Sunday, March 15

ಪ್ರಮುಖ ಸುದ್ದಿ

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

KSRTCಗೆ ಟಿವಿ-9 ನೆಟ್ವರ್ಕ್‌‌ನ ‘ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸ್‌ಪೋರ್ಟ್ ಪ್ರಶಸ್ತಿ’

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಪಾಲಿಗೆ ಮತ್ತೊಂದು ಪ್ರತಿಷ್ಠಿತ ಪ್ರಶಸ್ತಿ ಸಿಕ್ಕಿದೆ. ಕೆಎಸ್ಸಾರ್ಟಿಸಿಗೆ ಟಿವಿ-9 ನೆಟ್ವರ್ಕ್‌ ನ 'ದೇಶದ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ ಪ್ರಶಸ್ತಿ-2024' ಲಭಿಸಿದೆ.ನಿಗಮವು ಕೈಗೊಂಡಿರುವ ಬ್ರ್ಯಾಂಡಿಂಗ್ ಹಾಗೂ ಮಾನವ ಸಂಪನ್ಮೂಲ ಉಪಕ್ರಮಗಳಿಗಾಗಿ “ಟಿವಿ-9 ನೆಟ್ವರ್ಕ ಲೀಡರ್ಸ್ ಆಫ್ ರೋಡ್ ಟ್ರಾನ್ಸಪೋರ್ಟ್ 2024ರ ಪ್ರಶಸ್ತಿಯು 'ವರ್ಷದ ದೇಶದ ಅತ್ಯುತ್ತಮ ಸಂಸ್ಥೆ' ವರ್ಗದಲ್ಲಿ ಲಭಿಸಿದೆ.ನವದೆಹಲಿಯ 'ದ ಇಂಪೀರಿಯಲ್ ಜನಪತ್ ಲೇನ್, ಜನಪತ್'ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವರಾದ ಹರ್ಷ್ ಮಲೋತ್ರ ಅವರು, KSRTC ನಿಗಮಕ್ಕೆ ಪ್ರಶಸ್ತಿ ಪ್ರದಾನ ಮಾಡಿ, ಅಧಿಕಾರಿಗಳನ್ನು ಅಭಿನಂದಿಸಿದರು. ಕೆಎಸ್ಸಾರ್ಟಿಸಿ ನಿರ್ದೇಶಕರಾದ (ಸಿಬ್ಬಂದಿ ಮತ್ತು ಜಾಗೃತ) ಡಾ. ಕೆ.ನಂದಿನಿದೇವಿ ಅವರು ಪ್ರಶಸ್ತಿ ಸ್ವೀಕರಿಸಿದರು....
ಮುಂದುವರಿದ ಭೂಕುಸಿತ; ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

ಮುಂದುವರಿದ ಭೂಕುಸಿತ; ಮಂಗಳೂರು-ಬೆಂಗಳೂರು ರೈಲು ಸಂಚಾರ ಮತ್ತೆ ಸ್ಥಗಿತ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಮಂಗಳೂರು: ಕರಾವಳಿ ಮಲೆನಾಡಿನಲ್ಲಿ ಮುಂಗಾರು ಮಳೆ ಅವಾಂತರ ಸೃಷ್ಟಿಸಿದ್ದು ಭೂಕುಸಿತದ ಘಟನೆಗಳು ಮರುಕಳಿಸುತ್ತಲೇ ಇವೆ. ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತವಾಗಿದ್ದು ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದೆ.ಬಾಳ್ಳುಪೇಟೆ ಹಾಗೂ ಸಕಲೇಶಪುರ ಮಧ್ಯೆ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಶುಕ್ರವಾರ ಬೆಂಗಳೂರಿನಿಂದ ಹೊರಟಿದ್ದ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ರೈಲು ಮತ್ತು ಬೆಂಗಳೂರು-ಮರ್ಡೇಶ್ವರ ಎಕ್ಸ್‌ಪ್ರೆಸ್ ರೈಲು ಆಲೂರು ಹಾಗೂ ಹಾಸನದಲ್ಲಿ ಸ್ಥಗಿತಗೊಂಡಿದೆ. ಭೂಕುಸಿತದ ಹಿನ್ನೆಲೆಯಲ್ಲಿ ಈ ಪರಿಸ್ಥಿತಿ ಎದುರಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ಬ್ರೆಜಿಲ್ ವಿಮಾನ ದುರಂತ; 62 ಮಂದಿ ಸಾವು; ವಿಮಾನ ಪತನದ ವೀಡಿಯೋ ವೈರಲ್

