Saturday, December 6

ಸಿನಿಮಾ

‘ಕಾಜಲ್’ ದಿಟ್ಟ, ನಿರ್ಭೀತ ನಾರಿ..! ‘ಝ್ಯಾದಾ ಮತ್ ಉದ್’ ಸರಣಿ ಬಗ್ಗೆ ನಟಿ ಹೆಲ್ಲಿ ಶಾ ಮಾತು..

‘ಕಾಜಲ್’ ದಿಟ್ಟ, ನಿರ್ಭೀತ ನಾರಿ..! ‘ಝ್ಯಾದಾ ಮತ್ ಉದ್’ ಸರಣಿ ಬಗ್ಗೆ ನಟಿ ಹೆಲ್ಲಿ ಶಾ ಮಾತು..

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಸಿನಿಮಾ
ಮುಂಬೈ: ಹೊಸದಾಗಿ ಬಿಡುಗಡೆಯಾದ 'ಝ್ಯಾದಾ ಮತ್ ಉದ್' ಸರಣಿಯಲ್ಲಿ ನಟಿಸಿರುವ ದೂರದರ್ಶನ ನಟಿ ಹೆಲ್ಲಿ ಶಾ, ತನ್ನ ಮಿತಿಗಳನ್ನು ಮೀರುವ ಪಾತ್ರಗಳೊಂದಿಗೆ ತನ್ನನ್ನು ತಾನು ಸವಾಲು ಮಾಡಿಕೊಳ್ಳುವುದು ಹೆಚ್ಚು ರೋಮಾಂಚನಗೊಳಿಸುತ್ತದೆ ಎಂದು ಹೇಳಿದ್ದಾರೆ. ಹಾಸ್ಯಮಿಶ್ರಿತ 'ಝ್ಯಾದಾ ಮತ್ ಉದ್', ಸವಾಲುಗಳಿಂದ ತುಂಬಿರುವ ಜಗತ್ತಿನಲ್ಲಿ ತಮ್ಮದೇ ಆದ ಹಾದಿಯನ್ನು ಕೆತ್ತಲು ಪ್ರಯತ್ನಿಸುತ್ತಿರುವ ಯುವ ವ್ಯಕ್ತಿಗಳ ಹೋರಾಟಗಳು ಮತ್ತು ಆಕಾಂಕ್ಷೆಗಳ ಸುತ್ತ ಸುತ್ತುತ್ತದೆ. 'ಒಂದು ಸಮೂಹ ಪಾತ್ರವರ್ಗದ ಭಾಗವಾಗುವುದು ನನಗೆ ಎಂದಿಗೂ ಕಾಳಜಿಯಾಗಿಲ್ಲ ಏಕೆಂದರೆ ನಾನು ನನ್ನ ಕಲೆಯನ್ನು ನಂಬುತ್ತೇನೆ. ಒಬ್ಬ ನಟನಾಗಿ ನನ್ನ ಮಿತಿಗಳನ್ನು ಮೀರುವ ಪಾತ್ರಗಳೊಂದಿಗೆ ನನ್ನನ್ನು ನಾನು ಸವಾಲು ಮಾಡಿಕೊಳ್ಳುವುದು ನನಗೆ ನಿಜವಾಗಿಯೂ ರೋಮಾಂಚನ ನೀಡುತ್ತದೆ' ಎಂದವರು ಈ ಸರಣಿ ಬಗ್ಗೆ ಹೇಳಿಕೊಂಡಿದ್ದಾರೆ. ಹೆಲ್ಲಿ ಸಾಮಾಜಿಕ ನಿರೀಕ್ಷೆಗಳಿಂದ ತಡೆಹಿಡಿಯಲ್ಪಡಲು ನಿರಾಕರಿಸುವ ಆತ್ಮವಿಶ್ವಾಸ ಮತ್ತು ಮಹತ್ವಾಕಾಂಕ್ಷೆಯ ಮಹಿಳೆ ಕಾಜಲ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ತಾನು ಮೊದಲು ಚಿತ್ರಿಸಿದ ಸಾಂಪ್ರದಾಯಿಕ ಪಾತ್ರಗಳಿಗಿಂತ ...
‘ನಾನು ಮುಗ್ದೆ, ನನ್ನಿಂದ ಏನನ್ನೂ ವಶಪಡಿಸಿಲ್ಲ’: ತನಿಖಾಧಿಕಾರಿಗಳ ವಿರುದ್ಧ ರನ್ಯಾ ಗಂಭೀರ ಆರೋಪ

