Saturday, December 6

ಪ್ರಮುಖ ಸುದ್ದಿ

ಮಾಧ್ಯಮ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ‘ರಾಜ್ಯ ಸಂವಹನ ಪ್ರಶಸ್ತಿ’;

ಮಾಧ್ಯಮ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರತಿಷ್ಠಿತ ‘ರಾಜ್ಯ ಸಂವಹನ ಪ್ರಶಸ್ತಿ’;

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (Public Relations Council of India- PRCI) ನೀಡುವ 'ರಾಜ್ಯ ಸಂವಹನ ಪ್ರಶಸ್ತಿ‌' ಪ್ರದಾನ ಸಮಾರಂಭ ಗಮನಸೆಳೆಯಿತು. ವಿವಿದ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪ್ರಮುಖರನ್ನು ಗುರುತಿಸಿ ನೀಡುವ ಪ್ರತಿಷ್ಠಿತ ಪ್ರಶಸ್ತಿ ಬೆಂಗಳೂರಿನಲ್ಲಿ ನೆರವೇರಿತು. PRCI ಕರ್ನಾಟಕ ಚಾಪ್ಟರ್ ಆಯೋಜಿಸಿದ್ದ ಸಮಾರಂಭದಲ್ಲಿ ಈ ಬಾರಿ ಮಾಧ್ಯಮ, ಸಂವಹನ, ಸಿನಿಮಾ, ಸಾರ್ವಜನಿಕ ಸಂಪರ್ಕ ಸಹಿತ ವಿವಿಧ ಕ್ಷೇತ್ರಗಳ 12 ಮಂದಿಗೆ ಪ್ರಶಸ್ತಿ ನೀಡಲಾಯಿತು. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ, ನಿವೃತ್ತ ನ್ಯಾಯಮೂರ್ತಿ ಗಳಾದ ಡಾ. ಹೆಚ್ ಎಸ್ ಪ್ರಭಾಕರ ಶಾಸ್ತ್ರಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಡಾ.ಬಿ.ಕೆ.ರವಿ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಮೀಡಿಯಾ ಕೌನ್ಸಿಲ್ ಅಧ್ಯಕ್ಷ ಅಲ್ವಿನ್ ಮೆಂಡೊನ್ಸಾ, ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಡಿ.ಪಿ.ಮುರುಳಿಧರ್, ವಿಜಯಕರ್ನಾಟಕ ಮುಖ್ಯ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, 'ದ ಹಿಂದು' ಹಿರಿಯ ಪತ್ರಕರ್ತ ಬಿ.ಎಸ್.ಸತೀಶ...
UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
UAEಯಲ್ಲಿ ಪುರುಷ ನರ್ಸ್ ಉದ್ಯೋವಕಾಶ: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ.. ಆಯ್ಕೆಯಾದವರಿಗೆ ಮಾಸಿಕ 1,11,000. ರೂಪಾಯಿ ವೇತನ.. ಬೆಂಗಳೂರು: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಯುನೈಟೆಡ್ ಅರಬ್ ಎಮಿರೈಟ್ಸ್ (ಯುಎಈ)ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಇರುವರಿಗೆಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮವು ಅರ್ಹರಿಗೆ ಈ ಉದ್ಯೋಗ ಅವಕಾಶವನ್ನು ಒದಗಿಸಲಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಈ ಹಿಂದೆ ಸ್ಲೋವಾಕಿಯಾದಲ್ಲಿ ಹಲವಾರು ಕನ್ನಡಿಗರಿಗೆ ನಿಗಮದ ಮೂಲಕ ಉದ್ಯೋಗ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನಲ್ಲೇ ಯುಎಈ ನಲ್ಲಿ ಪುರುಷ ನರ್ಸ್ಗಳಿಗೆ ಉದ್ಯೋಗ ನೀಡುವ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತ ನಾಯಕ್ ಅವರು ಈ ಯೋಜನೆಗೆ ವಿಶೇಷ ಆಸಕ್ತಿ ವಹಿಸಿದ್ದಾರೆ. UAE ಯಲ್ಲಿ ಪುರುಷ ನರ್ಸಿಂಗ್ ಹುದ್ದೆ ...
ಭೂ ಕುಸಿತ.. ಈಗ ಪುತ್ತೂರು ಸರದಿ.. ಹೆದ್ದಾರಿಯಲ್ಲಿ ವಾಹನ ಸಂಚಾರ ಏರುಪೇರು

