Friday, May 1

ಬೆಂಗಳೂರು

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಲಿದ್ದು, ಏಪ್ರಿಲ್ 6ರವರೆಗೆ ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಏಪ್ರಿಲ್ 6ರವರೆಗೆ ದಕ್ಷಿಣ ಒಳನಾಡು, ಮಲೆನಾಡು ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಶನಿವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯೂ ಇದೆ.ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಕೂಡ ಗುಡುಗು-ಸಿಡಿಲಿನೊಂದಿಗೆ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ....
ಉಪಚುನಾವಣೆ ಅಖಾಡದಲ್ಲಿ ‘ಕುಟುಂಬ ರಾಜಕೀಯ’; ಬಿಜೆಪಿ ಆರೋಪಕ್ಕೆ ಶಿವಕುಮಾರ್ ತಿರುಗೇಟು

ಉಪಚುನಾವಣೆ ಅಖಾಡದಲ್ಲಿ ‘ಕುಟುಂಬ ರಾಜಕೀಯ’; ಬಿಜೆಪಿ ಆರೋಪಕ್ಕೆ ಶಿವಕುಮಾರ್ ತಿರುಗೇಟು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದಾವಣಗೆರೆ: ಉಪಚುನಾವಣೆ ರಾಜಕೀಯ ತೀವ್ರಗೊಳ್ಳುತ್ತಿರುವ ನಡುವೆ ಕುಟುಂಬ ರಾಜಕೀಯ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದು, ಭಾರತೀಯ ಜನತಾ ಪಕ್ಷ ಹಾಗೂ ಜನತಾ ದಳ (Secular) ಪಕ್ಷಗಳಲ್ಲೂ ಇದೇ ರೀತಿಯ ರಾಜಕೀಯ ನಡೆಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಒಂದೇ ಕುಟುಂಬ ರಾಜಕೀಯದಲ್ಲಿ ಪ್ರಾಬಲ್ಯ ಹೊಂದಿದೆ ಎನ್ನುವುದು ತಪ್ಪು. ಶಿವಶಂಕರಪ್ಪ ಹಾಗೂ ಅವರ ಕುಟುಂಬ ಹಲವು ವರ್ಷಗಳಿಂದ ಜನಸೇವೆ ಮಾಡುತ್ತಿದೆ. ಇದು ಎಲ್ಲಾ ಪಕ್ಷಗಳಲ್ಲಿಯೂ ಸಾಮಾನ್ಯ” ಎಂದು ಹೇಳಿದ್ದಾರೆ.ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ದಾವಣಗೆರೆಯಲ್ಲಿ ದಿವಂಗತ ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸಿದ್ದು, ಅವರ ತಂದೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ತಾಯಿ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಆಗಿದ್ದಾರೆ.“ಹಾಗಾದರೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರು ರಾಜಕೀಯದಲ್ಲಿಲ್ಲವೇ? ಜೆಡಿಎಸ್‌ನಲ್ಲಿ ಒಂದೇ ಕುಟುಂಬದ ಹಲವು ಮಂದಿ ಇಲ್ಲವೇ?” ಎಂದು ಡಿಕೆಶಿ ಪ್ರಶ್ನಿಸಿದರ...
ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ; ಶ್ರೀರಾಮುಲು

ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಸೋಲಿನ ಭಯ; ಶ್ರೀರಾಮುಲು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರನ್ನು ‘ಬೀದಿ ಹೋರಿಗಳು’ ಎಂದು ಹೋಲಿಸಿದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಹಿರಿಯ ನಾಯಕ ಬಿ. ಶ್ರೀರಾಮುಲು ಕಿಡಿಕಾರಿದ್ದಾರೆ.ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು, “ಬಿಜೆಪಿ ನಾಯಕರು ಹೋರಿಗಳಾದರೆ, ಕಾಂಗ್ರೆಸ್ ನಾಯಕರು ಇಲಿಗಳಂತಿದ್ದಾರೆ” ಎಂದು ತಿರುಗೇಟು ನೀಡಿದರು. ಸಿದ್ದರಾಮಯ್ಯ ಸುತ್ತ ಜನರ ವಿಶ್ವಾಸ ಕಳೆದುಕೊಂಡವರೇ ಇದ್ದಾರೆ ಎಂದು ಅವರು ಆರೋಪಿಸಿದರು.ಉಪಚುನಾವಣೆಯ ಭಯದಿಂದ ಕಾಂಗ್ರೆಸ್ ಈ ರೀತಿಯ ಹೇಳಿಕೆಗಳನ್ನು ಮಾಡುತ್ತಿದೆ ಎಂದು ಟೀಕಿಸಿದ ಅವರು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ ಎಂದರು.ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಶ್ರೀರಾಮುಲು, ವಾಲ್ಮೀಕಿ ಅಭಿವೃದ್ಧಿ ನಿಗಮ ಸೇರಿದಂತೆ ಹಲವು ನಿಗಮಗಳಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆ ಎಂದು ಹೇಳಿದರು. ಸರ್ಕಾರದ ಸಚಿವರು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ಅವರು ದೂರಿದರು.ಖಾತರಿ ಯೋಜನೆಗಳ ಕುರಿತು ಸಿಎಂ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರ...
ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕಠಿಣ ಕ್ರಮ

ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕಠಿಣ ಕ್ರಮ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: 2026ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಪೂರೈಕೆ ಮತ್ತು ಪರಿಣಾಮಕಾರಿ ನಿರ್ವಹಣೆಗೆ ಕೃಷಿ ಇಲಾಖೆಯು ಕ್ರಮಗಳನ್ನು ಜಾರಿಗೊಳಿಸಿದೆ.ಮಧ್ಯಪ್ರಾಚ್ಯ ಪ್ರದೇಶದ ಅಸ್ಥಿರತೆ ಹಿನ್ನಲೆ ಗೊಬ್ಬರ ಉತ್ಪಾದನೆಗೆ ಅಗತ್ಯವಿರುವ ಕಚ್ಚಾ ವಸ್ತುಗಳ ಆಮದು ವ್ಯತ್ಯಯವಾಗುವ ಸಾಧ್ಯತೆ ಕಂಡುಬಂದಿದ್ದು,ರಾಜ್ಯದಲ್ಲಿ ಗೊಬ್ಬರ ಪೂರೈಕೆಗೆ ಅಡ್ಡಿಯಾಗುವ ಆತಂಕ ವ್ಯಕ್ತವಾಗಿದೆ. ಈ ಹಿನ್ನಲೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಉಸ್ತುವಾರಿಯಲ್ಲಿ ಕೃಷಿ ಇಲಾಖೆ ಬಹುಮುಖ ಕ್ರಮಗಳನ್ನು ಅನುಷ್ಠಾನಗೊಳಿಸಿದೆ.ಕೇಂದ್ರ ಸರ್ಕಾರವು ರಾಜ್ಯಕ್ಕೆ ಒಟ್ಟು 30.05 ಲಕ್ಷ ಮೆಟ್ರಿಕ್ ಟನ್ ವಿವಿಧ ಗೊಬ್ಬರಗಳನ್ನು ಹಂಚಿಕೆ ಮಾಡಿದ್ದು, ಏಪ್ರಿಲ್ 1ರ ವೇಳೆಗೆ 11.42 ಲಕ್ಷ ಮೆಟ್ರಿಕ್ ಟನ್ ಸಂಗ್ರಹ ಲಭ್ಯವಿದೆ.ರಾಜ್ಯವು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ (KSCMF) ಮತ್ತು ಕರ್ನಾಟಕ ರಾಜ್ಯ ಬೀಜ ನಿಗಮ(KSSC) ಮುಖಾಂತರ ಕಾಪು ದಾಸ್ತಾನು ವ್ಯವಸ್ಥೆಯನ್ನು ಬಲಪಡಿಸಿದೆ. ಪ್ರಸ್ತುತ 28224 ಮೆಟ್ರಿಕ್ ಟನ್ ಗೊಬ್ಬರ ಕಾಪು ದಾಸ್ತಾನಿನಲ್ಲಿ ಲಭ್ಯವಿದ್ದು, ಯೂರಿಯಾ ಮತ್ತು ಡಿ.ಎ.ಪಿ ಗೊಬ್ಬರಗಳ 25% ಕಡ್ಡಾ...
ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಕರ್ನಾಟಕ ಪೊಲೀಸರು ಪ್ರಮುಖ ಪಾತ್ರವಹಿಸಿದ್ದು, ದೇಶದ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಒಂದಾಗಿ ಹೊರಹೊಮ್ಮಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.ಬೆಂಗಳೂರಿನ ಕೋರಮಂಗಲದಲ್ಲಿರುವ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯ ಸೇವೆಯನ್ನು ಶ್ಲಾಘಿಸಿದರು.1965ರ ಏಪ್ರಿಲ್ 2ರಂದು ಪೊಲೀಸ್ ಕಾಯ್ದೆ ಜಾರಿಗೆ ಬಂದ ದಿನವನ್ನು ಸ್ಮರಿಸಲು ಈ ದಿನಾಚರಣೆ ಆಚರಿಸಲಾಗುತ್ತದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ಅವಿರತವಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು.ಇಂಡಿಯಾ ಜಸ್ಟೀಸ್ ರಿಪೋರ್ಟ್ ಪ್ರಕಾರ, ನ್ಯಾಯವನ್ನು ನಾಗರಿಕರಿಗೆ ತಲುಪಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ಇದರಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ತರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ರಾಯಚೂರು ಜಿಲ್ಲೆಯ ಕವಿತಾಳ ಪೊಲೀಸ್ ಠಾಣೆ ದೇಶದ ಮೂರನ...
ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಷ್ಟ್ರೀಯ ಜನಗಣತಿ–2027 ಹಿನ್ನೆಲೆಯಲ್ಲಿ ನಗರದ ವ್ಯಾಪ್ತಿಯಲ್ಲಿ ಮನೆಪಟ್ಟಿ ಮತ್ತು ಮನೆಗಣತಿ ಕಾರ್ಯಗಳು ಬುಧವಾರ ಆರಂಭಗೊಂಡಿವೆ. ಈ ಬಾರಿ ನಾಗರಿಕರಿಗೆ ಸ್ವಯಂ-ಗಣತಿಯ ಆಯ್ಕೆಯನ್ನು ನೀಡಲಾಗಿದ್ದು, ಮನೆಯ ವಿವರಗಳನ್ನು ಆನ್‌ಲೈನ್ ಮೂಲಕಲೇ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ.ಏಪ್ರಿಲ್ 1 ರಿಂದ 15ರವರೆಗೆ ಸ್ವಯಂ-ಗಣತಿ ನಡೆಸಲು https://se.census.gov.in ಪೋರ್ಟಲ್ ಸಕ್ರಿಯವಾಗಿದೆ. ಮನೆಯ ಯಾವುದೇ ಒಬ್ಬ ಸದಸ್ಯರು ಸುಮಾರು 15–20 ನಿಮಿಷಗಳಲ್ಲಿ ಮಾಹಿತಿಯನ್ನು ದಾಖಲು ಮಾಡಬಹುದು. ನೋಂದಣಿಯ ನಂತರ Self-Enumeration ID ಮೊಬೈಲ್ ಅಥವಾ ಇಮೇಲ್ ಮೂಲಕ ಕಳುಹಿಸಲಾಗುತ್ತದೆ.ಎರಡನೇ ಹಂತವಾಗಿ ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಮನೆ–ಮನೆಗೆ ಭೇಟಿ ನೀಡಿ ಸ್ಥಳೀಯ ಪರಿಶೀಲನೆ ನಡೆಸಲಿದ್ದಾರೆ. ಸ್ವಯಂ-ಗಣತಿ ಮಾಡಿದವರು ತಮ್ಮ Self-Enumeration ID ಅನ್ನು ಗಣತಿದಾರರಿಗೆ ನೀಡುವುದು ಅಗತ್ಯ.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೇಳುವಂತೆ, ಜನಗಣತಿಯಲ್ಲಿ ಸಂಗ್ರಹವಾಗುವ ಮಾಹಿತಿ ಭವಿಷ್ಯದ ನಗರ ಯೋಜನೆ, ಸಾರಿಗೆ ವ್ಯವಸ್ಥೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ಸಾರ್ವಜನಿಕ...
ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