‘ನಾನು ಮುಗ್ದೆ, ನನ್ನಿಂದ ಏನನ್ನೂ ವಶಪಡಿಸಿಲ್ಲ’: ತನಿಖಾಧಿಕಾರಿಗಳ ವಿರುದ್ಧ ರನ್ಯಾ ಗಂಭೀರ ಆರೋಪ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ನಟಿ ರನ್ಯಾ ರಾವ್ ತಮ್ಮ ವಿರುದ್ದದ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಹಠಾತ್ ತಿರುವು ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ರಾಣ್ಯಾರಾವ್ ಜೈಲಿನಿಂದಲೇ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿದಿದ್ದು ತಮ್ಮ ವಿರುದ್ದದ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಬೆಂಗಳೂರು ಸೆಂಟ್ರಲ್ ಜೈಲಿನಿಂದ ಮಾರ್ಚ್ 6 ರಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಹೆಚ್ಚುವರಿ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ರನ್ಯಾರಾವ್, ಇತರ ಕೆಲ ಪ್ರಯಾಣಿಕರನ್ನು ರಕ್ಷಿಸಲು ನನ್ನನ್ನು ಸುಳ್ಳು ಕೇಸ್ ನಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ. 'ಈ ಪ್ರಕರಣದಲ್ಲಿ ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆಯದಿದ್ದರೂ ತಪ್ಪಾಗಿ ಬಿಂಬಿಸಲಾಗುತ್ತಿದೆ ಎಂದು ರನ್ಯಾ ರಾವ್ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಹೇಳಿದ್ದಾರೆ. ಅಧಿಕಾರಿಗಳು ಹೇಳಿದಂತೆ ಯಾವುದೇ ಮಹಜರ್ ಮಾಡಿಲ್ಲ ಅಥವಾ ಯಾವುದೇ ಶೋಧ ಕಾರ್ಯ ನಡೆದಿಲ್ಲ. ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ ಎಂದು ಅವರು ನಾಲ್ಕು ಪುಟಗಳ ಪತ್ರದಲ್ಲಿ ಬರೆದುಕೊಂಡಿದ್ದಾರೆ. ಬಂಧನವಾದಾಗಿನಿಂದ ನ್ಯಾಯಾಲಯಕ್ಕ...
ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಜಾಮೀನು ಅರ್ಜಿ ವಜಾ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ಜಾಮೀನು ಅರ್ಜಿ ವಜಾ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ರನ್ಯಾ ರಾವ್ ಜಾಮೀನು ಕೋರಿ ಸಲ್ಲಿಸಿದ್ದ ಜಾಮೀನು ಅರ್ಜಿ ಕುರಿತಂತೆ ಆರ್ಥಿಕ ಅಪರಾಧಗಳ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನಾಟಿಗೆ ಜಾಮೀನು ಮಂಜೂರು ಮಾಡಲು ಕೋರ್ಟ್ ನಿರಾಕರಿಸಿದೆ. ಇನ್ನೊಂದೆಡೆ, ಮತ್ತೊಬ್ಬ ಆರೋಪಿ ತರುಣ್ ಕೂಡಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ....
‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಇನ್ಸಾಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ದರ್ಶನ್, ಇನ್ನೂ ಸಾಧನೆ ಮಾಡದ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ.   View this post on Instagram   A post shared by Darshan Thoogudeepa Shrinivas (@darshanthoogudeepashrinivas) 'ಎಲ್ಲಾ ನನ್ನ ಸೆಲೆಬ್ರಿಟಿಸ್ ಗಳಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನನ್ನ ಮತ್ತು ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ ಅಭಿಮಾನಕ್ಕೆ ನಾವು ಸದಾ ಚಿರಋಣಿ. ಆದರೆ, ಈ ವೀಡಿಯೊದಲ್ಲಿ ನಮ್ಮ ಮೇಲಿರುವ ಅಭಿಮಾನದಿಂದ ಇನ್ನೂ ಏನು ಸಾಧನೆ ಮಾಡದಿರುವ ನನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವುದನ್ನು ನೋಡಿ ನನ್ನ ಮನಸಿಗೆ ತುಂಬಾ ನೋವಾಗಿದೆ ಅದರಿಂದ ಡ...
2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ. ಪಿಂಕಿ ಎಲ್ಲಿ ಸಿನಿಮಾಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪಟ್ಟಿ ಹೀಗಿದೆ. ಅತ್ಯುತ್ತಮ ನಟ: ಪ್ರಜ್ವಲ್‍ ದೇವರಾಜ್‍ (ಚಿತ್ರ: ಜಂಟಲ್‌ಮನ್) ಅತ್ಯುತ್ತಮ ನಟಿ: ಅಕ್ಷತಾ ಪಾಂಡವಪುರ (ಚಿತ್ರ: ಪಿಂಕಿ ಎಲ್ಲಿ) ಅತ್ಯುತ್ತಮ ಪೋಷಕ ನಟ: ರಮೇಶ್‍ ಪಂಡಿತ್‍, ಅತ್ಯುತ್ತಮ ಪೋಷಕ ನಟಿ: ಮಂಜುಳಮ್ಮ, ಅತ್ಯುತ್ತಮ ಚಿತ್ರ: ಪಿಂಕಿ ಎಲ್ಲಿ 2ನೇ ಅತ್ಯುತ್ತಮ ಚಿತ್ರ: ವರ್ಣಪಟಲ 3ನೇ ಅತ್ಯುತ್ತಮ ಚಿತ್ರ: ಹರಿವ ನದಿಗೆ ಮೈಯೆಲ್ಲಾ ಕಾಲು ವಿಶೇಷ ಸಾಮಾಜಿಕ ಕಾಳಜಿ ಚಿತ್ರ: ಗಿಳಿಯು ಪಂಜರದೊಳಿಲ್ಲ ಮತ್ತು ಈ ಮಣ್ಣು ಅತ್ಯುತ್ತಮ ಜನಪ್ರಿಯ ಮನರಂಜನಾ ಚಿತ್ರ: ಫೋರ್ ವಾಲ್ಸ್ ಅತ್ಯುತ್ತಮ ಮಕ್ಕಳ ಚಿತ್ರ: ಪದಕ ನಿರ್ದೇಶಕರ ಪ್ರಥಮ ನಿರ್ದೇಶನದ ಅತ್ಯುತ್ತಮ ಚಿತ್ರ: ನೀಲಿ ಹಕ್ಕಿ ಅತ್ಯುತ್ತಮ ಪ್ರಾದೇಶಿಕ ಚಿತ್ರ: ಜೀಟಿಗೆ ಅತ್ಯುತ್ತಮ ಸಂಗೀತ ನಿರ್ದೇಶಕ: ...
ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ನಟಿ ಶಬಾನಾ ಆಜ್ಮಿ ಅವರಿಗೆ ಪ್ರದಾನ ಮಾಡಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಪತ್ರ ಮತ್ತು 10 ಲಕ್ಷದ ಚೆಕ್ ನೀಡಿ, ಗೌರವಿಸಿದರು. ವಿಶ್ವ ವಿಖ್ಯಾತ ಕವಿ, ಗೀತರಚನೆಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಸಿಎಂ ಜೊತೆಗಿದ್ದರು. ಈ ಸಂದರ್ಭದ ಫೋಟೋಗಳನ್ನು ಸಿಎಂ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.  https://x.com/siddaramaiah/status/1899024225031139447 ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದರು....
ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

