸೂಚನೆ

ಅಡ್ಡೂರು-ಪೊಳಲಿ ಸೇತುವೆ ದುರ್ಬಲ; ತ್ವರಿತ ಕ್ರಮಕ್ಕಾಗಿ ಡಿಸಿಗೆ ಜನಪ್ರತಿನಿಧಿಗಳ ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಮಂಗಳೂರು ಲೋಕೋಪಯೋಗಿ ವಿಭಾಗದ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಡ್ಡೂರು ಗ್ರಾಮದ ಅಡ್ಡೂರು-ಪೊಳಲಿ ಸೇತುವೆ ಶಿಥಿಲಗೊಂಡು ಘನವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಮುಂಜಾಗೃತ ಕ್ರಮದಿಂದಾಗಿ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ. ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರ ಜೊತೆಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಕ್ರಮಕೈಗೊಂಡು ಮತ್ತು ತಜ್ಞರ ತಂಡದಿಂದ ಸೇತುವೆಯ ದೃಢತೆಯ ಬಗ್ಗೆ ಮತ್ತೊಮ್ಮೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿಯವರೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಣಾಧಿಕಾರಿ ಅಮರನಾಥ ಜೈನ್, ಅಪರ ಜಿಲ್ಲಾಧಿಕಾರಿ ಸಂತೋಷ್ ಉಪಸ್ಥಿತರಿದ್ದರು....
ರಾಜ್ಯದ ಜನರಿಗೆ ‘ಗ್ಯಾರೆಂಟಿ’ ನ್ಯಾಯ; ಸ್ವಾತಂತ್ಯೋತ್ಸವದಲ್ಲಿ ಕೆಪಿಸಿಸಿ ನಾಯಕರ ಭರವಸೆ

ರಾಜ್ಯದ ಜನರಿಗೆ ‘ಗ್ಯಾರೆಂಟಿ’ ನ್ಯಾಯ; ಸ್ವಾತಂತ್ಯೋತ್ಸವದಲ್ಲಿ ಕೆಪಿಸಿಸಿ ನಾಯಕರ ಭರವಸೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ಜೊತೆ ಕೈಜೋಡಿಸಿದ್ದ ದೇಶದ್ರೋಹಿಗಳು, ಇಂದು ಅಧಿಕಾರ ಸಿಕ್ಕ ತಕ್ಷಣ ನಮಗೆ ದೇಶ ಭಕ್ತಿಯ ಪಾಠ ಮಾಡುತ್ತಿರುವುದು ದುರಂತ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿ ಆವರಣದಲ್ಲಿ 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು "ಸ್ವಾತಂತ್ರ ಹೋರಾಟದಲ್ಲಿ ಸುಮಾರು 6.5 ಲಕ್ಷ ಜನ ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ನಮ್ಮ ಕಾಂಗ್ರೆಸ್ ಪಕ್ಷ ಎಂಬುದು ನಮ್ಮ ಹೆಗ್ಗಳಿಕೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಧೈರ್ಯದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಪಕ್ಷ ಎಂದು ಹೇಳಬೇಕು" ಎಂದರು. "ಶಾಮ ಪ್ರಸಾದ ಮುಖರ್ಜಿ ಅವರು ಕ್ವಿಟ್ ಇಂಡಿಯಾ ಚಳುವಳಿ ಹತ್ತಿಕ್ಕಬೇಕು ಎಂದು ಬ್ರಿಟಿಷರಿಗೆ ಪತ್ರ ಬರೆದಿದ್ದರು. ಇವರ ಹಿಂಬಾಲಕರು ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂದು ಕೇಳುತ್ತಾರೆ. ಬಿಜೆಪಿ ಸರ್ಕಾರ ಖಾಸಗಿಯವರಿಗೆ ಮಾರುತ್ತಿರುವ ಸಾರ್ವಜನಿಕ ವಲಯ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದೇ ಕಾ...
VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

VIDEO: ಭಾರತಾಂಬೆಯಾಗಿ ಗಮನಸೆಳೆದ ಕಟೀಲೇಶ್ವರಿ; ತ್ರಿವರ್ಣ ವಸ್ತ್ರಾಲಂಕಾರದಿಂದ ಭಕ್ತರ ಗಮನಸೆಳೆದ ಕಟೀಲು ಕ್ಷೇತ್ರದ ದೇವಿ

