Monday, September 8

ಬೆಂಗಳೂರು

ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

ರಾಜ್ಯ ಡಿಜಿ-ಐಜಿಯಾಗಿ ಎಂ. ಸಲೀಂ ; ಸರ್ಕಾರದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ. ಸಲೀಂ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. 1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತಿಯಾದ ಬಳಿಕ ಡಿಜಿಪಿ ಹಾಗೂ ಐಜಿಪಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದರು. ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ಡಾ. ಸಲೀಂ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ, ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ತಕ್ಷಣ ನಿಯಮಿತ ಡಿಜಿಪಿ ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ....
ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ, ಕಾಂಗ್ರೆಸ್‌ಗೆ ನಾಡಹಬ್ಬ ಎಂದರೆ ವೋಟಿನ ಡಬ್ಬ ಬಿಜೆಪಿಯಿಂದ ಹೋರಾಟ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು,: ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈ ಕುರಿತು ಜನತೆಗೆ ಉತ್ತರ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರು ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತಗಳ್ಳತನ ಆಗಿದೆ ಎಂದು ಹೇಳಿದ್ದು, ಈಗ ಅವರೇ ಹೋರಾಟಕ್ಕೆ ಸೇರಿದ್ದಾರೆ. ಕಾಂಗ್ರೆಸ್‌ ಪರವಾಗಿ ಅವರು ಹೇಗೆ ಹೋರಾಡುತ್ತಾರೆ ಎಂದು ಅರ್ಥವಾಗುತ್ತಿಲ್ಲ. ಇದರಿಂದಾಗಿ ಕಾಂಗ್ರೆಸ್‌ ಮಾಡುತ್ತಿರುವ ಹೋರಾಟ ಸುಳ್ಳು ಎಂದು ಸಾಬೀತಾಗಿದೆ. ಬಿಜೆಪಿ ಮೇಲೆ ಮಾಡಿರುವ ಸುಳ್ಳು ಎಂದು ಸಾಬೀತಾಗಿದೆ. ಮತಗಳ್ಳತನ ಕಾಂಗ್ರೆಸ್‌ನ ಸಂಸ್ಕೃತಿಯಾಗಿದೆ ಎಂದು ತಿಳಿದುಬಂದಿದೆ. ಸಿ.ಎಂ.ಇಬ್ರಾಹಿಂ ಬಾದಾಮಿ ಕ್ಷೇತ್ರದಲ್ಲಿ ಮತ ಖರೀದಿಸಿದ್ದೇನೆಂದು ಹೇಳಿದ್ದಾರೆ. ಈ ಬಗ್ಗೆ ಅವರು ಉತ್ತರ ನೀಡಬೇಕು ಎಂದು ಆಗ್ರಹಿಸಿದರು. ಡಿ.ಕೆ.ಶಿವಕುಮಾರ್‌ ಒಬ್ಬಂಟಿಯಾಗಿ ಬಿಹಾರ ಚುನಾವಣೆಗೆ ಹೋದರೆ, ಸಿಎಂ ಸಿದ್ದರಾಮಯ್ಯ ತಂಡ ಬೇರೆ ಕಡೆ ಚುನಾವಣೆಗೆ ಹೋಗಿದೆ. ಡಿ.ಕೆ.ಶಿವಕುಮಾರ್‌ ಬಂಡೆಯಂತೆ ಆಗುತ್ತಿದ್ದಾರೆ. ...

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ
ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿ, “ರಾಜ್ಯದ ಮೂರು ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ಈ ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬಂದುದರಿಂದ ಹಿಂದೂಗಳಿಗೆ ಸೇರಿದ ಆಸ್ತಿ ಅಲ್ಲವೇ? ಮುಜರಾಯಿ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳು ಹಿಂದೂ ಸಮುದಾಯದವಲ್ಲ ಎಂದರೆ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ ನಾಯಕರು ಹಿಂದೂಗಳ ಅಪಮಾನ ಮಾಡುವುದನ್ನು ಮೊದಲು ನಿಲ್ಲಿಸಬೇಕು,” ಎಂದು ಕಿಡಿಕಾರಿದ್ದಾರೆ. ರಾಜ್ಯದ 3 ಸಾವಿರಕ್ಕಿಂತಲೂ ಹೆಚ್ಚಿನ ದೇವಸ್ಥಾನಗಳು ಹಿಂದೂಗಳ ಆಸ್ತಿ. ದೇವಸ್ಥಾನಗಳು ಮುಜರಾಯಿ ಇಲಾಖೆಯ ವ್ಯಾಪ್ತಿಗೆ ವಹಿಸಲಾಗಿದೆ. ಮುಜರಾಯಿ ವ್ಯಾಪ್ತಿಯಲ್ಲಿ ಇದ್ದ ಮಾತ್ರಕ್ಕೆ ಹಿಂದೂ ದೇವಸ್ಥಾನಗಳು ಹಿಂದೂಗಳ ಆಸ್ತಿಯಲ್ಲವೇ? ಈ ಮೂಲಕ ರಾಜ್ಯದ ಸಮಸ್ತ ಹಿಂದೂಗಳಿಗೆ ಯಾವ ಸಂದೇಶ ನೀಡುತ್ತಿದ್ದೀರಿ? ಕಾಂಗ್ರೆಸ್ಸಿಗರೇ, ಹಿಂದೂಗಳ ಅಪ...
ರಾಹುಲ್ ಗಾಂಧಿಯನ್ನು ತಣ್ಣಗಾಗಿಸಲು ಡಿಕೆಶಿ ಕ್ಷಮೆ; ಬಿಜೆಪಿ ಟೀಕೆ

