Wednesday, April 29

ಬೆಂಗಳೂರು

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

ಶೀಘ್ರದಲ್ಲೇ ಪಶ್ಚಿಮ ಬೆಂಗಳೂರಿನಲ್ಲಿ ಜಯದೇವ 100 ಹಾಸಿಗೆ ಕಾರ್ಡಿಯಾಕ್ ಹಬ್ ಘಟಕ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಎಲ್ಲರಿಗೂ ಕೈಗೆಟಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ.ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಮಾಡಿದ ಪ್ರಮುಖ ಭರವಸೆಯನ್ನು ಈಡೇರಿಸಿದಂತಾಗಿದೆ.ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಬಿ. ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್. ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಾ ಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಕೆ.ವಿ. ರಾಜೇಂದ್ರ ಸಮ್ಮುಖದಲ್ಲಿ ವಿಕಾಸ ಸೌಧದಲ್...
ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವವಾದದ್ದು: ಎನ್.ಚಲುವರಾಯಸ್ವಾಮಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಆರ್ಥಿಕತೆಯಲ್ಲಿ ಕೃಷಿ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅಗ್ರಿ-ಟೆಕ್ ಸಮಿಟ್-2026ರಲ್ಲಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ರಾಜ್ಯದ ಒಟ್ಟು ಆದಾಯದಲ್ಲಿ ಸುಮಾರು 17% ಕೊಡುಗೆ ನೀಡುವುದರ ಜೊತೆಗೆ, ಶೇಕಡಾ 58ರಷ್ಟು ಜನರಿಗೆ ಉದ್ಯೋಗವನ್ನು ಒದಗಿಸುತ್ತಿದೆ ಎಂದು ತಿಳಿಸಿದರು.2025-26ನೇ ಸಾಲಿನಲ್ಲಿ ದೇಶದ ಆಹಾರ ಉತ್ಪಾದನೆ 355 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು, ಕರ್ನಾಟಕದಲ್ಲಿಯೂ 155-160 ದಶಲಕ್ಷ ಟನ್ ಮಟ್ಟದಲ್ಲಿ ಉತ್ಪಾದನೆ ಸಾಧನೆಯಾಗಿದೆ ಎಂದು ಅವರು ಹೇಳಿದರು.ಸರ್ಕಾರದ ಯೋಜನೆಗಳು, ಕೃಷಿ ವಿಜ್ಞಾನಿಗಳ ಸಂಶೋಧನೆ ಹಾಗೂ ರೈತರ ಪರಿಶ್ರಮದಿಂದ ಕೃಷಿ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿ ಕಂಡುಬಂದಿದೆ. ತೋಟಗಾರಿಕೆ ಉತ್ಪಾದನೆ ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಒತ್ತು ನೀಡಲಾಗಿದ್ದು, ಸಂಸ್ಕರಣೆ, ಪ್ಯಾಕೇಜಿಂಗ್, ಬ್ರಾಂಡಿಂಗ್ ಮತ್ತು ಮಾರುಕಟ್ಟೆ ಸಂಪರ್ಕವನ್ನು ಬಲಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.ಇನ್ನೂ 202...
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು.ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ವೀರಶೈವ–ಲಿಂಗಾಯಿತ ಧರ್ಮವು ಕಾಯಕ ಮತ್ತು ದಾಸೋಹದ ...
ಹರಾಜು ಮಾರಾಟವಾಗಿದ್ದು 2.4 ಕೋಟಿಗೆ, ಆ ಅಸ್ತಿ32 ಕೋಟಿಗೆ ಅಡಮಾನ

