
ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..! ಇದೇನಾ ಬ್ರ್ಯಾಂಡ್ ಬೆಂಗಳೂರು?
ಬೆಂಗಳೂರು: ಭಾರೀ ಮಳೆಯಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಜನರು ಪರದಾಡುವಂತಾಗಿದೆ. ಸೋಮವಾರ ಬೆಳಿಗ್ಗೆ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಬಡಾವಣೆಗಳಲ್ಲಿ ಜನಜೀವನ ಏರುಪೇರಾಯಿತು. ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದಾಗಿ ಬೆಳಿಗ್ಗೆ ಕೆಲಸಕ್ಕೆಂದು ತೆರಳಿದ ಮಂದಿ ಸಂಕಷ್ಟ ಅನುಭವಿಸುವಂತಾಯಿತು.ರಾಜಧಾನಿಯಲ್ಲಿ ಸರ್ಕಾರದ ನಿರ್ಲಕ್ಷ್ಯ ಹಾಗೂ ಬಿಬಿಎಂಪಿ ಅಧಿಕಾರಿಗಳ ಅಸಡ್ಡೆಯಿಂದಾಗಿ ಮಳೆ ಸಂದರ್ಭಗಳಲ್ಲಿ ಆಗಾಗ್ಗೆ ಈ ರೀತಿಯ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಈ ಪರಿಸ್ಥಿತಿ ಹಿನ್ನೆಲೆಯಲ್ಲಿ ಜಾತ್ಯತೀತ ಜನತಾ ದಳ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..? ಎಂದು ಜೆಡಿಎಸ್ ಪ್ರಶ್ನಿಸಿದೆ.ಡಿಸಿಎಂ ಇದೇನಾ ಬ್ರ್ಯಾಂಡ್ ಬೆಂಗಳೂರು..?
ನೀರಿನಲ್ಲಿ ಮುಳುಗಿದ ಸಿಲಿಕಾನ್ ಸಿಟಿ..!ಡಿಸಿಎಂ @DKShivakumar ಅವರೇ ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರು..? ಉತ್ತರಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೇ...ಕೇವಲ 3-4 ಗಂಟೆ ಸುರಿದ ಮಳ...



