Saturday, December 6

ಸಿನಿಮಾ

ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

ಬಹುಭಾಷಾ ನಟಿ ಶಬಾನಾ ಆಜ್ಮಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ

Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಹುಭಾಷಾ ನಟಿ ಶಬಾನಾ ಆಜ್ಮಿ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂದರ್ಭದಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗುತ್ತಿರುವ ಶಬಾನಾ ಆಜ್ಮಿ ಅವರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ‌ ಆಯೋಜಿಸಿರುವ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾದ ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಸ್ದದಾರೇ. 70ರ ದಶಕದಲ್ಲಿ ಕನ್ನೇಶ್ವರ ರಾಮ ಚಿತ್ರದ ಮೂಲಕ‌ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿ ಕನ್ನಡ ಸಿನಿರಸಿಕರ ಹೃದಯಗೆದ್ದ ಶಬಾನಾ ಅವರು ದಕ್ಷಿಣ ಭಾರತದ ಚಿತ್ರಗಳು ಹಾಗೂ ಹಿಂದಿ ಭಾಷೆಯ ಚಲನಚಿತ್ರಗಳಲ್ಲಿ ನಟಿಸಿ, ಸೈ ಎನಿಸಿಕೊಂಡವರು. ಸುಮಾರು 50 ವರ್ಷಗಳ ಅವರ ಕಲಾಸೇವೆಗೆ ಸಂದ ಈ ಗೌರವವು...
“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

“ಕಲಾವಿದರು ಯಾರ ಸ್ವತ್ತೂ ಅಲ್ಲ, ಪಕ್ಷಗಳ ಕಾರ್ಯಕರ್ತರೂ ಅಲ್ಲ”

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಕಲಾವಿದರ ನೆಟ್ ಬೋಲ್ಟ್ ಟೈಟ್ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, "ಕಲಾವಿದರು ಯಾರ ಸ್ವತ್ತೂ ಅಲ್ಲ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೂ ಅಲ್ಲ" ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ 'X'ನಲ್ಲಿ ಬರೆದುಕೊಂಡಿರುವ ಅಶೋಕ್, ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಅವರು ಡಿಕೆಶಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮಾಜದಲ್ಲಿ ಎಲ್ಲರೂ ತಮಗೆ ಮತ್...
ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

ಮೈಸೂರಿನ 150 ಎಕರೆ ಜಾಗದಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ: ಚಿಗುರಿದ ಕನಸು

