
‘ಕೆಡಿ ದಿ ಡೆವಿಲ್’ ಹಾಡು ವಿರುದ್ಧ ದೂರು
ಬೆಂಗಳೂರು : 'ಕೆಡಿ ದಿ ಡೆವಿಲ್' (KD The Devil) ಚಿತ್ರದ ‘ಸರ್ಸೆ ನಿನ್ನ ಸೆರಗ’ ಹಾಡು ಬಿಡುಗಡೆಯಾಗುತ್ತಿದ್ದಂತೆಯೇ ಭಾರೀ ವಿವಾದಕ್ಕೆ ಗುರಿಯಾಗಿದೆ. ಜೋಗಿ ಪ್ರೇಮ್ ನಿರ್ದೇಶನದಲ್ಲಿ ಧ್ರುವ ಸರ್ಜಾ (Dhruva Sarja) ಅಭಿನಯದ ಈ ಚಿತ್ರಕ್ಕೆ ಆರಂಭದಲ್ಲೇ ಅಡೆತಡೆ ಎದುರಾಗಿದ್ದು, ಹಾಡಿನ ಹಿಂದಿ ಆವೃತ್ತಿಯನ್ನು ಯೂಟ್ಯೂಬ್ (YouTube) ಸೇರಿದಂತೆ ಎಲ್ಲ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಲಾಗಿದೆ ಎಂದು ತಿಳಿದುಬಂದಿದೆ.ಹಾಡಿನ ಸಾಹಿತ್ಯ ಮಾತ್ರವಲ್ಲದೆ ನೃತ್ಯ ಸಂಯೋಜನೆಯ ಮೇಲೂ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೃಶ್ಯಗಳು ಅಸಭ್ಯವಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ.ವಿವಾದ ತೀವ್ರಗೊಳ್ಳುತ್ತಿದ್ದಂತೆಯೇ ಕರ್ನಾಟಕ ರಾಜ್ಯ ಮಹಿಳಾ ಆಯೋಗ (Karnataka State Women Commission) ಚಿತ್ರರಂಗದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Karnataka Film Chamber of Commerce) ಹಾಗೂ ಕೇಂದ್ರೀಯ ಚಲನಚಿತ್ರ ಪ್ರಮಾಣಪತ್ರ ಮಂಡಳಿ (Central Board of Film Certification)ಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.ಈ ...








