Saturday, December 6

ಪ್ರಮುಖ ಸುದ್ದಿ

ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ಹಿಂಸಾತ್ಮಕ ಪ್ರತಿಭಟನೆಗೆ ಬೆಚ್ಚಿದ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ

ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಉದ್ಯೋಗ ಮೀಸಲಾತಿ ವಿವಾದದಿಂದಾಗಿ ಹಿಂಸಾಚಾರ ಭುಗಿಲೆದ್ದಿರುವ ಬಾಂಗ್ಲಾದೇಶದಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಡೆಯುತ್ತಿದ್ದು ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಒಂದೆಡೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ವಿದ್ಯಾರ್ಥಿ ಸಂಘಟನೆಗಳು ಹಾಗೂ ಪ್ರತಿಪಕ್ಷಗಳು ಪ್ರತಿಭಟನೆ ನಡೆದಿದ್ದರೆ, ಆಡಳಿತ ಪಕ್ಷದ ಕಾರ್ಯಕರ್ತರು ಈ ಹೋರಾಟಕ್ಕೆ ಅಡ್ಡಿಪಡಿಸಿದ್ದಾರೆ. ಈ ಸನ್ನಿವೇಶಕ್ಕೆ ವೇಶದಿಂದಾಗಿ ಸಂಘರ್ಷ ಭುಗಿಲೆದ್ದು ಇಡೀ ದೆಶ ಭೀಕರ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಈ ನಡುವೆ, ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ. ರಾಜೀನಾಮೆ ಬಳಿಕ ಸುರಕ್ಷಿತ ಸ್ಥಳಕ್ಕೆ ಅವರು ತೆರಳಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ, ಶೇಖ್ ಹಸೀನಾ ಅವರು ಭಾರತಕ್ಕೆ ಪಲಾಯನವಾಗಿದ್ದಾರೆ ಎಂಬ ಮಾತುಗಳೂ ಹರಿದಾಡುತ್ತಿವೆ....
ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಯಾದಗಿರಿ PSI ಸಾವಿನ ಪ್ರಕರಣದ ಬೆನ್ನಲ್ಲೇ ಇತ್ತ ಬೆಂಗಳೂರು CCB ಅಧಿಕಾರಿ ಸಾವಿಗೆ ಶರಣು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಪರಶುರಾಮ್ ಸಾವಿನ ಪ್ರಕರಣ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವಾಗಲೇ ಇತ್ತ ರಾಜಧಾನಿ‌ ಬೆಂಗಳೂರು ಬಳಿ ಪೊಲೀಸ್ ಇನ್‌ಸ್ಪೆಕ್ಟರ್ ಸಾವಿಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರವೊಂದಕ್ಕೆ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮೃತ ಅಧಿಕಾರಿ ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಸಾವಿಗೆ ಕಾರಣ ಏನೆಂಬ ಬಗ್ಗೆ ಏನೂ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ....
PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

PSI ಪರುಶುರಾಮ್ ಶಂಕಾಸ್ಪದ ಸಾವು ಸಿಬಿಐ ತನಿಖೆಗೆ ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಯಾದಗಿರಿ ಪಿ.ಎಸ್.ಐ.ಪರುಶುರಾಮ್ ಶಂಕಾಸ್ಪದ ಸಾವು ಕುರಿತು ಸಿಬಿಐ ತನಿಖೆಗೆ ವಹಿಸಬೇಕೆಂದು ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ಒತ್ತಾಯಿಸಿದೆ. ಅಂಬೇಡ್ಕರ್ ಮಾನವ ಹಕ್ಕುಗಳ ಕ್ರಾಂತಿ ಸೇನೆ ರಾಜ್ಯಾಧ್ಯಕ್ಷ ಕ್ರಾಂತಿರಾಜು, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಚಿದರಹಳ್ಳಿ ಮಹಾದೇವಸ್ವಾಮಿ ಮತ್ತು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಯಂತ್ರಣ ಸಮಿತಿಯ ವಿ.