ಭೂ ಕುಸಿತ.. ಈಗ ಪುತ್ತೂರು ಸರದಿ.. ಹೆದ್ದಾರಿಯಲ್ಲಿ ವಾಹನ ಸಂಚಾರ ಏರುಪೇರು

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು ಬಹುತೇಕ ನದಿಗಳ ತೀರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ನದಿ ಪಾತ್ರದ ಅನೇಕ ಹಳ್ಳಿಗಳ ತಗ್ಗು ಪ್ರದೇಶಗಳು ಜಲಾವ್ರತವಾಗಿವೆ. ಈ ನಡುವೆ, ರಾಜ್ಯದ ಹಲವೆಡೆ ಮಳೆಯಿಂದಾಗಿ ಸರಣಿ ಅವಘಡಗಳು ಸಂಭವಿಸುತ್ತಿದ್ದು. ಭೂ ಕುಸಿತದ ದುರ್ಘಟನೆಗಳಿಂದಾಗಿ, ಹಲವು ನಗರಗಳನ್ನು ಸಂಪರ್ಕಿಸುವ ರಸ್ತೆಗಳು ಬಂದ್ ಆಗಿವೆ. ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಬಳಿ ಶುಕ್ರವಾರ ಮುಂಜಾನೆ ಭೂ ಕುಸಿತ ಸಂಭವಿಸಿದೆ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ತೆಂಕಿಲ ಬಪ್ಪಳಿಗೆ ಎಂಬಲ್ಲಿ ಬೈಪಾಸ್ ಬಳಿ ಗುಡ್ಡಕುಸಿದು ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸ್ಥಳಕ್ಕೆ ಧಾವಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ....
ಮುಡಾ ಹಗರಣ; ಬಿಜೆಪಿ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ

ಮುಡಾ ಹಗರಣ; ಬಿಜೆಪಿ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮುಡಾ ಹಗರಣ ಸಂಬಂಧ ಪ್ರತಿಪಕ್ಷ ಬಿಜೆಪಿ ನಡೆಸಲುದ್ದೇಶಿಸಿರುವ ಪಾದಯಾತ್ರೆಗೆ ಸರ್ಕಾರದಿಂದ ಅಡ್ಡಿ ಇಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದವರು ತಿಳಿಸಿದರು....
ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್

ಶೋಕಾಸ್ ನೋಟಿಸಿಗೆ ಹೆದರಲ್ಲ; ರಾಜ್ಯಪಾಲರಿಗೆ ಸಿದ್ದು ಸವಾಲ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮೈಸೂರು: ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಆಡಳಿತ ಪ್ರತಿಪಕ್ಷಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಮುಡಾ ಹಗರಣ ವಿಚಾರದಲ್ಲಿ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ಮುಂದಿರುವಂತೆಯೇ, ಈ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿರುವ ಅರ್ಜಿ ಹಿನ್ನೆಲೆಯಲ್ಲಿ ರಾಜ್ಯಪಾಲರು ನೀಡಿರುವ ನೋಟಿಸ್ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ನಡುವೆ ರಾಜ್ಯಪಾಲರು ಶೋಕಾಸ್ ನೀಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಇದಕ್ಕೆಲ್ಲ ನಾನು ಹೆದರಲ್ಲ. ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌ ಎಂದು ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ ಸಿಎಂ, ನಾನು 136 ಶಾಸಕರ ಬೆಂಬಲದಿಂದ ಮುಖ್ಯಮಂತ್ರಿ ಆಗಿರುವವನು. ತಪ್ಪು ಮಾಡಿದ್ದರೆ ತಾನೇ ಹೆದರುವುದು ಎಂದರು. ಮುಡಾ ಹಗರಣದಲ್ಲಿ ನನ್ನ ಪಾತ್ರ ಇಲ್ಲದಿದ್ದರೂ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ದೂರಿದ ಸಿದ್ದರಾಮಯ್ಯ, ರಾಜಭವನ ಹಾಗೂ ರಾಜ್ಯಪಾಲರ ಅಧಿಕಾರವನ್...
ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ

ವಯನಾಡ್ ಭೂಕುಸಿತದಲ್ಲಿ ಮೃತರ ಸಂಖ್ಯೆ 315ಕ್ಕೆ ಏರಿಕೆ

ದೇಶ-ವಿದೇಶ, ಪ್ರಮುಖ ಸುದ್ದಿ
ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 315ಕ್ಕೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರೀ ಮಳೆಯ ಸಂದರ್ಭದಲ್ಲಿ ವಯನಾಡ್‌ನಲ್ಲಿ ಭೂ ಕುಸಿತ ಸಂಭವಿಸಿದೆ. ಅನೇಕ ಮನೆಗಳು ನೆಲಸಮವಾಗಿದ್ದು, ನೂರಾರು ಕುಟುಂಬಗಳು ನೆಲೆ ಕಳೆದುಕೊಂಡಿವೆ. ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ. ಭಾನುವಾರದಿಂದೀಚೆಗೆ ನಿರಂತರ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಮೃತದೇಹಗಳು ಪತ್ತೆಯಾಗುತ್ತಲೇ ಇವೆ. ಅಧಿಕಾರಿಗಳ ಪ್ರಕಾರ ಈವರೆಗೂ ಸಾವನ್ನಪ್ಪಿದವರ ಸಂಖ್ಯೆ 315 ದಾಟಿದೆ. 200ಕ್ಕೂ ಹೆಚ್ಚು‌ ಮಂದಿ‌ ನಾಪತ್ತೆಯಾಗಿದ್ದು ಮೃತದೇಹಗಳಿಗಾಗಿ ಹುಡುಕಾಟ ಸಾಗಿದೆ. ಸಾವಿರಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಈ ಭಾರೀ ಭೂಕುಸಿತ ಸಂಭವಿಸಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ಬು ಮುಂದುವರಿಸಿದ...
ವಯನಾಡು ಸಂತ್ರಸ್ತರ ನೆರವಿಗೆ ಧಾವಿಸಿದ ನಟಿ ರಶ್ಮಿಕಾ ಮಂದಣ್ಣ

ವಯನಾಡು ಸಂತ್ರಸ್ತರ ನೆರವಿಗೆ ಧಾವಿಸಿದ ನಟಿ ರಶ್ಮಿಕಾ ಮಂದಣ್ಣ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದ ದುರ್ಘಟನೆ ನೂರಾರು ಮಂದಿಯನ್ನು ಬಲಿತೆಗೆದುಕೊಂಡಿದೆ. ನೂರಾರು ಕುಟುಂಬಗಳ ಬದುಕು ಬೀದಿಗೆ ಬಿದ್ದಿವೆ. ಅಸಂಖ್ಯ ಮಂದಿ ಇನ್ನೂ ನಾಪತ್ತೆಯಾಗಿದ್ದು, ಸಂತ್ರಸ್ತರ ಆಕ್ರಂದನ ಮುಗಿಲುಮುಟ್ಟಿದೆ. ಈ ದುರ್ಘಟನೆಯಿಂದಾಗಿ ವಯನಾಡಿನಲ್ಲಿ ಸೂತಕದ ಛಾಯೆ ಆವರಿಸಿಕೊಂಡಿದೆ. ತಮ್ಮವರನ್ನು ಕಳೆದುಕೊಂಡವರ ರೋದನ ಮನಕಲಕುವಂತಿದೆ. ಈ ಸಂದರ್ಭದಲ್ಲಿ ನಟಿ ಕನ್ನಡತಿ ರಶ್ಮಿಕಾ ಮಂದಣ್ಣ ಮಾನವೀಯತೆ ಮೆರೆದಿದ್ದಾರೆ. ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ರಶ್ಮಿಕಾ ನಡೆಯಿಂದ ಪ್ರೇರಿತವಾಗಿರುವ ಅನೇಕ ಸಿನಿಮಾ ತಾರೆಯರು ಧನಸಹಾಯಕ್ಕೆ ಮುಂದಾಗಿದ್ದಾರೆ....
ಮಹಿಳೆಯ ಕಿಡ್ನಾಪ್ ಕೇಸ್; ರೇವಣ್ಣ ಗ್ಯಾಂಗ್ ವಿರುದ್ದ ಪೊಲೀಸ್ ಚಾರ್ಜ್‌ಶೀಟ್

