
ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.ಮೈಸೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಲೂಟಿ ನಿಮ್ಮ ಸರಕಾರಕ್ಕೆ ಕಪ್ಪು ಚುಕ್ಕಿ ಅಲ್ಲವೇ? ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾಯಿದೆ ಉಲ್ಲಂಘಿಸಿ, ನಿಯಮ ಉಲ್ಲಂಘನೆ ಮಾಡಿ ಒಂದೇ ಕಂಪೆನಿಗೆ 600 ಕೋಟಿಯ ಟೆಂಡರ್ ಕೊಟ್ಟಿರುವುದು ಕಪ್ಪುಚುಕ್ಕಿ ಅಲ್ಲವೇ? ಎಂಬ ಪ್ರಶ್ನೆಯನ್ನು ಮುಂದಿಟ್ಟರು.ಪೊಲೀಸ್, ಕಂದಾಯ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಪ್ರತಿ ಹುದ್ದೆಗೆ ರೇಟ್ ಕಾರ್ಡ್ ನಿಗದಿ ಮಾಡಿರುವುದು, ಸಬ್ ರಿಜಿಸ್ಟಾçರ್‌ಗಳ ಹುದ್ದೆಯ ನೇಮಕಾತಿಗೆ ಬಹಿರಂಗ ಹರಾಜು, ಅಬಕಾರಿ ಇಲಾಖೆಯಲ್ಲಿ ಉನ್ನತ ಹುದ್ದೆಗೆ ದರ ನಿಗದಿ ಮಾಡಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಆರ್‌ಟಿಒಗಳ ಬಹಿರಂಗ ಹರಾಜು ನಡೆಯುತ್ತಿದೆ. ಇದು ತಮ್ಮ ಆಡಳಿತದ ಕಳಂಕವಲ್ಲವೇ ಎಂದು ಕೇಳಿದರು.
ಬೆಂಗಳೂರಿನಲ್ಲ...






