
ದಾವಣಗೆರೆ, ಬಾಗಲಕೋಟೆ ಕಾಂಗ್ರೆಸ್ ಗೆಲುವು ಖಚಿತ ಎಂದ ಸಿದ್ದರಾಮಯ್ಯ
ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲದ ಕಾರಣ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರು. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ. ಅವರು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ. ಗುರುವಾರ 11 ಜನ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ ಎಂದರು.ಶಾಸಕ ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಹಿಂಪಡೆಯುವಂತೆ ಮನವೊಲಿಸಲು ಸಾಧ್ಯವಾಗಲಿಲ್ಲ. ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ...