ಮಹಿಳೆಯ ಕಿಡ್ನಾಪ್ ಕೇಸ್; ರೇವಣ್ಣ ಗ್ಯಾಂಗ್ ವಿರುದ್ದ ಪೊಲೀಸ್ ಚಾರ್ಜ್‌ಶೀಟ್

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಮಹಿಳೆಯ ಅಪಹರಣ ಆರೋಪ ಕುರಿತಂತೆ ಮೈಸೂರಿನ ಕೆ.ಆರ್‌. ನಗರ ಠಾಣೆಯಲ್ಲಿ ಮಾಜಿ ಸಚಿವ ಹಾಗೂ ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ಚಾರ್ಜ್ಶೀಟ್ ಸಲ್ಲಿಸಿದೆ. ಮಾಜಿ ಸಚಿವ ರೇವಣ್ಣ, ಭವಾನಿ ರೇವಣ್ಣ ಹಾಗೂ ಇತರರು ಸೇರಿ ಸಂಚು ರೂಪಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ರೇವಣ್ಣ ಬಂಧನಕ್ಕೊಳಗಾಗಿದ್ದರೆ, ಪತ್ನಿ ಭವಾಣಿ ಅವರು ಜಾಮೀನು ಪಡೆದಿದ್ದಾರೆ. ಈ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರ ತಂಡ ಹಲವು ಮಹತ್ವದ ಸಾಕ್ಷಿಗಳೊಂದಿಗೆ ದೋಷಾರೋಪ ಪಟ್ಟಿಯನ್ನು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ. ಜುಲೈ 29ರಂದು 42ನೇ ಎಸಿಎಂಎಂ ನ್ಯಾಯಾಲಯ ಚಾರ್ಜ್‌ಶೀಟ್ ಸಲ್ಲಿಸಿರುವ ಪೊಲೀಸರು, ಅಪಹರಣ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಎಚ್‌.ಡಿ. ರೇವಣ್ಣ ಹಾಗೂ ಇತರರ ವಿರುದ್ಧದ ಆರೋಪಗಳು ತನಿಖೆಯಿಂದ ದೃಢಪಟ್ಟಿರುವುದನ್ನು ಉಲ್ಲೇಖಿಸಿದ್ದಾರೆ.‌...
ಮುಡಾ ಹಗರಣ; ಇದೀಗ ರಾಜಭವನ-ಸರ್ಕಾರ ನಡುವೆ ಸಂಘರ್ಷ; ರಾಜ್ಯಪಾಲರ ಶೋಕಾಸ್ ನೊಟೀಸ್ ಹಿಂಪಡೆಯುವಂತೆ ಒತ್ತಾಯಿಸಲು ಸಂಪುಟ ತೀರ್ಮಾನ

