Saturday, June 13

ಬೆಂಗಳೂರು

ಬಸ್-ಕಾರು ಡಿಕ್ಕಿ;  ಭೀಕರ ಅಪಘಾತದಲ್ಲಿ ಐವರು ಮೃತ್ಯು

ಬಸ್-ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಮೃತ್ಯು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ.ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಇಂಡಿಕಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ, ಎದುರು ದಿಕ್ಕಿನಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಆತನು ಸಹ ಮೃತಪಟ್ಟಿದ್ದಾನೆ.ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ....
ವರ್ಗಾವಣೆ ಶಿಫಾರಸು ಪತ್ರ ವಿವಾದ: ಸಿಎಂ ಕಚೇರಿಯಲ್ಲಿ ‘ಲೆಡರ್ ಹೆಡ್’ ದಂಧೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪ

ವರ್ಗಾವಣೆ ಶಿಫಾರಸು ಪತ್ರ ವಿವಾದ: ಸಿಎಂ ಕಚೇರಿಯಲ್ಲಿ ‘ಲೆಡರ್ ಹೆಡ್’ ದಂಧೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಿಎಂ ಸಹಿ ಇರುವ ವರ್ಗಾವಣೆ ಶಿಫಾರಸು ವಿಚಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ನಾಯಕರು ವಾಕ್ಸಮರ ಮುಂದುವರಿಸಿದ್ದಾರೆ. Aa ಪತ್ರವನ್ನು ನಕಲಿ ಎಂದಿರುವ ಕಾಂಗ್ರೆಸ್, ಈ ಪತ್ರವನ್ನು ಮುಂದಿಟ್ಟು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಪೊಲೀಸರಿಗೆ ದೂರು ನೀಡಿದ್ದಾರೆ.ಇದಕ್ಕೆ ಎದಿರೇಟು ನೀಡಿರುವ ಬಿಜೆಪಿ ಶಾಸಕ ಸುನಿಲ್ ಕುಮಾರ್, ಸಿಎಂ ಸಹಿ ಇರುವ ಪತ್ರವೇ ನಕಲಿ ಎಂದಾದರೆ ಇನ್ನು ಸಿಎಂ ಕಚೇರಿ ಹೇಗೆ ಕಾರ್ಯ ನಿರ್ವಹಿಸುತ್ತಿದೆ ? ಎಂಬುದನ್ನು ಯೋಚಿಸಬೇಕಲ್ಲವೇ? ಎಂದಿದ್ದಾರೆ.ಸಿಎಂ ಸಿದ್ದರಾಮಯ್ಯ ಅವರಿಗೆ ಈಗ ಖುರ್ಚಿಯ ಮೇಲಷ್ಟೇ ಗಮನ. ಕಚೇರಿಯ ಮೇಲೆ ಇಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದಿರುವ ಸುನಿಲ್ ಕುಮಾರ್, ಈ ಪತ್ರ ನಕಲಿ ಎಂದಾದರೆ ಪತ್ರದಲ್ಲಿರುವ ಸಹಿಯ ಅಸಲಿಯತ್ತೇನೆಂಬುದೂ ಇತ್ಯರ್ಥವಾಗಬೇಕು. ಹೀಗಾಗಿ ಈ ಸಹಿ ಅಸಲಿಯೋ, ನಕಲಿಯೋ ಎಂಬುದನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪರೀಕ್ಷೆಗೆ ಒಳಪಡಿಸಬೇಕು ಎಂದು ಸವಾಲು ಹಾಕಿದ್ದಾರೆ.ಇದು ಸಿಎಂ ಕಚೇರಿಯಲ್ಲಿ ನಡೆಯುವ ಬಹುದೊಡ್ಡ " ಲೆಡರ್ ಹೆಡ್ " ದಂಧೆಯ...
ಪಾದ್ರಿಗಳಿಂದ ಹಿಂಸೆ ಆರೋಪ; ಸೂಕ್ತ ಕಾನೂನು ಇಲ್ಲದಿರುವುದರಿಂದಲೇ ಕೃತ್ಯ? ಸರ್ಕಾರದ ಗಮನಸೆಳೆದ ಭಕ್ತ

ಪಾದ್ರಿಗಳಿಂದ ಹಿಂಸೆ ಆರೋಪ; ಸೂಕ್ತ ಕಾನೂನು ಇಲ್ಲದಿರುವುದರಿಂದಲೇ ಕೃತ್ಯ? ಸರ್ಕಾರದ ಗಮನಸೆಳೆದ ಭಕ್ತ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್'ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಪ್ರತಿಧ್ವನಿಸಿದೆ. ಅಂತಹಾ ಪ್ರಕರಣಗಳನ್ನು ಪೊಲೀಸರು ಮುಚ್ಚಿಹಾಕುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಪೈಕಿ ಬೆಂಗಳೂರಿನ ಬಾಗಲೂರು ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಕೆಯಾಗಿರುವ ಮನವಿಯೊಂದು ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಜೊತೆಗೆ, ಚರ್ಚುಗಳ ನಿರ್ವಹಣೆ ಸಂಬಂಧ ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹವೂ ಕೇಳಿಬಂದಿದೆ.ಬೆಂಗಳೂರಿನ ಚಿಕ್ಕಗುಬ್ಬಿಯ ಸಂತೋಷ್ ಕುಮಾರ್ ಎಂಬವರು ಹೆಣ್ಣೂರು ರಸ್ತೆ ಬಳಿಯ ಬೆಳ್ಳಹಳ್ಳಿಯಲ್ಲಿಯಲ್ಲಿರುವ ಕ್ರಿಶ್ಚಿಯನ್ ಫಲೋಶಿಪ್ ಚರ್ಚ್ (CFC) ನಲ್ಲಿನ ಕೃತ್ಯದ ತನಿಖೆಯಲ್ಲಾಗಿರುವ ಪೊಲೀಸರ ಲೋಪದ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಡಿಜಿಪಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. '2002ರಿಂದ ಚರ್ಚಿನ ಸದಸ್ಯರಾಗಿರುವ ತಾನು ಚರ್ಚಿನ ಧಾರ್ಮಿಕ ಕಾರ್ಯಕ್ರ...
ತಾರತಮ್ಯ ನಿವಾರಿಸಲು ಹೆಚ್ಚು ಅನುದಾನ ನೀಡಿದ ಎದೆಗಾರಿಕೆ ತೋರಿಸಿ; ಸಿಎಂಗೆ ಅಶೋಕ್ ಸವಾಲ್

ತಾರತಮ್ಯ ನಿವಾರಿಸಲು ಹೆಚ್ಚು ಅನುದಾನ ನೀಡಿದ ಎದೆಗಾರಿಕೆ ತೋರಿಸಿ; ಸಿಎಂಗೆ ಅಶೋಕ್ ಸವಾಲ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು : ಈ ಬಾರಿಯ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.ರಾಜ್ಯದಲ್ಲಿ ಹೆಚ್ಚು ಅವಧಿ ಅಧಿಕಾರದಲ್ಲಿದಿದ್ದುಕಾಂಗ್ರೆಸ್‌ ಪಕ್ಷ. ಅತಿ ಹೆಚ್ಚು ಬಜೆಟ್‌ ಮಂಡಿಸಿರುವುದು ಸಿದ್ದರಾಮಯ್ಯ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು ಎಂದು ಇಂದು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.ಅನ್ಯ ಇಲಾಖೆ ಅಥವಾ ಸಂಸ್ಥೆಗಳಿಗೆ ನೀಡುವ ಅನುದಾನವನ್ನು ಕ್ರೊಢೀಕರಿಸಿ ಇಂತಿಷ್ಟು ಮೊತ್ತ ಹಣವನ್ನು ನೀಡಿರುವುದಾಗಿ ಹಾರಿಕೆ ಭರವಸೆ ನೀಡಬಾರದು. ಕೆಕೆಆರ್‌ಡಿಬಿ ಸಹಿತ ಇತರೆ ಅಭಿವೃದ್ಧಿ ಮಂಡಳಿ ಅಥವಾ ನಿಗಮಗಳಿಗೆ ನೀಡುವ ಅನುದಾನವನ್ನು ಈ ಲೆಕ್ಕಾಚಾರಕ್ಕೆ ಸೇರಿಸಬಾರದು. ತಾರತಮ್ಯ ನಿವಾರಣೆಗಾಗಿಯೇ ವಿಶೇಷ, ಪ್ರತ್ಯೇಕ ಅನುದಾನ...
ಕೃಷಿ ಸಚಿವ ಚಲುವರಾಯಸ್ವಾಮಿ ಮನವಿಗೆ ಕೇಂದ್ರದ ಕೃಷಿ ಇಲಾಖೆ ಸಕಾರಾತ್ಮಕ ಸ್ಪಂದನೆ