ನಟಿ ರನ್ಯಾ ಚಿನ್ನ ಸ್ಮಗ್ಲಿಂಗ್ ಹಿಂದಿರುವ ಸಚಿವರು ಯಾರು? ಮಾಹಿತಿ ಬಹಿರಂಗಪಡಿಸಲು ಬಿಜೆಪಿ ಪಟ್ಟು

Focus, Update Videos, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ಬೆಂಗಳೂರು: ರನ್ಯಾರಾವ್ ಚಿನ್ನ ಸ್ಮಗ್ಲಿಂಗ್ ಹಿಂದೆ ಕೆಲವು ಸಚಿವರು ಇರುವ ಮಾಹಿತಿ ಇದ್ದು, ಅಂಥ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ. ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಹವಾಲಾ ನಂಟು ಬೆಸೆದುಕೊಂಡಿರುವ ಶಂಖೆ ವ್ಯಕ್ತವಾಗಿದ್ದು, ಆರೋಪಿ ರನ್ಯಾ ರಾವ್ ಬಂಧನದ ಸಂದರ್ಭದಲ್ಲಿ ಸಚಿವರೊಬ್ಬರನ್ನು ಸಂಪರ್ಕಿಸಲು ಯತ್ನಿಸಿರುವುದು @INCKarnataka ಸರ್ಕಾರದ ಪ್ರಭಾವಿಗಳ ಕೈವಾಡ ಇರುವ ಬಗ್ಗೆ ಸ್ಪಷ್ಟ ಅನುಮಾನಗಳು ಮೂಡುತ್ತಿವೆ. ರನ್ಯಾ ರಾವ್ ಅವರು ಉನ್ನತ ಪೊಲೀಸ್… pic.twitter.com/4XHhTNT15b — Office of BY Vijayendra (@OfficeofBYV) March 10, 2025 ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚಿನ್ನ ಕಳ್ಳಸಾಗಣೆ ಹಿನ್ನೆಲೆಯಲ್ಲಿ ಬಂಧಿತರಾದ ರನ್ಯಾರಾವ್ ಹಿಂದೆ ಅನೇಕ ಘಟಾನುಘಟಿಗಳಿದ್ದಾರೆ ಎಂಬ ಅಂಶ ಹೊರಕ್ಕೆ ಬರುತ್ತಿದೆ. ಇದೇನೂ ಸಣ್ಣ ಘಟನೆಯಲ್ಲ; ರನ್ಯಾರಾವ್ ಕಳೆದ ಕೆಲವು ತಿಂಗಳುಗಳಲ್ಲಿ 30ಕ್ಕೂ ಹೆಚ್ಚು ಬಾರಿ ವಿದೇಶಕ್ಕೆ- ದು...
ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

ಗೋಲ್ಡ್ ಸ್ಮಗ್ಲಿಂಗ್: ನಟಿ ರನ್ಯಾಗೆ 14 ದಿನ ನ್ಯಾಯಾಂಗ ಬಂಧನ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ರನ್ಯಾ ರಾವ್ ಅವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಕಸ್ಟಡಿ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ನಟಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶಿಸಿದರು. ಮತ್ತೊಂದೆಡೆ, ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್​​ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಫೈಸ್ಟಾರ್ ಹೋಟೆಲ್ ಮಾಲೀಕನ ತಮ್ಮನ ಮಗ ತರುಣ್ ರಾಜು ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್​ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು ಎಂದು ಹೇಳಲಾಗುತ್ತಿದೆ....
‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