ಹರಾಜು ಮಾರಾಟವಾಗಿದ್ದು 2.4 ಕೋಟಿಗೆ, ಆ ಅಸ್ತಿ32 ಕೋಟಿಗೆ ಅಡಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ವಯೋವೃದ್ಧನಿಗೆ ಸೇರಿದ್ದೆನ್ನಲಾದ ಆಸ್ತಿಯನ್ನು ಖಾಸಗಿ ಸಂಸ್ಥೆಗಳ ಗೂಂಡಾಗಳು ಅತಿಕ್ರಮಿಸಲು ಯತ್ನಿಸಿದ್ದು ಈ ಬಗ್ಗೆ ಪ್ರಕರಣ ದಾಖಲಿಸಲು ಯಲಹಂಕ ಠಾಣೆ ಪೊಲೀಸರು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದರಿಂದ ನೊಂದ ವೃದ್ಧ FIR ದಾಖಲಿಸಲು ನಿರ್ದೇಶನ ಕೋರಿ ಬೆಂಗಳೂರು ಪೊಲೀಸ್ ಕಮೀಷನರ್'ಗೆ ದೂರು ಸಲ್ಲಿಸಿದ್ದಾರೆ.ಬೆಂಗಳೂರಿನ ಆಡುಗೋಡಿ ನಿವಾಸಿ 70 ವರ್ಷ ಪ್ರಾಯದ ಅಬ್ದುಲ್ ಸತ್ತಾರ್, ಎಂಬವರು ತಮಗೆ ಸೇರಿದ್ದೆನ್ನಲಾದ ಯಲಹಂಕದ ಸರ್ವೇ ನಂಬರ್ 29/3ರ 7 ಗುಂಟೆ ನಿವೇಶನವನ್ನು ಕೆಲವು ವ್ಯಕ್ತಿಗಳು ಅತಿಕ್ರಮಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಆದರೂ ಏಪ್ರಿಲ್ 8 ರಂದು ಮಧ್ಯಾಹ್ನ 25 ಕ್ಕೂ ಹೆಚ್ಚು ಮಂದಿ ಸದರಿ ಸ್ಥಳಕ್ಕೆ ಬಂದು 'ತಾವು Mac Charles Hob Projects Pvt Ltd ಮತ್ತು Embassy ಕಂಪನಿ ಕಡೆಯವರು ಈ ನಿವೇಶನಕ್ಕೆ ತೆರಳಿ ಈ ಸ್ವತ್ತನ್ನು ತಮಗೆ ಬಿಟ್ಟುಕೊಟ್ಟು ಸ್ಥಳದಿಂದ ತೆರಳಬೇಕು' ಎಂದು ಅಬ್ದುಲ್ ಸತ್ತಾರ್ ಆರೋಪಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಭೇಟಿ ನೀಡಿರುವ ಪೊಲೀ...
ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

ಹುಬ್ಬಳ್ಳಿ ಲ್ಯಾಂಡಿಂಗ್ ವಿಫಲ: 3 ಗಂಟೆ ಆಕಾಶದಲ್ಲೇ ಸುತ್ತಾಡಿದ ವಿಮಾನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಹುಬ್ಬಳ್ಳಿ, ಏ.12: ಹೈದರಾಬಾದ್‌ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ Fly91 Airlines ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ನಿಯಂತ್ರಣ ಸಮಸ್ಯೆ ಎದುರಿಸಿ, ಸುಮಾರು ಮೂರು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿದ ಘಟನೆ ಭಾನುವಾರ ನಡೆದಿದೆ. ಕೊನೆಗೆ ವಿಮಾನವನ್ನು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು, ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.ಮಧ್ಯಾಹ್ನ 3 ಗಂಟೆಗೆ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿದ್ದ ವಿಮಾನ, ಸಂಜೆ 4.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ, ಲ್ಯಾಂಡಿಂಗ್‌ಗೆ ಹಲವಾರು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗದೆ, ವಿಮಾನವು ಮುಂಡಗೋಡ, ದಾವಣಗೆರೆ, ಶಿವಮೊಗ್ಗ ಪ್ರದೇಶಗಳಲ್ಲಿ ಸುತ್ತಾಡಿತು. ಸಂಜೆ 7.30ರ ಸುಮಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು.ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷವೋ ಅಥವಾ ಹವಾಮಾನ ವೈಪರಿತ್ಯವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ನಡುವೆ, ವಿಮಾನ ದೀರ್ಘ ಕಾಲ ಆಗಸದಲ್ಲೇ ಸುತ್ತಾಡಿದ ಕಾರಣ ಪ್ರಯ...
ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

