
ಕಾಲ್ತುಳಿತ ದುರಂತ; ತನಿಖೆ ಪೂರ್ಣಗೊಳ್ಳುವವರೆಗೂ ಸರ್ಕಾರವನ್ನು ಅಮಾನತಿನಲ್ಲಿಡಲು ರಾಜ್ಯಪಾಲರಿಗೆ ಕಾನೂನು ಸಲಹೆ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ ಕ್ರಿಕೆಟಿಗ ವಿರಾಟ್ ಕೊಹ್ಲಿ ತಂಡಕ್ಕೂ ಸಂಕಷ್ಟ ತಂದೊಡ್ಡಿದೆ. 11 ಜನರ ಮರಣ ಹೋಮಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದ್ದು, ಇಲಾಖೆಗಳ ಆಕ್ಷೇಪದ ಹೊರತಾಗಿಯೂ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹಠಕ್ಕೆ ಬಿದ್ದು RCB ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನ್ಯಾಯಾಂಗ ತನಿಖೆ ಮುಗಿಯುವವರೆಗೂ ರಾಜ್ಯ ಸರ್ಕಾರವನ್ನು ಅಮಾನತಿನಲ್ಲಿಡಬೇಕೆಂದು ರಾಜ್ಯಪಾಲರಿಗೆ ಮನವಿ ಸಲ್ಲಿಕೆಯಾಗಿದೆ.
ಮಾನವ ಹಕ್ಕುಗಳ ಹೋರಾಟ ಸಂಸ್ಥೆಯಾಗಿರುವ 'ಸಿಟಿಜನ್ ರೈಟ್ಸ್ ಫೌಂಡೇಷನ್ (CRF)' ವತಿಯಿಂದ ರಾಜ್ಯಪಾಲರಿಗೆ ಸಲ್ಲಿಕೆಯಾಗಿರುವ ದೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 04.06.2025ರಂದು ಸಂಭವಿಸಿರುವ ಕಾಲ್ತುಳಿತ ದುರ್ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹೊಣೆಗಾಗರಷ್ಟೇ ಅಲ್ಲ, ಅವರೇ ನೇರ ಕಾರಣಕರ್ತರು ಎಂದು ಆರೋಪಿಸಲಾಗಿದ...