ದೇಶ-ವಿದೇಶ, ಪ್ರಮುಖ ಸುದ್ದಿ, ವೀಡಿಯೊ
ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಟರ್ಬೊಪ್ರೊಪ್ ವಿಮಾನ ಪತನಗೊಂಡಿದ್ದು ಅದರಲ್ಲಿದ್ದ ಸಿಬ್ಬಂದಿ ಹಾಗೂ ಪ್ರಯಾಣಿಕರು ಸೇರಿ 62 ಮಂದಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಈ ದುರಂತ ಸಂಭವಿಸಿದೆ.The crash occurred in the Capela neighborhood in Vinhedo (San Paulo). According to the Sao Paulo Fire Department, seven teams are on site. Initial information is that it was a twin-engine passenger plane, model ATR-72, that left Cascavel bound for Guarulhos. According to the… pic.twitter.com/B1mlKXTwEG— Sputnik (@SputnikInt) August 9, 2024 ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋನತ್ತ ಈ ವಿಮಾನ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಸಾವೊ ಪಾಲೊದಿಂದ ಸುಮಾರು 50 ಮೈಲು ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ಬಾನೆತ್ತರದಲ್ಲಿ ವಿಮಾನ ಪತನಗೊಂಡ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.The crash occurred in the Capela neighbo...
ಕೇಂದ್ರದ ಅನುದಾನಕ್ಕಾಗಿ BJP-JDS ಪಾದಯಾತ್ರೆ ನಡೆಸಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು..!

ಕೇಂದ್ರದ ಅನುದಾನಕ್ಕಾಗಿ BJP-JDS ಪಾದಯಾತ್ರೆ ನಡೆಸಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು..!

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಹಿಂದೆ ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದ ಬಿಜೆಪಿ-ಜೆಡಿಎಸ್ ನಾಯಕರು ಇದೀಗ ಪಾದಯಾತ್ರೆ ರಾಜಕಾರಣ ಮಾಡುತ್ತಿರುವ ಉದ್ದೇಶವಾದರೂ ಏನು ಎಂದು ಪ್ರಶ್ನಿಸಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಇವರ ಜಂಟಿ ಹೋರಾಟ ಕೇಂದ್ರದಿಂದ ಅನುದಾನ ತರುವ ವಿಚಾರಕ್ಕೆ ನಡೆದಿದ್ದರೆ ರಾಜ್ಯಕ್ಕೆ ಒಳಿತಾಗುತ್ತಿತ್ತು ಎಂದು ಪ್ರತಿಪಾದಿಸಿದ್ದಾರೆ.‌ಬಿಜೆಪಿ-ಜೆಡಿಎಸ್ ಈ ಹಿಂದೆ ಹಾವು ಮುಂಗುಸಿಯ ಹಾಗೆ ಕಿತ್ತಾಡುತ್ತಿದ್ದರು, ಈಗ ಅಧಿಕಾರಕ್ಕಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿರುವ ಅವರು ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಸಂಸತ್ತಿನಲ್ಲೂ ಮಾತನಾಡುವುದಿಲ್ಲ, ಹೊರಗಡೆಯೂ ಮಾತನಾಡುವುದಿಲ್ಲ ಎಂದು ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಬಿಜೆಪಿ-ಜೆಡಿಎಸ್ ಈ ಹಿಂದೆ ಹಾವು ಮುಂಗುಸಿಯ ಹಾಗೆ ಕಿತ್ತಾಡುತ್ತಿದ್ದರು, ಈಗ ಅಧಿಕಾರಕ್ಕಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ.ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಸಂಸತ್ತಿನಲ್ಲೂ ಮಾತನಾಡುವುದಿಲ್ಲ, ಹೊರಗಡೆಯೂ ಮಾತನಾಡುವುದಿಲ್ಲ.ಈ...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು ಕಳವಳಕಾರಿ ಬೆಳವಣಿಗೆಯಾಗಿದ್ದು, ಅಲ್ಲಿನ ಮಧ್ಯಂತರ ಸರ್ಕಾರವು ಇಂತಹಾ ಕ್ರೌರ್ಯಗಳಿಗೆ ಅಂತ್ಯ ಹಾಡಬೇಕಿದೆ ಎಂದು ಸಂಘ ಪ್ರತಿಪಾದಿಸಿದೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಬಾಂಗ್ಲಾದೇಶದ ಘಟನೆಗಳ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುವುದನ್ನು ಸಹಿಸಲಾಗದು ಎಂದಿದ್ದಾರೆ.ಕಳೆದ ಕೆಲವು ದಿನಗಳಲ್ಲಿ ಆಡಳಿತ ಬದಲಾವಣೆಯ ಚಳವಳಿಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳು, ಬೌದ್ಧರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧದ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಗಂಭೀರ ಕಳವಳ ವ್ಯಕ್ತಪಡಿಸುತ್ತದೆ ಎಂದಿರುವ ಅವರು, ಹತ್ಯೆ, ಲೂಟಿ, ಬೆಂಕಿ ಹಚ್ಚುವುದು ಮತ್ತು ಹಿಂದೂ ಹಾಗೂ ಇತರ ಧಾರ್ಮಿಕ ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ದೌರ್ಜನ್ಯಗಳು ಖಂಡನೀಯ‌. ಬಾಂಗ್ಲಾದೇ...
ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು

ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮ ಆರೋಪ ಎದುರಿಸುತ್ತಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದು ಆರೋಪ ಎದುರಿಸುತ್ತಿರುವ ಆಪ್ ಮುಖಂಡ ಮನೀಶ್ ಸಿಸೋಡಿಯಾ ಬಂಧನದಲ್ಲಿದ್ದಾರೆ. ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ..ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಈ ಮೂಲಕ ಸಿಸೋಡಿಯಾರ 17 ತಿಂಗಳ ಸೆರೆವಾಸ ಕೊನೆಗೂ ಅಂತ್ಯಕಂಡಿದೆ....
ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ.  ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.ಮುಡಾ ಹಗರಣ ಕುರಿತಂತೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ "ಜನಾಂದೋಲನ" ನಡೆಯುತ್ತಿರುವ ಈ ಸಂದರ್ಭದಲ್ಲಿ ಅತ್ಯಂತ ಮಹತ್ವದ ಕೋರಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ.ಕೆಐಎಡಿಬಿ ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಪ್ರತಿ ಎಕರೆ ಭೂಮಿಗೆ 12.10 ಕೋಟಿ ರೂ. ದರ ನಿಗದಿಪಡಿಸಿದೆ.ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆ ಎಂದು ಭಾವಿಸುತ್ತೇನೆ. ಆದರೆ ತಮ್ಮ ಮೈಸೂರಿನ ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂಪಾಯಿ ಎಂಬುದು ನಿಮ್ಮ ಹೇಳಿಕೆಯಿಂದಲೇ ತಿಳಿದುಬಂದಿದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆಮುಖ್ಯಮಂತ್ರ...
ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ಇಂದಿನಿಂದ ‘ಹರ್‌ ಘರ್‌ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ 'ಹರ್‌ ಘರ್‌ ತಿರಂಗಾ’ ಅಭಿಯಾನ ನಡೆಯಲಿದೆ.ಹರ್‌ ಘರ್‌ ತಿರಂಗಾ’ ಅಭಿಯಾನದ 3ನೇ ಆವೃತ್ತಿ ಇದಾಗಿದ್ದು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್‌ ಶೆಖಾವತ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.'ಹರ್‌ ಘರ್‌ ತಿರಂಗಾ’ ಅಭಿಯಾನದ ಭಾಗವಾಗಿ ಈ ತಿಂಗಳ 13ರಂದು ದಿಲ್ಲಿಯಲ್ಲಿ ಬೈಕ್‌ ರ್‍ಯಾಲಿ ನಡೆಯಲಿದ್ದು ಎಲ್ಲ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ....
ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ

ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ

ದೇಶ-ವಿದೇಶ, ಪ್ರಮುಖ ಸುದ್ದಿ
ಪ್ಯಾರಿಸ್: ಈ ಬಾರಿಯ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 5ನೇ ಪದಕ ಸಿಕ್ಕಿದೆ. ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.ಚಿನ್ನ ಗೆಲ್ಲುವ ಉತ್ಸಾಹದಲ್ಲಿದ್ದ ನೀರಜ್ ಚೋಪ್ರಾ, ಬೆಳ್ಳಿ ಗೆದ್ದು ಬೀಗಿದ್ದಾರೆ. 2020ರ ಒಲಿಂಪಿಕ್ಸ್‌ನಲ್ಲಿ ಅವರು 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ 89.45 ಮೀಟರ್ ದೂರ ಜಾವೆಲಿನ್ ಎಸೆದರಾದರೂ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.ಅಚ್ಚರಿಯ ಸಂಗತಿ ಎಂದರೆ, ಕಳೆದ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದ ಪಾಕಿಸ್ತಾನದ ಅರ್ಷದ್ ನದೀಮ್ ಈ ಬಾರಿ ದಾಖಲೆಯ 92.97 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದಾರೆ. ಜೊತೆಗೆ ಹೊಸ ದಾಖಲೆ ನಿರ್ಮಿಸಿದ್ದಾರೆ....