Wednesday, January 28

ಬೆಂಗಳೂರು

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ದಾದಿಯರ ನೇಮಕ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್‌-ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್‌ಗಳನ್ನು (ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ಮಾಡಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಕಾಸ ಸೌಧದಲ್ಲಿ ಬುಧವಾರ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‌ಗಳ ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ ವೈದ್ಯಕೀಯ ಕಾಲೇಜು ಸಂಸ್ಥೆಗಳ ಮುಖ್ಯಸ್ಥರು ನೇಮಕಾತಿ ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಸಚಿವರು, ಮುಂಬರುವ ಗ್ರೂಪ್‌-ಎ ಮತ್ತು ದಾದಿಯರ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂ...
27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

27 ಹಕ್ಕುದಾರರಿರುವ ಪಿತ್ರಾರ್ಜಿತ ಆಸ್ತಿಯನ್ನು ಒಬ್ಬನ ಸಹಿಯಿಂದ ಪಡೆದರೇ ಸಿಎಂ ಸಿದ್ದರಾಮಯ್ಯ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು. ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದ್ದು, 1936 ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು 28 ವರ್ಷಗಳ ಹಿಂದೆ ನಿಧನರಾಗಿದ್ದು, ಅವರ ಪತ್ನಿ ನಿಂಗಮ್ಮ 1990 ರಲ್ಲಿ ಮೃತರಾಗಿದ್ದರು. ಇದು ನಿಂಗ ಮತ್ತು ನಿಂಗಮ್ಮ ಅವರ ಸ್ವಯಾರ್ಜಿತ ಆಸ್ತಿಯಾಗಿದ್ದು, ಅವರ ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಾಗಿದೆ. ನಿಂಗ ಅವರಿಗೆ ಮೂರು ಮಕ್ಕಳಿದ್ದು, ಅವರ ಕುಟುಂಬದವರು 27 ಜನರಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ದೇವರಾಜು ಎಂಬ ಒಬ್ಬ ವ್ಯಕ್ತಿಯಿಂದ ಮಾತ್ರ ಸಹಿ ಹಾಕಿಸಿಕೊಂಡಿದ್ದಾರೆ ಎಂದು ವಿವರಿಸಿದರು. 1968 ರಲ್...
ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಬೌರಿಂಗ್ ಹಾಸ್ಪಿಟಲ್ ನೆಲಸಮಗೊಳಿಸಿ ಹೊಸ ಆಸ್ಪತ್ರೆ ನಿರ್ಮಾಣಕ್ಕೆ ತಯಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಸದುದ್ದೇಶದಿಂದ ಶಿವಾಜಿ ನಗರದಲ್ಲಿರುವ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಾ ಬೌರಿಂಗ್ ಆಸ್ಪತ್ರೆ ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ. ಈ ಹಿಂದೆ ಇದ್ದ ಬೌರಿಂಗ್ ಆಸ್ಪತ್ರೆಯನ್ನು ನೆಲಸಮಗೊಳಿಸಿ ನೂತನ ಹತ್ತು ಅಂತಸ್ತಿನ 500 ಹಾಸಿಗೆಗಳ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮುಂದಿನ ತಿಂಗಳು ಶಂಕುಸ್ಥಾಪನೆಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೋಮವಾರ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಭೇಟಿ ನೀಡಿದ ವೇಳೆ ವರಿದಿಗಾರರಿಗೆ ಹೇಳಿದರು. ಇದೆ ವೇಳೆ ಅಲ್ಲಿನ ಡೆಂಘೀ ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಅಸ್ಪತ್ರೆಯಲ್ಲಿ ವೈದ್ಯರು ಸೂಕ್ತವಾದ ಚಿಕಿತ್ಸೆ ನೀಡುತ್ತಿದ್ದಾರೆಯೇ? ಬೆಳಗಿನ ಉಪಹಾರ, ಮಧ್ಯಾಹ್ನಾದ ಬೋಜನ ಸಮಯಕ್ಕೆ ಸರಿಯಾಗಿ ನೀಡುತ್ತಿದ್ದಾರೆಯೇ ಎಂದು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಅಟಲ್...
ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಬಿಜೆಪಿ-ಜೆಡಿಎಸ್‌ನಿಂದ ಬಡಜನರ ವಿರುದ್ದ ಪಾದಯಾತ್ರೆ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
  ಮಂಡ್ಯ: ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮಂಡ್ಯದಲ್ಲಿ ಮಂಗಳವಾರ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಧಮ್ ಇಲ್ಲ. ಹೀಗಾಗಿ ಮಾಧ್ಯಮಗಳಲ್ಲಿ ಕೇವಲ ನನ್ನ ಮತ್ತು ಕುಮಾರಸ್ವಾಮಿ ಅವರ ವಿಚಾರವನ್ನೇ ಮಾಧ್ಯಮಗಳು ತೆಗೆದುಕೊಳ್ಳುತ್ತಿವೆ” ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು. “ಬಿಜೆಪಿ, ಜೆಡಿಎಸ್ ಪಾದಯಾತ್ರೆ ಮಾಡುತ್ತಿರುವುದು ನನ್ನ ಹಾಗೂ ಸಿದ್ದರಾಮಯ್ಯ ಅವರ ವಿರುದ್ಧವಲ್ಲ. ಈ ರಾಜ್ಯದ ಬಡಜನರ ವಿರುದ್ದ ಪಾದಯಾತ್ರೆ ಮಾಡುತ್ತಿದ್ದಾರೆ. ಈ ರಾಜ್ಯದ ಜನ ಕಾಂಗ್ರೆಸ್ ಗೆ ಶೇ. 43 ರಷ್ಟು ಮತ ನೀಡಿ 136 ಸ್ಥಾನ ನೀಡಿದ್ದಾರೆ. ಮಂಡ್ಯದಲ್ಲಿ 7 ಸ್ಥಾನ ಕೊಟ್ಟಿದ್ದಾರೆ. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ಇದನ್ನು ನಿಲ್ಲಿಸಲು ಸರ್ಕಾರ ಬೀಳಿಸುವ ಹುನ್ನಾರ ಮ...
ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಹಿಂದು ಸೇವಾ ಪ್ರತಿಷ್ಠಾನ: ‘ಮನೆ ಮನಗಳ ಭೂಷಣ’ ಕೃತಿ ಬಿಡುಗಡೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವನವಾಸಿ ಕಲ್ಯಾಣ ಕರ್ನಾಟಕ ಮತ್ತು ಹಿಂದು ಸೇವಾ ಪ್ರತಿಷ್ಠಾನ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸ್ವರ್ಗೀಯ ಶ್ರೀ ಕೆ. ಎಸ್.ನಾಗಭೂಷಣ ಅವರ ಸ್ಮರಣಾರ್ಥ 'ಮನೆ ಮನಗಳ ಭೂಷಣ' ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಆಗಸ್ಟ್ 6, 2024 ಸಂಜೆ ಶಂಕರಪುರದ ರಂಗರಾವ್ ರಸ್ತೆಯ ಉತ್ತುಂಗದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕ ಸು. ರಾಮಣ್ಣ, ಹಿರಿಯ ಕಾರ್ಯಕರ್ತ ವೈ.ಕೆ.ರಾಘವೇಂದ್ರ ರಾವ್, ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಮಂಗೇಶ್ ಭೇಂಡೆ, ಸಹಸರಕಾರ್ಯವಾಹ ಮುಕುಂದ ಸಿ.ಆರ್. ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು....
ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ವಯನಾಡು ಸಂತ್ರಸ್ತರಿಗಾಗಿ ಮಿಡಿದ ಕರುನಾಡು ಹೃದಯಗಳು.. BTM, ಜಯನಗರ ಕ್ಷೇತ್ರಗಳಿಂದ 9 ಟ್ರಕ್‌ಗಳಲ್ಲಿ ಅಹಾರ, ಅಗತ್ಯವಸ್ತು ರವಾನೆ..