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ವಿಶ್ವದರ್ಜೆಯ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ಗಳ‌ ಮೇಲೆ ಆಯೋಜಿಸಿದ್ದ ವರ್ಣರಂಜಿತ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು. ಇದಕ್ಕಾಗಿ ವಿಶ್ವ ದರ್ಜೆಯ ಅತ್ಯುನ್ನತ ಗುಣಮಟ್ಟದ ಫಿಲ್ಮ್ ಸಿಟಿಯನ್ನು ಮೈಸೂರಿನಲ್ಲಿ ನಿರ್ಮಿಸುತ್ತಿದ್ದೇವೆ. ತಂತ್ರಜ್ಞಾನದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಸೆಯುವ ಸಿನಿಮಾಗಳನ್ನು ವಿಶ್ವದರ್ಜೆಯ ಗುಣಮಟ್ಟದಲ್ಲಿ ಇಲ್ಲಿ ನಿರ್ಮಾಣ ಆಗಬೇಕು ಎಂದರು. ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ನೋಡುಗರು ಸದುಪಯೋಗಪಡಿಸಿಕೊಳ್ಳಬೇಕು. ನಮ್ಮಲ್ಲಿ ಅಸಹನೆ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ಅಸಂತೋಷ ಹೆಚ್ಚುತ್ತಿದೆ. ಸಂಪತ್ತಿನ ಅಸಮಾನ ಹಂಚಿಕೆ ಈ ಅಸಂತೋಷಕ್ಕೆ ಕಾರಣ. ದೇಶದ 1% ಜನರ ಕೈಯಲ್ಲಿ ದೇಶದ 50% ಸಂಪತ್ತು ಸೇ...
ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಪ್ರಕರಣ: ತನಿಖೆಯ ಅಖಾಡಕ್ಕೆ ಧುಮುಕಿದ ಸಿಬಿಐ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನಕ್ಕೊಳಗಾಗಿದ್ದು, ಇದೀಗ ಸಿಬಿಸಿ ಕೂಡಾ ಪ್ರತನಿಖೆಯ ಅಖಾಡಕ್ಕೆ ಧುಮುಕಿದೆ. ನಟಿ ರನ್ಯಾ ರಾವ್ ವಿರುದ್ಧ ಡಿಆರ್​ಐ ಅಧಿಕಾರಿಗಳು ನೀಡಿದ ಮಾಹಿತಿ ಆಧರಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎನ್ನಲಾಗಿದೆ. ಸಿಬಿಐ ಮುಂಬೈ ಹಾಗೂ ಬೆಂಗಳೂರಿನಲ್ಲಿ ಪರಿಶೀಲನೆಯಲ್ಲಿ ತೊಡಗಿರುವ ಸಿಬಿಐ ಇದೀಗ ತಾನು ಕೂಡಾ ತನಿಖೆಗೆ ಮುಂದಾಗಿದೆ. ವಿದೇಶದಿಂದ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಬಂಧಿಸಲಾಗಿತ್ತು. ಆಕೆಯಿಂದ ಸುಮಾರು 14.20 ಕೆಜಿ ಚಿನ್ನ ನಗದು ಸೇರಿ 17.29 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಡಿಆರ್​ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಗಂಭೀರ ಆರೋಪದಲ್ಲಿ ಬಂಧಿತರಾಗಿರುವ ನಟಿ ರನ್ಯಾ ಅವರನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. #WATCH | Bengaluru | Kannada actor Ranya Rao, arrested by DRI for allegedly smuggling gold from Dubai, brought to a special court hearing cases of economic offences pic.twitter.com/7w3E38qYwV— ANI (@ANI)...
ಪುನೀತ್ ಹುಟ್ಟುಹಬ್ಬದಂದು ‘ಅಪ್ಪು’ ಚಿತ್ರ ರೀ- ರೀಲಿಸ್

ಪುನೀತ್ ಹುಟ್ಟುಹಬ್ಬದಂದು ‘ಅಪ್ಪು’ ಚಿತ್ರ ರೀ- ರೀಲಿಸ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬವಾದ ಮಾರ್ಚ್ 14ರಂದು ಅಪ್ಪು ಅವರ ಮೊದಲ ಚಿತ್ರ 'ಅಪ್ಪು' ರೀ- ರೀಲಿಸ್ ಆಗಲಿದೆ. ಪುನೀತ್ ರಾಜ್ ಕುಮಾರ್ ಅವರ 50 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ 'ಅಪ್ಪು' ಚಿತ್ರವನ್ನು PRK Productions ಮರು ಬಿಡುಗಡೆ ಮಾಡುವ ಕುರಿತು ಪಿಆರ್ ಕೆ ಪ್ರೊಢಕ್ಷನ್ ನ ಮಾಲೀಕರಾದ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಮಾಜಿಕ ಜಾಲತಾಣ 'X' ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. Misunderstanding ಬೇಡ! 💞Get ready to relieve the magic. #Appu returns to theaters in honor of Dr. Puneeth Rajkumar's 50th birthday. ▶️ In Cinemas on 14th March 2025A @PRK_Productions release#DrPuneethRajkumar @RakshithaPrem #PuriJagannadh #GuruKiran #Avinash… pic.twitter.com/at6OyDMf2q— Ashwini Puneeth Rajkumar (@Ashwini_PRK) February 26, 2025...
‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