ಗಿರಿಕುಮಾರ್, ಹಿರಿಯ ಹೋರಾಟಗಾರರಾದ ಉಮಾಶಂಕರ್, ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಬಿ.ದೇವರಾಜ್ ರವರು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ,  ಸ್ವಾತಂತ್ರ್ಯ ಬಂದ 77ವರ್ಷಗಳು ಕಳೆದರು ಇಂದು ಸಹ ದಲಿತರ ಮೇಲೆ ಜಾತಿನಿಂದನೆ, ದೌರ್ಜನ್ಯ ನಡೆಯುತ್ತಿದೆ. ಇತ್ತಿಚೇಗೆ ರಾಜ್ಯದಲ್ಲಿ ದಲಿತ ಸಮುದಾಯದ ಅಧಿಕಾರಿಗಳು ಭ್ರಷ್ಟಚಾರದ ವಿರುದ್ದ ಸೆಣಸಲು ಆಗದೇ ಸಾವಿಗೆ ಶರಣುಗಾತ್ತಿದ್ದಾರೆ ಎಂದು‌ಕಳವಳ ವ್ಯಕ್ತಪಡಿಸಿದರು. ಯಾದಗಿರಿ ಪೊಲೀಸ್ ಠಾಣೆ ಪಿ.ಎಸ್.ಐ. ಪರುಶುರಾಮ್ ಶಂಕಸ್ಪಾದ ಸಾವು ಸಂಭವಿಸಿದ ಕಾರಣ ಕುರಿತು ಪರುಶುರಾಮ್ ರವರ ಪತ್ನಿ ಶ್ವೆತ್ರಾ ರವರು ಶಾಸಕರಾದ ಚನ್ನಾರೆಡ್ಡಿ ಪಾಟೀಲ್ ಮತ್ತ...
ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ದೇವಸ್ಥಾನದ ಮೆರವಣಿಗೆ ವೇಳೆ ಘೋರ ದುರಂತ; ವಿದ್ಯುತ್ ಸ್ಪರ್ಷಿಸಿ 8 ಮಂದಿ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಪಾಟ್ನಾ: ಬಿಹಾರದ ಸುಲ್ತಾನ್‌ಪುರ ಗ್ರಾಮದ ದೇವಸ್ಥಾನವೊಂದರ ಕಾರ್ಯಕ್ರಮದ ಮೆರವಣಿಗೆಯಲ್ಲಿ ಡಿಜೆ ವಾಹನಕ್ಕೆ ವಿದ್ಯುತ್‌ ತಗುಲಿ 8 ಮಂದಿ ಬಲಿಯಾಗಿದ್ದಾರೆ. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಈ ಗ್ರಾಮದಲ್ಲಿ ಹುಡುಗರು ಪ್ರತಿ ಸೋಮವಾರ ಸಮೀಪದ ಹರಿಹರನಾಥ ದೇವಸ್ಥಾನಕ್ಕೆ ಜಲಾಭಿಷೇಕ ಕೈಂಕರ್ಯ ಆಯೋಜಿಸಿದ್ದರು. ಈ ಸಂಬಂಧ ಭಾನುವಾರ ಮಧ್ಯರಾತ್ರಿ ಮೆರವಣಿಗೆಯಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಡಿಜೆ ವಾಹನಕ್ಕೆ ವಿದ್ಯುತ್ ತಂತಿ ತಗುಲಿದೆ ಎನ್ನಲಾಗಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ಬಾಂಗ್ಲಾ ಹಿಂಸಾಚಾರ; ಸದ್ಯದ ಸ್ಥಿತಿಯಲ್ಲಿ ಢಾಕಾ ಪ್ರವಾಸ ಬೇಡ ಎಂದ ಮೋದಿ ಸರ್ಕಾರ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರ ನಿಯಂತ್ರಿಸಲಾಗದ ಸ್ಥಿತಿ ತಲುಪಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಆ ದೇಶಕ್ಕೆ ಭೇಟಿ ನೀಡದಂತೆ ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹಿಂಸಾತ್ಮಕ ಪ್ರತಿಭಟನೆಗಳಿಂದ ಬಾಂಗ್ಲಾದೇಶ ನಲುಗಿದ್ದು, 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಮನಗಂಡಿರುವ ಮೋದಿ ಸರ್ಕಾರ, ಮುಂದಿನ ಸೂಚನೆ ಬರುವವರೆಗೆ ಬಾಂಗ್ಲಾದೇಶಕ್ಕೆ ತೆರಳದಂತೆ ಎಚ್ಚರಿಕೆ ನೀಡಿದೆ. Advisory for Bangladesh:https://t.co/mKs1auhnlK pic.twitter.com/m5c5Y0Bn8b — Randhir Jaiswal (@MEAIndia) August 4, 2024 ಈ ಸಂಬಂದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಬಾಂಗ್ಲಾದೇಶದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಭಟನಾ ನಿರತರ ನಡುವೆ ಭುಗಿಲೆದ್ದ ಹಿಂಸಾಚಾರ ಭುಗಿಲೆದ್ದಿದ್ದು, ಅಲ್ಲಿರುವ ಭಾರತೀಯರಿಗೂ ಸುರಕ್ಷತೆ ಬಗ್ಗೆ ಸಲಹೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ತೀವ್ರ ಎಚ್ಚರಿಕೆ ವಹಿಸಲು, ಢಾಕಾದಲ್ಲಿರುವ ಭಾರತದ ಹೈಕಮಿಷನ್ ಕಚೇರಿಯ ತುರ್ತು ದೂರವಾಣಿ ಸಂಖ್...