ಮುಡಾ ಹಗರಣ; ಇದೀಗ ರಾಜಭವನ-ಸರ್ಕಾರ ನಡುವೆ ಸಂಘರ್ಷ; ರಾಜ್ಯಪಾಲರ ಶೋಕಾಸ್ ನೊಟೀಸ್ ಹಿಂಪಡೆಯುವಂತೆ ಒತ್ತಾಯಿಸಲು ಸಂಪುಟ ತೀರ್ಮಾನ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಮುಡಾ ಹಗರಣ ವಿಚಾರದಲ್ಲಿ ಈವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ನಡೆಯುತ್ತಿದ್ದ ಸಂಘರ್ಷ ಇದೀಗ ರಾಜಭವನ-ಸರ್ಕಾರ ನಡುವಿನ ಕಲಹದತ್ತ ತಿರುಗಿದಂತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣ ಕುರಿತಂತೆ ಪ್ರಾಸಿಕ್ಯೂಷನ್ ಅನುಮತಿ ಕೋರಿ ಸಲ್ಲಿಕೆಯಾಗಿರುವ ಅರ್ಜಿ ಹಿನ್ನೆಲೆ ರಾಜ್ಯಪಾಲರು ಸಿಎಂಗೆ ನೀಡಿರುವ ನೊಟೀಸ್ ಇದೀಗ ವಿದ್ಯಮಾನಗಳ ಕೇಂದ್ರಬಿಂದುವಾಗಿದ್ದು, ಈ ವಿಚಾರದಲ್ಲಿ ಇಂದು (ಆ.1) ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವೊಂದು ರಾಜಭವನ ಮತ್ತು ಸರ್ಕಾರದ ನಡುವಿನ ಸಂಘರ್ಷಕ್ಕೆ ಹಾದಿ ಮಾಡಿಕೊಟ್ಟಂತಿದೆ. ಅಷ್ಟಕ್ಕೂ ಸಂಪುಟದ ತೀರ್ಮಾನ ಏನು..? ರಾಜ್ಯಪಾಲರು ನೀಡಿರುವ ನೊಟೀಸ್ ಸಿದ್ದರಾಮಯ್ಯ ಅವರನ್ನು ಆತಂಕಕ್ಕೀಡು ಮಾಡಿದರೆ, ಆಡಳಿತರೂಢ ಕಾಂಗ್ರೆಸ್ ಪಕ್ಷಕ್ಕೂ ಮುಜುಗರದ ಪರಿಸ್ಥಿತಿಯನ್ನು ತಂದೊಡ್ಡಿದೆ. ಇಂದು ವೇಳೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದೇ ಆದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡುವ ಪರಿಸ್ಥಿತಿಯೂ ಎದುರಾಗಬಹುದು. ಈ ಹಿನ್ನೆಲೆಯ...
ವಾರಾಂತ್ಯದ ವರೆಗೂ ರಾಜ್ಯದಲ್ಲಿ ಭಾರೀ ಮಳೆ, ದಕ್ಷಿಣ ಕನ್ನಡ, ಉಡುಪಿ ಸಹಿತ ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ

ವಾರಾಂತ್ಯದ ವರೆಗೂ ರಾಜ್ಯದಲ್ಲಿ ಭಾರೀ ಮಳೆ, ದಕ್ಷಿಣ ಕನ್ನಡ, ಉಡುಪಿ ಸಹಿತ ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಕಳೆದೆರಡು ವಾರಗಳಲ್ಲಿ ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಕರ್ನಾಟಕದಲ್ಲಿ ಈ ಮಳೆ ಪರಿಸ್ಥಿತಿ ಆಗಸ್ಟ್ 6ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲೂ ಧಾರಾಕಾರ ಮಳೆಯ ಮುನ್ಸೂಚನೆ ಸಿಕ್ಕಿದೆ.‌ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇದೇ ವೇಳೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆಗಳಿವೆ. ಚಾಮರಾಜನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ....