
ಅಖಿಲ ಭಾರತ ವೀರಶೈವ-ಲಿಂಗಾಯಿತ ಮಹಾಸಭಾ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ
ಬೆಂಗಳೂರು: ನಗರದ ಟೌನ್ ಹಾಲ್‌ನಲ್ಲಿ ಅಖಿಲ ಭಾರತ ವೀರಶೈವ–ಲಿಂಗಾಯಿತ ಮಹಾಸಭಾ (ರಿ) ರಾಷ್ಟ್ರೀಯ ಮಹಿಳಾ ಮತ್ತು ಯುವ ವಿಭಾಗಗಳ ಪದಗ್ರಹಣ ಸಮಾರಂಭ ಭಾನುವಾರ ವೈಭವವಾಗಿ ನಡೆಯಿತು.ಪಟ್ಟದ ಶ್ರೀ ಡಾ. ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಡಾ. ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮಿಗಳು, ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಹಾಸಭಾ ಅಧ್ಯಕ್ಷರೂ ಆಗಿರುವ ಸಚಿವ ಈಶ್ವರ ಬಿ. ಖಂಡ್ರೆ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಶರಣ ಪ್ರಕಾಶ ಪಾಟೀಲ್ ಸೇರಿದಂತೆ ಹಲವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಾನಗಲ್ ಕುಮಾರಸ್ವಾಮಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪದಗ್ರಹಣಕ್ಕೆ ಚಾಲನೆ ನೀಡಲಾಯಿತು.ಸಭೆಯನ್ನುದ್ದೇಶಿಸಿ ಮಾತನಾಡಿದ ಮಲಯಶಾಂತಮುನಿ ದೇಶಿಕೇಂದ್ರ ಸ್ವಾಮೀಜಿ, ಸಮಾಜ ನಿರ್ಮಾಣದಲ್ಲಿ ಮಹಿಳೆಯರು ಮತ್ತು ಯುವಕರ ಪಾತ್ರ ಮಹತ್ವದ್ದಾಗಿದೆ ಎಂದರು. ಪ್ರತೀ ಮನೆಯಲ್ಲಿ ಒಬ್ಬ ಸಮಾಜಸೇವಕ ಇದ್ದರೆ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ವೀರಶೈವ–ಲಿಂಗಾಯಿತ ಧರ್ಮವು ಕಾಯಕ ಮತ್ತು ದಾಸೋಹದ ...