‘ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿರುವವರೆಲ್ಲರೂ ಭ್ರಷ್ಟರೇ’; ರಾಮಲಿಂಗಾ ರೆಡ್ಡಿ

‘ಬಿಜೆಪಿ ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿರುವವರೆಲ್ಲರೂ ಭ್ರಷ್ಟರೇ’; ರಾಮಲಿಂಗಾ ರೆಡ್ಡಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: ಭಾರತೀಯ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿ ಇರುವವರೆಲ್ಲರೂ ಭ್ರಷ್ಟರೇ ಆಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ – ಜೆಡಿಎಸ್ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ ಬಿಜೆಪಿ. ಅಳ್ಲಿರುವವರೆಲ್ಲ ಭ್ರಷ್ಟರೇ, ಅವರನ್ನು ಕಡು ಭ್ರಷ್ಟರು ಎಂದರೆ ತಪ್ಪಿಲ್ಲ ಎಂದರು. ಭ್ರಷ್ಟರಲ್ಲೇ ಅತಿ ಭ್ರಷ್ಟರು ಇರುವುದು ಬಿಜೆಪಿ ಪಕ್ಷದಲ್ಲಿ, ಹಾಗಾಗಿ ಅದೊಂದು ಭ್ರಷ್ಟಾಚಾರದ ಗಂಗೋತ್ರಿ. ಬಿಜೆಪಿಯೇತರ ಪಕ್ಷಗಳಲ್ಲಿದ್ದ ಭ್ರಷ್ಟರನ್ನೆಲ್ಲ ಐಟಿ, ಇಡಿ ಮೂಲಕ ಹೆದರಿಸಿ, ಬೆದರಿಸಿ ಬಿಜೆಪಿಗೆ ಸೇರಿಸಿಕೊಂಡು ಹಲವು ಹುದ್ದೆಗಳನ್ನು ನೀಡಿದ್ದಾರೆ. ಇಂತಹ ಭ್ರಷ್ಟರೆಲ್ಲ ಸೇರಿ ಅದು ಭ್ರಷ್ಟರ ಪಕ್ಷ ಆಗಿದೆ. ಅಂತಹ ಭ್ರಷ್ಟರು ಈಗ… pic.twitter.com/NW8KtwNhbR — Karnataka Congress (@INCKarnataka) August 4, 2024 ದೇಶದಲ್ಲಿ ಭ್ರಷ್ಟಾಚ...
ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ನೂರಕ್ಕೂ ಹೆಚ್ಚು ಜನರ ಸಾವು

ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ನೂರಕ್ಕೂ ಹೆಚ್ಚು ಜನರ ಸಾವು

ದೇಶ-ವಿದೇಶ, ಪ್ರಮುಖ ಸುದ್ದಿ
ಢಾಕಾ: ಬಾಂಗ್ಲಾದೇಶದಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಕಾರ್ಯಕರ್ತರ ನಡುವಿನ ಸಂಘರ್ಷ ತಾರಕಕ್ಕೇರಿದ್ದು ಹಿಂಸಾಚಾರ ಉಲ್ಬಣಗೊಂಡಿದೆ. ಹತ್ತಕ್ಕೂ ಹೆಚ್ಚು ನಗರಗಳಿಗೆ ಹಿಂಸಾಚಾರ ವ್ಯಾಪಿಸಿದ್ದು, ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಬಾಂಗ್ಲಾ ದೇಶದ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವೆ ಹೊಡೆದಾಟ ಬಡಿದಾಟವೇ ನಡೆದಿದೆ. ಉದ್ಯೋಗ ಮೀಸಲಾತಿ ಸಹಿತ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳ ಬೆಂಬಲಿಗರು ಹಲವು ದಿನಗಳಿಂದ ಪ್ರತಿಭಟನೆ ನಡೆಸಿತ್ತಿದ್ದಾರೆ. ಪ್ರಧಾನಿ ಶೇಕ್ ಹಸೀನಾ ರಾಜೀನಾಮೆಗೂ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಪ್ರತಿಭಟನೆ ಹತ್ತಿಕ್ಕಲು ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರು ಅಖಾಡಕ್ಕಿಳಿದಿದ್ದು ಉಭಯ ಗುಂಪುಗಳ ನಡುವೆ ಹಿಂಸಾಚಾರ ನಡೆದಿದೆ. ಈ ಹಿಂಸಾಚಾರದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅವಾಮಿ ಲೀಗ್ ನ ಬೆಂಬಲಿಗರು, ಛಾತ್ರಾ ಲೀಗ್ ಹಾಗೂ ಜುಬೋ ಲೀಗ್ ಕಾರ್ಯಕರ್ತರ ನಡುವೆ ಭುಗಿಲೆದ್ದಿರುವ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ಹಾಗೂ ಸೇನಾಪಡೆ ಶತಪ್ರಯತ್ನ ನಡೆಸುತ್ತಿದೆ....
ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: "ಬಿಜೆಪಿ ಮತ್ತು ಜೆಡಿಎಸ್ ಪ್ರಮುಖ ನಾಯಕರು ತಮ್ಮ ಮಕ್ಕಳನ್ನು ರಾಜಕೀಯವಾಗಿ ಉಳಿಸಲು ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರ ಉರುಳಿಸಲು ಪಿತೂರಿ ನಡೆಸುತ್ತಿದ್ದಾರೆ" ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ವ್ಯಾಖ್ಯಾನಿಸಿದ್ದಾರೆ.. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಭಾನುವಾರ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು "ಪ್ರಜ್ವಲ್‌ ರೇವಣ್ಣ ಪ್ರಕರಣ ಹಾಗೂ ಹಲವಾರು ಪ್ರಕರಣಗಳಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರುವ ಪಿತೂರಿಯನ್ನು ದೇಶದ ಜನ ಗಮನಿಸಿದ್ದಾರೆ. ನಾವು ಜನರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ" ಎಂದರು. "ಈ ಹಿಂದೆ ಕಾಂಗ್ರೆಸ್- ಜೆಡಿಎಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದ ಬಿಜೆಪಿ ಈಗಲೂ ಅದೇ ಉದ್ದೇಶದಿಂದ ಕಾಂಗ್ರೆಸ್‌ ಸರ್ಕಾರವನ್ನು ಗುರಿಯಾಗಿಸಿಕೊಂಡಿದೆ. ಈ ಎಲ್ಲಾ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಗಿದೆ" ಎಂದು ಹೇಳಿದರು. '2023ರ ವಿಧಾನಸಭೆ ಚುನಾವಣೆ ಉಳ್ಳವರ ಮತ್ತು ಇಲ್ಲದವರು ನಡುವಿನ ಹೋರಾಟವಾಗಿತ್ತು. ...
ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ; ಪರಮೇಶ್ವರ್ ವ್ಯಂಗ್ಯ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ರಾಮನಗರ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ಭ್ರಷ್ಟಾಚಾರದ ವಿರುದ್ಧವೇ ಸುಳ್ಳು ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹುನ್ನಾರವನ್ನು ಜನಸಾಮಾನ್ಯರಿಗೆ ನಾವು ತಿಳಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಪರಮೇಶ್ವರ್, ದಾರಿ ಉದ್ದಕ್ಕೂ ಅನೇಕ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ. ಅದರಲ್ಲಿ ರಾಷ್ಟ್ರೀಯ ಪಕ್ಷ ಬಿಜೆಪಿ ಹಿಂದಕ್ಕೆ ಹೋಗಿದೆ ಪ್ರಾದೇಶಿಕ ಪಕ್ಷ ಜೆಡಿಎಸ್ ಮುಂದಕ್ಕೆ ಬಂದಿದೆ. ಮೈಸೂರ್ ಚಲೋ ಪಾದಯಾತ್ರೆ ಮಾಡಬಾರದು ಎಂದು ರಾಜಾರೋಷವಾಗಿ ಹೇಳಿದವರ ಫೋಟೋ ಈಗ ಮುಂದೆ ಬಂದಿದೆ. ಪಾದಯಾತ್ರೆ ಮಾಡಲೇಬೇಕು ಎಂದು ಘಂಟಾಘೋಷವಾಗಿ ಹೇಳಿದ ಬಿಜೆಪಿಯ ರಾಜ್ಯ ಅಧ್ಯಕ್ಷರ ಫೋಟೋ ಹಿಂದಕ್ಕೆ ಹೋಗಿದೆ ಎಂದು ಟೀಕಿಸಿದರು. ಭ್ರಷ್ಟಾಚಾರಿಗಳ ಭ್ರಷ್ಟಾಚಾರದ ಯಾತ್ರೆ ಎಂದು ಬಿಜೆಪಿಯವರೇ ಹೇಳಿದ್ದಾರೆ. ಸತ್ಯವನ್ನು ಮರೆಮಾಚಲು ಎರಡು ಪಕ್ಷಗಳು ಹೊರಟಿವೆ. ನಾಲ್ಕು ವರ್ಷ ಕರ್ನಾಟಕದಲ್ಲಿ ಭ್ರಷ್ಟ ಆಡಳಿತ ನಡೆಸಿ, 40% ಕಮಿಷನ್ ತಿಂದ ನಿಮಗೆ ಕರ್ನಾಟಕದ ಜನತೆ 2023ರ ಚುನಾವಣೆ...
ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಜೆಪಿ, ಜೆಡಿಎಸ್‌ನ ದ್ವಂದ್ವ ನಿಲುವಿನ ಪಾದಯಾತ್ರೆಯಿಂದ ಬೇಸತ್ತ ಹಳೇ ಮೈಸೂರು ಭಾಗದ ಆ ಎರಡೂ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನತ್ತ ಮುಖ‌ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ, ಜೆಡಿಎಸ್ ನ ಮೈಸೂರು ಚಲೋ ಪಾದಯಾತ್ರೆಯ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಮುಂಚಿನ ದಿನ ರಾತ್ರಿ ಹೇಳಿಕೆ ನೀಡಿದ್ದ, ಪೆನ್ ಡ್ರೈವ್ ಪ್ರಕರಣದಲ್ಲಿ ತಮ್ಮ ಕುಟುಂಬದ ಸರ್ವ ನಾಶ ಮಾಡಿದವನ ಸಭೆಗೆ ನಾನು ಹೋಗಬೇಕೇ ಎಂದು ರಾತ್ರಿ ಪ್ರಶ್ನಿಸಿದ್ದ ಎಚ್.ಡಿ.ಕುಮಾರಸ್ವಾಮಿ ಅವರು, ಬೆಳಗಾಗುವುದರೊಳಗೆ ತಮ್ಮ ನಿಲುವು ಬದಲಿಸಿದ್ದಾರೆ. ದಿಢೀರ್ ಆಗಿ ಬಂದು ಪಾದಯಾತ್ರೆಯ ನೇತ್ರತ್ವ ವಹಿಸಿದ್ದಾರೆ. ಮಂತ್ರಿ ಪದವಿಯಿಂದ ಕಿತ್ತು ಹಾಕುವುದಾಗಿ ಅಮಿತ್ ಶಾ ಬೆದರಿಕೆ ಹಾಕಿರಬೇಕು. ಸಿಕ್ಕ ಒಂದು ಸಚಿವ ಪದವಿ ಕೈಬಿಡುವ ಭಯದಲ್ಲಿ ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮಂಜುನಾಥ ಭಂಡಾರಿ ಅವರು ಟೀಕಿಸಿದ್ದಾರೆ. ಇಂಥ ದ್ವಂದ್ವ ನಿಲುವಿನ ವ್ಯಕ್ತಿಯನ್ನು ನಂಬುವುದು ಹೇಗೆ..? ...