‘ನಮ್ಮತನ ಮಾರ್ಚ್ 8ಕ್ಕೆ ಮಾತ್ರ ಸೀಮಿತವಾಗಿರಬಾರದು’: ಭಾರತಿ ವಿಷ್ಣು ವರ್ಧನ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಆನೇಕಲ್: ಮಹಿಳೆಯರು ವಿಶ್ವದಾದ್ಯಂತ ಅನೇಕ ರಂಗಗಳಲ್ಲಿ ಯಶಸ್ವಿಯಾಗಿ ತಮ್ಮ ಛಾಪು ಮೂಡಿಸಿದ್ದು ನಮ್ಮತನವನ್ನು ಮಾರ್ಚ್ 8ಕ್ಕೆ ಮಾತ್ರ ಸೀಮಿತಗೊಳಿಸ ಬಾರದು. ಸಾಗರ ತಳ, ವಿಶಾಲ ಭೂಮಿ, ಆಗಸ ದಾಟಿ ಮುನ್ನಡೆಯಬೇಕೆಂದು ಪಂಚಭಾಷಾ ತಾರೆ ಪದ್ಮಶ್ರೀ ಡಾ. ಭಾರತಿ ವಿಷ್ಣು ವರ್ಧನ್ ಕರೆ ನೀಡಿದರು. ಆನೇಕಲ್ ಸಮೀಪ ಅಲಯಂನ್ಸ್ ವಿಶ್ವವಿದ್ಯಾಲಯ ಏರ್ಪಡಿಸಿದ್ದ, ವಿಶ್ವ ಮಹಿಳಾ ಮಹಿಳಾ ದಿನಾಚರಣೆಯ ಅಂಗವಾಗಿ ಸಮಾಜದ ವಿವಿಧ ಸ್ಥರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕಿ ಮಹಿಳೆಯರಿಗೆ ಮಹಿಳಾ ಸ್ಪಂದನ ಅವಾರ್ಡ್ ವಿತರಿಸಿ ಮಾತನಾಡಿದ ಅವರು, ತಾಯಿಯಾಗಿ, ಸಹೋದರಿಯಾಗಿ, ಮಗಳಾಗಿ ವಿವಿಧ ಹಂತಗಳಲ್ಲಿ ಹೆಣ್ಣು ಪರಿಪೂರ್ಣತೆಯಿಂದ ತನ್ನ ಪಾತ್ರವನ್ನು ಯಶಸ್ವಿಯಾಗಿ ನಿರ್ವಹಿಸುತ್ತಾಳೆ. ತ್ಯಾಗಮಯಿಯಾದ ಆಕೆ ತನ್ನ ಕುಟುಂಬ ದೇಶ ಕ್ಕಾಗಿ ಕೊಡುಗೆಯನ್ನೂ ನೀಡಿ ಇತರರ ಗೆಲುವನ್ನು ತನ್ನದೆಂದು ಪರಿಭಾವಿಸಿ ತೃಪ್ತಿ ಪಡುತ್ತಾಳೆ. ಮಹಿಳೆಯರು ಇದ್ದೆಡೆ ಗೌರವ ಶಕ್ತಿ ಇದ್ದು ಪ್ರಭಾವಿತಳಾಗಿ ಕಾಣುತ್ತಾಳೆ ಎಂದರು. ಶಿಕ್ಷಣ, ಅರೋಗ್ಯ, ಉದ್ಯೋಗ, ಕೃಷಿ, ಉದ್ಯಮ ಸೇರುದಂತೆ ಹಲವು ವಿಭಾಗದ 30ಕ್ಕೂ ಹೆಚ್ಚು ಸಾಧಕರನ್ನು ಸನ್ಮಾನಿಸ...
‘ನಟಿ ರಶ್ಮಿಕಾಗೆ ರಕ್ಷಣೆ ಕೊಡಿ’: ಕೊಡವ ರಾಷ್ಟ್ರೀಯ ಮಂಡಳಿಆಗ್ರಹ

‘ನಟಿ ರಶ್ಮಿಕಾಗೆ ರಕ್ಷಣೆ ಕೊಡಿ’: ಕೊಡವ ರಾಷ್ಟ್ರೀಯ ಮಂಡಳಿಆಗ್ರಹ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಅವರು ರಾಜ್ಯದ ಬಗ್ಗೆ ಅಗೌರವ ತೋರಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಕನ್ನಡ ಸಂಘಟನೆಗಳು ಮತ್ತು ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಕೊಡವ ರಾಷ್ಟ್ರೀಯ ಮಂಡಳಿ ಅವರಿಗೆ ರಕ್ಷಣೆ ನೀಡುವಂತೆ ಕೋರಿದೆ. ಪರಿಷತ್ತಿನ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕರ್ನಾಟಕದ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಈ ವಿಷಯದ ಕುರಿತು ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಅವರು ರಶ್ಮಿಕಾ ಅವರನ್ನು ಟೀಕಿಸಿದ್ದರು. ಕರ್ನಾಟಕ ಸರ್ಕಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಶ್ಮಿಕಾ ಆಹ್ವಾನವನ್ನು ನಿರಾಕರಿಸಿದ್ದಾರೆ ಎಂದು ಶಾಸಕರು ಆರೋಪಿಸಿದ್ದರು. ರಶ್ಮಿಕಾ ಹೈದರಾಬಾದ್‌ನಲ್ಲಿ ವಾಸಿಸುತ್ತಿದ್ದಾರೆ ಮತ್ತು ಕರ್ನಾಟಕ ಎಲ್ಲಿದೆ ಎಂದು ತಿಳಿದಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು. ಈ ಬೆಳವಣಿಗೆಗಳ ನಂತರ, ಅನೇಕ ಕನ್ನಡ ಸಂಘಟನೆಗಳು ಮತ್ತು ಕಾರ್ಯಕರ್ತರು ರಶ್ಮಿಕಾ ಅವರನ್ನು ಟೀಕಿಸಿದ್ದಾರೆ ಮತ್ತು ಅವರಿಂದ ಕ್ಷಮೆಯಾಚಿಸಬೇಕೆಂದು ಒತ...