‘ಒಡೆಲಾ 2’: ಮಹಾ ಕುಂಭಮೇಳದಲ್ಲಿ ಟೀಸರ್ ಬಿಡುಗಡೆ, ಸಾಧ್ವಿಯಂತೆ ಮಿಂಚಿದ ಮಿಲ್ಕಿ ಬ್ಯೂಟಿ

Focus, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವೀಡಿಯೊ, ಸಿನಿಮಾ
ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರ ಅಭಿನಯದ 'ಒಡೆಲಾ 2' ಸಿನಿಮಾ ಟೀಸರ್' ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದೆಬ್ಬಿಸಿದೆ. ಒಡೆಲಾ ಸಿನಿಮಾದ ಮುಂದುವರೆದ ಭಾಗವಾಗಿರುವ 'ಒಡೆಲಾ 2' ಹಲವಾರು ಕ್ರಿಯಾತ್ಮಕ ಪ್ರಯೋಗಗಳಿಂದ ಗಮನಸೆಳೆದಿದೆ. ಬೋಲ್ಡ್ ಪಾತ್ರಗಳಿಂದ ಗಮನಸೆಳೆಯುತ್ತಿರುವ ನಟಿ ತಮನ್ನಾ ಭಾಟಿಯಾ 'ಒಡೆಲಾ 2'ನಲ್ಲಿ ಸಾದ್ವಿ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. https://www.youtube.com/watch?v=Cb1XauMhTtc ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ 'ಒಡೆಲಾ 2' ಟೀಸರ್ ಬಿಡುಗಡೆಯಾಗಿದೆ. ತಮನ್ನಾ ಅವರು ಸಾದ್ವಿ ಲುಕ್'ನಲ್ಲಿ ಕಾಣಿಸಿಕೊಳ್ಳುವುದಕ್ಕೂ ಇದರ ಟೀಸರ್ ಮಹಾ ಕುಂಭಮೇಳದಲ್ಲಿ ಬಿಡುಗಡೆಯಾಗುವುದಕ್ಕೂ ಏನೂ ಸಂಬಂಧವಿಲ್ಲ. ಆದರೂ ತಮನ್ನಾ ಸಾಧ್ವಿಯಾದರೇ ಎಂಬ ನೆಟ್ಟಿಗರ ಪ್ರತಿಕ್ರಿಯೆಗಳೂ ಗಮನಸೆಳೆದಿವೆ....
ಯಶ್ ‘ರಾಮಾಯಣ’ ಪಯಣ.. ರಾವಣ ಪಾತ್ರಕ್ಕಾಗಿ ಶೂಟಿಂಗ್