ಸಾಲದ ಒತ್ತಡಕ್ಕೆ ದಾರುಣ ಅಂತ್ಯ: ಒಂದೇ ಕುಟುಂಬದ ಇಬ್ಬರು ಸಾವು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಸಾಲಗಾರರ ಕಾಟದಿಂದ ಬೇಸತ್ತ ಯುವಕನೊಬ್ಬ ತೀವ್ರ ಕ್ರಮಕ್ಕೆ ಮುಂದಾಗಿ, ಒಂದೇ ಕುಟುಂಬದ ಇಬ್ಬರು ಸಾವಿಗೀಡಾದ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ.ಮೋಹನ್ ಗೌಡ ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ದಾಖಲಿಸಿದ್ದಾನೆ. ಈ ವಿಡಿಯೋ ನೋಡಿ ಆತಂಕಗೊಂಡ ಸಂಬಂಧಿಕರು ಮನೆಗೆ ಧಾವಿಸಿದಾಗ ಹೃದಯವಿದ್ರಾವಕ ದೃಶ್ಯ ಎದುರಾಗಿದೆ.ಮೋಹನ್ ತನ್ನ ತಾಯಿ ಹಾಗೂ ಅಕ್ಕನ ಮೇಲೆ ದಾಳಿ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ತಾಯಿ ಆಶಾ (55) ಮತ್ತು ಅಕ್ಕ ವರ್ಷಿತಾ (34) ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಗಂಭೀರವಾಗಿ ಗಾಯಗೊಂಡಿರುವ ಮೋಹನ್ ಗೌಡ (27) ಮತ್ತು ಅಕ್ಕನ ಮಗ ಮಯಾಂಕ್ (11) ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.ಪ್ರಾಥಮಿಕ ತನಿಖೆಯಲ್ಲಿ ಅತಿಯಾದ ಸಾಲದ ಒತ್ತಡವೇ ಈ ದುರ್ಘಟನೆಗೆ ಕಾರಣವ...
ಎಲ್ಲಾ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆ ಮತ್ತು ಟ್ರಾಮಾ ಕೇರ್‌ ಸೆಂಟರ್