ತೊಗರಿ ಖರೀದಿಗೆ ಒಂದು ತಿಂಗಳ ಅವಧಿ ವಿಸ್ತರಣೆ: ಚಲುವರಾಯಸ್ವಾಮಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲವಾಗುವ ಮಹತ್ವದ ವಿಷಯವಾಗಿ, ಇಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾನ್ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಚರ್ಚೆ ನಡೆಸಿದರು.ಈ ವೇಳೆ 2025-26ನೇ ಸಾಲಿನ ಬೆಲೆ ಬೆಂಬಲ ಯೋಜನೆ (MSP) ಅಡಿಯಲ್ಲಿ ತೊಗರಿ (Tur/Arhar) ಖರೀದಿ ಅವಧಿಯನ್ನು ವಿಸ್ತರಿಸುವ ಕುರಿತು ರಾಜ್ಯ ಸರ್ಕಾರದಿಂದ ಸಲ್ಲಿಸಲಾದ ಪ್ರಸ್ತಾವನೆ ಬಗ್ಗೆ ವಿವರವಾದ ಚರ್ಚೆ ನಡೆಯಿತು.ರಾಜ್ಯದಲ್ಲಿ ತೊಗರಿ ಉತ್ಪಾದನೆ ಹೆಚ್ಚಿನ ಪ್ರಮಾಣದಲ್ಲಿರುವ ಹಿನ್ನೆಲೆಯಲ್ಲಿ, ಈಗಾಗಲೇ 98,610 ರೈತರು ನೋಂದಾಯಿಸಿಕೊಂಡಿದ್ದರೂ, ಅಂದಾಜು 12,834 ರೈತರು ಮಾತ್ರ ಯೋಜನೆಯ ಪ್ರಯೋಜನ ಪಡೆದಿದ್ದು, ಹೆಚ್ಚಿನ ರೈತರಿಗೆ ಅವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಸಚಿವರು ವಿವರಿಸಿದರು.ಮಾರುಕಟ್ಟೆಯಲ್ಲಿ ತೊಗರಿ ಬೆಲೆಗಳು ಕನಿಷ್ಠ ಬೆಂಬಲ ಬೆಲೆಯ ಸಮೀಪದಲ್ಲೇ ಇರುವುದರಿಂದ, ರೈತರ ಹಿತದೃಷ್ಟಿಯಿಂದ ಖರೀದಿ ಅವಧಿ ವಿಸ್ತರಣೆ ಅತ್ಯಾವಶ್ಯಕ ಎಂದು ಚಲುವರಾಯಸ್ವಾಮಿಯವರುತಿಳಿಸಿದರು..ಈ ಹಿನ್ನೆಲೆದಲ್ಲಿ, 31.03.2026 ರಂದು ಮು...
ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಹಿಳೆಯರ ಆರೋಗ್ಯ ಮತ್ತು ಘನತೆಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ‘ಋತುಸ್ರಾವ ರಜೆ’ ಕಡ್ಡಾಯವಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.ಈ ಹಿಂದೆ ಸರ್ಕಾರ ಅನುಮೋದನೆ ನೀಡಿದ್ದರೂ, ಹಲವು ಕಂಪನಿಗಳು ಮತ್ತು ಸಂಸ್ಥೆಗಳು ಈ ಸೌಲಭ್ಯ ನೀಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ, ನೀತಿಯನ್ನು “ಕಟ್ಟುನಿಟ್ಟಾಗಿ ಮತ್ತು ನಂಬಿಕಸ್ತವಾಗಿ” ಜಾರಿಗೆ ತರಬೇಕು ಎಂದು ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.ಬೆಳಗಾವಿ ಜಿಲ್ಲೆಯ ಮೂಡಲಗಿಯ ಹೋಟೆಲ್ ನೌಕರರೊಬ್ಬರು ರಜೆ ನೀಡಲಾಗುತ್ತಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಮಹಿಳೆಯರ ಜೈವಿಕ ಅಗತ್ಯತೆಗಳನ್ನು ಗೌರವಿಸುವುದು ಸಮಾನತೆಯ ಪ್ರಮುಖ ಅಂಶ ಎಂದು ಅಭಿಪ್ರಾಯಪಟ್ಟಿದೆ.ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, “ಋತುಸ್ರಾವ ಆರೋಗ್ಯವು ಸಂವಿಧಾನದ ವಿಧಿ 21ರಡಿ ಬರುವ ಬದುಕುವ ಹಕ್ಕಿನ ಅವಿಭಾಜ್ಯ ಅಂಗ. ಇದು ಕೇವಲ ರಜೆಯ ವಿಷಯವಲ್ಲ, ಮಹಿಳೆಯರ ಘನ...
ಹೈಕೋರ್ಟ್ ಮಹತ್ವದ ತೀರ್ಪು; KIADB ಭೂಸ್ವಾಧೀನ ರದ್ದು, ದಯಾನಂದ್ ಪೈಗೆ ಭಾರೀ ದಂಡ, ಸಿಬಿಐ ತನಿಖೆಗೆ ನಿರ್ದೇಶನ