ಕೃಷಿ ಸಚಿವ ಚಲುವರಾಯಸ್ವಾಮಿ ಮನವಿಗೆ ಕೇಂದ್ರದ ಕೃಷಿ ಇಲಾಖೆ ಸಕಾರಾತ್ಮಕ ಸ್ಪಂದನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
​ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಸಲ್ಲಿಸಿದ್ದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಡಿಸೆಂಬರ್ 17, 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು, ತಾಂತ್ರಿಕ ಕಾರಣಗಳಿಂದ ರಾಜ್ಯದ ಸುಮಾರು 30,000ಕ್ಕೂ ಹೆಚ್ಚು ಅರ್ಹ ರೈತರು ಯೋಜನೆಯ ಲಾಭದಿಂದ ವಂಚಿತರಾಗುತ್ತಿರುವುದನ್ನು ಗಮನಕ್ಕೆ ತಂದಿದ್ದರು. ಕಳೆದ ವಾರ ನಡೆದ ಅಂತರರಾಷ್ಟ್ರೀಯ ವಾಣಿಜ್ಯ ಮೇಳಕ್ಕೆ ಕೇಂದ್ರ ಸಚಿವರು ಆಗಮಿಸಿದ್ದ ಸಂದರ್ಭದಲ್ಲಿಯೂ ಈ ವಿಚಾರವನ್ನು ಪ್ರಸ್ತಾಪಿಸಿ, ಮನವಿ ಮಾಡಿದ್ದರು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯ ಸರ್ಕಾರ ನೀಡಿರುವ ದೃಢೀಕರಣದ ಆಧಾರದ ಮೇಲೆ ಈಗಾಗಲೇ 22,000ಕ್ಕೂ ಹೆಚ್ಚು ಫಲಾನುಭವಿಗಳನ್ನು 22ನೇ ಕಂತಿನ ಪಾವತಿ ಪಟ್ಟಿಯಲ್ಲಿ ಸೇರಿಸಲಾಗಿದ್ದು, ಶೀಘ್ರದಲ್ಲೇ ಅವರಿಗೆ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಉಳಿದ ಪ್ರಕ...
ಸಾವಿರ ದಿನಗಳ ಪಯಣ; ‘ನಿಮ್ಮ ಪ್ರೀತಿ, ಸಹಕಾರ ಸದಾ ಇರಲಿ’ ಎಂದ ಸಿದ್ದರಾಮಯ್ಯ