ಯಶ್ ‘ರಾಮಾಯಣ’ ಪಯಣ.. ರಾವಣ ಪಾತ್ರಕ್ಕಾಗಿ ಶೂಟಿಂಗ್

Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ಮುಂಬೈ: ನಟ ಯಶ್ 'ರಾಮಾಯಣ' ಚಿತ್ರೀಕರಣ ಆರಂಭಿಸಿದ್ದಾರೆ. ನಿತೇಶ್ ತಿವಾರಿ ಅವರ ಈ ಸಿನಿಮಾದಲ್ಲಿ ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಮಾಯಣದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್ ಮತ್ತು ಇಂದಿರಾ ಕೃಷ್ಣ ಮೊದಾಲದವರೂ ನಟಿಸುತ್ತಿದ್ದಾರೆ. ತಿವಾರಿ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಭಾರತದಲ್ಲಿ ನಡೆಯುತ್ತಿದೆ. ನಟ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಲಿದ್ದಾರೆ ಮತ್ತು ನಟಿ ಸಾಯಿ ಪಲ್ಲವಿ ಸೀತಾದೇವಿಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ರಣಬೀರ್ ಮತ್ತು ಪಲ್ಲವಿ ಚಿತ್ರದ ಕೆಲವು ಭಾಗಗಳನ್ನು ಮುಂಬೈನಲ್ಲಿ ಚಿತ್ರೀಕರಿಸಿದ್ದಾರೆ. ಮತ್ತು ಈಗ, ಚಿತ್ರದ ನಿರ್ಮಾಪಕರೂ ಆಗಿರುವ ಯಶ್ ಮುಂಬೈನಲ್ಲಿ ತಮ್ಮ ಪಾತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಫೆಬ್ರವರಿ 21 ರಂದು ಯಶ್ ರಾಮಾಯಣಕ್ಕಾಗಿ ತಮ್ಮ ಭಾಗಗಳ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ಶೂಟಿಂಗ್ ಭಾಗವು ಯುದ್ಧದ ಸನ್ನಿವೇಶಗಳ ಮೇಲೆ ಕೇಂದ್ರೀಕೃತವಾಗಿರುತ್ತದೆ. ತಂಡವು ಮುಂಬೈನ ಅಕ್ಸಾ ಬೀಚ್‌ನಲ್ಲಿ ಕೆಲವು ನಿರ್ಣಾಯಕ ಯುದ್ಧ ದೃಶ್ಯಗಳನ್ನು ಚಿತ್ರೀಕರಿಸಲಿದೆ ಎಂದು ಮೂಲಗಳು. "ರಾಮಾಯಣ" ಎರಡು ಭಾಗಗಳಲ್ಲಿ ಬಿಡುಗಡೆ...
ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

ಬಂದವರಿಗೂ ಹರಸಿದವರಿಗೂ ಕೃತಜ್ಞತೆ ಸಲ್ಲಿಸಿದ ಡಾಲಿ

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ಸಿನಿಮಾ
ಬೆಂಗಳೂರು: ಹಸಮಾನೇ ಏರಿ ಹೊಸ ಬದುಕು ಆರಂಭಿಸಿರುವ ನಟ ಡಾಲಿ ಧನಂಜಯ ಮತ್ತು ಪತ್ನಿ ಅವರು ಅಭಿಮಾನಿಗಳ ಮುಂದೆ ಪ್ರತ್ಯಕ್ಷರಾಗಿದ್ದಾರೆ. ನವ ವಿವಾಹಿತರನ್ನು ಕಂಡು ಅಭಿಮಾನಿ ಬಂದುಗಳು ಸಂತಸಗೊಂಡಿದ್ದಾರೆ. ಈ ಫೋಟೋಗಳನ್ನು ಹಂಚಿಕೊಂಡಿರುವ ನಟ ಡಾಲಿ ಧನಂಜಯ ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು ಎಂದಿದ್ದಾರೆ. ಯಾವುದೇ ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು ಎಂದಿದ್ದಾರೆ. ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀರ್ವಾದವಿರಲಿ ಎಂದವರು ವಿನಂತಿಸಿಕೊಂಡಿದ್ದಾರೆ. ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನ...
ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ, ವೀಡಿಯೊ, ಸಿನಿಮಾ
ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ ಟೀಸರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ‘ಕಾಟೇರ’ ಸಿನಿಮಾದ ಬಿಗ್ ಸಕ್ಸಸ್ ನಂತರ ದರ್ಶನ್ ಶುರು ಮಾಡಿದ ಸಿನಿಮಾ ‘ದಿ ಡೆವಿಲ್’ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಆದರೆ, ದರ್ಶನ್ ಅವರು ಕೊಲೆ ಪ್ರಕರಣದಲ್ಲಿ ಆರೋಪಿ ಆಗಿ ಜೈಲು ಸೇರಿದ್ದರು. ಹಾಗಾಗಿ ಹಲವು ತಿಂಗಳ ಕಾಲ ‘ದಿ ಡೆವಿಲ್’ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದಿತ್ತು. ಇದೀಗ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳು ಖುಷಿಪಟ್ಟಿದ್ದಾರೆ. https://www.youtube.com/watch?v=7ru18HS_934&ab_channel=SaregamaKannada...
ನಾನು ನನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ’: ರಶ್ಮಿಕಾ ಮಂದಣ್ಣ