ಎಲ್ಲಾ ಜಿಲ್ಲೆಗಳಲ್ಲೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್‌ ಆಸ್ಪತ್ರೆ ಮತ್ತು ಟ್ರಾಮಾ ಕೇರ್‌ ಸೆಂಟರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ದೇಶದಲ್ಲಿ ಆರೋಗ್ಯ ಸೇವೆಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ ಈಗ ಮಕ್ಕಳಿಗಾಗಿ 450 ಹಾಸಿಗೆಯುಳ್ಳ ಬೃಹತ್‌, ಅತ್ಯಾಧುನಿಕ ಹಾಗೂ ಸುಸಜ್ಜಿತ ಆಸ್ಪತ್ರೆಯನ್ನು ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ನಿರ್ಮಾಣ ಮಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದ್ದಾರೆ.ನೂತನ ಆಸ್ಪತ್ರೆ ಲೋಕಾರ್ಪಣೆ ಮಾಡಿದ ನಂತರ ಭಾಷಣ ಮಾಡಿದ ಸಚಿವ ಡಾ. ಪಾಟೀಲ್‌, ಮಕ್ಕಳಿಗೆ ಉತ್ತರ ಆರೈಕೆ, ಚಿಕಿತ್ಸೆ ಒದಗಿಸಲು ಈ ಆಸ್ಪತ್ರೆ ನಿರ್ಮಿಸಲಾಗಿದೆ. ಸರ್ಕಾರದಿಂದಲೇ ಇಷ್ಟೊಂದು ಬೃಹತ್‌ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ, ಇಷ್ಟು ದೊಟ್ಟಮಟ್ಟದ ಕಾರ್ಯ ನಿರ್ವಹಿಸುತ್ತಿರುವುದು ದೇಶದಲ್ಲಿ ಮೊದಲ ಎಂದರು.ಬೇರೇ ಬೇರೆ ರಾಜ್ಯಗಳಿಂದ ಬರುವ ರೋಗಿಗಳಿಗೂ ಇಲ್ಲಿ ಒಂದೇ ತರನಾದ ಚಿಕಿತ್ಸೆ ಒದಗಿಸಲಾಗುತ್ತದೆ. ಶೇ. 100ರಷ್ಟು ಗುಣಮಟ್ಟದ ಆರೋಗ್ಯ ಚಿಕಿತ್ಸೆ ಕೊಡುವುದು ನಮ್ಮ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ. ಸಾರ್ವಜನಿಕರು ಇದನ್ನು ಸದುಪಯೋಗ...
ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಅರಸೀಕೆರೆಗೆ ಮೆಮು ರೈಲು ಸೇವೆ

ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಅರಸೀಕೆರೆಗೆ ಮೆಮು ರೈಲು ಸೇವೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೆಂಗಳೂರಿನಿಂದ ತುಮಕೂರು ಮಾರ್ಗವಾಗಿ ಅರಸೀಕೆರೆಗೆ ನೂತನ ಮೆಮು ರೈಲಿನ ಸೇವೆಯನ್ನು ಒದಗಿಸಲಾಗಿದೆ. ಈ ಮೂಲಕ ಪ್ರಯಾಣಿಕರ ಬಹುದಿನದ ಬೇಡಿಕೆಯನ್ನು ಈಡೇರಿಸಲಾಗಿದೆ ಎಂದು ಕೇಂದ್ರ ರೈವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.ಯಲಹಂಕದಿಂದ, ಯಶವಂತಪುರ ಮಾರ್ಗವಾಗಿ ಹೊರಡುವ ಈ ಮೆಮು ರೈಲು ವಿದ್ಯಾರ್ಥಿಗಳು, ದಿನಗೂಲಿ ಕಾರ್ಮಿಕರು, ಉದ್ಯೋಗಿಗಳು, ರೈತರು, ವ್ಯಾಪಾರಿಗಳು ಸೇರಿದಂತೆ ಮುಂತಾದ ಪ್ರಯಾಣಿಕರಿಗೆ ಕೈಗೆಟುಕುವ ಮತ್ತು ವಿಶ್ವಾಸಾರ್ಹ ಪ್ರಯಾಣದ ಆಯ್ಕೆಯನ್ನು ಒದಗಿಸಲಿದೆ ಎಂದವರು ಹೇಳಿದ್ದಾರೆ.ಈ ಭಾಗದ ಪ್ರಯಾಣಿಕರು ಈ ನೂತನ ಮೆಮು ರೈಲಿನ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಳ್ಳಲು ಅನುಕೂಲವಾಗಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ....
ಸುಗ್ರೀವಾಜ್ಞೆ ಮೂಲಕ  KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

ಸುಗ್ರೀವಾಜ್ಞೆ ಮೂಲಕ KAOMA ಕಾಯ್ದೆ; ಸರ್ಕಾರಕ್ಕೆ BAF ಅಭಿನಂದನೆ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನ ವಿಧಾನಸಭೆಯಲ್ಲಿ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಸುಗ್ರೀವಾಜ್ಞೆಯ ಮೂಲಕ ಶೀಘ್ರದಲ್ಲಿ ಜಾರಿಗೊಳಿಸುವು ಡಿಸಿಎಂ ಡಿಕೆ ಶಿವಕುಮಾರ್‌ ಅವರ ಭರವಸೆಯನ್ನು ಬೆಂಗಳೂರು ಅಪಾರ್ಟ್‌ಮೆಂಟ್ಸ್ ಫೆಡರೇಷನ್ (BAF) ಮುಕ್ತಕಂಠದಿಂದ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ಬಹುನಿರೀಕ್ಷಿತ ಈ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಕಾರಣೀಭೂತರಾಗಿರುವಂತಹ ಎಲ್ಲ ಪಕ್ಷದ ನಾಯಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳನ್ನು ತಿಳಿಸಿದೆ."ಕರ್ನಾಟಕ ವಿಧಾನಸಭೆಯಲ್ಲಿ KAOMA ಚರ್ಚೆಯನ್ನು ಮುನ್ನೆಲೆಗೆ ತಂದಿದ್ದಕ್ಕಾಗಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್, ಹಾಗೂ ಎಲ್ಲಾ ಪಕ್ಷಗಳ ನಾಯಕರಿಗೂ ನಾವು ಆಭಾರಿಯಾಗಿದ್ದೇವೆ. ಈ ಮಹತ್ವದ ಕಾಯ್ದೆಯನ್ನು ರೂಪಿಸುವಲ್ಲಿ ಕಳೆದ ಹಲವು ವರ್ಷಗಳಿಂದ ನಿರಂತರ ಪ್ರಯತ್ನಗಳನ್ನು ನಡೆಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳಿಗೆ, ನಗರಾಭಿವೃದ್ಧಿ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳ ಇಲಾಖೆಯ ಅಧಿಕಾರಿಗಳಿಗೂ ನಾವು ನಮ್ಮ ಧನ್ಯವಾದಗಳನ...