ಹೈಕೋರ್ಟ್ ಮಹತ್ವದ ತೀರ್ಪು; KIADB ಭೂಸ್ವಾಧೀನ ರದ್ದು, ದಯಾನಂದ್ ಪೈಗೆ ಭಾರೀ ದಂಡ, ಸಿಬಿಐ ತನಿಖೆಗೆ ನಿರ್ದೇಶನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೈಗಾರಿಕೆ ಹೆಸರಲ್ಲಿ ಭೂಸವಾಧೀನ ಮಾಡಿಸಿ ವೈಯಕ್ತಿಕ ಬ್ಯುಸಿನೆಸ್ ನಡೆಸುವ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ್ ಪೈ ಪ್ರಯತ್ನಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮಹತ್ವದ ಆದೇಶವೊಂದರಲ್ಲಿ ಬೆಂಗಳೂರಿನ ಹೆಬ್ಬಾಳ ಬಳಿ ಲೇಕ್ ವ್ಯೂ ಪ್ರವಾಸೋದ್ಯಮ ನಿಗಮಕ್ಕೆ ನೂರಾರು ಕೋಟಿ ಬೆಲೆಬಾಳುವ ಜಾಮೀನು ಸ್ವಾಧೀನ ಅಧಿಸೂಚನೆಯನ್ನೇ ಹೈಕೋರ್ಟ್ ರದ್ದುಪಡಿಸಿದೆ. ಅಷ್ಟೇ ಅಲ್ಲ ಉದ್ಯಮಿ ದಯಾನಂದ್ ಪೈ ಅವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಲ್ಲದೆ, ಸಿಬಿಐ ತನಿಖೆಗೂ ಆದೇಶಿಸಿ ಶುಕ್ರವಾರ ತೀರ್ಪು ಪ್ರಕಟಿಸಿದೆ.ಹೆಬ್ಬಾಳದಲ್ಲಿ ಸ್ಥಳೀಯರ ಆಕ್ಷೇಪದ ನಡುವೆಯೂ ಕೈಗಾರಿಕೆಗಳ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ 63.33 ಎಕರೆ ಭೂಮಿಯನ್ನು ಸ್ವಾಧೀನ ಕುರಿತು KIADBಯು 2002ರಲ್ಲಿ ಅಧಿಸೂಚನೆ ಹೊರಡಿಸಿತ್ತು. ಅದೇ ಜಮೀನನ್ನು ಬಿಡಿಡಿಎಯು 2004ರಲ್ಲಿ ಅರ್ಕಾವತಿ ಲೇಔಟ್ ನಿರ್ಮಾಣಕ್ಕೂ ಅಧಿಸೂಚನೆ ಹೊರಡಿಸಿದೆ. ಅದಾಗಿಯೂ KIADBಯು ಕಾಯ್ದೆಯ ಸೆಕ್ಷನ್ 28 (ಎ) ರ ಅಡಿಯಲ್ಲಿ 63.33 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಈ ಪೈಕಿ ಹೆಬ್ಬಾಳದ ಅಮಾನಿಖಾನೆ ಬಿಟೆಲಿ ಬಳಿಯ...
ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ

ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದಾವಣಗೆರೆ ಕ್ಷೇತ್ರದ ಉಪಚುನಾವಣೆಯಲ್ಲಿ ನೀಡದ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣ ಸೃಷ್ಟಿಸಿದೆ. ಅದರಲ್ಲೂ ಮುಸ್ಲಿಂ ನಾಯಕರು ಪಕ್ಷದ ಪ್ರಚಾರದಿಂದ ಉಳಿದಿರುವ ಬೆಳವಣಿಗೆ ಪಕ್ಷದ ವರಿಷ್ಠರಿಗೆ ಮುಜುಗರ ತಂದಿದೆ.ಈ ಬೆಳವಣಿಗೆಯ ನಡುವೆಯೇ, ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದಾರೆ."ಅಬ್ದುಲ್ ಜಬ್ಬಾರ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಅಲ್ಪಸಂಖ್ಯಾತ ವಿಭಾಗದ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ ಎಂದು ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ."ನೂತನ ಸಮಿತಿ ಶೀಘ್ರ ರಚನೆಗೆ ಕ್ರಮ ವಹಿಸಲಾಗಿದೆ" ಎಂದು ಶಿವಕುಮಾರ್ ತಿಳಿಸಿದ್ದಾರೆ....
ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ

ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಮುಗಿದಿದ್ದು,ರಾಜಕೀಯ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಇದ್ದಾರೆ. ರಾಜ್ಯದ ಜನರು ಕೂಡಾ ಕುತೂಹಲದಿಂದ ಫಲಿತಾಂಶವನ್ನು ಎದುರು ನೋಡುತ್ತಿದ್ದಾರೆ. ಆದರೆ, ಅಷ್ಟರಲ್ಲೇ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯ ಸುದ್ದಿ ರಾಜ್ಯದ ಜನರನ್ನು ಬೆಚ್ಚಿ ಬೆಳಿಸಿದೆ. ಧಾರವಾಡ: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದಾರೆ. ಶುಕ್ರವಾರ ರಾತ್ರಿ ನಗರದ ಹಾಶ್ಮಿ ನಗರದಲ್ಲಿರುವ ಮನೆಗೆ ನುಗ್ಗಿದ ಆರು ಜನರ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಉಪನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ವೈಯಕ್ತಿಕ ಹಾಗೂ ರಾಜಕೀಯ ವೈಷಮ್ಯವೇ ಹತ್ಯೆಗೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಸಂಚು ರೂಪಿಸಿದ್ದ ಆರೋಪದಲ್ಲಿ ಅರ್ಬಾಜ್ ಪಠಾಣ್ ಮತ್ತು ಗುಲಾಬ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ...