ಪ್ರಮುಖ ಸುದ್ದಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಕ್ರೌರ್ಯ; RSS ಖಂಡನೆ
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಕ್ರೌರ್ಯವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಖಂಡಿಸಿದೆ. ಮಹಿಳೆಯರ ಮೇಲೆ ದೌರ್ಜನ್ಯ, ಹಿಂದೂ ಶ್ರದ್ದಾಕೇಂದ್ರಗಳ ಮೇಲೆ ನಡೆದಿರುವ ದಾಳಿ ಘಟನೆಗಳು ಕಳವಳಕಾರಿ ಬೆಳವಣಿಗೆಯಾಗಿದ್ದು, ಅಲ್ಲಿನ ಮಧ್ಯಂತರ ಸರ್ಕಾರವು ಇಂತಹಾ ಕ್ರೌರ್ಯಗಳಿಗೆ ಅಂತ್ಯ ಹಾಡಬೇಕಿದೆ ಎಂದು ಸಂಘ ಪ್ರತಿಪಾದಿಸಿದೆ.ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಬಾಂಗ್ಲಾದೇಶದ ಘಟನೆಗಳ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ನಡೆಸುವುದನ್ನು ಸಹಿಸಲಾಗದು ಎಂದಿದ್ದಾರೆ.ಕಳೆದ ಕೆಲವು ದಿನಗಳಲ್ಲಿ ಆಡಳಿತ ಬದಲಾವಣೆಯ ಚಳವಳಿಯ ಸಂದರ್ಭದಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳು, ಬೌದ್ಧರು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧದ ಹಿಂಸಾಚಾರದ ಘಟನೆಗಳ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಗಂಭೀರ ಕಳವಳ ವ್ಯಕ್ತಪಡಿಸುತ್ತದೆ ಎಂದಿರುವ ಅವರು, ಹತ್ಯೆ, ಲೂಟಿ, ಬೆಂಕಿ ಹಚ್ಚುವುದು ಮತ್ತು ಹಿಂದೂ ಹಾಗೂ ಇತರ ಧಾರ್ಮಿಕ ಅಲ್ಪಸಂಖ್ಯಾತ ಮಹಿಳೆಯರ ಮೇಲಿನ ದೌರ್ಜನ್ಯಗಳು ಖಂಡನೀಯ. ಬಾಂಗ್ಲಾದೇ...

ದೆಹಲಿ ಅಬಕಾರಿ ನೀತಿ ಅಕ್ರಮ ಆರೋಪ; ಮನೀಶ್ ಸಿಸೋಡಿಯಾಗೆ ಜಾಮೀನು
ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮ ಆರೋಪ ಎದುರಿಸುತ್ತಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖಂಡ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.ಪ್ರಕರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವು ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದು ಆರೋಪ ಎದುರಿಸುತ್ತಿರುವ ಆಪ್ ಮುಖಂಡ ಮನೀಶ್ ಸಿಸೋಡಿಯಾ ಬಂಧನದಲ್ಲಿದ್ದಾರೆ. ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ..ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ಈ ಮೂಲಕ ಸಿಸೋಡಿಯಾರ 17 ತಿಂಗಳ ಸೆರೆವಾಸ ಕೊನೆಗೂ ಅಂತ್ಯಕಂಡಿದೆ....
ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋ.ರೂ., ಮೈಸೂರಿನಲ್ಲಿ 62 ಕೋ.ರೂ.; ಇದು ಹೇಗೆ ಸಾಧ್ಯ?
ಬೆಂಗಳೂರು; ರಾಜಧಾನಿ ಬೆಂಗಳೂರಿನಲ್ಲಿ ಭೂಸ್ವಾದೀನಪಡಿಸಿದರೆ ಎಕರೆಗೆ 12.1 ಕೋಟಿ ರೂಪಾಯಿ, ಮೈಸೂರಿನಲ್ಲಿ 62 ಕೋಟಿ ರೂಪಾಯಿ. ಇದು ಹೇಗೆ ಸಾಧ್ಯ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕ, ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.ಮುಡಾ ಹಗರಣ ಕುರಿತಂತೆ ಸಿಎಂ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಹೇಳಿಕೆ ಬಿಡುಗಡೆ ಮಾಡಿರುವ ಸುರೇಶ್ ಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೈಸೂರಿನಲ್ಲಿ "ಜನಾಂದೋಲನ" ನಡೆಯುತ್ತಿರುವ ಈ ಸಂದರ್ಭದಲ್ಲಿ ಅತ್ಯಂತ ಮಹತ್ವದ ಕೋರಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ.ಕೆಐಎಡಿಬಿ ಬೆಂಗಳೂರು ಉತ್ತರ ತಾಲೂಕಿನ ಹೆಬ್ಬಾಳ ಮತ್ತು ಹೆಬ್ಬಾಳ ಅಮಾನಿಕೆರೆ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಪ್ರತಿ ಎಕರೆ ಭೂಮಿಗೆ 12.10 ಕೋಟಿ ರೂ. ದರ ನಿಗದಿಪಡಿಸಿದೆ.ಇದು ಮಾರುಕಟ್ಟೆ ದರಕ್ಕಿಂತ ತುಂಬಾ ಕಡಿಮೆ ಎಂದು ಭಾವಿಸುತ್ತೇನೆ. ಆದರೆ ತಮ್ಮ ಮೈಸೂರಿನ ಹೊರವಲಯದ ಕೆಸರೆ ಗ್ರಾಮದಲ್ಲಿ 3.16 ಎಕರೆ ಜಮೀನಿನ ಬೆಲೆ 62 ಕೋಟಿ ರೂಪಾಯಿ ಎಂಬುದು ನಿಮ್ಮ ಹೇಳಿಕೆಯಿಂದಲೇ ತಿಳಿದುಬಂದಿದೆ ಎಂದು ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆಮುಖ್ಯಮಂತ್ರ...

ಇಂದಿನಿಂದ ‘ಹರ್ ಘರ್ ತಿರಂಗಾ’ ಅಭಿಯಾನ; ಎಲ್ಲೆಲ್ಲೂ ತ್ರಿವರ್ಣ ಧ್ವಜದ ಕಲರವ
ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಈ ಬಾರಿಯೂ 'ಹರ್ ಘರ್ ತಿರಂಗಾ’ ಅಭಿಯಾನ ನಡೆಯಲಿದೆ. ಇಂದಿನಿಂದ ಆಗಸ್ಟ್ 15ರ ವರೆಗೆ ದೇಶಾದ್ಯಂತ 'ಹರ್ ಘರ್ ತಿರಂಗಾ’ ಅಭಿಯಾನ ನಡೆಯಲಿದೆ.ಹರ್ ಘರ್ ತಿರಂಗಾ’ ಅಭಿಯಾನದ 3ನೇ ಆವೃತ್ತಿ ಇದಾಗಿದ್ದು ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂದು ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.'ಹರ್ ಘರ್ ತಿರಂಗಾ’ ಅಭಿಯಾನದ ಭಾಗವಾಗಿ ಈ ತಿಂಗಳ 13ರಂದು ದಿಲ್ಲಿಯಲ್ಲಿ ಬೈಕ್ ರ್‍ಯಾಲಿ ನಡೆಯಲಿದ್ದು ಎಲ್ಲ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದವರು ತಿಳಿಸಿದ್ದಾರೆ....
ಪ್ಯಾರಿಸ್ ಒಲಿಂಪಿಕ್ಸ್: ಬೆಳ್ಳಿ ಗೆದ್ದ ನೀರಜ್ ಚೋಪ್ರಾ; ಭಾರತಕ್ಕೆ 5ನೇ ಪದಕ
ಪ್ಯಾರಿಸ್: ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 5ನೇ ಪದಕ ಸಿಕ್ಕಿದೆ. ಭಾರತದ ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಸತತ ಎರಡನೇ ಬಾರಿಗೆ ಒಲಿಂಪಿಕ್ಸ್ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.ಚಿನ್ನ ಗೆಲ್ಲುವ ಉತ್ಸಾಹದಲ್ಲಿದ್ದ ನೀರಜ್ ಚೋಪ್ರಾ, ಬೆಳ್ಳಿ ಗೆದ್ದು ಬೀಗಿದ್ದಾರೆ. 2020ರ ಒಲಿಂಪಿಕ್ಸ್‌ನಲ್ಲಿ ಅವರು 87.58 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ಬಾರಿ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 89.45 ಮೀಟರ್ ದೂರ ಜಾವೆಲಿನ್ ಎಸೆದರಾದರೂ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.ಅಚ್ಚರಿಯ ಸಂಗತಿ ಎಂದರೆ, ಕಳೆದ ಒಲಿಂಪಿಕ್ಸ್‌ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದ ಪಾಕಿಸ್ತಾನದ ಅರ್ಷದ್ ನದೀಮ್ ಈ ಬಾರಿ ದಾಖಲೆಯ 92.97 ಮೀಟರ್ ದೂರ ಜಾವೆಲಿನ್ ಎಸೆದು ಚಿನ್ನ ಗೆದ್ದಿದ್ದಾರೆ. ಜೊತೆಗೆ ಹೊಸ ದಾಖಲೆ ನಿರ್ಮಿಸಿದ್ದಾರೆ....
BBMP ಹಾಗೂ ತಾ.ಪಂ., ಜಿ.ಪಂ ಚುನಾವಣೆ ವಿಳಂಬ; ಸರ್ಕಾರಕ್ಕೆ ಚಾಟಿ ಬೀಸಿದ ಚುನಾವಣ ಆಯುಕ್ತ ಜಿ.ಎಸ್. ಸಂಗ್ರೇಶಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಸಹಿತ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಹಕರಿಸದ ರಾಜ್ಯ ಸರ್ಕಾರದ ವಿರುದ್ದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ ಛಾಟಿ ಬೀಸಿದ್ದಾರೆ. 2025ರ ಮಾರ್ಚ್ ಅಂತ್ಯದ ವೇಳೆಗೆ ಚುನಾವಣೆ ನಡೆಯದಿದ್ದರೆ 15ನೇ ಹಣಕಾಸು ಆಯೋಗದಡಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ 2,100 ಕೋಟಿ ರೂಪಾಯಿ ಅನುದಾನ ಕೈತಪ್ಪಲಿದೆ ಎಂದು ಅವರು ಎಚ್ಚರಿಕೆಯ ಸಲಹೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಚುನಾವಣ ಆಯೋಗದ ಆಯುಕ್ತ ಜಿ.ಎಸ್. ಸಂಗ್ರೇಶಿ, ಈ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುವಂತೆ ಮಾಡಿರುವ ಸಲಹೆ ಗಮನಸೆಳೆದಿದೆ. 15ನೇ ಹಣಕಾಸು ಆಯೋಗ ದಲ್ಲಿ 2020-21ನೇ ಸಾಲಿನಿಂದೀಚೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2,100 ಕೋಟಿ ರೂಪಾಯಿ ಅನುದಾನ ಬರಬೇಕಿತ್ತು. ಸ್ಥಳೀಯ ಸಂಸ್ಥೆಗಳಲ್ಲಿ ಚುನಾಯಿತ ಆಡಳಿತ ವ್ಯವಸ್ಥೆ ಇದ್ದರೆ ಮಾತ್ರ ಅನುದಾನ ಬಿಡುಗಡೆ ಎಂಬ ಹಣಕಾಸು ಆಯೋಗದ ಷರತ್ತು ಇದೆ. ಆದರೆ ಬಿಬಿಎಂಪಿ ಹಾಗೂ ಜಿ.ಪಂ.-ತಾ.ಪಂ.ಗಳಿಗೆ 4 ವರ್ಷಗಳಿಂದ ಚುನಾವಣ...

ಮತ್ತೆ ಒಂದು ವಾರ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಮಳೆ ಮತ್ತೆ ಬಿರುಸಾಗಲಿದೆ. ಒಂದು ವಾರ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿತು ಸಲಾಗಿದ್ದು, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸುತ್ತಮುತ್ತ ಜಿಕ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.....

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..! ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ
ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ.07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು ಅವರು ತಮ್ಮ ಪತ್ರದಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ.ಬೆಂಗಳೂರಿನಲ್ಲಿ ಕಸ ಸಾಗಾಣೆ ಮಾಡುವ ಲಾರ...

ಪ್ರತಿ ತಿಂಗಳ 2ನೇ ಮತ್ತು 4ನೇ ಶನಿವಾರ ಕನಕಪುರ, ಬೆಂಗಳೂರು ದಕ್ಷಿಣ ಜಿಲ್ಲೆಯ ಜನರಿಗಾಗಿ ಮೀಸಲು: ಡಿಕೆಶಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರತಿ ತಿಂಗಳು 2 ನೇ ಮತ್ತು 4 ನೇ ಶನಿವಾರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ.ಆ ದಿನಗಳಂದು ಬೆಂಗಳೂರು ದಕ್ಷಿಣ ಜಿಲ್ಲೆಯ ಜನರ ಸಮಸ್ಯೆ, ಅಹವಾಲುಗಳನ್ನು ಆಲಿಸಲಿದ್ದಾರೆ. ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆಯ ನಾನಾ ವಿಧಾನಸಭಾ ಕ್ಷೇತ್ರಗಳ ಜನರು ತಮ್ಮನ್ನು ಭೇಟಿ ಮಾಡಲು ಬೆಂಗಳೂರಿಗೆ ಬರುವುದು ಬೇಡ. ತೊಂದರೆ ತೆಗೆದುಕೊಳ್ಳುವುದು ಬೇಡ. ನಾನೇ ಕನಕಪುರಕ್ಕೆ ಬಂದು ನಿಮ್ಮ ಕಷ್ಟ-ಸುಖ ವಿಚಾರಿಸಿ, ಅಹವಾಲು ಸ್ವೀಕರಿಸಲಿದ್ದೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ....