ನಾನು ನನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ’: ರಶ್ಮಿಕಾ ಮಂದಣ್ಣ

Focus, ಪ್ರಮುಖ ಸುದ್ದಿ, ರಾಜ್ಯ, ಸಿನಿಮಾ
ನವದೆಹಲಿ: ಚಲನಚಿತ್ರಗಳಲ್ಲಿನ ಅದ್ಭುತ ಅಭಿನಯಕ್ಕೆ ಹೆಸರುವಾಸಿಯಾದ ರಶ್ಮಿಕಾ ಮಂದಣ್ಣ, ಅಭಿಮಾನಿಗಳಿಂದ ಪ್ರೀತಿಯಿಂದ "ಕ್ರುಷ್ಮಿಕಾ" ಎಂದು ಕರೆಯುತ್ತಾರೆ, ಅವರು ತಮ್ಮ ಬಹುಮುಖ ಪ್ರತಿಭೆ ಮತ್ತು ಆಕರ್ಷಕ ಪರದೆಯ ಉಪಸ್ಥಿತಿಗಾಗಿ ಗಮನಾರ್ಹ ಜನಪ್ರಿಯತೆಯನ್ನು ಗಳಿಸಿದ್ದಾರೆ. ಆದಾಗ್ಯೂ, ಚಲನಚಿತ್ರಗಳನ್ನು ಆಯ್ಕೆ ಮಾಡುವಲ್ಲಿ ತಾನು ಯಾವುದೇ ತಂತ್ರವನ್ನು ಅನುಸರಿಸುವುದಿಲ್ಲ ಎಂದು ನಟಿ ಹೇಳುತ್ತಾರೆ. ಒಂದು "ದೈವಿಕ ಶಕ್ತಿ" ತನ್ನನ್ನು ಮುನ್ನಡೆಸುತ್ತಿದೆ ಎಂದು ನಂಬುತ್ತಾ, ತನ್ನ ಜೀವನವನ್ನು ತುಂಬಾ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದಿದ್ದಾರೆ. "ಗೀತ ಗೋವಿಂದಂ", "ಚಮಕ್", "ಪುಷ್ಪ" ಫ್ರಾಂಚೈಸ್ ಮತ್ತು "ಅನಿಮಲ್" ನಂತಹ ಬ್ಲಾಕ್‌ಬಸ್ಟರ್‌ಗಳಲ್ಲಿ ಅವರು ಮಾಡಿದ ಕೆಲಸದ ಮೂಲಕ ರಶ್ಮಿಕಾ ಅವರನ್ನು ಭಾರತೀಯ ಚಿತ್ರರಂಗದ ಉನ್ನತ ನಾಯಕಿಯರಲ್ಲಿ ಒಬ್ಬರೆನಿಸಿದ್ದಾರೆ. ಚಲನಚಿತ್ರಗಳನ್ನು ಆಯ್ಕೆ ಮಾಡುವ ವಿಷಯಕ್ಕೆ ಬಂದಾಗ, ಅವರು ಯೋಜನೆಗೆ ಸೇರಿಸುವ ಮೌಲ್ಯದ ಬಗ್ಗೆ ಅಥವಾ ಅದು ಅವರಿಗೆ ಸೇರಿಸುವ ಮೌಲ್ಯದ ಬಗ್ಗೆ ಯೋಚಿಸುತ್ತಾರೆಯೇ, ಪ್ರಕಾಶಮಾನವಾದ ನಗುವನ್ನು ಹೊಂದಿರುವ ನಟಿ ಸುದ್ದಿಸಂಸ್ಥೆಗೆ ಹೇಳಿದ್ದಾ...