
ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ
ಬೆಂಗಳೂರು: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ರಾಮಾಯಣ’ ಟ್ರೇಲರ್ ಬಿಡುಗಡೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಯಶ್, ರಣಬೀರ್ ಕಪೂರ್ ಹಾಗೂ ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಈ ಬಿಗ್‌ಬಜೆಟ್ ಚಿತ್ರದ ಟ್ರೇಲರ್ ಜುಲೈ 30ರಂದು ಬೆಳಗಿನ ಜಾವ 4.15ಕ್ಕೆ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕ ನಮಿತ್ ಮಲ್ಹೋತ್ರಾ ಅಧಿಕೃತವಾಗಿ ಘೋಷಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವಿಶೇಷ ಪೋಸ್ಟರ್ ಹಂಚಿಕೊಂಡಿರುವ ನಮಿತ್ ಮಲ್ಹೋತ್ರಾ, ‘ದಿ ಡಾನ್ ಆಫ್ ರಾಮಾಯಣ’ ಟ್ರೇಲರ್ ಅನ್ನು ಬ್ರಹ್ಮ ಮುಹೂರ್ತದಲ್ಲಿ ವಿಶ್ವದಾದ್ಯಂತ ಅನಾವರಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಹಿಂದೂ ಸಂಪ್ರದಾಯದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಪವಿತ್ರ ಹಾಗೂ ಆಧ್ಯಾತ್ಮಿಕ ಸಮಯವೆಂದು ಪರಿಗಣಿಸುವ ಹಿನ್ನೆಲೆಯಲ್ಲಿ ಇದೇ ವೇಳೆಯನ್ನು ಟ್ರೇಲರ್ ಬಿಡುಗಡೆಗೆ ಆಯ್ಕೆ ಮಾಡಲಾಗಿದೆ.ಎಲ್ಲವೂ ಯೋಜನೆಯಂತೆ ನಡೆದಿದ್ದರೆ ಟ್ರೇಲರ್ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರದ ವ್ಯಾಪಾರ ಮತ್ತು ಬಿಡುಗಡೆ ತಂತ್ರಕ್ಕೆ ಸಂಬಂಧಿಸಿದ ಕೆಲವು ಬದಲಾವಣೆಗಳ ಹಿನ್ನೆಲೆಯಲ್ಲಿ ಟ್ರೇಲರ್ ಬಿಡುಗಡೆ ದಿನಾಂಕವನ್...