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೇರಳದ ವಯನಾಡಿನಲ್ಲಿ, ಹಾಗೂ ಕರಾವಳಿಯ ಶಿರೂರಿನಲ್ಲಿ ಭೂಕುಸಿತದಿಂದ ಸಂತ್ರಸ್ತರಾದ‌ ಬಡಪಾಯಿಗಳ ಬಗ್ಗೆ ಬೆಂಗಳೂರಿನ ಬಿಟಿಎಂ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳ ಜನರು ಅನುಕಂಪ ತೋರಿದ್ದಾರೆ. ಬಿಟಿಎಂ ಮತ್ತು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಯನಾಡು ಮತ್ತು ಶಿರೂರು ಸಂಭವಿಸಿದ ಭೂಕುಸಿತದ ದುರಂತಕ್ಕೆ ಸ್ಪಂದಿಸಲು ಪರಿಹಾರ ಸಾಮಾಗ್ರಿಗಳನ್ನು ರವಾನಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಸಾರಿಗೆ ಮತ್ತು ಮುಜರಾಯಿ‌ ಸಚಿವ ರಾಮಲಿಂಗಾ ರೆಡ್ಡಿ ಉಪಸ್ಥಿತಿಯಲ್ಲಿ, ಆಹಾರ, ಸಾಮಾಗ್ರಿಗಳನ್ನು ಹೊತ್ತ ಸುವಾರು 9 ಟ್ರಕ್ ಗಳಿಗೆ ಉಪಮುಖ್ಯಮಂತ್ರಿ ಡಿ.ಕೆ‌.ಶಿವಕುಮಾರ್ ಚಾಲನೆ ನೀಡಿದರು. ಸದರಿ ಟ್ರಕ್ ಗಳೊಂದಿಗೆ ಜಯನಗರದ ಮಾಜಿಬಶಾಸಕಿ ಸೌಮ್ಯ ರೆಡ್ಡಿ, ಬಿಬಿಎಂಪಿ ಮಾಜಿ ಮೇಯರ್ ಮಂಜುನಾಥ್ ರೆಡ್ಡಿ, ಮಾಜಿ ಕಾರ್ಪೊರೇಟರ್ ನಾಗರಾಜು, ಮಂಜುನಾಥ್‌ ಅವರನ್ನೊಳಗೊಂಡ ನಾಯಕರ ತಂಡ ಈ ಸಾಮಾಗ್ರಿಗಳ ಜೊತೆ ತೆರಳಿದೆ. ಕರ್ನಾಟಕದ ಶಿರೂರು ಮತ್ತು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ, ಪ್ರವಾಹದ ದುರಂತಕ್ಕೆ ನೂರಾರು ಜನರು ತಮ್ಮ ಪ್ರಾಣಗಳನ್ನು ಕಳೆದುಕೊಂಡಿದ್ದು, ಅಪಾರ ಆಸ್ತಿಪಾಸ್ತ...
ಮಂಗಳೂರಿನಲ್ಲಿ ವಾಹನ ಚಾಲಕರು ಗಮನಿಸಲೇಬೇಕು.. ಕರಾವಳಿಯ ಈ ಮಾರ್ಗಗಳಲ್ಲಿ ಗರಿಷ್ಟ ವೇಗದ ಮಿತಿ ನಿಗದಿ

ಮಂಗಳೂರಿನಲ್ಲಿ ವಾಹನ ಚಾಲಕರು ಗಮನಿಸಲೇಬೇಕು.. ಕರಾವಳಿಯ ಈ ಮಾರ್ಗಗಳಲ್ಲಿ ಗರಿಷ್ಟ ವೇಗದ ಮಿತಿ ನಿಗದಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು, ಭಾರೀ‌ ಮಳೆ ಹಾಗೂ ಸರಣಿ ಅವಘಡಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳಲ್ಲಿ ವಾಹನಗಳ ವೇಗದ ಮಿತಿಯನ್ನು‌ ನಿಗದಿಪಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಭುಕುಸಿತದಿಂದಾಗಿ ಹಾನಿಯ ಹಿನ್ನೆಲೆಯಲ್ಲಿ ಹಾಗೂ ಅಪಘಾತಗಳನ್ನು ನಿಯಂತ್ರಿಸುವ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ನಿಯಮವನ್ನು ತಾತ್ಕಾಲಿಕವಾಗಿ ಜಾರಿಗೊಳಿಸಿದೆ. ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ತೊಕ್ಕೊಟ್ಟು ನಡುವೆ ಹಾಗೂ ರಾಷ್ಟ್ರೀಯ ಹೆದ್ದಾರಿ-73ರ ಬಿ.ಸಿ. ರೋಡ್ ಮತ್ತು ನಂತೂರು ನಡುವೆ ವಾಹನಗಳ ವೇಗದ ಮಿತಿ ಗಂಟೆಗೆ 40 ಕಿಮೀ ನಿಗದಿಪಡಿಸಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ....
ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಮೈಸೂರು ಪಾದಯಾತ್ರೆ ನಂತರ ‘ಮತ್ತೊಂದು ಶಕ್ತಿ ಪ್ರದರ್ಶನಕ್ಕೆ ಬಿಜೆಪಿ ನಾಯಕರ ತಯಾರಿ..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮೂಡಾ ಹಗರಣ ಖಂಡಿಸಿ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಕೈಗೊಂಡಿರುವಂತೆಯೇ, ಮತ್ತೊಂದೆಡೆ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಖಂಡಿಸಿ ಬಳ್ಳಾರಿ ಚಲೋಗೆ ಬಿಜೆಪಿ ತಯಾರಿ ನಡೆಸಿದೆ. ಬೆಂಗಳೂರು-ಮೈಸೂರು ಪಾದಯಾತ್ರೆ ಬೆನ್ನಲ್ಲೇ ಮತ್ತೊಂದು ಸಮಾವೇಶಕ್ಕೆ ಬಿಜೆಪಿ ತಯಾರಿ ನಡೆಸಿದ್ದು ಮಹರ್ಷಿ ವಾಲ್ಮೀಕಿ ಎಸ್‌ಟಿ ಅಭಿವೃದ್ಧಿ ನಿಗಮ ಅಕ್ರಮಗಳನ್ನು ಖಂಡಿಸಿ ಸದ್ಯದಲ್ಲೇ ಬಳ್ಳಾರಿಯಲ್ಲಿ ಈ ಬೃಹತ್ ಸಮಾವೇಶ ನಡೆಸಲು ಬಿಜೆಪಿ ತಯಾರಿ ನಡೆಸಿದೆ ಎನ್ನಲಾಗಿದೆ. ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಅವರು ಈ ಸಂಬಂಧ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬಳ್ಳಾರಿ ಭಾಗದ ಪ್ರಭಾವಿ ನಾಯಕ ಶ್ರೀರಾಮುಲು ಬೆಂಬಲಿಗರು ಕೂಡಾ ಬಳ್ಳಾರಿ ಚಲೋ ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ಹೇಳಿಕೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಬಳ್ಳಾರಿ ಭಾಗದಲ್ಲಿ ಮತ್ತೊಮ್ಮೆ ಪಾದಯಾತ್ರೆ ನಡೆಸಲು ತಮ್ಮಪಕ್ಷ ಉತ್ಸುಕವಾಗಿದೆ ಎಂದ...
ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವಾಗಲೇ ಇತ್ತ ರಾಜಧಾನಿ‌ ಬೆಂಗಳೂರು ಬಳಿ ಪೊಲೀಸ್ ಇನ್‌ಸ್ಪೆಕ್ಟರ್ ಸಾವಿಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮೃತ ಅಧಿಕಾರಿ ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಸಾವಿಗೆ ಕಾರಣ ಏನೆಂಬ ಬಗ್ಗೆ ಏನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ....
PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿ ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸಬೇಕೆಂದು ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯಿಸಿದೆ. ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ಕ್ರಾಂತಿರಾಜು, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಚಿದರಹಳ್ಳಿ ಮಹಾದೇವಸ್ವಾಮಿ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿಯ ವಿ.ಗಿರಿಕುಮಾರ್, ಹಿರಿಯ ಹೋರಾಟಗಾರರಾದ ಉಮಾಶಂಕರ್, ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಬಿ.ದೇವರಾಜ್ ರವರು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ,  ಸ್ವಾತಂತ್ರ್ಯ ಬಂದ 77ವರ್ಷಗಳು ಕಳೆದರು ಇಂದು ಸಹ ದಲಿತರ ಮೇಲೆ ಜಾತಿನಿಂದನೆ, ದೌರ್ಜನ್ಯ ನಡೆಯುತ್ತಿದೆ. ಇತ್ತಿಚೇಗೆ ರಾಜ್ಯದಲ್ಲಿ ದಲಿತ ಸಮುದಾಯದ ಅಧಿಕಾರಿಗಳು ಭ್ರಷ್ಟಚಾರದ ವಿರುದ್ದ ಸೆಣಸಲು ಆಗದೇ ಸಾವಿಗೆ ಶರಣುಗಾತ್ತಿದ್ದಾರೆ ಎಂದು‌ಕಳವಳ ವ್ಯಕ್ತಪಡಿಸಿದರು. ಯಾದಗಿರಿ ಪೊಲೀಸ್ ಠಾಣೆ ಪಿ.ಎಸ್.ಐ. ಪರುಶುರಾಮ್ ಶಂಕಸ್ಪಾದ ಸಾವು ಸಂಭವಿಸಿದ ಕಾರಣ ಕುರಿತು ಪರುಶುರಾಮ್ ರವರ ಪತ್ನಿ ಶ್ವೆತ್ರಾ ರವರು ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ಮತ್ತ...