BJP-JDS ‘ಮೈಸೂರು ಚಲೋ’ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಎಂದ ವಿಜಯೇಂದ್ರ
ಬೆಂಗಳೂರು: ಮೈಸೂರು ಚಲೋ ಪಾದಯಾತ್ರೆಯು ಕರ್ನಾಟಕದ ಭ್ರಷ್ಟ ಕಾಂಗ್ರೆಸ್ ಸರಕಾರವನ್ನು ಕಿತ್ತೊಗೆಯುವ ಶಕ್ತಿಯನ್ನು ಹೊಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.
ಬೆಂಗಳೂರು ಹೊರವಲಯದ ಕೆಂಗೇರಿಯಲ್ಲಿ ಶನಿವಾರ ಬಿಜೆಪಿ- ಜೆಡಿಎಸ್ 'ಮೈಸೂರು ಚಲೋ' ಪಾದಯಾತ್ರೆಯನ್ನು ನಗಾರಿ ಬಾರಿಸುವ ಮೂಲಕ ವಿಜಯೇಂದ್ರ ಹಾಗೂ ನಾಯಕರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತೊಲಗಲಿ ತೊಲಗಲಿ ಕಾಂಗ್ರೆಸ್ ತೊಲಗಲಿ ಎಂದು ಘೋಷಣೆ ಮೊಳಗಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಜಯೇಂದ್ರ, ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರವು ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರಕಾರವು ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿದೆ ಎಂದು ಟೀಕಿಸಿದರು.
ಮೈಸೂರಿನ ಮುಡಾದ ಅವ್ಯವಹಾರದಡಿ ಬಡವರಿಗೆ ನಿವೇಶನಗಳನ್ನು ವಂಚಿಸಿದ್ದಾರೆ. 5 ಸಾವಿರ ಕೋಟಿಯ ಹಗರಣ ಅಲ್ಲಿ ನಡೆದಿದೆ. ಭ್ರಷ್ಟ ಅಧಿಕಾರಿಗಳಿಗೆ ಸ್ವತಃ ಮುಖ್ಯಮಂತ್ರಿಗಳೇ ...