ರಾಹುಲ್ ಗಾಂಧಿಯನ್ನು ತಣ್ಣಗಾಗಿಸಲು ಡಿಕೆಶಿ ಕ್ಷಮೆ; ಬಿಜೆಪಿ ಟೀಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಗಮನಸೆಳೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 'ಮಾತೃ ಭೂಮಿಗಿಂತ ಕಾಂಗ್ರೆಸ್ ದೊಡ್ಡದಲ್ಲ' ಎಂದು ತೋರಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಲಹೆ ನೀಡಿದ್ದಾರೆ. 'ನಮಸ್ತೇ ಸದಾ ವತ್ಸಲೇ ಮಾತೃಭೂಮಿ...' ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆ ಮಾತೃಭೂಮಿಗೆ ಧನ್ಯತೆ ಸಮರ್ಪಿಸುವ ಸಂಕೇತವನ್ನು ರವಾನಿಸುತ್ತದೆ, ರಾಷ್ಟ್ರಭಕ್ತಿ ಪ್ರೇರೇಪಿಸುತ್ತದೆ, ಇದು ಸಂಘಟನೆಯ ಗೀತೆಯಷ್ಟೇ ಅಲ್ಲ ದೇಶಭಕ್ತಿಯ ಬದ್ಧತೆಯನ್ನು ಜಗತ್ತಿಗೇ ಸಾರಿ ಹೇಳುವ ಗೀತೆ ಎಂದು ವಿಜಯೇಂದ್ರ ಹೇಳಿದ್ದಾರೆ. ನಮ್ಮನ್ನು ಹೆರುವ ತಾಯಿಗೆ ಮಡಿಲ ಆಸರೆ ನೀಡುವವಳು ಭೂಮಿತಾಯಿ. ಈ ಹಿನ್ನಲೆಯಲ್ಲಿಯೇ 'ಮಾತೃ ಭೂಮಿ' ಎಂದು ಜನ್ಮದಾತೆಯಷ್ಟೇ ಜನ್ಮಭೂಮಿಯನ್ನು ಆರಾಧಿಸುತ್ತೇವೆ, ತಾಯ್ನೆಲಕ್ಕಾಗಿ ನಮ್ಮನ್ನೇ ಸಮರ್ಪಿಸಿಕೊಳ್ಳುವಷ್ಟು ಭಾವುಕರಾಗುತ್ತೇವೆ. ಜನನಿ, ಜನ್ಮ ಭೂಮಿ ಮಹತ್ವ ತಿಳಿಸಿಕೊಟ್ಟು ರಾಷ್ಟ್ರ ಭಕ್ತಿ ಪಡಿಮೂಡಿಸುವ RSS ಪ್ರಾರ್ಥನೆ ಬಗ್ಗೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲ...
ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ;  ರಾಜ್ಯದ ಬೊಕ್ಕಸ ಬರಿದು?

ಗ್ಯಾರೆಂಟಿ ಹೆಸರಲ್ಲಿ ಕೈ ಕಾರ್ಯಕರ್ತರಿಗೆ 50 -60 ಸಾವಿರ ರೂ ಸಂಬಳ; ರಾಜ್ಯದ ಬೊಕ್ಕಸ ಬರಿದು?

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಯಿಂದ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಕಾಟು ಟೀಕೆ ಮಾಡಿರುವ ಜೆಡಿಎಸ್, ಹಿಮಾಚಲ ಪ್ರದೇಶ, ತೆಲಂಗಾಣ ಬಳಿಕ ಮುಂದಿನ ಸರದಿ ಕರ್ನಾಟಕ ಎಂದು ವಿಶ್ಲೇಷಿಸಿದೆ. ತೆಲಂಗಾಣದಲ್ಲೂ ಉಚಿತ ಗ್ಯಾರಂಟಿಗಳನ್ನು ಘೋಷಿಸಿ ಅಧಿಕಾರ ಹಿಡಿದಿರುವ ಕಾಂಗ್ರೆಸ್‌ ಸರ್ಕಾರ ಈಗ ಸಂಪೂರ್ಣ ದಿವಾಳಿಯಾಗಿ ಬಿಟ್ಟಿದೆ ಏನು ಜೆಡಿಎಸ್ ಪಕ್ಷ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದೆ. ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಲೂಟಿಹೊಡೆದು, ಆ ದುಡ್ಡಲ್ಲಿ ಸರ್ಕಾರ ರಚಿಸಿದ್ದ ತೆಲಂಗಾಣ ಕಾಂಗ್ರೆಸ್‌ ಇಂದು, ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ನಯಾಪೈಸೆ ಇಲ್ಲವಾಗಿದೆ. ಭಿಕ್ಷೆ ಬೇಡಿದರೂ ಒಂದು ರೂ. ಸಿಗುತ್ತಿಲ್ಲ. ಸರ್ಕಾರದ ಬೊಕ್ಕಸವೂ ಬತ್ತಿಹೋಗಿದೆ. ಅಡಮಾನವಿಟ್ಟು ಹಣ ಪಡೆಯಲು 1 ಇಂಚು ಜಾಗವೂ ಸಹ ಸರ್ಕಾರದ ಬಳಿ ಇಲ್ಲ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಸ್ಥಿತಿಯೂ ಇದಕ್ಕೆ ಹೊರತಾಗಿಲ್ಲ. ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್ ಗ್ಯಾರಂಟಿ ಅನುಷ್ಠಾನ ಸಮಿತಿ ...
ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

ಡಿಕೆಶಿಗೆ ಸ್ವಾಭಿಮಾನ ಇದ್ದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಬಿಸಾಕಬೇಕಿತ್ತು; ಅಶೋಕ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ಅಶೋಕ್ ಪ್ರತಿಕ್ರಿಯಿಸಿದ್ದಾರೆ. "ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತಂತೆ ಅವರು ಸಾಮಾಜಿಕ ಮಾಧ್ಯಮ 'X'ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ. 'ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತ...
KPTCL ಹಾಗೂ ಎಸ್ಕಾಂಗಳ ಅಧಿಕಾರಿ, ನೌಕರರಿಗೆ ಬೋನಸ್/ಅನುಗ್ರಹ ಭತ್ಯೆ; ರಾಜ್ಯ ಸರ್ಕಾರದ ಆದೇಶ

KPTCL ಹಾಗೂ ಎಸ್ಕಾಂಗಳ ಅಧಿಕಾರಿ, ನೌಕರರಿಗೆ ಬೋನಸ್/ಅನುಗ್ರಹ ಭತ್ಯೆ; ರಾಜ್ಯ ಸರ್ಕಾರದ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂಗಳ ಅಧಿಕಾರಿ/ನೌಕರರಿಗೆ 2024-25 ನೇ ಹಣಕಾಸು ವರ್ಷಕ್ಕೆ ಬೋನಸ್/ಅನುಗ್ರಹ ಪೂರ್ವಕವನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿ, ಆರ್ಥಿಕ ಇಲಾಖೆ ಟಿಪ್ಪಣಿ ಸಂಖ್ಯೆ:ಆಇ 339 ವೆಚ್ಚ-1/2025 2:26.08.2025 ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (1)ರ ಪ್ರಸ್ತಾವನೆಯನ್ನು ಪರಿಗಣಿಸಿ ,ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳ ನೌಕರರಿಗೆ 2024-25ನೇ ಆರ್ಥಿಕ ವರ್ಷಕ್ಕೆ ಕನಿಷ್ಟ ತಲಾ ರೂ.7,000/- ರಂತೆ ಅನುಗ್ರಹ ಭತ್ಯೆಯನ್ನು (Ex-gratia) ನೀಡಬೇಕೆಂದು ಸೂಚಿಸಿದ್ದಾರೆ. ಹಾಗೂ ಇದಕ್ಕೆ ತಗಲುವ ವೆಚ್ಚವನ್ನು ನಿಗಮಗಳ ಆಂತರಿಕ ಸಂಪನ್ಮೂಲಗಳಿಂದ ಭರಿಸುವ ಷರತ್ತಿಗೊಳಪಟ್ಟು ಉಲ್ಲೇಖಿತ (2)ರ ಟಿಪ್ಪಣಿಯಲ್ಲಿ ಆರ್ಥಿಕ ಇಲಾಖೆಯ ಸಹಮತಿ ನೀಡಲಾಗಿದೆ ಎಂದು ಇಂಧನ ಇಲಾಖೆಯ ಅಧೀನ ಕಾರ್ಯದರ್ಶಿ ವಿನೋದ್ ಕುಮಾ‌ರ್ ಡಿ.ಎಂ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾ...

ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು ಹೊಸಬರನ್ನು ಸೇರ್ಪಡೆ ಮಾಡಲಾಗಿದೆ. 2008 ರಲ್ಲಿ ಹುಬ್ಬಳ್ಳಿ ಪೂರ್ವ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನ್ನನುಭವಿಸಿದ್ದ ಎಪ್.ಎಚ್.ಜಕ್ಕಪ್ಪನವರಿಗೆ ಈ ಬಾರಿ ಮೇಲ್ಮನವಿ ಪ್ರವೇಶಿಸುವ ಅವಕಾಶ ಸಿಕ್ಕಿದೆ. ಅವರ ಜೊತೆಗೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹಾಗೂ ಪತ್ರಕರ್ತ ಶಿವಕುಮಾರ್ ಅವರನ್ನು ನಾಮ ನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮ್ಯಾಂಡ್ ಒಪ್ಪಿಗೆ ನೀಡಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ....
ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ

ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರ ಇದೀಗ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಆಡಳಿತರೂಢ ಕಾಂಗ್ರೆಸ್ ನಾಯಕರ ನಡೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಇದೇ ವೇಳೆ, ಮೈಸೂರು ರಾಜಮನೆತನ ಕೂಡಾ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದೆ. ಸರ್ಕಾರದ ನಡೆಯನ್ನು ರಾಜವಂಶಸ್ಥರೂ ಆದ ಮೈಸೂರು ಸಂಸದ ಯಧುವೀರ್ ಬಲವಾಗಿ ವಿರೋಧಿಸಿದ್ದಾರೆ. 'ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ ಬರಹಗಾರ್ತಿ ಮತ್ತು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದ ಮೊದಲ ಕನ್ನಡ ಲೇಖಕಿಯಾಗಿ, ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಹೆಮ್ಮೆಯನ್ನು ತಂದಿದ್ದಾರೆ ನಿಜ ಆದರೆ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿಯ ಬಗ್ಗೆ ಅವರು ಕೆಲವು ಹೇಳಿಕೆಗಳನ್ನು ನೀಡಿರುವುದು ನಮ್ಮ ಗಮನಕ್ಕೆ ಬಂದಿದೆ' ಎಂದು ಯಧುವೀರ್ ಹೇಳಿದ್ದಾರೆ. ದಸರಾ ಕೇವಲ ಸಾಂಸ್ಕೃತಿಕ ಕಾರ್ಯಕ್ರಮವಲ್ಲ, ಬದಲಾಗಿ ಶಾಸ್...
ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ನೆಪ ಹೇಳಬಾರದು; ಸಿಎಂ ಎಚ್ಚರಿಕೆ

ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ನೆಪ ಹೇಳಬಾರದು; ಸಿಎಂ ಎಚ್ಚರಿಕೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕೆಂಬ ನಿಯಮ ಇದ್ದರೂ, ಕಳೆದ ಆರು ತಿಂಗಳಲ್ಲಿ ಕೇವಲ ಶೇಕಡಾ 84 ಪ್ರಕರಣಗಳಲ್ಲಿ ಮಾತ್ರ ನಿಯಮ ಪಾಲನೆಗೊಂಡಿರುವುದನ್ನು ಅವರು ಆಕ್ಷೇಪಿಸಿದರು. ಸೋಮವಾರ ನಡೆದ ಪರಿಶಿಷ್ಟ ಜಾತಿ/ಪಂಗಡಗಳ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, “ಪ್ರತಿ ಪ್ರಕರಣದಲ್ಲೂ 60 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಲೇಬೇಕು. ಪೊಲೀಸರು ಯಾವ ನೆಪಕ್ಕೂ ಜಾಗ ಬಿಡುವುದಿಲ್ಲ. ನ್ಯಾಯಾಲಯದಲ್ಲಿ ತಡೆ ಆದೇಶ ಇದ್ದರೆ ಅದನ್ನು ಕೂಡಲೇ ತೆರವುಗೊಳಿಸಿ ಪ್ರಕರಣ ಮುಂದುವರಿಸಬೇಕು” ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು. ಸಭೆಯ ಮುಖ್ಯಾಂಶಗಳು: ರಾಜ್ಯದಲ್ಲಿ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗೆ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಶಿಕ್ಷೆಯ ಪ್ರಮಾಣ ಈಗ ಕೇವಲ ಶೇಕಡಾ 10ರಷ್ಟಿದೆ; ಇದು ಹೆಚ್ಚಾಗಬೇಕೆಂದು ಸಿಎಂ ಸೂಚನೆ. ಸುಳ್ಳು ಜಾತಿ ಪ್ರಮಾಣ ಪತ...