ಆಧ್ಯಾತ್ಮ, ದೇಗುಲ ದರ್ಶನ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಎಲ್ಲೆಲ್ಲೂ ಸ್ವಾತಂತ್ರ್ಯೋತ್ಸವ ಸಂಭ್ರಮ ಆವರಿಸಿದೆ. ನಾಡಿಲೆಲ್ಲೆಡೆ ತ್ರಿವರ್ಣ ಧ್ವಜ ರಾರಾಜಿಸಿಸುತ್ತಿದ್ದು, ಕಟೀಲು ಕ್ಷೇತ್ರದಲ್ಲಿ ನೆಲೆಸಿರುವ ಜಗನ್ಮಾತೆ ಕೂಡಾ ಇಂದು ಭಾರತಾಂಬೆ ಸ್ವರೂಪಿಣಿಯಾಗಿ ಗಮನಸೆಳೆದಿದ್ದಾಳೆ. https://youtu.be/DmTtTvOepMg?si=OqLdwg-tIeZMHTt5 ಜಗದಾಂಬೆ ಶ್ರೀ ಕಟೀಲೇಶ್ವರಿಯು ಸ್ವಾತಂತ್ರ್ಯ ದಿನವಾದ ಇಂದು ಭಾರತಾಂಭೆಯಾಗಿ ಗಮನಸೆಳೆದದ್ದು ವಿಶೇಷ. ಕಳೆದ ವರ್ಷದಂತೆಯೇ ಈ ವರ್ಷವೂ ಸ್ವಾತಂತ್ರ್ಯೋತ್ಸವ ದಿನದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ವಿಗ್ರಹಕ್ಕೆ ರಾಷ್ಟ್ರಧ್ವಜವನ್ನು ಹೋಲುವ ಬಣ್ಣದ ವಸ್ತ್ರಾಲಂಕಾರ ಮಾಡಲಾಗಿದೆ. ಈ ಅಲಂಕಾರ ಭಕ್ತರ ಕುತೂಹಲದ ಕೇಂದ್ರಬಿಂದುವಾಗಿದೆ. ಕರಾವಳಿಯ ಪುಣ್ಯಕ್ಷೇತ್ರ ಕಟೀಲಿನಲ್ಲಿ ದೇಶಭಕ್ತಿಯ ಮಹಾ ಹಬ್ಬವನ್ನು ಆಚರಿಸಲಾಯಿತು. ಹಿಂದೂ ಧಾರ್ಮಿಕ ಹಬ್ಬಗಳಂದು ವಿಶೇಷ ಕೈಂಕರ್ಯಗಳಿಂದ ಭಕ್ತರನ್ನು ಕೈಬೀಸಿ ಕರೆಯುವ ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಈ ರೀತಿಯ ಆಕರ್ಷಣೆ ಭಕ್ತ ಸಮೂಹದ ಮೆಚ್ಚುಗೆಗೂ ಪಾತ್ರವಾಗಿದೆ....
ಬೆಂಗಳೂರು: ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಬೆಂಗಳೂರು: ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆದ ಜೀಪ್ ನಲ್ಲಿ ಪರೇಡ್ ವೀಕ್ಷಣೆ ಮಾಡಿ, ಗೌರವ ವಂದನೆ ಸ್ವೀಕರಿಸಿದರು....
ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ಸ್ವಾತಂತ್ರ್ಯೋತ್ಸವ ಸಂಭ್ರಮ.. ಎಲ್ಲೆಲ್ಲೂ ದೇಶಪ್ರೇಮದ ಮಹಾಹಬ್ಬದ ಸಂಭ್ರಮ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ದೇಶಭಕ್ತಿಯ ಪ್ರತೀಕವೆಂಬಂತೆ ಆಚರಿಸಲಾಗುತ್ತಿದೆ. ಬೆಳಿಗ್ಗೆಯೇ ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿದೆ. 78ನೇ ಸ್ವಾತಂತ್ರ್ಯ ದಿನಾಚರಣೆ ದೇಶಪ್ರೇಮದ ಮಹಾಹಬ್ಬವಾಗಿ ಅದ್ಧೂರಿಯಾಗಿ ನಡೆದಿದೆ. ಮನೆಮನೆಗಳಲ್ಲೂ ತಿಂರಂಗ ಧ್ವಜ ಹಾರಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮುನ್ನುಡಿ ಬರೆದಿರುವ ಹರ್ ಘರ್ ತಿರಂಗ ಅಭಿಯಾನಕ್ಕೂ ಭಾರೀ ಬೆಂಬಲ ವ್ಯಕ್ತವಾಗಿದೆ. ಇದೇ ವೇಳೆ, ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜರೋಹಣ ಮಾಡಿದರು. ಶಾಲೆಗಳಲ್ಲಿ, ಸಂಘಸಂಸ್ಥೆಗಳಲ್ಲೂ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಗಳು ಗಮನಸೆಳೆದವು....