
ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ
ಹೈದರಾಬಾದ್: ನಟ ನಾಗಾರ್ಜುನ ಅಕ್ಕಿನೇನಿ ಅವರ ವೃತ್ತಿಜೀವನದ 100ನೇ ಚಿತ್ರಕ್ಕೆ ‘ಕಿಂಗ್ 100’ ಎಂದು ಶೀರ್ಷಿಕೆ ಇಡಲಾಗಿದೆ. ಆರ್.ಎ. ಕಾರ್ತಿಕ್ ನಿರ್ದೇಶನದ ಈ ಸಿನಿಮಾ ಡಿಸೆಂಬರ್ 24ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.
https://youtu.be/OgF4eRYcHd8?si=t99Vp6ge1u1DLFfq
ನಾಗಾರ್ಜುನ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅನ್ನಪೂರ್ಣ ಸ್ಟುಡಿಯೋಸ್ ಚಿತ್ರದ ಶೀರ್ಷಿಕೆಯೊಂದಿಗೆ ಬಹುನಿರೀಕ್ಷಿತ ಮೊದಲ ಗ್ಲಿಂಪ್ಸ್ ಬಿಡುಗಡೆ ಮಾಡಿದೆ. ಸುಮಾರು ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿದ್ದ ಸಿನಿಮಾವನ್ನು ಸಾಕಷ್ಟು ಗೌಪ್ಯವಾಗಿ ಇಡಲಾಗಿತ್ತು.ಸುಮಾರು ಒಂದೂವರೆ ನಿಮಿಷದ ಗ್ಲಿಂಪ್ಸ್‌ನಲ್ಲಿ ನಾಗಾರ್ಜುನ ಅವರನ್ನು ವಿಭಿನ್ನ ಹಾಗೂ ಸ್ಟೈಲಿಶ್ ಅವತಾರದಲ್ಲಿ ಪರಿಚಯಿಸಲಾಗಿದೆ. ‘‘ಈ ಜಗತ್ತಿನಲ್ಲಿ ಎರಡು ರೀತಿಯ ಜನರಿದ್ದಾರೆ. ಹಣವಿರುವವರು ಮತ್ತು ಹಣವಿಲ್ಲದವರು. ನನ್ನಲ್ಲಿ ಹಣವಿಲ್ಲದಾಗ ಅವರು ನನ್ನನ್ನು ಸೋತವನು ಎಂದರು. ಹಣವಿದ್ದಾಗ ರಾಜ ಎಂದರು. ಆದರೆ ಈ ಗುರುತು ಹಣಕ್ಕಿಂತ ಹೆಚ್ಚು ಶಕ್ತಿಶಾಲಿ’’ ಎಂಬ ಸಂಭಾಷಣೆ ಗಮನ ಸೆಳೆದಿದೆ.ONE KING 👑
∞ ...









