Sunday, March 15

ಪ್ರಮುಖ ಸುದ್ದಿ

BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್‌. ಸಂಗ್ರೇಶಿ

BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್‌. ಸಂಗ್ರೇಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಹಕರಿಸದ ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ ಛಾಟಿ ಬೀಸಿದ್ದಾರೆ. 2025ರ ಮಾರ್ಚ್‌ ಅಂತ್ಯದ ವೇಳೆಗೆ ಚುನಾವಣೆ ನಡೆಯದಿದ್ದರೆ 15ನೇ ಹಣಕಾಸು ಆಯೋಗದಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ 2,100 ಕೋಟಿ ರೂಪಾಯಿ ಅನುದಾನ ಕೈತಪ್ಪಲಿದೆ ಎಂದು ಅವರು ಎಚ್ಚರಿಕೆಯ ಸಲಹೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್‌. ಸಂಗ್ರೇಶಿ, ಈ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವಂತೆ ಮಾಡಿರುವ ಸಲಹೆ ಗಮನಸೆಳೆದಿದೆ. 15ನೇ ಹಣಕಾಸು ಆಯೋಗ ದಲ್ಲಿ 2020-21ನೇ ಸಾಲಿನಿಂದೀಚೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2,100 ಕೋಟಿ ರೂಪಾಯಿ ಅನುದಾನ ಬರಬೇಕಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇದ್ದರೆ ಮಾತ್ರ ಅನುದಾನ ಬಿಡುಗಡೆ ಎಂಬ ಹಣಕಾಸು ಆಯೋಗದ ಷರತ್ತು ಇದೆ. ಆದರೆ ಬಿಬಿಎಂಪಿ ಹಾಗೂ ಜಿ.ಪಂ.-ತಾ.ಪಂ.ಗಳಿಗೆ 4 ವರ್ಷಗಳಿಂದ ಚುನಾವಣ...
ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಮಳೆ ಮತ್ತೆ ಬಿರುಸಾಗಲಿದೆ. ಒಂದು ವಾರ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಿಸಿತು ಸಲಾಗಿದ್ದು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸುತ್ತಮುತ್ತ ಜಿಕ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.....
ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ.07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು ಅವರು ತಮ್ಮ ಪತ್ರದಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ.ಬೆಂಗಳೂರಿನಲ್ಲಿ ಕಸ ಸಾಗಾಣೆ ಮಾಡುವ ಲಾರ...
ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ.ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭಾ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ....
ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ಐಟಿಐ ತೇರ್ಗಡೆಯಾದವರಿಗೆ ದುಬೈ ಶಿಪ್ ಯಾರ್ಡ್‌ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ

ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ.. ಉದ್ಯೋಗ ಆಕಾಂಕ್ಷೆಗಳಿಗೆ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಆಯೋಜನೆ.. ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ, ವಿಮಾನ ಟಿಕೆಟ್, ವಸತಿ ಆಹಾರ ಇತ್ಯಾದಿ ವ್ಯವಸ್ಥೆ.. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 27,000 ರೂ. ವೇತನ. ಬೆಂಗಳೂರು: ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮದ ವತಿಯಿಂದ ಹೊಸದಾಗಿ ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ದುಬೈ ಶಿಪ್ ಯಾಡ್೯ನಲ್ಲಿ ವೃತ್ತಿ ತರಬೇತಿ ಮತ್ತು ನೇಮಕಾತಿಗಾಗಿ ಕಾರ್ಯಕ್ರಮ ಏರ್ಪಡಿಸಿದೆ.ಈಗಾಗಲೇ ಸ್ಲೋವಾಕಿಯಾ, ಯೂ ಎ ಈ, ಹಂಗೇರಿ, ಸೇರಿದಂತೆ ಮತ್ತಿತರ ಕಡೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ಯಶಸ್ಸೀಯಾಗಿರುವ ಕರ್ನಾಟಕ ಕೌಶಲ್ಯಭಿವೃದ್ದಿ ನಿಗಮವು ಇದೀಗ ಐಐಟಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ನಿಗಮದ ವತಿಯಿಂದಲೇ ಉಚಿತ ವಿದೇಶಿ ವೃತ್ತಿ ತರಬೇತಿ ಮತ್ತು ನೇಮಕಾತಿ ಕಾರ್ಯಕ್ರಮದ ಮೂಲಕ ಮತ್ತೊಂದು ಹೊಸ ದೃಡ ಹೆಜ್ಜೆ ಇಟ್ಟಿದೆ.ಆಯ್ಕೆಯಾದ ಅಭ್ಯರ್ಥಿಗಳಿಗ...
ನೋವಿನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್

ನೋವಿನಲ್ಲೇ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್

ದೇಶ-ವಿದೇಶ, ಪ್ರಮುಖ ಸುದ್ದಿ
ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ ನಲುಗಿಸದೆ. ಈ ಬಗ್ಗೆ ಕ್ರೀಡಾಪಟುಗಳು ದುಃಖ ವ್ಯಕ್ತಪಡಿಸಿದ್ದಾರೆ. ಈ ನಡುವೆ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಾಗಿರುವ ಕಹಿ ಅನುಭವದ ನಂತರ ವಿನೇಶ್ ಪೊಗಟ್ ಅವರು ಒಲಿಂಪಿಕ್ಸ್‌ಗೆ ವಿದಾಯ ಹೇಳಿದ್ದಾರೆ.ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪೋಗಟ್, 'ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ನೋವು ಹಂಚಿಕೊಂಡಿದ್ದಾರೆ.माँ कुश्ती मेरे से जीत गई मैं हार गई माफ़ करना आपका सपना मेरी हिम्मत सब टूट चुके इससे ज़्यादा ताक़त नहीं रही अब।अलविदा कुश्ती 2001-2024 🙏आप सबकी हमेशा ऋणी रहूँगी माफी 🙏🙏 — Vinesh Phogat (@Phogat_Vinesh) August 7, 2024 ಕುಸ್ತಿಗೆ ವಿ...
‘ಪೋಗಟ್ ಅನರ್ಹತೆ ಬಗ್ಗೆ ದುಃಖವಾಗಿದೆ, ಆದರೆ ನಿಯಮಗಳನ್ನು ಗೌರವಿಸಬೇಕು’: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪ್ರತಿಕ್ರಿಯೆ

‘ಪೋಗಟ್ ಅನರ್ಹತೆ ಬಗ್ಗೆ ದುಃಖವಾಗಿದೆ, ಆದರೆ ನಿಯಮಗಳನ್ನು ಗೌರವಿಸಬೇಕು’: ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರ ಪ್ರತಿಕ್ರಿಯೆ

ದೇಶ-ವಿದೇಶ, ಪ್ರಮುಖ ಸುದ್ದಿ
ಪ್ಯಾರಿಸ್: ತೂಕ ಹೆಚ್ಚಿದ್ದ ಕಾರಣಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 50 ಕೆಜಿ ವಿಭಾಗದ ಫೈನಲ್‌ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹಗೊಂಡ ಸುದ್ದಿ ಇಡೀ ಕ್ಷೀಡಾ ಕ್ಷೇತ್ರವನ್ನೇ ನಲುಗಿಸದೆ. ಈ ಬಗ್ಗೆ ಕ್ರೀಡಾಪಟುಗಳು ದುಃಖ ವ್ಯಕ್ತಪಡಿಸಿದ್ದಾರೆ.ಫೊಗಟ್ ಅವರ ಅನರ್ಹತೆ ಬಗ್ಗೆ ಪ್ರತಿಕ್ರಿಯಿಸಿರುವ ಅಂತರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ನೆನಾದ್ ಲಾಲೋವಿಕ್ ಅವರು ತಮಗೆ ತುಂಬಾ ದುಃಖವಾಗಿದೆ ಎಂದು ಹೇಳಿದ್ದಾರೆ.ಪತ್ರಕರ್ತರೊಂದಿಗೆ ಮಾತನಾಡಿದ ಲಾಲೋವಿಕ್, ನಿಯಮಗಳು ಎಲ್ಲರಿಗೂ ಒಂದೇ. ಅದನ್ನು ಗೌರವಿಸಬೇಕು ಎಂದಿದ್ದಾರೆ. ಫೋಗಟ್ ಅವರ ಅನರ್ಹತೆ ಬಗ್ಗೆ ಅತೀವ ದುಃಖವಾಗಿದೆ. ಆದರೆ ಈ ಬಗ್ಗೆ ಏನನ್ನೂ ಮಾಡಲಾಗುವುದಿಲ್ಲ ಎಂದವರು ಹೇಳಿದ್ದಾರೆ....
ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ವಯನಾಡ್ ಸಂತ್ರಸ್ತರಿಗೆ ಸೂಪರ್ ಸ್ಟಾರ್ ಪ್ರಭಾಸ್ ನೆರವು; 2 ಕೋಟಿ ರೂಪಾಯಿ ನೀಡಿದ ನಟ

ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ನವದೆಹಲಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ವಯನಾಡ್ ಭೂಕುಸಿತ ಘಟನೆಯಲ್ಲಿ ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಈ ನಿರಾಶ್ರಿತರ ನೆರವಿಗೆ ಧಾವಿಸಿರುವ ಚಿತ್ರೋದ್ಯಮದ ಗಣ್ಯರು ಧನಸಹಾಯ ಮಾಡುತ್ತಿದ್ದಾರೆ.ಭೂಕುಸಿತದಿಂದ ತತ್ತರಿಸಿರುವ ವಯನಾಡ್‌ನ‌ಲ್ಲಿ ಪುನರ್ವಸತಿ ಕಾರ್ಯಗಳನ್ನು ಕೈಗೊಳ್ಳಲು ದಕ್ಷಿಣ ಭಾರತದ ಖ್ಯಾತ ನಟ ಪ್ರಭಾಸ್‌ ಅವರು 2 ಕೋಟಿ ರೂ. ನೆರವು ನೀಡಿದ್ದಾರೆ.ಕೇರಳ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ಅವರು ಈ ಮೊತ್ತವನ್ನು ಪಾವತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ....
ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕು; ತೃಣಮೂಲ ಕಾಂಗ್ರೆಸ್ ಸಲಹೆ

ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕು; ತೃಣಮೂಲ ಕಾಂಗ್ರೆಸ್ ಸಲಹೆ

ದೇಶ-ವಿದೇಶ, ಪ್ರಮುಖ ಸುದ್ದಿ
ನವದೆಹಲಿ: ತೂಕ ಹೆಚ್ಚಳದ ಕಾರಣ ಪ್ಯಾರಿಸ್ ಒಲಿಂಪಿಕ್ಸ್ ಕುಸ್ತಿ ಫೈನಲ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್ ಫೋಗಟ್‌ಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು ಅಥವಾ ರಾಜ್ಯಸಭಾ ಸದಸ್ಯತ್ವ ನೀಡಬೇಕೆಂದು ತೃಣಮೂಲ ಕಾಂಗ್ರೆಸ್ ಆಗ್ರಹಿಸಿದೆ.ಪೋಗಟ್ ಅವರು ಭಾರತದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರಿಗೆ ಈ ಬಾರಿ ಅನ್ಯಾಯವಾಗಿದೆ ಎಂದು ಇಡೀ ದೇಶ ಬೇಸರಗಿಂಡಿದೆ. ಪೋಗಟ್ ಅವರಿಗೆ ಧೈರ್ಯ ತುಂಬುವ ಪ್ರಯತ್ನ ನಡೆಯುತ್ತಿದೆ. ಇದೇ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ ಹೊಸ ಸಲಹೆ ನೀಡಿ ಗಮನಸೆಳೆದಿದೆ.ಒಲಿಂಪಿಕ್ಸ್ ನಲ್ಲಿ ಆಕೆಯ ಕುಸ್ತಿ ಪ್ರದರ್ಶನವನ್ನು ಪರಿಗಣಿಸಿ ಆಕೆಗೆ ಭಾರತ ರತ್ನ ನೀಡಬೇಕು ಎಂದಿರುವ ಟಿಎಂಸಿ, ಪೋಗಟ್ ಅವರು ಭಾರತದ 1.4 ಬಿಲಿಯನ್ ಜನತೆಗೆ ಆಕೆ ಚಾಂಪಿನ್ ಗಳ ಚಾಂಪಿಯನ್ ಹಾಗೂ ದೇಶದ ಹೆಮ್ಮೆ. ಹಾಗಾಗಿ ಅವರಿಗೆ ಭಾರತ ರತ್ನ ಅಥವಾ ರಾಷ್ಟ್ರಪತಿಗಳ ಮೂಲಕ ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಬಗ್ಗೆ ಪಕ್ಷಾತೀತವಾಗಿ ನಿರ್ಧರಿಸಬೇಕು ಎಂದು ಪ್ರತಿಪಾದಿಸಿದೆ....
ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಲೂಟಿ ಕಳಂಕವಲ್ಲವೇ? ಸಿ.ಟಿ.ರವಿ ಪ್ರಶ್ನೆ

ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
ಬೆಂಗಳೂರು: ತಮ್ಮ 40 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಳಂಕ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿಕೊಂಡಿದ್ದಾರೆ. ಹಾಗಿದ್ದರೆ ಮೂಡ ಹಗರಣ ಕಳಂಕ ಅಲ್ಲವೇ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಪ್ರಶ್ನಿಸಿದ್ದಾರೆ.ಮೈಸೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಲೂಟಿ ನಿಮ್ಮ ಸರಕಾರಕ್ಕೆ ಕಪ್ಪು ಚುಕ್ಕಿ ಅಲ್ಲವೇ? ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಕಾಯಿದೆ ಉಲ್ಲಂಘಿಸಿ, ನಿಯಮ ಉಲ್ಲಂಘನೆ ಮಾಡಿ ಒಂದೇ ಕಂಪೆನಿಗೆ 600 ಕೋಟಿಯ ಟೆಂಡರ್ ಕೊಟ್ಟಿರುವುದು ಕಪ್ಪುಚುಕ್ಕಿ ಅಲ್ಲವೇ? ಎಂಬ ಪ್ರಶ್ನೆಯನ್ನು ಮುಂದಿಟ್ಟರು.ಪೊಲೀಸ್, ಕಂದಾಯ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಪ್ರತಿ ಹುದ್ದೆಗೆ ರೇಟ್ ಕಾರ್ಡ್ ನಿಗದಿ ಮಾಡಿರುವುದು, ಸಬ್ ರಿಜಿಸ್ಟಾçರ್‌ಗಳ ಹುದ್ದೆಯ ನೇಮಕಾತಿಗೆ ಬಹಿರಂಗ ಹರಾಜು, ಅಬಕಾರಿ ಇಲಾಖೆಯಲ್ಲಿ ಉನ್ನತ ಹುದ್ದೆಗೆ ದರ ನಿಗದಿ ಮಾಡಿದ್ದಾರೆ. ಸಾರಿಗೆ ಇಲಾಖೆಯಲ್ಲಿ ಆರ್‌ಟಿಒಗಳ ಬಹಿರಂಗ ಹರಾಜು ನಡೆಯುತ್ತಿದೆ. ಇದು ತಮ್ಮ ಆಡಳಿತದ ಕಳಂಕವಲ್ಲವೇ ಎಂದು ಕೇಳಿದರು. ಬೆಂಗಳೂರಿನಲ್ಲ...