ಸಾವಿರ ದಿನಗಳ ಪಯಣ; ‘ನಿಮ್ಮ ಪ್ರೀತಿ, ಸಹಕಾರ ಸದಾ ಇರಲಿ’ ಎಂದ ಸಿದ್ದರಾಮಯ್ಯ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಗ್ಯಾರಂಟಿ ಯೋಜನೆಗಳನ್ನು ಒಳಗೊಂಡ ಅಭಿವೃದ್ಧಿಯ ಹೊಸ ಮಾದರಿಯನ್ನು ಪರಿಚಯಿಸಿದ ಹೆಮ್ಮೆ ನಮ್ಮದು. ಕಳೆದ ಸಾವಿರ ದಿನಗಳಲ್ಲಿ ರೂ.1.13 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳ ಮೂಲಕ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ, ಇದರ ಜೊತೆ ರೂ.1 ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಕ್ಕೆ ಕೊಡಲಾಗಿದೆ. ರಾಜ್ಯದ 1.37 ಕೋಟಿ ಕುಟುಂಬಗಳು ನಮ್ಮ ಸರ್ಕಾರದ ಒಂದಿಲ್ಲೊಂದು ಯೋಜನೆಯ ನೇರ ಫಲಾನುಭವಿಯಾಗಿದ್ದಾರೆ ಎನ್ನುವುದು ವಿಶೇಷ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.ನಮ್ಮ ಕಲ್ಯಾಣ ಕಾರ್ಯಕ್ರಮಗಳ ಫಲವಾಗಿ ರಾಜ್ಯದ ತಲಾದಾಯವು ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೇರಿದೆ. ಕೋಮುಗಲಭೆ, ಅಸಹಿಷ್ಣುತೆಯಿಂದ ನಲುಗಿದ್ದ ಕರ್ನಾಟಕದಲ್ಲಿ ಇಂದು ಶಾಂತಿ - ನೆಮ್ಮದಿ ನೆಲೆಸಿದೆ. ಇದರಿಂದ ನಿರೀಕ್ಷೆಗೂ ಮೀರಿದ ವಿದೇಶಿ ಬಂಡವಾಳ ಹೂಡಿಕೆ ಯೋಜನೆಗಳು ರಾಜ್ಯದತ್ತ ಹರಿದು ಬರುತ್ತಿವೆ ಎಂದವರು ತಿಳಿಸಿದ್ದಾರೆ.ಕರ್ನಾಟಕವನ್ನು ಸರ್ವಜನಾಂಗದ ಶಾಂತಿ‌ಯ ತೋಟವಾಗಿಸಬೇಕು ಎನ್ನುವ ಸಂಕಲ್ಪದೊಂದಿಗೆ ಅಧಿಕಾರಕ್ಕೆ ಬಂದ ನಮ್ಮ ಸರ್ಕಾರವು, ಆ...
ಬಂಧಿತ ಶಾಸಕ ಬೈರತಿ ಬಸವರಾಜ್ ಆರೋಗ್ಯದಲ್ಲಿ ಏರುಪೇರು; ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬಂಧಿತ ಶಾಸಕ ಬೈರತಿ ಬಸವರಾಜ್ ಆರೋಗ್ಯದಲ್ಲಿ ಏರುಪೇರು; ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಕ್ಲು ಶಿವ ಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಬಂಧಿಸಲಾಗಿದೆ.ಬಂಧನದ ಬಳಿಕ ಶಾಸಕರ ಆರೋಗ್ಯದಲ್ಲಿ ಏರುಪೇರಾಗಿರುವುದಾಗಿ ತಿಳಿದುಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೃದಯ ಸಂಬಂಧಿ ತೊಂದರೆ ಇರುವುದಾಗಿ ಅವರು ತಿಳಿಸಿದ್ದರಿಂದ, ಸಮಗ್ರ ಪರೀಕ್ಷೆಗಾಗಿ ಅವರನ್ನು ಜಯದೇವ ಹೃದಯ ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ.ಅದಕ್ಕೂ ಮೊದಲು ಬಸವರಾಜ್ ಅವರನ್ನು ಬೌರಿಂಗ್ ಆಸ್ಪತ್ರೆ ಗೆ ಕರೆದೊಯ್ಯಲಾಗಿತ್ತು. ಅಲ್ಲಿನ ವೈದ್ಯರು ಹೃದಯ ಸಂಬಂಧಿತ ಸಮಸ್ಯೆಗಳ ಸಾಧ್ಯತೆ ಇರುವುದಾಗಿ ಸೂಚಿಸಿ, ವಿಶೇಷ ಹೃದ್ರೋಗ ಆಸ್ಪತ್ರೆಗೆ ಹೆಚ್ಚಿನ ಪರೀಕ್ಷೆ ನಡೆಸಲು ಶಿಫಾರಸು ಮಾಡಿದ್ದರು.ಬೆಂಗಳೂರು ನ್ಯಾಯಾಲಯವು ಸಿಐಡಿ ಅಧಿಕಾರಿಗಳಿಗೆ, ಬಂಧಿತ ಶಾಸಕರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ನಿರ್ದೇಶಿಸಿದೆ. ಸಿಐಡಿ ವಶದಲ್ಲೇ ವೈದ್ಯಕೀಯ ಪರೀಕ್ಷೆಗಳು ಅಧಿಕೃತ ಮೇಲ್ವಿಚಾರಣೆಯಲ್ಲಿ ನಡೆಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.ವೈದ್ಯಕೀಯ ವರದಿ ಆಧರಿಸಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸುವುದೇ ಅಥವಾ ಸಿಐಡಿ ವಶದಲ್ಲ...
“ನಾನು ಯಾವಾಗಲೂ ಭರವಸೆಯ ಮೇಲೆ ಬದುಕಿದ್ದೇನೆ”: ಡಿ.ಕೆ. ಶಿವಕುಮಾರ್

“ನಾನು ಯಾವಾಗಲೂ ಭರವಸೆಯ ಮೇಲೆ ಬದುಕಿದ್ದೇನೆ”: ಡಿ.ಕೆ. ಶಿವಕುಮಾರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವದ ಚರ್ಚೆಗಳ ನಡುವೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು “ನಾನು ಯಾವಾಗಲೂ ಭರವಸೆಯ ಮೇಲೆ ಬದುಕಿದ್ದೇನೆ” ಎಂದು ಹೇಳಿದ್ದಾರೆ.“ಎಲ್ಲರ ಪರಿಶ್ರಮಕ್ಕೆ ಫಲ ಸಿಗುತ್ತದೆ. ಪ್ರಯತ್ನ ಇರುವಲ್ಲಿ ಪ್ರತಿಫಲವಿದೆ. ಭಕ್ತಿ ಇರುವಲ್ಲಿ ದೇವರು ಇದ್ದಾನೆ” ಎಂದು ಅವರು ಪ್ರತಿಕ್ರಿಯಿಸಿದರು. ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ತಿಪಟೂರಿನಲ್ಲಿ ವರದಿಗಾರರೊಂದಿಗೆ ಮಾತನಾಡುವ ವೇಳೆ ಒಟ್ಟಾರೆ ವಿದ್ಯಮಾನಗಳ ಬಗ್ಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದರು.ಇತ್ತೀಚಿನ ದೆಹಲಿ ಭೇಟಿ ಬಳಿಕ ಹೆಚ್ಚು ಆತ್ಮವಿಶ್ವಾಸ ಹೊಂದಿದ್ದೀರಾ ಎಂಬ ಪ್ರಶ್ನೆಗೆ, ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಅವರು, ಅಧಿಕಾರ ಹಂಚಿಕೆ ಕುರಿತು ಫೆಬ್ರವರಿ 17ರಂದು ಪಕ್ಷದ ಹೈಕಮಾಂಡ್ ತಮ್ಮನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿದೆ ಎಂಬ ವರದಿಗಳ ಬಗ್ಗೆ “ನನಗೆ ಅದರ ಮಾಹಿತಿ ಇಲ್ಲ. ಕಾಲವೇ ಉತ್ತರ ನೀಡುತ್ತದೆ” ಎಂದು ಹೇಳಿದರು.ಗೃಹ ಸಚಿವ ಜಿ. ಪರಮೇಶ್ವರ ಹೈಕಮಾಂಡ್‌ನಿಂದ ಸ್ಪಷ್ಟನೆ ಪಡೆಯಲು ಮುಂದಾಗಿದ್ದಾರೆ ಎಂಬ ಪ್ರಶ್ನೆಗೆ “ಅವರಿಗೆ ಶುಭ ಹ...
ಸಿಎಂ ಹೆಸರಲ್ಲಿ ನಕಲಿ ಶಿಫಾರಸು ಪತ್ರ ವೈರಲ್? ಬಿಜೆಪಿ ಶಾಸಕರಾದ ಸುನಿಲ್, ರವಿಕುಮಾರ್ ವಿರುದ್ಧ ಕಾಂಗ್ರೆಸ್ ದೂರು

ಸಿಎಂ ಹೆಸರಲ್ಲಿ ನಕಲಿ ಶಿಫಾರಸು ಪತ್ರ ವೈರಲ್? ಬಿಜೆಪಿ ಶಾಸಕರಾದ ಸುನಿಲ್, ರವಿಕುಮಾರ್ ವಿರುದ್ಧ ಕಾಂಗ್ರೆಸ್ ದೂರು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಅಧಿಕಾರಿಯ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂಬಂತಿರುವ ಶಿಫಾರಸು ಪತ್ರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪದ ನಡುವೆಯೇ ಅಧಿಕಾರಿ ವರ್ಗಾವಣೆ ಶಿಫಾರಸು ವಿಚಾರವನ್ನು ಮುಂದಿಟ್ಟು ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಮುಜುಗರದ ಸನ್ನಿವೇಶವನ್ನು ತಂದಿಟ್ಟಿದ್ದಾರೆ. ಇದರಿಂದ ಕೆರಳಿರುವ ವಿಧಾನಪರಿಷತ್ತಿನ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಅವರು ಬಿಜೆಪಿ ಶಾಸಕರಾದ ಸುನಿಲ್ ಕುಮಾರ್ ಹಾಗೂ ರವಿಕುಮಾರ್ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.ಮುಖ್ಯಮಂತ್ರಿ ಅವರ ನಕಲಿ ವರ್ಗಾವಣೆ ಪತ್ರವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆ ಮಾಡಿ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹಾಗೂ ಇತರರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕೆಂದು ಕೋರಿ ರಮೇಶ್ ಬಾಬು ಅವರು ದೂರು ನೀಡಿದ್ದಾರೆ.ಮುಖ್ಯಮಂತ್ರಿಗಳ ಹೆಸರಿನಲ್ಲಿ ನಕಲಿ/ಕಟ್ಟುಕತೆ ವರ್ಗಾವಣೆ ಪತ್...
ಎಲ್ಲಾ ರಾಜ್ಯಗಳಲ್ಲೂ ಮಿತಿ ಮೀರಿದ ಭ್ರಷ್ಟಾಚಾರ; ಪ್ರಧಾನಿಗೆ 700 ಪುಟಗಳ ವರದಿ ನೀಡಿದ CRF

ಎಲ್ಲಾ ರಾಜ್ಯಗಳಲ್ಲೂ ಮಿತಿ ಮೀರಿದ ಭ್ರಷ್ಟಾಚಾರ; ಪ್ರಧಾನಿಗೆ 700 ಪುಟಗಳ ವರದಿ ನೀಡಿದ CRF

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು, ಭ್ರಷ್ಟಾಚಾರ ತಡೆ ಕಾಯ್ದೆ-1988ಕ್ಕೆ ಸಮಗ್ರ ತಿದ್ದುಪಡಿ ತರಬೇಕೆಂದು ಹೋರಾಟ ನಡೆಸುತ್ತಿರುವ 'ಸಿಟಿಜನ್ ರೈಟ್ಸ್ ಫೌಂಡೇಷನ್', ವಿವಿಧ ರಾಜ್ಯಗಳಲ್ಲಿನ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿಯನ್ನು ಸಲ್ಲಿಸಿದೆ. ಫೆಬ್ರವರಿ 9 ರಂದು ಪ್ರಧಾನಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕಾನೂನು ಸಚಿವರಿಗೆ ಸುಮಾರು 700 ಪುಟಗಳ ದಾಖಲೆಗಲ್ಲನ್ನೊಳಗೊಂಡ ವರದಿಯನ್ನು ಸಲ್ಲಿಸಿ, ದೇಶದಲ್ಲಿನ ವ್ಯವಸ್ಥಿತ ಭ್ರಷ್ಟಾಚಾರದ ವಿರುದ್ಧ 'ಶೂನ್ಯ ಸಹಿಷ್ಣುತೆ'ಯನ್ನು ಜಾರಿಗೊಳಿಸಲು ಜೀವಾವಧಿ ಶಿಕ್ಷೆ ಮತ್ತು ಬಂಡವಾಳ ಶಿಕ್ಷೆ ಸೇರಿದಂತೆ ಕಠಿಣ ಕಾಯ್ದೆ ಜಾರಿಗೊಳಿಸಬೇಕೆಂದು ಮನವಿ ಮಾಡಿದೆ.ವೈಟ್ ಕಾಲರ್ ಪ್ರಭಾವಿಗಳ ಅಕ್ರಮಗಳನ್ನು ಬಯಲು ಮಾಡುವಲ್ಲಿ ಯಶಸ್ವಿಯಾಗಿರುವ 'ಸಿಟಿಜನ್ ರೈಟ್ಸ್ ಫೌಂಡೇಷನ್ (CRF)', ಹಲವಾರು ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ದಾವೆ ಮೂಲಕ ಹೋರಾಟದಲ್ಲಿ ನಿರತವಾಗಿದೆ. ಸಾರ್ವಜನಿಕ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಸಮಗ್ರತೆಯನ್ನು ಪ್ರತಿಪಾದಿಸುತ್ತಾ...